ಆನೇಕಲ್:- ಬೆಂಗಳೂರು ಹೊರ ವಲಯದ ಆನೇಕಲ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದುಕೊಂಡು ಹೋಗಿ ಮದುವೆ ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ.
Namma Metro: ಇಂದು ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ!
ಸೊಸೆರಾಜು ಬಂಧಿತ ಆರೋಪಿ. ಬೆಂಗಳೂರಿನ ಕೋರಮಂಗಲದಲ್ಲಿರುವ ಅಜ್ಜಿಯ ಮನೆಗೆಂದು ಬಂದಿದ್ದ ಅಪ್ರಾಪ್ತ ಬಾಲಕಿಯನ್ನು ಆರೋಪಿ ಕರೆದುಕೊಂಡು ಓಡಿ ಹೋಗಿದ್ದ. ವಿಚಾರ ತಿಳಿಯುತ್ತಿದ್ದಂತೆ ಅಪ್ರಾಪ್ತೆಯ ತಂದೆ ಆನೇಕಲ್ ಪೊಲೀಸ್ ಠಾಣೆಯಲ್ಲಿ ಮಗಳು ಕಾಣೆಯಾಗಿರುವುದಾಗಿ ದೂರು ನೀಡಿದ್ದರು. ಕೂಡಲೇ ಎಚ್ಚೆತ್ತ ಪೊಲೀಸರು ಆರೋಪಿಯನ್ನು ಬಂಧಿಸಿ ಆನೇಕಲ್ ಠಾಣೆಗೆ ಕರೆತಂದಿದ್ದಾರೆ. ,
ಈ ಪ್ರಕರಣ ಸಂಭವಿಸಿ ಎರಡು ದಿನ ಕಳೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.