ಬೆಂಗಳೂರು: ಕೆಲ ತಿಂಗಳ ಹಿಂದಷ್ಟೇ ಮದ್ಯದ ದರ ಏರಿಕೆ ಮಾಡಿದ್ದ ಸಿದ್ದರಾಮಯ್ಯ ಸರ್ಕಾರ, ಇದೀಗ ಮತ್ತೊಮ್ಮೆ ಎಣ್ಣೆ ಪ್ರಿಯರಿಗೆ ಶಾಕ್ ಕೊಡಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಬಿಯರ್ ಮೇಲಿನ ತೆರಿಗೆ ಉತ್ಪಾದನಾ ವೆಚ್ಚದ ಶೇ 195 ರಷ್ಟಿದೆ. ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ 205 ಕ್ಕೆ ಹೆಚ್ಚಿಸುವ ಬಗ್ಗೆ ರಾಜ್ಯದ ಹೊಸ ಕರಡು ನಿಯಮದಲ್ಲಿ ಉಲ್ಲೇಖಿಸಲಾಗಿದೆ.
ಪ್ರೀಮಿಯಂ ಅಥವಾ ಇತರ ಬಿಯರ್ ಬ್ರಾಂಡ್ಗಳ ಬೆಲೆಯು ಉತ್ಪಾದನಾ ವೆಚ್ಚವನ್ನು ಅವಲಂಬಿಸಿ ಪ್ರತಿ ಬಾಟಲ್ಗೆ ಸುಮಾರು 10 ರೂಪಾಯಿಗಳಷ್ಟು ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ.
kshaya Tritiya 2025: ಅಕ್ಷಯ ತೃತೀಯದಂದೇ ಚಿನ್ನ ಖರೀದಿಸಲು ಕಾರಣವೇನು..? ಇಲ್ಲಿದೆ ಮಾಹಿತಿ
ಒಟ್ಟಾರೆಯಾಗಿ ತೆರಿಗೆ ಹೆಚ್ಚಳದ ನಂತರ ಬಿಯರ್ ದರ 10 ರೂ.ನಷ್ಟು ಹೆಚ್ಚಳವಾಗಬಹುದು. ಮಧ್ಯಮ ಶ್ರೇಣಿಯ ಮತ್ತು ಅಗ್ಗದ ಸ್ಥಳೀಯ ಬಿಯರ್ಗಳಿಗೆ ಪ್ರತಿ ಬಾಟಲ್ಗೆ 5 ರೂಪಾಯಿ ವರೆಗೆ ದರ ಏರಿಕೆಯಾಗುವ ಸಾಧ್ಯತೆ ಇದೆ. ಬೆಲೆ ಏರಿಕೆಯು ಬ್ರ್ಯಾಂಡ್ನಿಂದ ಬ್ರ್ಯಾಂಡ್ಗೆ ವ್ಯತ್ಯಸ್ತವಾಗಿರಲಿದೆ.
ಹಿಂದೆ, ಕರ್ನಾಟಕದಲ್ಲಿ ಬಿಯರ್ಗೆ ಎರಡು ಹಂತದ ತೆರಿಗೆ ವ್ಯವಸ್ಥೆ ಇತ್ತು. ಕೆಳ ಹಂತದ ಬ್ರಾಂಡ್ಗಳಿಗೆ ಲೀಟರ್ಗೆ 130 ರೂ. ವರೆಗೆ ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಇತರ ಬ್ರಾಂಡ್ಗಳಿಗೆ ಶೇಕಡಾವಾರು ತೆರಿಗೆ ವಿಧಿಸಲಾಗುತ್ತಿತ್ತು. ಈ ವ್ಯವಸ್ಥೆಯನ್ನು ಈಗ ರದ್ದುಗೊಳಿಸಲಾಗಿದ್ದು, ಎಲ್ಲಾ ಬಿಯರ್ಗಳಿಗೆ ಏಕರೂಪದ ಶೇ 205 ರ ತೆರಿಗೆ ನಿಗದಿಪಡಿಸಲಾಗಿದೆ.
ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸುವ ಗುರಿಯೊಂದಿಗೆ ಈ ಕ್ರಮ ಕೈಗೊಳ್ಳಲಾಗಿದೆ. ಕಡಿಮೆ ತೆರಿಗೆ ಶ್ರೇಣಿಯನ್ನು ತೆಗೆದುಹಾಕುವುದರೊಂದಿಗೆ, ಎಲ್ಲಾ ಬಿಯರ್ ಬ್ರಾಂಡ್ಗಳಿಗೆ ಒಂದೇ ರೀತಿಯ ತೆರಿಗೆ ವಿಧಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.