ಲಂಡನ್‌ಗೆ 242 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ಬೋಯಿಂಗ್ 787-8 (ಫ್ಲೈಟ್ ಎI171) ವಿಮಾನ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೇವಲ ಐದು ನಿಮಿಷಗಳಲ್ಲೇ ಪತನಗೊಂಡಿದೆ. ಇನ್ನೂ ಈ ದುರಂತದಲ್ಲಿ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ವಿಜಯ ರೂಪಾನಿ ಸೇರಿದಂತೆ ಹಲವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಕಂಕುಳಿನ ಕಪ್ಪು ಕಲೆ ಬೆಳ್ಳಗಾಗಬೇಕಾ!? ಹಾಗಿದ್ರೆ ಶಾಂಪೂಗೆ ಈ ಪದಾರ್ಥ ಮಿಕ್ಸ್ ಮಾಡಿ ಹಚ್ಚಿ!
ಈ ಮೂಲಕ ವಿಮಾನ ಪತನದಲ್ಲಿ ಮೃತಪಟ್ಟ ಎರಡನೇ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ. 2009ರ ಸೆಪ್ಟೆಂಬರ್ 2 ರಂದು ಬೆಲ್ 430 ಹೆಲಿಕಾಪ್ಟರ್ ಪತನವಾಗಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ. ಎಸ್ ರಾಜಶೇಖರ್ ರೆಡ್ಡಿ ಮೃತಪಟ್ಟಿದ್ದರು.
ಇಂದು ಅಹಮದಾಬಾದ್ ವಿಮಾನ ನಿಲ್ದಾಣದಿಂದ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಐದೇ ನಿಮಿಷಕ್ಕೆ ಅಪಘತಕ್ಕೀಡಾಗಿದೆ. ಮಾಜಿ ಸಿಎಂ ವಿಜಯ್ ರೂಪಾನಿಯವರು ತಮ್ಮ ಮಗಳನ್ನು ಭೇಟಿ ಮಾಡಲು ಲಂಡನ್‌ಗೆ ತೆರಳುತ್ತಿದ್ದರು. ದುರಾದೃಷ್ಟವಶಾತ್ ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.