ವಿಜಯನಗರ : ಸಮಾಜ ಪರಿವರ್ತನಾ ಸಂಸ್ಥೆ ಸುದೀರ್ಘ ಹೋರಾಟಕ್ಕೆ ಜಯ ಸಿಗುತ್ತೆ ಎನ್ನುವ ವಿಶ್ವಾಸ ಇದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸರ್ಕಾರಿ ಜಮೀನು ಒತ್ತುವರಿ ತೆರವು ವಿಚಾರವಾಗಿ ಸಮಾಜ ಪರಿವರ್ತನಾ ಸಂಸ್ಥೆ ಮುಖ್ಯಸ್ಥ ಎಸ್.ಆರ್ ಹಿರೇಮಠ ಪ್ರತಿಕ್ರಿಯೆ ನೀಡಿದ್ದಾರೆ.
ಹೊಸಪೇಟೆಯಲ್ಲಿಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಪ್ರಭಾವಿ ವ್ಯಕ್ತಿಗಳಿಂದ 71 ಎಕರೆ ಸರ್ಕಾರಿ ಗೋಮಾಳ ಜಮೀನು ಒತ್ತುವರಿಯಾಗಿದೆ. ನ್ಯಾಯಾಲಯದಲ್ಲಿ ಸುದೀರ್ಘ ಹೋರಾಟದ ಬಳಿಕ ಉಚ್ಛ ನ್ಯಾಯಾಲಯದ ದ್ವಿಸದಸ್ಯ ಬೆಂಚ್ ತೆರವು ಆದೇಶ ಮಾಡಿದೆ. ನ್ಯಾಯಾಲಯದ ಆದೇಶದ ಮೇರೆಗೆ ತೆರವು ಕಾರ್ಯಚರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಕುಮಾರಸ್ವಾಮಿ ಅವ್ರ ರಾಮನಗರ ಜಿಲ್ಲೆಯ ಕೇತಗಾಯನಹಳ್ಳಿ 14 ಎಕರೆ ಒತ್ತುವರಿ ಭೂಮಿಗೆ ತೆರವಿಗೆ ಅಧಿಕಾರಿಗಳು ಮುಂದಾಗಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಒಟ್ಟು 71 ಎಕರೆ 30 ಗುಂಟೆ ಒತ್ತುವರಿಯಾಗಿದೆ. ಕೆಲವೇ ದಿನಗಳಲ್ಲಿ ಎಲ್ಲ ಜಾಗೆ ತೆರವು ಮಾಡಿ ಸರ್ಕಾರದ ವಶಕ್ಕೆ ತೆಗೆದುಕೊಳ್ತಾರೆ ಅಂತಾ ವಿಶ್ವಾಸವಿದೆ
ಸರ್ಕಾರಿ ಜಾಗ ಒತ್ತುವರಿ ಮಾಡಿದ ಪ್ರಭಾವಿ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು. ಗೋಮಾಳ ಜಾಗ ಒತ್ತುವರಿ ಮಾಡಿದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ಪ್ರಭಾವಿ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಪ್ರಲರಣ ದಾಖಲಿಸಬೇಕೆಂದು ಎಸ್ ಆರ್ ಹಿರೇಮಠ್ ಆಗ್ರಹಿಸಿದ್ದಾರೆ.
ಇನ್ನೂ ಕೇಂದ್ರ ಸಚಿವ ಸ್ಥಾನಕ್ಕೆ ಹೆಚ್ಡಿಕೆ ರಾಜೀನಾಮೆ ನೀಡಬೇಕು ಎನ್ನುವ ವಿಚಾರವಾಗಿ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು ಅದರ ನೈತಿಕ ಹೊಣೆಯನ್ನ ಹೊರಬೇಕು. ಕುಮಾರಸ್ವಾಮಿ ಈಗ ಎನ್ ಡಿಎ ದ ಒಂದು ಭಾಗವಾಗಿದ್ದಾರೆ. ರಾಜೀನಾಮೆ ಪಡೆಯುವ ವಿಚಾರ ಅವರಿಗೆ ಬಿಟ್ಟದ್ದು ಎಂದಿದ್ದಾರೆ.