ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರದ ಕೇಸ್ ದಾಖಲಾಗಿದೆ. ಬಿಜೆಪಿ ಕಾರ್ಯಕರ್ತೆಯೊಬ್ಬರು ನೀಡಿದ ದೂರಿನ ಮೇರೆಗೆ RMC ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಇನ್ನೂ ಈ ವಿಚಾರವಾಗಿ ಮಾಜಿ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಸಾಮಾಜಿಕ ಜಾಲತಾಣಗಳಲ್ಲಿ ನೋಡಿದ್ದೇನೆ. ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಿಗೆ ಆದ ಅವಮಾನ ಹಾಗೂ ಅವರ ಮೇಲಾಗಿರೋ ದೌರ್ಜನ್ಯದ ಬಗ್ಗೆ ತಿಳಿಸಿದ್ದಾರೆ. ಆತ್ಮಹತ್ಯೆಗೂ ಪ್ರಯತ್ನ ಪಟ್ಟು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.
ಬಿಯರ್ ಕುಡಿದರೆ ಕಿಡ್ನಿ ಸ್ಟೋನ್ ಆಗುತ್ತಾ? ಎಣ್ಣೆ ಪ್ರಿಯರು ನೋಡಲೇಬೇಕಾದ ಸ್ಟೋರಿ!
ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಿಗೆ ಮಾನ್ಯ ಶಾಸಕರು ಕಿರುಕುಳ ಕೊಡ್ತಿದ್ದಾರೆ. ಶಾಸಕರ ಹೆಸರಿನಲ್ಲಿ ಅಧಿಕಾರ ದುರುಪಯೋಗ ಮಾಡಿಕೊಳ್ತಿದ್ದಾರೆ. ಇದರ ಬಗ್ಗೆ ಬಿಜೆಪಿ ನಾಯಕರು ಉತ್ತರ ಕೊಡಬೇಕು. ಮುನಿರತ್ನರನ್ನ ಎಲ್ಲಾ ಕಡೆ ಬಿಜೆಪಿ ನಾಯಕರು ಫ್ರಂಟ್ ಲೈನ್ನಲ್ಲಿ ಕರೆದುಕೊಂಡು ತಿರುಗಾಡುತ್ತಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಉತ್ತರ ಹೇಳಿದ್ರೆ ಒಳ್ಳೆಯದು ಎಂದರು.