ಬೆಂಗಳೂರು:- ನಗರದಲ್ಲಿ ಮೆಟ್ರೋಗೆ ಲಕ್ಷ- ಲಕ್ಷ ಮಂದಿ ಅವಲಂಬಿತರಾಗಿದ್ದಾರೆ. ಇಂತಹ ಪ್ರಯಾಣಿಕರು ಇಂದು ಗಮನವಿಟ್ಟು ಸುದ್ದಿ ನೋಡಲೇಬೇಕು. ಏಕೆಂದರೆ ಈ ವಾರದಲ್ಲಿ ಒಂದು ದಿನ ಮೆಟ್ರೋ ಸಮಯದಲ್ಲಿ ಬದಲಾವಣೆ ಆಗಲಿದೆ.
ಮದ್ಯಪ್ರಿಯರಿಗೆ ಬಿಗ್ ಶಾಕ್: 3ನೇ ಬಾರಿ ಎಣ್ಣೆ ದರ ಏರಿಕೆ! ಯಾವ ಬ್ರ್ಯಾಂಡ್ ಎಷ್ಟು?
ಮೇ 17ರಿಂದ ಐಪಿಎಲ್‌ನ ಕೊನೆಯ ಹಂತದ ಪಂದ್ಯಗಳು ಮತ್ತೆ ಆರಂಭಗೊಳ್ಳಲಿದೆ. ಈ ಹಿನ್ನೆಲೆ ಬೆಂಗಳೂರಿನ ಪಂದ್ಯಗಳ ಸಂದರ್ಭದಲ್ಲಿ ಸಾರ್ವಜನಿಕರ ಅನೂಕೂಲಕ್ಕಾಗಿ ನಮ್ಮ ಮೆಟ್ರೋ ಪಂದ್ಯಗಳ ದಿನ ಸಮಯಾವಧಿ ವಿಸ್ತರಣೆ ಮಾಡಿದೆ. ಮೇ 17 ಮತ್ತು ಮೇ 23ರಂದು ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಯಲಿದೆ. ಈ ದಿನಗಳಲ್ಲಿ ನಮ್ಮ ಮೆಟ್ರೋ ಎಲ್ಲಾ ಟರ್ಮಿನಲ್ ಅಂದರೆ ವೈಟ್ ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಯನ್ನು ಮಧ್ಯರಾತ್ರಿ 1ರ ವರೆಗೆ ವಿಸ್ತರಿಸಿದೆ.
ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 1:35ಕ್ಕೆ ಹೊರಡಲಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ನಮ್ಮ ಮೆಟ್ರೋ ಕೋರಿದೆ.