ನವದೆಹಲಿ:- ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನತೆ ತಾರಕಕ್ಕೇರಿದೆ. , ಜಮ್ಮುವನ್ನು ಗುರಿಯಾಗಿಸಿ ಮತ್ತೆ ಪಾಕಿಸ್ತಾನ ದಾಳಿ ನಡೆಸಿದೆ. ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಜಮ್ಮುವಿನ ಮೇಲೆ ಹಮಾಸ್ ಮಾದರಿಯಲ್ಲಿ ದಾಳಿ ನಡೆಸಿದೆ.ಇಸ್ರೇಲ್ ಮಾದರಿಯಲ್ಲೇ ಭಾರತವು ತಕ್ಕ ಪ್ರತ್ಯುತ್ತರ ನೀಡುತ್ತಿದೆ.
ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಪಾಕ್ ಮತ್ತು ಅಲ್ಲಿನ ಜನತೆ ತತ್ತರಿಸಿದೆ. ಇಷ್ಟಾಗಿಯೂ ಕಿತಾಪತಿ ಬಿಡದ ಪಾಕಿಸ್ತಾನ ಮತ್ತೆ ಭಾರತದ ಜಮ್ಮುವಿನ ಮೇಲೆ ದಾಳಿಗೆ ವಿಫಲಯತ್ನ ನಡೆಸಿದೆ. ಜಮ್ಮುವಿನ ಮೇಲೆ ಪಾಕ್ 100 ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಕೌಂಟರ್ ಅಟ್ಯಾಕ್ ಮಾಡಿರುವ ಭಾರತ ಲಾಹೋರ್ ಮೇಲೆ ಮಿಸೈಲ್‌ಗಳ ಸುರಿಮಳೆ ಗರೆದಿದೆ.
ಜಮ್ಮುವಿನಲ್ಲಿ ಇದುವರೆಗೆ ಪಾಕಿಸ್ತಾನದ 50ಕ್ಕೂ ಹೆಚ್ಚು ಡ್ರೋನ್ ದಾಳಿಯನ್ನು ಭಾರತೀಯ ವಿಫಲಗೊಳಿಸಿದೆ. ಭಾರತೀಯ ಗಡಿ ನಿಯಂತ್ರಣ ರೇಖೆ ಹಾಗೂ ವಿವಿಧ ಪ್ರದೇಶಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿತ್ತು. ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್‌ಕೋಟ್, ಅಮೃತಸರ, ಕಪುರ್ತಲ, ಜಲಂಧರ್, ಲುಧಿಯಾನ, ಆದಂಪುರ, ಬಟಿಂಡಾ, ಚಂಡೀಗಢ, ನಾಲ್, ಫಲೋಡಿ, ಉತ್ತರಲೈ, ಭುಜ್ ಸೇರಿ ಒಟ್ಟು 15 ನಗರಗಳ ಮೇಲೂ ದಾಳಿಗೆ ಸಂಚುಮಾಡಿತ್ತು. ಆದ್ರೆ ಭಾರತೀಯ ಸೇನೆ ಎಲ್ಲಾ ದಾಳಿಯನ್ನ ವಿಫಲಗೊಳಿಸಿದೆ.
ಮೇ 7 ರಂದು ಭಾರತ ಪಾಕಿಸ್ತಾನ ಹಾಗೂ ಪಿಒಕೆಯಲ್ಲಿದ್ದ 9 ಭಯೋತ್ಪಾದಕರ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿ ಉಗ್ರರನ್ನು ಧ್ವಂಸಮಾಡಿದೆ, ಇದಕ್ಕೆ ಪ್ರತಿಯಾಗಿ ಪಾಕ್ ಭಾರತದ ಅಮಾಯಕ ನಾಗರಿಕರ ಮೇಲೆ ದಾಳಿ ಮಾಡಿ 16 ಜನರನ್ನು ಕೊಂದಿದೆ. ಅಲ್ಲದೆ ಉದ್ಧಟತನ ತೋರಿರುವ ಪಾಕಿಸ್ತಾನ ಸೈನ್ಯ ಗುರುವಾರ ಸಂಜೆಯಿಂದ ಕ್ಷಿಪಣಿ ದಾಳಿ ಮಾಡಿದೆ. ಜಮ್ಮುವಿನ ಮೇಲೆ ದಾಳಿ ಮುಂದುವರಿಸಿದೆ. ಭಾರತ ಪ್ರತಿದಾಳಿ ಮಾಡಿ, ಪಾಕಿಸ್ತಾನದ ಕ್ಷಿಪಣಿಗಳನ್ನು ಹೊಡೆದುರುಳಿಸಿದೆ.