ಕೋಲಾರ : ಪ್ಲಾಸ್ಟಿಕ್ ಗೋಡೌನ್ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಕೋಲಾರ ನಗರದ ಹೊರವಲಯದ ಈಲಂ ಬಳಿ ಘಟನೆ ನಡೆದಿದೆ.
ಅಸ್ಲಾಂ ಪಾಷ ಎಂಬುವರಿಗೆ ಸೇರಿದ ಪ್ಲಾಸ್ಟಿಕ್ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 30 ಲಕ್ಷ ರೂಪಾಯಿ ಮೌಲ್ಯದ ಅಧಿಕ ಪ್ಲಾಸ್ಟಿಕ್ ವಸ್ತುಗಳು ಹಾಗೂ ಮೆಷಿನ್ಗಳು ಬೆಂಕಿಗಾಹುತಿಯಾಗಿವೆ.
ಕೋಲಾರ ಹಾಗೂ ಬಂಗಾರಪೇಟೆ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು,ಸತತ ಏಳುಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ತಹಬದಿಗೆ ತಂದಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.