ಮಂಡ್ಯ :- ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸಾವಿಗೀಡಾಗಿರುವ ಘಟನೆ ಮದ್ದೂರು ಬಳಿಯ ಅಗರಲಿಂಗನದೊಡ್ಡಿ ಗ್ರಾಮದ ಬಳಿ ಭಾನುವಾರ ರಾತ್ರಿ ಜರುಗಿದೆ.
ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಸ್ಕೋಡಾ ಕಾರು ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ಇಟಿಯಾಸ್ ಮತ್ತು ಇನ್ನೋವಾ ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಾಹನ ಸವಾರರು ಮೃತಪಟ್ಟಿದ್ದಾರೆ.
ಅಪಘಾತದ ತೀವ್ರತೆಗೆ ಹಲವರು ಗಾಯಗೊಂಡಿದ್ದು, ಚಾಮುಂಡೇಶ್ವರಿ ಆಸ್ಪತ್ರೆ ಮತ್ತು ಮದ್ದೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ 4 ಕಿಲೋಮೀಟರ್ ಗೂ ಹೆಚ್ಚು ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಥಳಕ್ಕೆ ಮದ್ದೂರು ಸಂಚಾರಿ ಪೋಲೀಸರು ತೆರಳಿ ವಾಹನಗಳನ್ನು ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
*ವರದಿ : ಗಿರೀಶ್ ರಾಜ್ ಮಂಡ್ಯ*