Close Menu
Ain Live News
    Facebook X (Twitter) Instagram YouTube
    Wednesday, June 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    HDK ಅವರ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲದರಲ್ಲಿಯೂ ಲಂಚದ ವ್ಯವಹಾರಗಳೇ ಕಾಣಿಸುತ್ತಿದೆ: ಸಿಎಂ ವ್ಯಂಗ್ಯ!

    By AIN AuthorNovember 16, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲದರಲ್ಲಿಯೂ ಲಂಚದ ವ್ಯವಹಾರಗಳೇ ಕಾಣಿಸುತ್ತಿದೆ. ವರುಣ ಕ್ಷೇತ್ರದ ಶಾಲೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ನಡೆದಿರುವ ನನ್ನ ಮತ್ತು ನನ್ನಮಗನ ನಡುವಿನ ಪೋನ್ ಸಂಭಾಷಣೆಗೆ  ವರ್ಗವಾವಣೆಯಲ್ಲಿ ವಸೂಲಿಯ ಕತೆ ಕಟ್ಟಿ ಕುಮಾರಸ್ವಾಮಿ ಕುಣಿದಾಡುತ್ತಿದ್ದಾರೆ. ಕುಮಾರಸ್ವಾಮಿಯವರ ಈ ಕ್ಷುಲಕ ನಡವಳಿಕೆ ಬಗ್ಗೆ ನಾನು ಕನಿಕರವನ್ನಷ್ಟೇ ವ್ಯಕ್ತಪಡಿಸಬಲ್ಲೆ.

    IT Raid: ಬೆಂಗಳೂರಿನಲ್ಲಿ ಫುಡ್ ಇಂಡಸ್ಟ್ರಿಗಳ ಮೇಲೆ ಐಟಿ ರೇಡ್!

    ವರುಣ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಮತ್ತು ಕೆಡಿಪಿ ಸದಸ್ಯರಾಗಿರುವ ಮಾಜಿ ಶಾಸಕ ಡಾ.ಯತೀಂದ್ರ ಅವರು ಆ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ.ಸಿಎಸ್ ಆರ್ ಹಣವನ್ನು ಬಳಸಿಕೊಂಡು ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳ ಸುಧಾರಣೆಗೆ ತೊಡಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅವರು ಫಲಾನುಭವಿ ಶಾಲೆಗಳ ಪಟ್ಟಿ ಬಗ್ಗೆ ನನ್ನ ಜೊತೆ ಮಾತನಾಡಿದ್ದರು. ಕ್ಷೇತ್ರದ ಜನರ ಎದುರಿನಲ್ಲಿಯೇ ನಡೆದಿರುವ ಈ ಸಂಭಾಷಣೆಯನ್ನು ವರ್ಗಾವಣೆಗಾಗಿ ವಸೂಲಿ ಎಂಬ ಅರ್ಥ ಬರುವ ಹಾಗೆ ತಿರುಚಿರುವ ಕುಮಾರಸ್ವಾಮಿ ಅವರು ತಮ್ಮ ವಿಕೃತ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ.

    ಕುಮಾರಸ್ವಾಮಿಯವರು ರಾಜಕೀಯಕ್ಕೆ ಪ್ರವೇಶ ಮಾಡಿದ ದಿನದಿಂದ ನಿರಂತರವಾಗಿ ಕಪೋಲ ಕಲ್ಪಿತ ಆರೋಪಗಳ ಮೂಲಕ ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವಂತೆ ಬಾಯಿಗೆ ಬಂದಂತೆ ಮಾತನಾಡುತ್ತಾ ಬರುತ್ತಿದ್ದುದನ್ನು ರಾಜ್ಯದ ಜನ ಕಂಡಿದ್ದಾರೆ. ಈಗ ತಂದೆಯಾದ ನನಗೆ ನೋವು ಕೊಡಬೇಕೆಂಬ ಏಕೈಕ ದುರುದ್ದೇಶದಿಂದ ಡಾ.ಯತೀಂದ್ರ ಅವರನ್ನು ಗುರಿಯಾಗಿಸಿಕೊಂಡು ಪ್ರತಿನಿತ್ಯ ಸುಳ್ಳು ಆರೋಪಗಳನ್ನು ಹರಿಬಿಡುತ್ತಿರುವುದು ಕುಮಾರಸ್ವಾಮಿಯವರ ವಿಕೃತ ಮನಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ.

    ಶಾಸಕ ಸ್ಥಾನವನ್ನೇ ತ್ಯಾಗ ಮಾಡಿದರೂ ಜನಸೇವೆಯಿಂದ ಹಿಂದೆ ಸರಿಯದ ಡಾ.ಯತೀಂದ್ರ ಅವರು ವರುಣ ಕ್ಷೇತ್ರದ ಅಭಿವೃದ್ದಿಯಲ್ಲಿ ಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರನ್ನು ನೈತಿಕವಾಗಿ ಕುಗ್ಗಿಸುವ ದುರುದ್ದೇಶದಿಂದ ಕುಮಾರಸ್ವಾಮಿಯವರು ಪ್ರತಿನಿತ್ಯ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ.

    ತಮ್ಮ ಪತ್ನಿ ಮತ್ತು ಮಗ ಕೂಡಾ ರಾಜಕೀಯ ಕ್ಷೇತ್ರದಲ್ಲಿದ್ದಾರೆ ಎನ್ನುವುದನ್ನು ಹೆಚ್.ಡಿ.ಕುಮಾರಸ್ವಾಮಿ ಮರೆತಂತಿದೆ. ನಾನು ಕುಮಾರಸ್ವಾಮಿಯವರ ಮಟ್ಟಕ್ಕೆ ಇಳಿದು ಅವರ ರೀತಿ ಅವರ ಪತ್ನಿ ಮತ್ತು ಮಗನ ಬಗ್ಗೆ ಮಾತನಾಡಲಾರೆ. ಕನಿಷ್ಠ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಾದರೂ ಮಗನಿಗೆ ಬುದ್ದಿ ಹೇಳಿ ರಾಜ್ಯದ ಜನರಿಂದ ಮಗ ಛೀಮಾರಿಗೆ ಈಡಾಗುತ್ತಿರುವುದನ್ನು ತಪ್ಪಿಸಬೇಕೆಂದು ಕೋರುತ್ತೇನೆ.

    Demo
    Share. Facebook Twitter LinkedIn Email WhatsApp

    Related Posts

    ನಿಮ್ಮ ಕಿವಿಯ ಮೇಲೆ ಕೂದಲು ಇದ್ಯಾ!? ಹಾಗಿದ್ರೆ ಇದು ಶುಭವೋ? ಅಶುಭವೋ ಎಂದು ಇಲ್ಲಿ ತಿಳಿಯಿರಿ!

    June 11, 2025

    ಕರ್ನಾಟಕದಲ್ಲಿ ಜೂ.12 ಮತ್ತು 13ರಂದು ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!

    June 10, 2025

    ವದಂತಿ ನಂಬದಿರಿ.. ಆರ್​​ಸಿಬಿ ಮಾರಾಟ ಮಾಡುವುದಿಲ್ಲ: ಯುನೈಟೆಡ್ ಸ್ಪಿರಿಟ್ಸ್ ಸ್ಪಷ್ಟನೆ

    June 10, 2025

    ಸರ್ಕಾರಕ್ಕೆ ‘ಕಾಲ್ತುಳಿತ’ ಟೆನ್ಷನ್: ಜೂ.13ರಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರೊಟೆಸ್ಟ್!

    June 10, 2025

    ಬೆಂಗಳೂರು ಕಾಲ್ತುಳಿತ: RCB ಮಾರ್ಕೆಟಿಂಗ್ ಹೆಡ್’ಗೆ ನಿರಾಸೆ – ವಿಚಾರಣೆ ಮುಂದೂಡಿಕೆ

    June 10, 2025

    ಎಚ್ಚರ.. ನೀವು ಸಾಕ್ಸ್ ಇಲ್ಲದೆ ಶೂಗಳನ್ನು ಧರಿಸುತ್ತೀರಾ..? ಈ ಸಮಸ್ಯೆಗಳು ಉದ್ಭವಿಸಬಹುದು

    June 10, 2025

    ವಾಕಿಂಗ್ ಮಾಡುವ ಮಹಿಳೆಯರೇ ಇವನ ಟಾರ್ಗೆಟ್: ತಬ್ಬಿಕೊಂಡು, ಮುತ್ತಿಟ್ಟು ಎಸ್ಕೇಪ್ ಅಗುತ್ತಿದ್ದ ಕಾಮುಕ ಅರೆಸ್ಟ್.!

    June 10, 2025

    ಮುಡಾ ಹಗರಣ: ಬರೋಬ್ಬರಿ ₹100 ಕೋಟಿ ಮೌಲ್ಯದ ಸ್ಥಿರಾಸ್ತಿ ಜಪ್ತಿ ಮಾಡಿದ ಇಡಿ!

    June 10, 2025

    Stadium Stampede: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್!

    June 10, 2025

    ದೇಶದಲ್ಲಿ 7 ಸಾವಿರ ಸಮೀಪಕ್ಕೆ ಕೊರೊನಾ ಸಕ್ರಿಯ ಪ್ರಕರಣಗಳು..! ಸಾವಿನ ಸಂಖ್ಯೆ 68ಕ್ಕೆ ಏರಿಕೆ

    June 10, 2025

    Stampede Case: ಹೊರಗೆ ಕಾಲ್ತುಳಿತಕ್ಕೆ ಸಿಲುಕಿ ನರಳಿ ನರಳಿ ಸಾವು: ಒಳಗೆ KSCA ಅಧಿಕಾರಿಗಳ ಭರ್ಜರಿ ʻಡೆತ್ʼ ಪಾರ್ಟಿ..!?

    June 10, 2025

    Stampede Case: ವರದಿ ಸಲ್ಲಿಕೆಗೆ ಕಾಲಾವಕಾಶ ಕೋರಿಕೆ – ವಿಚಾರಣೆ ಜೂ 12ಕ್ಕೆ ಮುಂದೂಡಿದ ಹೈಕೋರ್ಟ್

    June 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.