ಬೆಂಗಳೂರು: ಮುನಿರತ್ನ ವಿರುದ್ಧ ಕ್ರಮ ಜರುಗಿಸದ ಅಶೋಕ ಮತ್ತು ವಿಜಯೇಂದ್ರ ಅಸಮರ್ಥ ನಾಯಕರು ಎಂದು ಮಾಜಿ ಸಂಸದ ಡಿಕೆ ಸುರೇಶ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,
ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಅರ್ ದಾಖಲಾಗಿ ಅವರು ಎಂಥ ರತ್ನ ಎಂದು ಇಡೀ ರಾಜ್ಯಕ್ಕೆ ಗೊತ್ತಾದರೂ ಅಶೋಕ ಮತ್ತು ವಿಜಯೇಂದ್ರ ಯಾವುದೇ ಕ್ರಮ ಜರುಗಿಸಿಲ್ಲ, ಮುನಿರತ್ನ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದಾಗ್ಯೂ ಇವರಿಬ್ಬರು ಸುಮ್ಮನಿದ್ದಾರೆಂದರೆ ಎಷ್ಟು ಅಸಮರ್ಥ ನಾಯಕರು ಅನ್ನೋದು ಗೊತ್ತಾಗುತ್ತದೆ ಎಂದು ಹೇಳಿದರು.
ನೀವು ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣು ತಿನ್ನುತ್ತೀರಾ!? ಹಾಗಿದ್ರೆ ಈ ಸುದ್ದಿ ನೋಡಿ!
ಅತ್ಯಾಚಾರ, ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಸಾಬೀತಾಗಿ, ಎಫ್ಎಸ್ಎಲ್ ರಿಪೋರ್ಟ್ ಅದನ್ನು ದೃಢೀಕರಿಸಿ ಚಾರ್ಜ್ಶೀಟ್ ಸಲ್ಲಿಕೆಯಾಗಿದ್ದರೂ ಮುನಿರತ್ನ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಸುರೇಶ್ ಹೇಳಿದರು.