ಮ್ಯಾನ್ಮಾರ್ ನಲ್ಲಿ ಅಲ್ಲಿನ ಸ್ಥಳೀಯ ಕಾಲಮಾನ ಮಧ್ಯಾಹ್ನ 12.30ರ ಸುಮಾರಿಗೆ ದೊಡ್ಡ ಪ್ರಮಾಣದ ಭೂಕಂಪ ಸಂಭವಿಸಿತ್ತು, ಅದರ ಬೆನ್ನಲ್ಲೇ ಮಧ್ಯರಾತ್ರಿ ಮತ್ತೆ ಅಲ್ಲಿ ಭೂಮಿ ಕಂಪಿಕಿಸಿದೆ. ರಿಕ್ಟರ್ ಮಾಪಕದಲ್ಲಿ 4.4ರಷ್ಟು ತೀವ್ರತೆಯುಳ್ಳ ಭೂಕಂಪ ಉಂಟಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.
ಇನ್ನೂ ಇದೀಗ ಮತ್ತೆ ಮ್ಯಾನ್ಮಾರ್‌ನಲ್ಲಿ ಭೂಕಂಪ ಸಂಭವಿಸಿದೆ. ಮಧ್ಯ ರಾತ್ರಿ ಮತ್ತೆ ಭೂಕಂಪ ಸಂಭವಿಸಿದೆ. ಇದೀಗ ಒಟ್ಟು ಸಾವಿನ ಸಂಖ್ಯೆ 1000ಕ್ಕೆ ದಾಟಿದೆ. 2000 ಜನರು ಗಾಯಗೊಂಡಿದ್ದಾರೆ. ರಾಜಧಾನಿ ನೇಪಿಡಾವ್‌ನಲ್ಲಿರುವ ಆಸ್ಪತ್ರೆಯಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗುತ್ತಿದೆ. ಇನ್ನು ಹೆಚ್ಚಿನ ಜನ ಪ್ರಾಣ ಕಳೆದುಕೊಳ್ಳವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯಲು ಹೀಗೆ ಮಾಡಿ: ಈ 4 ಸ್ಥಳಗಳಲ್ಲಿ ದೀಪ ಹಚ್ಚುವುದನ್ನು ಮರೆಯಬೇಡಿ..!
ಇನ್ನು ಮುಸ್ಲಿಂ ಜನರಿಗೆ ಈಗಾಗಲೇ ಅವರ ಪುಣ್ಯ ಹಬ್ಬ ಪ್ರಾರಂಭವಾಗಿದೆ. ಈ ಸಮಯದಲ್ಲಿ ಪ್ರಾರ್ಥನೆ ಸಲ್ಲಿಸಲು ಆಸ್ಪತ್ರೆಗಳನ್ನು, ವಿಶ್ವವಿದ್ಯಾಲಯಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ, ಭೂಕಂಪದಿಂದ ಮಸೀದಿಗಳು ಧ್ವಂಸ ಆಗಿದೆ. ಅದಕ್ಕಾಗಿ ಈ ಕ್ರಮವನ್ನು ಅನುಸರಿಸಿಕೊಂಡಿದ್ದಾರೆ.
ಸತ್ತವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿರುವ ಮ್ಯಾನ್ಮಾರ್ ಜುಂಟಾ ಮುಖ್ಯಸ್ಥ ಮಿನ್ ಆಂಗ್ ಹ್ಲೈಂಗ್, ‘ತುರ್ತು ಪರಿಸ್ಥಿತಿ’ ಘೋಷಿಸಿ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ. ಇನ್ನು ನಮ್ಮ ಸಹಾಯಕ್ಕೆ ಬರುವಂತೆ ಬೇರೆ ಬೇರೆ ದೇಶಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಇನ್ನು ಉತ್ತರ ಥೈಲ್ಯಾಂಡ್‌ನಲ್ಲೂ ಕಂಪನದ ಅನುಭವವಾಯಿತು,
ಅಲ್ಲಿ ಕೆಲವು ಮೆಟ್ರೋ ಮತ್ತು ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರು ತುರ್ತು ಪರಿಶೀಲನಾ ಸಭೆ ನಡೆಸಲು ಫುಕೆಟ್‌ಗೆ ಅಧಿಕೃತ ಭೇಟಿ ನೀಡಬೇಕಿತ್ತು ಅದನ್ನು ಕೂಡ ರದ್ದು ಮಾಡಿದ್ದಾರೆ. ಇದೀಗ ಥೈಲ್ಯಾಂಡ್ ನಗರದಲ್ಲಿ ‘ತುರ್ತು ಪರಿಸ್ಥಿತಿ’ ಘೋಷಿಸಿದ್ದಾರೆ.