ಶಿವಮೊಗ್ಗ: ಶಿವಮೊಗ್ಗ ನಗರ ಹೊರವಲಯದ ರಾಗಿಗುಡ್ಡದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾದ ಘಟನೆ ನಡೆದಿದ್ದು, ಬಡಾವಣೆಯಲ್ಲಿ ಉದ್ವಿಗ್ನತೆ ಮೂಡಿಸಿದೆ. ಅನ್ಯಕೋಮಿನ ಇಬ್ಬರು ವ್ಯಕ್ತಿಗಳು , ಪೂಜಿಸಲಾಗುತ್ತಿದ್ದ ಗಣೇಶ ಮತ್ತು ನಾಗದೇವರ ಮೂರ್ತಿಗೆ ಕಾಲಿನಿಂದ ಒದ್ದು ಅವಮಾನ ಮಾಡಿ,
ನಾಗರ ವಿಗ್ರಹವನ್ನು ಚರಂಡಿಗೆ ಎಸೆದಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆ ನಡೆದ ಬೆನ್ನಲ್ಲೇ ಶಿವಮೊಗ್ಗ ಶಾಸಕ ಚನ್ನಬಸಪ್ಪ ಸ್ಥಳಕ್ಕೆ ಭೇಟಿ ನೀಡಿದ್ದು,ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ತಕ್ಷಣ ತಪ್ಪಿತಸ್ಥರನ್ನು ಬಂಧಿಸಬೇಕೆಂದು ಪೊಲೀಸರಿಗೆ ಆಗ್ರಹಿಸಿದ್ದಾರೆ.
ಕುಂಬಳಕಾಯಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಕಣ್ಣು, ಚರ್ಮ, ಕೂದಲು ಎಲ್ಲದಕ್ಕೂ ಮದ್ದು!
ಸ್ಥಳಕ್ಕೆ ಜಿಲ್ಲಾ ಎಸ್‌ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಿಗು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಎಸ್‌ಪಿ ಮಿಥುನ್ ಕುಮಾರ್ ಮಾಧ್ಯಮದೊಂದಿಗೆ ಮಾತನಾಡುತ್ತಾ, ಯಾರೂ ಊಹಾಪೋಹ ಹಬ್ಬಿಸದೆ,ಶಾಂತಿಯನ್ನು ಕಾಪಾಡಬೇಕು.
ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ” ಎಂದು ತಿಳಿಸಿದ್ದಾರೆ ಸ್ಥಳೀಯರ ವಶದಲ್ಲಿದ್ದ ವಿಡಿಯೋ ಆಧರಿಸಿ,ಅನ್ಯಕೋಮಿನ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೂ ಕೆಲವರ ಬಗ್ಗೆ ಮಾಹಿತಿ ಸಿಕ್ಕಿದ್ದು, ತನಿಖೆ ಮುಂದುವರಿದಿದೆ ಎಂದು ಎಸ್‌ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.