Close Menu
Ain Live News
    Facebook X (Twitter) Instagram YouTube
    Saturday, May 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಜನಾರ್ಧನ ರೆಡ್ಡಿಗೆ ಮತ್ತೊಂದು ಶಾಕ್..! ಶಾಸಕನ ಸ್ಥಾನದಿಂದ ಅನರ್ಹ – ಮುಂದಿನ ನಡೆಯೇನು?

    By Author AINMay 9, 2025
    Share
    Facebook Twitter LinkedIn Pinterest Email
    Demo

    ಆಂಧ್ರಪ್ರದೇಶದ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮತ್ತೊಮ್ಮೆ ಗಾಲಿ ಜನಾರ್ದನ ರೆಡ್ಡಿ ಲಾಕ್ ಆಗಿದ್ದಾರೆ. ಮೈನಿಂಗ್ ಕೇಸ್ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟ ಮಾಡಿದೆ. ಸಿಬಿಐ ತನಿಖೆಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅಪರಾಧ ಸಾಬೀತಾಗಿದೆ. ಹೈದರಾಬಾದ್‌ ಸಿಬಿಐ ಕೋರ್ಟ್‌ ಜನಾರ್ದನ ರೆಡ್ಡಿಗೆ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ರೆಡ್ಡಿ ಸೇರಿ ಐವರನ್ನ ಸಿಬಿಐ ವಶಕ್ಕೆ ಪಡೆದು ಹೈದ್ರಾಬಾದ್​ನ ಚಂಚಲಗೂಡ ಜೈಲಿಗೆ ಶಿಫ್ಟ್ ಮಾಡಿದೆ.

    ಇನ್ನೂ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಮುಂದಿನ 6 ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಆದೇಶ ಹೊರಡಿಸಿದೆ.

    ನೀವು Non Veg ತಿನ್ನೊಲ್ವಾ ಹಾಗಿದ್ರೆ ವರ್ಷಕ್ಕೊಮ್ಮೆ ಈ ಹಣ್ಣು ತಿನ್ನಿ ಸಾಕು ನಿಮಗೆ ಕ್ಯಾನ್ಸರ್ ಬರೊಲ್ಲ!

    ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ ಅಥವಾ ಸಂ ಸದ 2 ವರ್ಷ ಅಥವಾ ಅದಕ್ಕಿತಂ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

    ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ಕೋರ್ಟ್​, ಜನಾರ್ದನ ರೆಡ್ಡಿ ಅನುಮಾತಿ ಕೊಟ್ಟಿರಲಿಲ್ಲ. ಹೀಗಾಗಿ ರೆಡ್ಡಿ ಕೆಆರ್​ಎಸ್​ ಪಕ್ಷವನ್ನು ಕಟ್ಟಿ ಅದರಿಂದಲೇ ​ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ತಮ್ಮ ಸಮೀಪ ಸ್ಪರ್ಧಿ ಕಾಂಗ್ರೆಸ್​ನ ಇಕ್ಬಾಲ್​ ಅನ್ಸಾರಿ ಅವರನ್ನು ಸೋಲಿಸಿ ಮತ್ತೆ ರಾಜಕೀಯ ಪುನರ್ಜನ್ಮ ಪಡೆದುಕೊಂಡಿದ್ದರು. ಆದರೆ, ಇದೀಗ ರೆಡ್ಡಿ ತಮ್ಮ ಶಾಸಕ ಸ್ಥಾನ ಕಳೆದುಕೊಂಡಿದ್ದರಿಂದ ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಭಾರತೀಯ ಸೈನಿಕರಿಗಾಗಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಹೋಮ

    May 10, 2025

    Murder Case: ಬೆಂಗಳೂರಲ್ಲಿ ಮತ್ತೊಂದು ಬರ್ಬರ ಹತ್ಯೆ: ಸಿಮೆಂಟ್ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ

    May 10, 2025

    ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ವೈದ್ಯರ ನಿವೃತ್ತಿ ವಯಸ್ಸನ್ನು 60 ರಿಂದ 65ಕ್ಕೆ ಹೆಚ್ಚಳ: ಹೆಚ್.ಕೆ.ಪಾಟೀಲ್

    May 10, 2025

    ಮೈಸೂರಿನ ಆರ್ ಬಿ ಐ ನಲ್ಲಿ ಮಧ್ಯರಾತ್ರಿ ಮಾಕ್ ಡ್ರಿಲ್

    May 10, 2025

    ಆಪರೇಷನ್ ಸಿಂಧೂರ ಯಶಸ್ವಿ: ಸೇನೆಯ ಒಳಿತಿಗಾಗಿ ಹನುಮಾನ್ ದೇವರಿಗೆ ವಿಶೇಷ ಪೂಜೆ

    May 10, 2025

    ಮಂಡ್ಯದಲ್ಲಿ ಕಲುಷಿತ ಆಹಾರ ಪ್ರಕರಣ: ಗೋಕುಲ ವಿದ್ಯಾಸಂಸ್ಥೆಯ ಮಾನ್ಯತೆ‌ ರದ್ದು

    May 10, 2025

    ಮಂಡ್ಯದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಜಾವೀದ್ ಬಂಧನ

    May 10, 2025

    IMF: ಭಾರತದ ತೀವ್ರ ವಿರೋಧದ ನಡುವೆಯೂ ಪಾಕಿಸ್ತಾನಕ್ಕೆ ಐಎಂಎಫ್‌ ಸಾಲ ಮಂಜೂರು!

    May 10, 2025

    ಚಾಣಕ್ಯನ ಪ್ರಕಾರ ಈ ಕೆಲಸ ಮಾಡಿದ್ರೆ ಸಾಕು ಜೀವನದ ಪ್ರತಿ ಹೆಜ್ಜೆಯಲ್ಲೂ ಸಿಗುತ್ತೆ ಸಂತೋಷ-ಯಶಸ್ಸು..!

    May 10, 2025

    ಸೈನಿಕರಿಗೆ ಮನೋಬಲ ಹೆಚ್ಚಿಸುವ ಕೆಲಸ ಮಾಡಿದ್ದೇವೆ: ಸಲೀಂ ಅಹ್ಮದ್

    May 9, 2025

    ಹುಬ್ಬಳ್ಳಿ ಬಾಲಕಿ ಹತ್ಯೆ ಕೇಸ್​: ಸಿಎಂ ಘೋಷಿಸಿದಂತೆ 10 ಲಕ್ಷ ಪರಿಹಾರ ಚೆಕ್ ನೀಡಿದ್ದೇನೆ: ಸಲೀಂ ಅಹ್ಮದ್

    May 9, 2025

    ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಮಹಾಲಕ್ಷ್ಮೀ ದೇವಿಯ ಮಹಾ ರಥೋತ್ಸವ!

    May 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.