ಬೆಳಗಾವಿ: ಗೋಕಾಕ್ ಜಾತ್ರೋತ್ಸವದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎಎಸ್‌ಐ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮೀರಾ ನಾಯಕ್ (55) ಮೃತ ಪೊಲೀಸ್ ಅಧಿಕಾರಿಯಾಗಿದ್ದು, ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೀರಾ ನಾಯಕ್ ಅವರನ್ನು ಗೋಕಾಕ್‌ನ ಗ್ರಾಮದೇವಿ ಜಾತ್ರೆಗೆ ಕರ್ತವ್ಯಕ್ಕೆಂದು ನಿಯೋಜನೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಪಟ್ಟಣದ ಎಸ್‌ಸಿ, ಎಸ್‌ಟಿ ಬಾಲಕರ ಹಾಸ್ಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಆಧರೆ ಇಂದು ಮುಂಜಾನೆ ಅವರಿಗೆ ಹೃದಯಸ್ತಂಭನವಾಗಿದೆ. ತಕ್ಷಣವೇ ಜೊತೆಗಿದ್ದವರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲಿ ಅವರ ಪ್ರಾಣಪಕ್ಷಿ ಹಾರಿಹೋಗಿದೆ. ಮೀರಾ ನಾಯಕ್ ಅವ ಮೃತದೇಹವನ್ನು ಗೋಕಾಕ್ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.