ಚಿಕ್ಕಬಳ್ಳಾಪುರ:– ನಾಲ್ಕು ನಂದಿ ಬೆಟ್ಟ ಮತ್ತು ಸ್ಕಂದಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಜುಲೈ 2 ರಂದು ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಜೂನ್ 30ರ ಬೆಳಿಗ್ಗೆ 6 ಗಂಟೆಯಿಂದ ಜುಲೈ 3ರ ಮಧ್ಯಾಹ್ನ 2 ಗಂಟೆವರೆಗೂ ನಂದಿ ಬೆಟ್ಟ ಹಾಗೂ ಸ್ಕಂದಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆಯು ಜುಲೈ 2 ರಂದು ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಉಪ ಮುಖ್ಯಮಂತ್ರಿಗಳು, ಮಂತ್ರಿಗಳು, ಶಾಸಕರುಗಳು ಸೇರಿದಂತೆ ಆಯಾ ಇಲಾಖೆಯ ಅಧಿಕಾರಿಗಳು ಭಾಗಿಯಾಗುತ್ತಾರೆ. ಹೀಗಾಗಿ, ಮುಂಜಾಗೃತಾ ಕ್ರಮವಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳು ಜೂನ್ 30ರ ಬೆಳಿಗ್ಗೆ 6 ಗಂಟೆಯಿಂದ ಜುಲೈ 3ರ ಮಧ್ಯಾಹ್ನ 2 ಗಂಟೆವರೆಗೂ ನಂದಿ ಬೆಟ್ಟ ಹಾಗೂ ಸ್ಕಂದಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಿದ್ದಾರೆ.