Close Menu
Ain Live News
    Facebook X (Twitter) Instagram YouTube
    Thursday, May 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕರ್ನಾಟಕದಲ್ಲಿ ಕೊರೊನಾ ಆತಂಕ: ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ.. ಏನೆಲ್ಲಾ ಚರ್ಚೆ ಆಯ್ತು!? ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!

    By AIN AuthorMay 26, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:-ಹೋದ್ಯಾ ಪಿಶಾಚಿ ಅಂದ್ರೆ ಬಂದೆ‌ ಗವಾಷಿಲಿ ಅನ್ನೋ ಹಾಗೆ ರಾಜ್ಯಕ್ಕೆ ಮತ್ತೆ ಕೊರೊನಾ ಒಕ್ಕರಿಸಿದೆ. ಒಂದೋ ಎರಡೋ ಪ್ರಕರಣದ ಆರಂಭ ಆಗ್ತಿದ್ದ ಕಿಲ್ಲರ್ ಕೊರೊನಾ ಮತ್ತೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕಿಲ್ಲರ್ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನೇ ದಿನೇ ದುಪ್ಪಟ್ಟಾಗ್ತಿವೆ. ಆರಂಭದಲ್ಲೇ ಬೆಂಗಳೂರಲ್ಲಿ ಒಬ್ಬ ವೃದ್ದ ಈ ಮಾರಿಗೆ ಬಲಿಯಾಗಿದ್ದಾರೆ.

    ಧಾರವಾಡ: ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಅಧ್ಯಕ್ಷರಾಗಿ ಬೆಲ್ಲದ ಪುನರಾಯ್ಕೆ!

    ಕರ್ನಾಟಕದಲ್ಲಿ ಕೊರೊನಾ ಕೇಸ್ ಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜನರಲ್ಲಿ ಆತಂಕ ಮನೆ ಮಾಡಿದೆ. ಹೀಗಾಗಿ ಕರ್ನಾಟಕದಲ್ಲಿ ಕೊವಿಡ್ ನಿಯಂತ್ರಣ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದಿದೆ.

    ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.

    ಕೊರೊನಾ ನಿಯಂತ್ರಣಕ್ಕೆ ಎಲ್ಲ ಸಿದ್ಧತೆಗಳನ್ನ ಮಾಡಿಕೊಳ್ಳಿ. ಕಳೆದ ಬಾರಿ ಆದಂತೆ ಸಮಸ್ಯೆ ಆಗಬಾರದು. ಕೊವಿಡ್​ ಸಹಾಯವಾಣಿ​​ ತೆರೆಯಿರಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಅಲ್ಲದೇ ಜ್ವರ, ನೆಗಡಿ ಇರುವ ಮಕ್ಕಳಿಗೆ ಶಾಲೆಗಳು ರಜೆ ನೀಡುವಂತೆ ಸೂಚಿಸಿದ್ದಾರೆ. ಪ್ರತಿ ವಾರ ಕೊವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸುವಂತೆ ಅಧಿಕಾರಿಗಳಿಗೆ ಹೇಳಿದ್ದಾರೆ.

    ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.

    ಕೊರೊನಾ ನಿರ್ವಹಣೆಯ ಸಂಬಂಧ ಈ ಕೆಳಗಿನ ಸೂಚನೆಗಳನ್ನು ಸಿಎಂ ನೀಡಿದ್ದಾರೆ.

    * ಸದ್ಯಕ್ಕೆ ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು.
    * ಸದ್ಯಕ್ಕೆ ಗಂಭೀರ ಪರಿಸ್ಥಿತಿಗೆ ತಲುಪಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು.

    ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು.
    ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು.

    ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು.
    ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಉತ್ತಮ. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು.
    ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರಬೇಕು.

    ಕಳೆದ ಜನವರಿಯಿಂದಲೂ ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೊ – ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ.
    ಎಸ್‌ಎಆರ್‌ಐ ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರ ಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ.

    ರಾಜ್ಯದಲ್ಲಿ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.
    ಬಾಣಂತಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.
    ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೊನಾ ಸಹಾಯವಾಣಿ ಪ್ರಾರಂಭಿಸಬೇಕು.
    ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಬೇಕು.

    ಕೊರೊನಾ ವಿಷಯದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಅನುಸರಿಸಬಾರದು. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರಬೇಕು.
    ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಬೇಕು.

    ಸಭೆ ಬಳಿಕ ಸದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೇಂದ್ರದ ಅಭಿಪ್ರಾಯ ಪಡೆದು ವ್ಯಾಕ್ಸಿನ್​ ನೀಡಲಾಗುತ್ತದೆ. ಕೊವಿಡ್​ ಲಕ್ಷಣ ಇರುವ ಮಕ್ಕಳಿಗೆ ರಜೆ ನೀಡಲು ಸೂಚನೆ ನೀಡಲಾಗಿದೆ. ಶಾಲೆಯ ಆಡಳಿತ ಮಂಡಳಿ ಕೂಡ ಗಮನ ಹರಿಸಬೇಕು. ಟೆಸ್ಟಿಂಗ್​ ವಿಚಾರದಲ್ಲಿ ಹಳೆಯೆ ಪದ್ಧತಿ ಅನುಸರಿಸುತ್ತೇವೆ. ಅಗತ್ಯವಿರುವ ಎಲ್ಲ ಕ್ರಮಗಳನ್ನ ನಾವು ತೆಗೆದುಕೊಳ್ಳುತ್ತೇವೆ. ವ್ಯಾಕ್ಸಿನ್​ ಕೊಡುವ ಬಗ್ಗೆ ಸಿಎಂ ವರದಿ ನೀಡಿ ಎಂದಿದ್ದು, ಕೇಂದ್ರದ ಅಭಿಪ್ರಾಯ ಪಡೆದು ವರದಿ ನೀಡಲು ಹೇಳಿದ್ದಾರೆ.ಅಲ್ಲದೇ ವೈದ್ಯರು, ಸಿಬ್ಬಂದಿಗೂ ರಜೆ ಮೇಲೆ ಹೋಗದಂತೆ ಸೂಚಿಸಲಾಗಿದೆ ಎಂದು ಹೇಳಿದರು

    Demo
    Share. Facebook Twitter LinkedIn Email WhatsApp

    Related Posts

    Booker Prize winner: ಬೂಕರ್‌ ವಿಜೇತ ಕನ್ನಡತಿಯರಿಗೆ ತಾಯ್ನಾಡಿನಲ್ಲಿ ಭವ್ಯ ಸ್ವಾಗತ

    May 28, 2025

    ಕೊಲೆ ಆರೋಪಿ ದರ್ಶನ್‌ ವೀಸಾ ವಿಷಯ..ಇವತ್ತು ಕೋರ್ಟ್‌ನಲ್ಲಿ ಏನೇನಾಯ್ತು?

    May 28, 2025

    ದೇಶದಲ್ಲೇ ಬೆಂಗಳೂರಿನಲ್ಲಿ ಮಾತ್ರ ಎರಡು ಬಗೆಯ ತೆರಿಗೆ, ಇದು ಅನಾಗರಿಕ: ಆರ್‌.ಅಶೋಕ್‌ ಕಿಡಿ

    May 28, 2025

    ಕಮಲ್ ಹಾಸನ್ ಆ ಕೆಲಸ ಮಾಡದಿದ್ರೆ ಮುಲಾಜಿಲ್ಲದೇ ಬ್ಯಾನ್ ಮಾಡಬೇಕು: ಶಿವರಾಜ್ ತಂಗಡಗಿ!

    May 28, 2025

    ಯತ್ನಾಳ್ ಯಾರು ಅಂತನೇ ಗೊತ್ತಿಲ್ಲವಂತೆ: ರಾಧಾ ಮೋಹನ ದಾಸ್ ಅಗರವಾಲ್ ವ್ಯಂಗ್ಯ !

    May 28, 2025

    ಬೆಂಗಳೂರಿನಲ್ಲಿ ಟೋಯಿಂಗ್ ಶುರು!? ಸರ್ಕಾರದ ನಡೆಗೆ ನಿಖಿಲ್ ಕುಮಾರಸ್ವಾಮಿ ಅಸಮಾಧಾನ!

    May 28, 2025

    ಸೈಟ್ ರಿಜಿಸ್ಟರ್ ಆಗದೇ ಪರದಾಡುತ್ತಿದ್ದೀರಾ!? ನಿಮಗಿಲ್ಲಿದೆ ಗುಡ್ ನ್ಯೂಸ್!

    May 28, 2025

    ಕರ್ನಾಟಕದಲ್ಲಿ ಭಾರೀ ಮಳೆ: ಶುಕ್ರವಾರ, ಶನಿವಾರ DC , CEO ಸಭೆ ಕರೆದ ಸಿಎಂ!

    May 28, 2025

    ಕಮಲ್‌ ಹಾಸನ್‌ ಹೊಗಳುತ್ತಲೇ ಡಿಚ್ಚಿ ಕೊಟ್ಟ ನವರಸ ನಾಯಕ ಜಗ್ಗೇಶ್!‌

    May 28, 2025

    ಕಮಲ್ ಹಾಸನ್ ಸಾಂಸಾರಿಕ ಜೀವನ, ರಾಜಕೀಯ ಜೀವನ ಸರಿಯಿಲ್ಲ. ಎಲ್ಲದ್ರಲ್ಲಿಯೂ ಎಕ್ಕುಟ್ಟೋಗಿದ್ದಾರೆ: ಪ್ರವೀಣ್ ಶೆಟ್ಟಿ

    May 28, 2025

    ಕೌಟುಂಬಿಕ ಕಲಹ: ಹೆಂಡತಿ ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾದ ಪತಿ

    May 28, 2025

    ಕಾಂಗ್ರೆಸ್‌ ನಿಂದ ಸೈನಿಕರಿಗೆ ʻಜೈಹಿಂದ್‌ʼ ಗೌರವ: photos

    May 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.