ತಮಿಳು ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಹೆಸರು ಮಾಡಿರುವ ಖ್ಯಾತ ನಟಿ ಶ್ರುತಿ ನಾರಾಯಣ್ ಅವರದ್ದು ಎನ್ನಲಾಗುತ್ತಿರುವ ಖಾಸಗಿ ವಿಡಿಯೋ ಒಂದು ಲೀಕ್ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಎಬ್ಬಿಸಿತ್ತು. ಇನ್ನೂ ಈ ವಿಚಾರವಾಗಿ ನಟಿ ರಿಯಾಕ್ಟ್ ಮಾಡಿದ್ದಾರೆ. ನಿಮ್ಮ ತಾಯಿ, ತಂಗಿ ಕೂಡ ನನ್ನಂತೆಯೇ ಹೆಣ್ಣು ಅವರ ವಿಡಿಯೋ ನೋಡಿ ಖುಷಿಪಡಿ ಎಂದು ನಟಿ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.
ವಾಸ್ತು ಪ್ರಕಾರ ಈ ದಿಕ್ಕಿನಲ್ಲಿ ಮಲಗಿ: ಜೀವನದಲ್ಲಿ ಅನಿರೀಕ್ಷಿತ ಅದೃಷ್ಟ ನಿಮ್ಮದಾಗುತ್ತೆ.!
ಇದೀಗ ಹರಿದಾಡುತ್ತಿರುವ ವಿಚಾರ ನಿಮಗೆ ಜೋಕ್ ಅಥವಾ ತಮಾಷೆ ಆಗಿರಬಹುದು. ಆದರೆ ನನಗೆ ನನ್ನ ಕುಟುಂಬಕ್ಕೆ ಇದು ಕಷ್ಟಕರ ಸಂದರ್ಭವಾಗಿದೆ. ಅದರಲ್ಲೂ ನನಗೆ ಇದನ್ನು ನಿಭಾಯಿಸೋದು ಕಷ್ಟಕರವಾಗಿದೆ ಎಂದಿದ್ದಾರೆ. ನಾನು ಒಬ್ಬಳು ಹುಡುಗಿ, ನನಗೂ ಭಾವನೆಗಳಿವೆ. ನನ್ನ ಆಪ್ತರಿಗೂ ಭಾವನೆಗಳಿವೆ. ಅದಕ್ಕೆ ಬೆಲೆ ಕೊಡಿ. ನೀವೆಲ್ಲಾ ಇದನ್ನು ಮತ್ತಷ್ಟು ಕೆಟ್ಟದಾಗಿ ಮಾಡುತ್ತಿದ್ದೀರಿ ಎಂದು ನಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದಯವಿಟ್ಟು ಆ ವಿಡಿಯೋಗಳನ್ನು ಕಾಡ್ಗಿಚ್ಚಿನಂತೆ ಹಬ್ಬಿಸಬೇಡಿ. ಒಂದು ವೇಳೆ ನೀವು ಹಾಗೆಯೇ ಮಾಡಬೇಕು ಎಂದಿದ್ರೆ, ನಿಮ್ಮ ತಾಯಿ, ಗರ್ಲ್ಫ್ರೆಂಡ್, ಸಹೋದರಿ ವಿಡಿಯೋಗಳನ್ನು ವೈರಲ್ ಮಾಡಿ. ಅವರು ಕೂಡ ನನ್ನ ಹಾಗೆಯೇ ದೇಹವನ್ನು ಹೊಂದಿದ್ದಾರೆ. ಹಾಗಾಗಿ ಅವರ ವಿಡಿಯೋ ನೋಡಿ ಖುಷಿಪಡಿ ಎಂದು ಖಡಕ್ ಆಗಿ ಶೃತಿ ನಾರಾಯಣನ್ ಇನ್ಸ್ಟಾಗ್ರಾಂ ಸ್ಟೋರಿ ಬರೆದುಕೊಂಡಿದ್ದಾರೆ.