ಬೆಂಗಳೂರು: ರೈಲಿನಲ್ಲಿ ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ ಆರೋಪಿಯನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಚಿತ್ತೂರು ಮೂಲದ ಗುಣಶೇಖರ್(43) ಬಂಧಿತ ಆರೋಪಿಯಾಗಿದ್ದು,
ನಿಮ್ಮದು ಬೋಳು ತಲೆಯಾ!? ಕೂದಲು ಬೆಳೆಯಲು ಈರುಳ್ಳಿ ಎಣ್ಣೆಯನ್ನು ಈ ರೀತಿ ಬಳಸಿ ಸಾಕು!
ಕೆ.ಆರ್.ಪುರಂ ರೈಲ್ವೆ ನಿಲ್ದಾಣದಲ್ಲಿ ಮೊಬೈಲ್ ಕಳವು ಮಾಡಿದ್ದನು. ಅದಲ್ಲದೆ ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲಿನಲ್ಲೂ ಪ್ರಯಾಣಿಕರ ಮೊಬೈಲ್ ಎಗರಿಸಿ ಪರಾರಿಯಾಗುತ್ತಿದ್ದನು.
ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 05 ಲ್ಯಾಪ್ ಟಾಪ್ 09 ಮೊಬೈಲ್ ಪೋನ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.