ಮಡಿಕೇರಿ:- ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಮನೆಯಲ್ಲಿಯೇ ನೇಣಿಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ಜರುಗಿದೆ. ಯಶ್ವಂತ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.
ಹಳ್ಳಿಗಟ್ಟುವಿನ CET ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಇಎಐ ಅಂಡ್ ಡಿಎಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ ಮೂಲದ ಯಶ್ವಂತ್ (20) ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಶುಕ್ರವಾರ ರಾತ್ರಿ 8:30ರ ಸುಮಾರಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪಿರಿಯಾಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದೆ.