ಅಹಮದಾಬಾದ್: ಗುಜರಾತ್ ಅಹಮದಾಬಾದ್ ನಲ್ಲಿಂದು ವಿಮಾನ ಪತನಗೊಂಡಿದೆ. ಅಹಮದಾಬಾದ್ ವಿಮಾನ ನಿಲ್ದಾಣದ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 110 ಜನರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಈ ವಿಮಾನದಲ್ಲಿ ಮಾಜಿ ಗುಜರಾತ್ ಸಿಎಂ ವಿಜಯ್ ರೂಪಾನಿ ಪ್ರಯಾಣಿಕರಾಗಿದ್ದು, ಅವರ ಕೊನೆಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.
ಮಹಿಳೆಯೊಬ್ಬರು ವಿಜಯ್ ರೂಪಾನಿ ಮೊಬೈಲ್ ನೋಡುತ್ತಾ ಕುಳಿತಿರುವ ಫೋಟೋವನ್ನು ಕ್ಲಿಕ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆ ಫೋಟೋ ಈಗ ವೈರಲ್ ಆಗ್ತಿದೆ.
ವಿಮಾನದಲ್ಲಿ ಒಟ್ಟು 242 ಪ್ರಯಾಣಿಕರು ಪಯಾಣಿಸುತ್ತಿದ್ದಾರೆ. ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1.10ಕ್ಕೆ ಟೇಕ್ ಅಫ್ ಆಗಿತ್ತು. ವಿಮಾನವು ಲಂಡನ್ನ ಗೆಟ್ವಿಕ್ ವಿಮಾನ ನಿಲ್ದಾಣ ತಲುಪಬೇಕಿತ್ತು. ವಿಮಾನ ದುರಂತದ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದೆ. ಪತನಗೊಳ್ಳುತ್ತಿದ್ದಂತೆಯೇ ದಟ್ಟ ಹೊಗೆ ಆವರಿಸಿದೆ. ವಿಮಾನವು ಮೇಘನಿ ನಗರ ಬಳಿ ಪತನ ಆಗಿದ್ದು, ಆ ಪ್ರದೇಶದಲ್ಲಿ ಭೀತಿಯನ್ನುಂಟು ಮಾಡಿದೆ.