ಬೆಂಗಳೂರು: ನಟಿ ರನ್ಯಾ ರಾವ್ ಅವರನ್ನು ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧಿಸಲಾಗಿದೆ.ನಟಿ ರನ್ಯಾ ರಾವ್ ಬಂಧನ ವಿಚಾರ ದೇಶಾದ್ಯಂತ ಚರ್ಚೆಯಾಗುತ್ತಿದೆ. ಇನ್ನೂ ಪ್ರಕರಣದಲ್ಲಿ ಪೊಲೀಸ್ ಪ್ರೋಟೋಕಾಲ್ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕಾರಣಕ್ಕೆ ಸರ್ಕಾರ, ಈ ಪ್ರಕರಣದಲ್ಲಿ ಪ್ರೋಟೋಕಾಲ್ ದುರ್ಬಳಕೆಯ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಹಿರಿಯ ಐಎಎಸ್ ಅಧಿಕಾರಿ ಗೌರವ್ ಗುಪ್ತಗೆ ಆದೇಶಿಸಿತ್ತು. ಈಗ ವರದಿ ಸಿದ್ದವಾಗಿದ್ದು ಇಂದು ಸರ್ಕಾರಕ್ಕೆ ಸಲ್ಲಿಕೆಯಾಗಿದೆ.
ಕೆಂಪೇಗೌಡ ಏರ್ಪೋರ್ಟ್ನಲ್ಲಿ ಶಿಷ್ಟಾಚಾರ ಬಳಕೆ ದುರ್ಬಳಕೆ ಹಾಗೂ ಇದರಲ್ಲಿ ರಾಮಚಂದ್ರರಾವ್ ಅವರ ಪಾತ್ರದ ಕುರಿತು ತನಿಖೆ ಪೂರ್ಣಗೊಳಿಸಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ನೇತೃತ್ವದ ವಿಚಾರಣಾ ಸಮಿತಿ 230 ಪುಟಗಳ ವರದಿಯನ್ನು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಲ್ಲಿಸಿದೆ.
Ugadi 2025: ಇಂದು “ಯುಗಾದಿ” ಹಬ್ಬದ ಸಂಭ್ರಮ: ಅಪ್ಪಿ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ..!
ತಮ್ಮ ಮಲಮಗಳು ರನ್ಯಾ ರಾವ್ ಶಿಷ್ಟಾಚಾರ ನಿಯಮಗಳಡಿ ಸಿಗುವ ಸೌಲಭ್ಯವನ್ನು ಏರ್ಪೋರ್ಟ್ನಲ್ಲಿ ಬಳಸುತ್ತಿರುವ ಬಗ್ಗೆ ಡಿಜಿಪಿ ರಾಮಚಂದ್ರರಾವ್ಗೆ ಗೊತ್ತಿತ್ತು. ಆದರೆ, ಮಲಮಗಳಿಗೆ ಶಿಷ್ಟಾಚಾರ ಸೌಲಭ್ಯ ನೀಡುವಂತೆ ಪೊಲೀಸರಿಗೆ ಸೂಚಿಸಿದ್ದರು ಎಂಬುದಕ್ಕೆ ಯಾವುದೇ ಸಾಕ್ಷ್ಯ ಲಭ್ಯವಿಲ್ಲ’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಗಳಿಗೆ ಎರಡು ಹೆಚ್ಚುವರಿ ಕಾರುಗಳನ್ನು ನೀಡಲಾಗುತ್ತದೆ. ಈ ಹೆಚ್ಚುವರಿ ಕಾರು ಅಧಿಕಾರಿಯವರ ಕುಟುಂಬದವರಿಗೆ ಬಳಕೆಯಾಗುತ್ತದೆ. ಅದೇ ರೀತಿ, ಡಿಜಿಪಿ ರಾಮಚಂದ್ರ ರಾವ್ ಅವರಿಗೂ ಕೂಡ ಸರ್ಕಾರ ಹೆಚ್ಚುವರಿ ಕಾರು ನೀಡಲಾಗಿತ್ತು. ಈ ಸರ್ಕಾರಿ ವಾಹನದಲ್ಲೇ ರನ್ಯಾ ರಾವ್ ಚಿನ್ನವನ್ನು ಸಾಗಿಸಿದ್ದಾರೆ. ರನ್ಯಾ ರಾವ್ ಇದೇ ವಾಹನದಲ್ಲಿ ಹಲವು ಬಾರಿ ವಿಮಾನ ನಿಲ್ದಾಣಕ್ಕೆ ಓಡಾಡುತಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿತ್ತು.