ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ದರೋಡೆ ಗಾಂಗ್ಯ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಹಾಗೂ ಡೋಣಿ ಗ್ರಾಮದ ಮಧ್ಯೆ ಈ ಶೂಟೌಟ್ ನಡೆದಿದೆ.
ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಎರಡು ಸುತ್ತು ಗುಂಡೇಟು ಹಾರಿಸಿದ್ದು, ಆರೋಪಿ ಜಯಸಿಂಹ ಮೊಡಕೆರ್ ಎಡಗಾಲಿಗೆ ಗುಂಡೇಟು ತಗುಲಿದೆ.
ಲೋನ್ ರಿಜೆಕ್ಟ್ಗೆ ಸೇಡು, ವೆಬ್ ಸಿರೀಸ್ ನೋಡಿ ದರೋಡೆ ಪ್ಲಾನ್ ; ನ್ಯಾಮತಿ ಬ್ಯಾಂಕ್ ದರೋಡೆ ಕಥೆ ಇದು..
ಆರೋಪಿ ಮಂಜುನಾಥ ಮೊಡಕೆರ್, ರಮೇಶ್ ಮೊಡಕೆರ್ ಹಾಗೂ ಜಯಸಿಂಹ ಮೊಡಕೆರ್ರನ್ನು ಪೊಲೀಸ್ ವಾಹನದಲ್ಲಿ ಠಾಣೆಗೆ ಕರೆತರುತ್ತಿದ್ದರು. ಜಯಸಿಂಹ ಕೈಗೆ ಹಾಕಿದ್ದ ಬೇಡಿಯಿಂದ ಪೊಲೀಸ್ ಸಿಬ್ಬಂದಿ ವೀರೇಶ್ ಬಿಸ್ನಳ್ಳಿ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಈ ವೇಳೆ ಮುಂಡರಗಿ ಸಿಪಿಐ ಮಂಜುನಾಥ ಕುಸುಗಲ್ ಅವರು ಆರೋಪಿ ಜಯಸಿಂಹನ ಕಾಲಿಗೆ ಫೈರಿಂಗ್ ಮಾಡಿದ್ದಾರೆ. ಗಾಯಾಳು ಆರೋಪಿ ಹಾಗೂ ಪೊಲೀಸ್ ಸಿಬ್ಬಂದಿಯನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಎಸ್.ಪಿ, ಬಿ.ಎಸ್ ನೇಮಗೌಡ ಭೇಟಿ ನೀಡಿ ಪರಿಶೀಲನೆ ಮಾಡಿದರು.