ರಾಮನಗರ: ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನವು ಪಂಕ್ಚರ್ ಆಗಿ ನಿಂತಿತ್ತು. ಈ ವೇಳೆ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಕ್ಯಾಂಟರ್ಗೆ ಡಿಕ್ಕಿಯಾಗಿದೆ. ಬಸ್ ಕ್ಯಾಂಟರ್ನ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಬಸ್ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದ್ದು, ಸ್ಥಳೀಯರು ಜೆಸಿಬಿ ಬಳಸಿ ಚಾಲಕನನ್ನು ರಕ್ಷಿಸಿದ್ದಾರೆ.
ಬಸ್ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಸೋಲೂರು ಪೊಲೀಸರ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.