Close Menu
Ain Live News
    Facebook X (Twitter) Instagram YouTube
    Sunday, June 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರೈತರೇ ಗಮನಿಸಿ: ಈ ಯೋಜನೆಯಡಿ ನೋಂದಣಿಗೆ ಜುಲೈ 31 ಕೊನೆ ದಿನ!

    By AIN AuthorJuly 26, 2024
    Share
    Facebook Twitter LinkedIn Pinterest Email
    Demo

    ದೇಶದ ಎಲ್ಲಾ ರೈತರು ಬೆಳೆ ವಿಮೆ ಪಡೆಯಲು ಅವಕಾಶ ಒದಗಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಹ ಬಿಡುಗಡೆ ಮಾಡಲಾಗಿದ್ದೂ, ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ, ಆರ್ದ್ರತೆ ಇತ್ಯಾದಿ ಹವಾಮಾನ ಅಂಶಗಳಾದ ಮಾಹಿತಿಗಳನ್ನು ಪರಿಶೀಲಿಸಿ ಕೇಂದ್ರ ಮತ್ತು ಸ್ವಯಂಚಾಲಿತ ಹವಾಮಾನ ಕೇಂದ್ರಗಳಲ್ಲಿ ದಾಖಲಾಗುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ.

    ಮಾವು ಬೆಳೆಯಲ್ಲಿ ಪ್ರತಿ ಹೆಕ್ಟೇರ್ ದೊರೆಯುವ ವಿಮಾ ಮೊತ್ತ-80,000ರೂ, ರೈತರು ಪಾವತಿಸಬೇಕಾದ ದರ (ಶೇ.5%)-4,000 ರೂ. ದ್ರಾಕ್ಷಿ ಬೆಳೆಯಲ್ಲಿ ಪ್ರತಿ ಹೆಕ್ಟೇರ್ ಗೆ ದೊರೆಯುವ ವಿಮಾ ಮೊತ್ತ-2,80,000ರೂ, ರೈತರು ಪಾವತಿಸಬೇಕಾದ ದರ (ಶೇ.5%ಗಳಲ್ಲಿ)-14,000 ಮಾವು ಮತ್ತು ದ್ರಾಕ್ಷಿ ಬೆಳೆಯುವ ರೈತ ಬಾಂಧವರು ಈ ಯೋಜನೆಯಡಿ ತಮ್ಮ ಹೆಸರನ್ನು ನೊಂದಾಯಿಸಿ ತಂತಿನ ಹಣ ಪಾವತಿಸಿ ಉಪಯೋಗ ಪಡೆದುಕೊಳ್ಳುವುದು.

    ಈ ಯೋಜನೆಯಡಿ ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗುವುದು ಸಾಲ: ಯಾವುದಂತೀರಾ?

    ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

    ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಲು ನಿಗಧಿತ ಅರ್ಜಿಯೊಂದಿಗೆ

    • ಪ್ರಸಕ್ತ ಸಾಲಿನ ಪಹಣಿ
    • ಕಂದಾಯ ರಶೀದಿ
    • ಖಾತೆ ಪುಸ್ತಕ
    • ಬ್ಯಾಂಕ್ ಖಾತೆ ಪುಸ್ತಕ,
    • ಆಧಾರ್ ನಕಲು ಪ್ರತಿ
    • ಮತ್ತು
    • ಸ್ವಯಂಘೋಷಿತ ಬೆಳೆ ವಿವರ

    ಈ ಎಲ್ಲಾ ದಾಖಲೆಗಳೊಂದಿಗೆ ಹತ್ತಿರದ ರಾಷ್ಟ್ರೀಯ ಅಧಿಕೃತ ಬ್ಯಾಂಕು / ಸಾಮಾನ್ಯ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಲ್ಲಿ ನೊಂದಾಯಿಸಲು ಅವಕಾಶ ನೀಡಲಾಗಿದೆ. ವಿಮೆ ಮಾಡಿಸುವ ರೈತರು ಫ್ರೂಟ್ಸ್ ತಂತ್ರಾಂಶದ ನೋಂದಣಿ ಸಂಖ್ಯೆಯನ್ನು ಹೊಂದಿರಬೇಕು, ನೋಂದಣಿ ಸಂಖ್ಯೆಗೆ ಪಹಣಿಯ ವಿವರಗಳನ್ನು ಲಿಂಕ್‌ ಮಾಡಿರಬೇಗಾಗಿರುತ್ತದೆ. ನೋಂದಣಿ ಸಂಖ್ಯೆ ಹೊಂದಿಲ್ಲದ ರೈತರು ನೋಂದಣಿ ಸಂಖ್ಯೆಯನ್ನು ಮಾಡಿಕೊಂಡು ವಿಮೆಯಲ್ಲಿ ಪಾಲ್ಗೊಳ್ಳಬೇಕಿರುತ್ತದೆ.

    ಬೆಳೆ ಸಾಲ ಪಡೆದ ರೈತರನ್ನು ಸಂಬಂಧಿಸಿದ ಬ್ಯಾಂಕಿನವರು ವಿಮೆ ವ್ಯಾಪ್ತಿಗೆ ಅವರ ಹೆಸರನ್ನು ನೊಂದಾಯಿಸಲಿದ್ದು, ಯೋಜನೆಯಲ್ಲಿ ನೊಂದಾಯಿಸಿಕೊಳ್ಳಲು ಆಸಕ್ತಿ ಇಲ್ಲದಿದ್ದಲ್ಲಿ ರೈತರು ಸಂಬಂಧಿಸಿದ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಿಗೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲು ಅವಕಾಶವಿರುತ್ತದೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮರು ವಿನ್ಯಾಸಗೊಳಿಸಿದ ಹವಾಮಾನವನ್ನು ಆಧಾರಿಸಿದ ಬೆಳೆ ವಿಮೆ ಯೋಜನೆಗೆ KSHEMA(ಕ್ಷೇಮ) ಸಂಸ್ಥೆಯು ಅಧಿಸೂಚಿತ ವಿಮಾ ಸಂಸ್ಥೆಯಾಗಿದೆ. ವಿಮೆಗೆ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆಯ ದಿನಾಂಕ ಆಗಿರುತ್ತದೆ.

    Demo
    Share. Facebook Twitter LinkedIn Email WhatsApp

    Related Posts

    ಬಸ್ ರಷ್ ಇದ್ರೂ ಬಸ್ ಹತ್ತೋ ಮಹಿಳೆಯರೇ ಈ ಸುದ್ದಿ ನೋಡಲೇಬೇಕು! ಇಂಥವರು ಇದ್ದಾರೆ ಹುಷಾರ್!

    June 8, 2025

    ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಿಸಿದ ರಾಜ್ಯ ಸರ್ಕಾರ!

    June 7, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.11ರ ಬಳಿಕ ಜೋರು ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಹೈ ಅಲರ್ಟ್!

    June 7, 2025

    ಚಿನ್ನಸ್ವಾಮಿ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಗೋವಿಂದ ಕಾರಜೋಳ!

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಇದೊಂದು ಲಜ್ಜೆಗೇಡಿ ಸರ್ಕಾರ – ಸಚಿವ ಸೋಮಣ್ಣ ಆಕ್ರೋಶ

    June 7, 2025

    ಮಳೆ ಹಾನಿ ಪ್ರದೇಶಗಳಿಗೆ ಶಾಸಕಿ ಮಂಜುಳಾ ಲಿಂಬಾವಳಿ ಭೇಟಿ, ಪರಿಶೀಲನೆ

    June 7, 2025

    RCB ವಿಜಯೋತ್ಸವದಲ್ಲಿ ಕಾಲ್ತುಳಿತ ಕೇಸ್: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು!

    June 7, 2025

    ಐದಾರು ಮಂದಿ ಪಕ್ಕಾ ಪ್ಲಾನ್ ಮಾಡಿ ನನ್ನ ಮುಗಿಸಿದ್ರು: ನಟ ಮಡೆನೂರು ಮನು

    June 7, 2025

    ಆಫೀಸ್’ನಲ್ಲಿ ನಿಮ್ಮ ಬಾಸ್’ನನ್ನು ಇಂಪ್ರೆಸ್ ಮಾಡಬೇಕೆಂದರೆ ಹೀಗೆ ಮಾಡಿ..! ರಿಸಲ್ಟ್ ಗ್ಯಾರಂಟಿ

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಅಧಿಕಾರಿಗಳ ತಲೆದಂಡ ಕುರಿತು ನಟಿ ರಮ್ಯಾ ಹೇಳಿದ್ದೇನು..?

    June 7, 2025

    ಸೂಟ್ ಕೇಸ್’ನಲ್ಲಿ ಬಾಲಕಿಯ ಶವ ಪತ್ತೆ ಕೇಸ್: ಬಿಹಾರದಲ್ಲಿ 7 ಜನರ ಬಂಧನ!

    June 7, 2025

    ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB: ಹೆಚ್.ಡಿ. ಕುಮಾರಸ್ವಾಮಿ

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.