Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಪೌರ ಕಾರ್ಮಿಕರ ಬದುಕಿನಲ್ಲಿ ಬದಲಾವಣೆ ತಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

    By Author AINMay 1, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: “ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಪೌರ ಕಾರ್ಮಿಕರನ್ನು ಖಾಯಂ ಮಾಡುವ ಮೂಲಕ ಅವರ ಬದುಕಿನಲ್ಲಿ ಬದಲಾವಣೆ ತಂದು, ಸಮಾಜದಲ್ಲಿ ಸಮಾನತೆ ತರುವ ಕೆಲಸ ಮಾಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಗುರುವಾರ ನಡೆದ ಪೌರ- ಕಾರ್ಮಿಕರ ದಿನಾಚರಣೆ ಹಾಗೂ 12,692 ಮಂದಿ ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

    “ಸಮಾಜ ಸುಭದ್ರವಾಗಿರಲು ನಾಲ್ಕು ಆಧಾರ ಸ್ತಂಭಗಳಿರಬೇಕು. ಅವುಗಳೆಂದರೆ ಕೃಷಿಕ, ಕಾರ್ಮಿಕ, ಸೈನಿಕ ಹಾಗೂ ಶಿಕ್ಷಕ. ಕಾರ್ಮಿಕರು ಈ ಸಮಾಜದ ಆಧಾರಸ್ತಂಭ. ನಮ್ಮ ಸರ್ಕಾರ ಪೌರಕಾರ್ಮಿಕರನ್ನು ದೇವರ ಮಕ್ಕಳು, ಸ್ವಚ್ಛತಾ ರಾಯಭಾರಿಗಳು ಎಂದು ಭಾವಿಸುತ್ತಿದೆ. ನೀವು ಸಮಾಜದ ಆರೋಗ್ಯ ಕಾಪಾಡುತ್ತಿರುವ ವೈದ್ಯರು, ನೀವು ಬೆಂಗಳೂರು ನಗರವನ್ನು ಸುಂದರವಾಗಿಟ್ಟು ಸೇವೆ ಮಾಡಿರುವುದಕ್ಕೆ ಈ ನಗರಕ್ಕೆ ವಿಶ್ವ ಮಟ್ಟದ ಹೆಸರು ಬಂದಿದೆ. ಇಡೀ ವಿಶ್ವಕ್ಕೆ ದೊಡ್ಡ ಸೇವೆ ಮಾಡುವ ಕಾರ್ಮಿಕರ ದಿನವಿಂದು” ಎಂದು ಶ್ಲಾಘಿಸಿದರು.

    “ಪುರದ ಹಿತ ಕಾಪಾಡುತ್ತಿರುವವರು ಪೌರ ಕಾರ್ಮಿಕರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಲ್ಲಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಾವು ವಿರೋಧ ಪಕ್ಷದಲ್ಲಿದ್ದಾಗ ಹಾಗೂ ನನ್ನ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷ ಪೌರ ಕಾರ್ಮಿಕರನ್ನು ಸರ್ಕಾರಿ ಕಾರ್ಮಿಕರನ್ನಾಗಿ ಮಾಡುವ ಮಾತು ಕೊಟ್ಟಿದ್ದೆವು. ನಾವುಗಳು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಪೌರ ಕಾರ್ಮಿಕರ ಮಕ್ಕಳೇ ಇಂದು ಈ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ. ನಿಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ, ಬುದ್ಧಿವಂತರಾಗಿ ದೊಡ್ಡ ಹುದ್ದೆ ಅಲಂಕರಿಸುವಂತೆ ಮಾಡಬೇಕು ಎಂಬುದು ನಮ್ಮ ಸರ್ಕಾರದ ಉದ್ದೇಶ” ಎಂದು ಹೇಳಿದರು.

    ಊಟದ ಬಳಿಕ ಪಾತ್ರೆಗಳನ್ನು ತೊಳೆಯದೇ ಹಾಗೆ ಬಿಡ್ತೀರಾ!? ನೀವು ನೋಡಲೇಬೇಕಾದ ಸ್ಟೋರಿ!

    “ಯೋಗಿ ಎನಿಸಿಕೊಳ್ಳುವುದಕ್ಕಿಂತ ಉಪಯೋಗಿ ಎನಿಸಿಕೊಂಡರೆ ಬದುಕಿಗೆ ಹೆಚ್ಚು ಬೆಲೆ. ಪೌರಕಾರ್ಮಿಕರನ್ನು ಕುವೆಂಪು ಅವರು ಶಿವನಿಗೆ ಹೋಲಿಸಿದ್ದರು. ‘ಬೀದಿ ಗುಡಿಸುವ ಬಡವನೆದೆಯಲ್ಲಿ ನಾವಿದ್ದೇವೆ. ಉಳುಮೆ ಮಾಡುವ ಒಕ್ಕಲಿಗನ ಜತೆ ನಾವಿದ್ದೇವೆ. ಅಂಜದಿರು ಸೋದರನೇ ನಿಮ್ಮ ಜತೆ ನಾವಿದ್ದೇವೆ’ ಎಂದು ಕುವೆಂಪು ಅವರು ಹೇಳಿದ್ದರು. ಇಂದು ನಿಮ್ಮ ಬದುಕು ಬದಲಾವಣೆಯಾಗುತ್ತಿರುವ ಬಹಳ ಪವಿತ್ರವಾದ ದಿನ. ಇಂದು ನೀವು ಸರ್ಕಾರಿ ನೌಕರರಾಗಿದ್ದೀರಿ” ಎಂದು ತಿಳಿಸಿದರು.

    “ಮಲ್ಲಿಕಾರ್ಜುನ ಖರ್ಗೆ ಅವರು ಮುನ್ಸಿಪಲ್ ಅಧ್ಯಕ್ಷರಾಗಿ ಜೀವನ ಆರಂಭಿಸಿದವರು. ಇಂದು ದೇಶದ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಮಹಾತ್ಮಾ ಗಾಂಧಿಜಿ, ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಅಲಂಕರಿಸಿದ ಹುದ್ದೆಯಲ್ಲಿದ್ದಾರೆ. ಖರ್ಗೆ ಅವರು ಕಾರ್ಮಿಕ ಸಚಿವರಾಗಿ ಮಾಡಿದ ಕೆಲಸಗಳು ದೇಶದ ಇತಿಹಾಸ ಪುಟ ಸೇರಿವೆ. ದೇಶದ ಉದ್ದಗಲದಲ್ಲಿ ಇಎಸ್ಐ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜುಗಳನ್ನು ಆರಂಭಿಸಿದ್ದಾರೆ. ಹೀಗಾಗಿ ಅವರಿಂದಲೇ ಈ ಕಾರ್ಯಕ್ರಮ ಉದ್ಘಾಟಿಸಲು ತೀರ್ಮಾನಿಸಿದ್ದೇವೆ” ಎಂದರು.

    “ಪೌರ ಕಾರ್ಮಿಕರ ಅಭಿವೃದ್ಧಿಗಾಗಿ ಪಾಲಿಕೆ ಬಜೆಟ್ ನಲ್ಲಿ ರೂ. 600 ಕೋಟಿ ಹಣ ಮೀಸಲಿಡಲಾಗಿದ್ದು, ಒಂದೇ ಒಂದು ರೂಪಾಯಿ ಲಂಚ ಪಡೆಯದೇ ನಿಮ್ಮನ್ನು ಖಾಯಂ ಮಾಡಲಾಗಿದೆ. ಸಿಂಧುತ್ವ ವಿಚಾರದಲ್ಲಿ ಕೆಲವು ಗೊಂದಲಗಳಿರುವ ಕಾರಣಕ್ಕೆ ಕೆಲವರ ಕೆಲಸ ಖಾಯಂ ಆಗಿಲ್ಲ. ಈ ಬಗ್ಗೆ ಪ್ರತ್ಯೇಕವಾಗಿ ಬೂತ್ ಆರಂಭಿಸಿ, ನಿಮ್ಮ ದಾಖಲೆಗಳನ್ನು ಪರಿಶೀಲನೆ ಮಾಡಿಸಿ ನಿಮ್ಮೆಲ್ಲರಿಗೂ ನ್ಯಾಯ ಒದಗಿಸಲಾಗುವುದು” ಎಂದು ವಾಗ್ದಾನ ನೀಡಿದರು.

    “ಇದ್ದಾಗ ರೊಟ್ಟಿ ಕೊಟ್ಟರೆ, ಸತ್ತಾಗ ಸ್ವರ್ಗ ಸಿಗುತ್ತದೆ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ನಮ್ಮ ಸರ್ಕಾರ ನಿಮ್ಮ ಸರ್ಕಾರ. ಬೆಂಗಳೂರಿನ ಕಾಂಗ್ರೆಸ್ ಶಾಸಕರು ಸದಾ ನಿಮ್ಮನ್ನು ಖಾಯಂ ಮಾಡುವ ಬಗ್ಗೆ ನನ್ನ ಮೇಲೆ ಒತ್ತಡ ಹಾಕುತ್ತಿದ್ದರು. ನಮ್ಮ ಪ್ರಣಾಳಿಕೆಯಲ್ಲಿ ಹೇಳಿದಂತೆ ಈ ಕೆಲಸ ಮಾಡಿದ್ದೇವೆ. ಇದು ನಮ್ಮ ಸಂಕಲ್ಪ. ಸಮಾಜ ಎನ್ನುವ ಚಕ್ರದಲ್ಲಿ ಕೆಳಗಿರುವವರು ಮೇಲಕ್ಕೆ ಹೋಗುತ್ತಾರೆ, ಮೇಲಿರುವವರು ಕೆಳಗೆ ಹೋಗುತ್ತಾರೆ ಎಂದು ವಿವೇಕಾನಂದ ಅವರು ಹೇಳಿದ್ದಾರೆ. ಅದೇ ರೀತಿ ನಿಮಗೆ ಸಮಾನತೆ ನೀಡುವ ಕೆಲಸ ಮಾಡಲಾಗುತ್ತಿದೆ” ಎಂದು ಹೇಳಿದರು.

    “ಬಸವಲಿಂಗಪ್ಪ, ಐಪಿಡಿ ಸಾಲಪ್ಪ ಅವರ ಜತೆ ನಾನು ರಾಜಕೀಯವಾಗಿ ಕೆಲಸ ಮಾಡಿದ್ದು, ಅವರನ್ನು ಸ್ಮರಿಸುತ್ತೇನೆ. ಅವರು ನಿಮ್ಮ ಬದುಕಿನ ಕಲ್ಯಾಣಕ್ಕೆ ಹೋರಾಟ ಮಾಡಿದ್ದಾರೆ. ಡಿ.ಸಾಲಪ್ಪ ಅವರು ನಿಮ್ಮ ಬಗ್ಗೆ ವರದಿ ನೀಡಿದ್ದಾರೆ. ಆ ವರದಿಯನ್ನು ಹಂತ ಹಂತವಾಗಿ ಅನುಷ್ಠಾನಕ್ಕೆ ತರಲು ಪ್ರಯತ್ನಿಸುತ್ತಿದ್ದೇವೆ. ನಿಮ್ಮ ಮಕ್ಕಳ ಭವಿಷ್ಯ ಗಟ್ಟಿಗೊಳಿಸಲು ಅನೇಕ ಕಾರ್ಯಕ್ರಮ ರೂಪಿಸಲಾಗಿದೆ. ಇದಕ್ಕಾಗಿ 700 ಕೋಟಿ ಮೀಸಲಿಡಲಾಗಿದೆ. ನೀವು ನಿವೃತ್ತಿಯಾದಾಗ 10 ಲಕ್ಷ ಹಣವನ್ನು ಡೆಪಾಸಿಟ್ ಮಾಡಿ 6 ಸಾವಿರ ಪಿಂಚಣಿ ದೊರೆಯುವಂತೆ ಯೋಜನೆ ರೂಪಿಸಿದ್ದೇವೆ. ನಿಮಗೆ ಆರೋಗ್ಯ, ಮಕ್ಕಳ ಶಿಕ್ಷಣ, ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. 2017ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ 10 ಸಾವಿರ ಪೌರ ಕಾರ್ಮಿಕರನ್ನು ನೇರ ನೇಮಕ ಮಾಡಿತ್ತು. ರಾಜ್ಯದಾದ್ಯಂತ ನಿಮಗಾಗಿ 7.70 ಲಕ್ಷ ಮನೆ ನಿರ್ಮಿಸಲಾಗಿತ್ತು. 1 ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸಲಾಗಿದೆ. 2024-25ನೇ ಸಾಲಿನ ಬಜೆಟ್ ನಲ್ಲಿ ಆರೋಗ್ಯ ವಿಮೆ ಘೋಷಿಸಿದ್ದಾರೆ” ಎಂದು ಸರ್ಕಾರದ ಕಾರ್ಯಕ್ರಮಗಳನ್ನು ವಿವರಿಸಿದರು.

    “ಕೋವಿಡ್ ಸಂದರ್ಭದಲ್ಲಿ ನಿಮ್ಮ ಪ್ರಾಣವನ್ನು ಪಣಕ್ಕಿಟ್ಟು ವಾರಿಯರ್ ನಂತೆ ಇಡೀ ರಾಜ್ಯವನ್ನು ಕಾಪಾಡಿದ್ದನ್ನು ನಾವು ಮರೆಯಲು ಸಾಧ್ಯವಿಲ್ಲ. ಪೌರ ಕಾರ್ಮಿಕರನ್ನು ಯಾರೂ ಕೀಳಾಗಿ ಕಾಣುವಂತಿಲ್ಲ. ನಾವು ಆಯುಕ್ತರಿಗೆ ನೀಡುವ ಗೌರವವನ್ನು ಪೌರಕಾರ್ಮಿಕರಿಗೂ ನೀಡಬೇಕು” ಎಂದು ತಿಳಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025

    ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025

    ಬೆಂಗಳೂರಿಗರ ಗಮನಕ್ಕೆ: ಇಂದು ಈ ಪ್ರದೇಶದಲ್ಲಿ ಇರಲ್ಲ ಕರೆಂಟ್!

    June 22, 2025

    ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್

    June 21, 2025

    ವಂಚನೆ ಆರೋಪ: ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ FIR!

    June 21, 2025

    ಐಟಿ ಕ್ಷೇತ್ರದ ಹುದ್ದೆಗಳನ್ನ ಎಐ ಕಿತ್ತುಕೊಳ್ಳುತ್ತಾ!? ಇನ್ಫೋಸಿಸ್ ದಿಗ್ಗಜ ಎನ್‌.ಆರ್ ನಾರಾಯಣಮೂರ್ತಿ ಏನಂದ್ರೂ!?

    June 21, 2025

    ಮಾವು ಮಾರುಕಟ್ಟೆ ಮಧ್ಯಪ್ರವೇಶ : ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆ ಎನ್. ಚಲುವರಾಯಸ್ವಾಮಿ!

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.