ಬೆಂಗಳೂರು: ಪಾಕಿಸ್ತಾನದ ಪರ ಯಾರೇ ಘೋಷಣೆ ಕೂಗಿದರೂ ಅದು ತಪ್ಪು ಮತ್ತು ದೇಶದ್ರೋಹ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಸವ ಜಯಂತಿ ಪ್ರಯುಕ್ತ ನಗರದಲ್ಲಿಂದು ಬಸವಣ್ಣನ ಪ್ರತಿಮೆ ಪುಷ್ಪನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಪಾಕಿಸ್ತಾನ ಪರ ಘೋಷಣೆ ಕೂಗಿದ್ದರೆ ಅದು ತಪ್ಪು ಮತ್ತು ದೇಶದ್ರೋಹ, ಪಾಕಿಸ್ತಾನ್ ಜಿಂದಾಬಾದ್ ಅಂತ ಕೂಗಿದ ಎಂಬ ಆರೋಪದಲ್ಲಿ ಒಬ್ಬನನ್ನು ಕೊಲ್ಲಲಾಗಿದೆ,
kshaya Tritiya 2025: ಅಕ್ಷಯ ತೃತೀಯದಂದೇ ಚಿನ್ನ ಖರೀದಿಸಲು ಕಾರಣವೇನು..? ಇಲ್ಲಿದೆ ಮಾಹಿತಿ
ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು 15 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ, ವರದಿ ಬಂದ ಬಳಿಕ ನಿಜಾಂಶ ಗೊತ್ತಾಗುತ್ತದೆ ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಕುಡುಪು ಎಂಬಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಗಲಾಟೆ ಸಂಭವಿಸಿ, ಗುಂಪೊಂದು ಯುವಕನ ಮೇಲೆ ಹಲ್ಲೆಗೈದ ಪರಿಣಾಮ ಆತ ಸಾವನ್ನಪ್ಪಿದ (Mob lynching) ಘಟನೆ ಸಂಭವಿಸಿದೆ. ಪ್ರಕರಣ ಸಂಬಂಧ ಈವರೆಗೆ 20 ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.