ಬೆಂಗಳೂರುಗ್ರಾಮಾಂತರ:- ಇಲ್ಲಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿನಿಂದ ಲಂಡನ್ ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ಕ್ಯಾನ್ಸಲ್ ಆಗಿದೆ.
ಇಂದು ಮಧ್ಯಾಹ್ನ ಬೆಂಗಳೂರಿಂದ ಲಂಡನ್ಗೆ ಹೊರಡಬೇಕಿದ್ದ ಏರ್ ಇಂಡಿಯಾ-133 ವಿಮಾನವನ್ನು ರದ್ದುಗೊಳಿಸಲಾಗಿದೆ. ನಿನ್ನೆಯೂ ಏರ್ ಇಂಡಿಯಾ ಸಂಸ್ಥೆಯು ಸಾಲುಸಾಲು ವಿಮಾನಗಳನ್ನು ರದ್ದು ಮಾಡಿತ್ತು. ಸಂಸ್ಥೆಯ ತಾಂತ್ರಿಕ ವಿಭಾಗದ ಮುಖ್ಯ ಎಂಜಿನೀಯರ್ಗೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ವಿಮಾನ ರದ್ದು ಮಾಡಿರೋದಕ್ಕೆ ಇನ್ನೂ ಕಾರಣ ತಿಳಿದು ಬಂದಿಲ್ಲ, ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ಜರುಗಿದೆ.