ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ 134ನೇ ಜನ್ಮದಿನ ಆಚರಣೆಯನ್ನ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಮಂಡ್ಯದ ಡಿಸಿ ಕಚೇರಿ ಎದುರಿನ ಕಾವೇರಿವನದಲ್ಲಿರವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಶಾಸಕ ಗಣಿಗ ರವಿಕುಮಾರ್ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಸಿದರು.
ಬಳಿಕ ಬೆಳ್ಳಿರಥದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆಗೆ ಗಣಿಗ ರವಿಕುಮಾರ್ ಚಾಲನೆ ಕೊಟ್ಟರು. ಮೆರವಣೆಗೆಯಲ್ಲಿ ಯುವಕ, ಯುವತಿಯರು ಸಂವಿಧಾನ ಪೀಠಿಕೆ ಹಿಡಿದು ಸಾಗಿದರು.
ನಗರದ ಪ್ರಮುಖ ರಸ್ತೆಯಲ್ಲಿ ನಡೆದ ಮೆರವಣಿಗೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಸಿಇಓ ನಂದಿನಿ, ಮುಡಾ ಅಧ್ಯಕ್ಷ ನಹೀಮ್ ಸೇರಿ ಹಲವರು ಭಾಗಿಯಾಗಿದ್ರು..
ಬಳಿಕ ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿ.ಪಂ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜನೆ ಮಾಡಿದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕ ಜ್ಯೋತಿ ಬೆಳಗುವ ಮೂಲಕ ಸಚಿವ ಎನ್.ಚಲುವರಾಯಸ್ವಾಮಿ.
ಉದ್ಘಾಟಿಸಿದರು.