ಮಂಡ್ಯ: ಮಂಡ್ಯದ ನಿರ್ಮಿತಿ ಕೇಂದ್ರದಲ್ಲಿ ಪದೇ ಪದೇ ಗಂಭೀರ ಆರೋಪಗಳು ಕೇಳಿ ಬರ್ತಿವೆ. ನಿರ್ಮಿತಿ ಕೇಂದ್ರದ ಅಧಿಕಾರಿಗಳು ನಕಲಿ ಬಿಲ್ ಸೃಷ್ಟಿ ಮಾಡಿರುವುದರ ಜೊತೆಗೆ ನಕಲಿ ಕಾಮಗಾರಿಗೆ ಕೋಟಿ ಮುಗಂಡ ಹಣ ಬಿಡುಗಡೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.
ಮಂಡ್ಯ ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ನರೇಶ್ ಅವರ ಅವಧಿಯಲ್ಲಿ ಈ ಅಕ್ರಮಗಳು ಜರುಗಿವೆ ಎಂದು ಆರ್‌ಟಿಐ ಕಾರ್ಯಕರ್ತ ಮಧು ಮಾಡಿದ್ದಾರೆ. ಮದ್ದೂರಿನ ಹರಕನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಕಟ್ಟಡ ಕಾಮಗಾರಿಯನ್ನು ಆರಂಭಿಸದೇ ಹಣ ಬಿಡುಗಡೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಪ್ರಕರಣಗಳ ಸಂಬಂಧ ಆರ್‌ಟಿಐ ಕಾರ್ಯಕರ್ತ ಲೋಕಾಯುಕ್ತಕ್ಕೆ ದಾಖಲೆ ಸಮೇತ ದೂರು ನೀಡಿದ್ದಾರೆ.
ಈ ಹಿಂದೆ ಇಬ್ಬರು ಸಿಬ್ಬಂದಿ ನಕಲಿ ಅಂಕಪಟ್ಟಿ ನೀಡಿ ಕೆಲಸ ಗಿಟ್ಟಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಇಷ್ಟೇ ಅಲ್ಲ ಇಲ್ಲಿ ಅಧಿಕಾರಿಗಳು ನಿರ್ಮಿತಿ ಕೇಂದ್ರದ ಸುನೀಲ್ ಎಂಬ ಸಿಬ್ಬಂದಿ ಹೆಸರಿನಲ್ಲಿ 1,09,610 ರೂ. ಬಿಲ್ ಸೃಷ್ಠಿ ಮಾಡಿರುವ ವಿಚಾರವೂ ಬೆಳಕಿಗೆ ಬಂದಿದೆ.