ಬೆಳಗಾವಿ:- 4 ತಿಂಗಳಿಂದ ಸಂಬಳ ಸಿಗದಿದ್ದಕ್ಕೆ ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. 25 ವರ್ಷದ ಓಂಕಾರ ಪವಾರ್ ಮೃತ ದುರ್ದೈವಿ.
ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಕೇಸ್: ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು!
ಮೃತ ಓಂಕಾರ ಪವಾರ್ ಅವರು ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಖಾಸಗಿ ಆಸ್ಪತ್ರೆಯ ಆ್ಯಂಬುಲೆನ್ಸ್ನ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ಕಳೆದ ನಾಲ್ಕು ತಿಂಗಳ ಸಂಬಳ ನೀಡಿದೇ ಆಸ್ಪತ್ರೆಯವರು ಸತಾಯಿಸುತ್ತಿದ್ದರು. ಸಂಬಳಕ್ಕಾಗಿ ಮನವಿ ಮಾಡಿದ್ರೂ ಸ್ಪಂದಿಸದ ಹಿನ್ನೆಲೆಯಲ್ಲಿ ನೊಂದ ಓಂಕಾರ ಪವಾರ್ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಡೆತ್ ನೋಟ್ ಬರೆದಿಟ್ಟು, ಶಹಾಪುರದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನು, ಸೇಂಟ್ರಾ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಕುಟುಂಬಸ್ಥರು ಮತ್ತು ಡ್ರೈವರ್ ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ