ಸಿನಿಮಾದಲ್ಲಿ ಅಮೋಘ ಸಾಧನೆ ಮಾಡಿದ ಹಿನ್ನೆಲೆ ಕನ್ನಡದ ಖ್ಯಾತ ನಟ ಅನಂತ್ ನಾಗ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಭೂಷಣ ಪ್ರಶಸ್ತಿ ಪ್ರಧಾನ ಮಾಡಿದರು.
ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು; ವ್ಯಕ್ತಿತ್ವದಿಂದ ಅಳೆಯಬೇಕು: ಸಿಎಂ ಸಿದ್ದರಾಮಯ್ಯ!
2024-25ನೇ ಸಾಲಿನ ಪದ್ಮ ಭೂಷಣ ಪ್ರಶಸ್ತಿಗೆ ಅನಂತ್ ನಾಗ್ ಅವರ ಹೆಸರನ್ನು ಘೋಷಿಸಲಾಗಿತ್ತು. ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಖ್ಯಾತ ನಟ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಅನಂತ್ ನಾಗ್ 5 ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನಟರಾಗಿ ಅಭಿನಯಿಸುತ್ತಿದ್ದಾರೆ. ಚಿತ್ರರಂಗ ಮಾತ್ರವಲ್ಲದೆ ರಾಜಕೀಯಕ್ಕೂ ಪದಾರ್ಪಣೆ ಮಾಡಿದ್ದ ಅನಂತ್ ನಾಗ್ ಕರ್ನಾಟಕದಿಂದ ಎಂಎಲ್ಎ ಹಾಗೂ ಎಂಎಲ್ಸಿಯಾಗಿಯೂ ಆಯ್ಕೆಯಾಗಿದ್ದರು. ಕಲಾ ರಂಗದಲ್ಲಿ ಅನಂತ್ ನಾಗ್ ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ.
ಇನ್ನೂ ಕನ್ನಡದ ಮೇರು ನಟ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂದು ಕನ್ನಡಿಗರು ಹಲವು ವರ್ಷಗಳಿಂದ ಒತ್ತಾಯಿಸುತ್ತಲೇ ಇದ್ದರು. ಆ ಬೇಡಿಕೆಗೆ ಕೇಂದ್ರ ಸರ್ಕಾರ ಈ ವರ್ಷ ಸ್ಪಂದಿಸಿದೆ.