ದೇವನಹಳ್ಳಿ: ವಿಜಯಪುರ ಪಟ್ಟಣಕ್ಕೆ ಗಾಂಜಾ ಸಪ್ಲೈ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯ್ ಅಲಿಯಾಸ್ ಬಾಂದ್ರಾ (22) ಬಂಧಿತ ಆರೋಪಿಯಾಗಿದ್ದು, ಆಂಧ್ರಪ್ರದೇಶದಿಂದ ಅಕ್ರಮವಾಗಿ ಗಾಂಜಾ ಸಾಗಾಣಿಕೆ ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣಕ್ಕೆ ಮಾರಾಟ ಮಾಡುತ್ತಿದ್ದನು.
ಮಾವಿನಹಣ್ಣನ್ನು ರಾತ್ರಿ ವೇಳೆ ತಿಂತೀರಾ!? ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ!
ಅನೇಕ ವರ್ಷಗಳಿಂದ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಇನ್ಸ್ಪೆಕ್ಟರ್ ಪ್ರಶಾಂತ್ ನಾಯಕ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತನಿಂದ ಒಂದು ಲಕ್ಷ ಮೌಲ್ಯದ 1 ಕೆ.ಜಿ 710 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ದೇವನಹಳ್ಳಿ ತಾಲೂಕು ವಿಜಯಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.