ಹುಬ್ಬಳ್ಳಿ : ಮಾದಕ ವಸ್ತುಗಳ ಸೇವನೆ, ಸರಬರಾಜು ತಡೆಗೆ ಹುಬ್ಬಳ್ಳಿ ಪೊಲೀಸರು ಕ್ರಮ ಕೈಗೊಂಡಿದ್ದು, ಇದರ ಮೊದಲ ಹಂತವಾಗಿ ಪೊಲೀಸ್ ಕಮೀಷನರ್ ನೇತೃತ್ವದಲ್ಲಿ ಪರೇಡ್ ನಡೆಸಲಾಯಿತು.
ಹುಬ್ಬಳ್ಳಿ ಧಾರವಾಡ ಅವಳಿ ನಗರದ ಮಾದಕ ವಸ್ತುಗಳ ಚಟುವಟಿಕೆಗಳಲ್ಲಿ ಭಾಗಿಯಾದವರ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ. ಗಾಂಜಾ, ಡ್ರಗ್ಸ್ ಸರಬರಾಜು ಮಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.
ಹೀಗಾಗಿ ಇಂದು ಹುಬ್ಬಳ್ಳಿ ಪೊಲೀಸರು ರೌಡಿಗಳ ಪರೇಡ್ ನಡೆಸಿದ್ದು, ಹುಬ್ಬಳ್ಳಿ ಧಾರವಾಡ ಅವಳಿನಗರದ ವ್ಯಾಪ್ತಿಯಲ್ಲಿ ನೂರಾರು ಆರೋಪಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಮಹಿಳೆ ಮೇಲೆ ಅತ್ಯಾಚಾರ, ಕಳ್ಳತನ, ಕೊಲೆ, ಜೂಜು, ದರೋಡೆ ಸೇರಿದಂತೆ ಇತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರ ಮೇಲೆ ಸಹ ಕ್ರಮ ಕೈಗೊಳ್ಳಲಾಗುವುದು. ಎನ್‌ಡಿಪಿಎಸ್ (ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ) ಅಡಿ ಕ್ರಮಕೈಗೊಳ್ಳಲಾಗುವುದು ಎಂದರು.