ಖ್ಯಾತ ನಿರ್ಮಾಪಕ, ನಿರ್ದೇಶಕ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಸ್ಥಾಪಕ ನವರಸನ್ ನಿರ್ಮಾಣದ, ಕಿರಣ್ ಕುಮಾರ್ ನಿರ್ದೇಶನದ ಹಾಗೂ ಜನಪ್ರಿಯ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ಸೂತ್ರಧಾರಿ” ಚಿತ್ರ ಮೇ 9 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಚಿತ್ರ ಬಿಡುಗಡೆಗೂ ಮುನ್ನ ನಿರ್ಮಾಪಕ ನವರಸನ್, ನಿರ್ದೇಶಕ ಕಿರಣ್ ಕುಮಾರ್, ನಾಯಕ ಚಂದನ್ ಶೆಟ್ಟಿ ಹಾಗೂ ನಾಯಕಿ ಅಪೂರ್ವ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಚಿತ್ರ ಯಶಸ್ವಿಯಾಗಲೆಂದು ಏಳುಬೆಟ್ಟದ ಒಡೆಯನ ಹತ್ತಿರ ಚಿತ್ರತಂಡದ ಸದಸ್ಯರು ಪ್ರಾರ್ಥನೆ ಮಾಡಿದ್ದಾರೆ. ಕಾಣಿಪಕ್ಕಂ ನ ಗಣೇಶ, ತಿರುಚಾನೂರು ಪದ್ಮಾವತಿ ಅಮ್ಮನವರು ಹಾಗೂ ಗೋಲ್ಡನ್ ಟಂಪಲ್ ನ ಮಹಾಲಕ್ಷ್ಮಿ ದೇವಸ್ಥಾನಕ್ಕೂ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.
Author: Author AIN
ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಭೀಕರ ದಾಳಿ ವಿಡಿಯೋಗಳನ್ನು ಕಂಡು ಇಡೀ ದೇಶವೇ ಬೆಚ್ಚಿ ಬಿದ್ದಿದೆ. ನೀನು ಹಿಂದೂನಾ? ಅಲ್ಲ ಮುಸ್ಲಿಂನಾ ಅಂತ ಕೇಳಿ ತಲೆಗೆ ಗುಂಡು ಹಾರಿಸಿ ವಿಕೃತಿ ಮೆರೆದಿದ್ದಾರೆ. ಅಷ್ಟೇ ಅಲ್ಲದೇ ಈ ದಾಳಿಯಲ್ಲಿ 26 ಮಂದಿ ಮೃತಪಟ್ಟ ಬೆನ್ನಲ್ಲೇ ರಾಜ್ಯ ಪ್ರವಾಸಿ ತಾಣಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ಈ ದಾಳಿ ನಡೆಸಿದ ಶಂಕಿತ ಉಗ್ರರ ರೇಖಾಚಿತ್ರಗಳನ್ನು ಜಮ್ಮು ಕಾಶ್ಮೀರ ಪೊಲೀಸರು ಹಂಚಿಕೊಂಡಿದ್ದು, ಅವರ ಬಗ್ಗೆ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಸಾರ್ವಜನಿಕರಿಗೆ ಮನವಿ ಮಾಡಿರುವ ಪೊಲೀಸರು, ಮಾಹಿತಿದಾರರ, ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಯಾವುದೇ ಸಂಬಂಧಿತ ಮಾಹಿತಿಯನ್ನು ಹೊಂದಿರುವ ನಾಗರಿಕರು ಅನಂತ್‌ನಾಗ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಅಥವಾ ಪೊಲೀಸ್ ನಿಯಂತ್ರಣ ಕೊಠಡಿ (PCR) ಅವರನ್ನು ನೇರವಾಗಿ ಈ ಕೆಳಗಿನ ಸಂಪರ್ಕ ಸಂಖ್ಯೆಗಳಲ್ಲಿ ಸಂಪರ್ಕಿಸಲು ಕೋರಲಾಗಿದೆ: ಎಸ್ಎಸ್ಪಿ ಅನಂತನಾಗ್ : 9596777666, ಪಿಸಿಆರ್ ಅನಂತನಾಗ್…
ದೊಡ್ಡಬಳ್ಳಾಪುರ: ಕಾಶ್ಮೀರ ಪ್ರವಾಸ ಕೈಗೊಂಡಿದ್ದ 90 ಮಂದಿ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.. ತಾಲೂಕಿನ ಸುತ್ತಾಮುತ್ತಲಿನ ತಿರುಮಗೊಂಡನಹಳ್ಳಿ ಹಾಡೋನಹಳ್ಳಿ, ವಡ್ಡರಹಳ್ಳಿ ಲಕ್ಷ್ಮೀದೇವಿಪುರ, ತಿಮ್ಮೋಜನಹಳ್ಳಿ, ತೂಬಗೆರೆ, ಹೀರೆಮುದ್ದೇನಹಳ್ಳಿ, ನೆಲಗುದಿಗೆ ಗ್ರಾಮಗಳಿಂದ 90 ಮಂದಿ 9 ದಿನಗಳ ಜಮ್ಮು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು. ಏ.19 ರಂದು 7 ವಿಮಾನಗಳಲ್ಲಿ ಟ್ರಾವೆಲ್ ಏಜೆನ್ಸಿ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡಿಕೊಂಡು ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೂಲಕ ದೆಹಲಿಗೆ ತೆರಳಿ ಅಲ್ಲಿಂದ ಅಮೃತಸರದಲ್ಲಿ ಎಲ್ಲರೂ ಒಟ್ಟಾಗಿ ಸೇರಿದ್ದರು. ಏ.17 ಕ್ಕೆ ಪ್ರವಾಸಿಗರು ಪ್ರವಾಸ ಕೈಗೊಳ್ಳ ಬೇಕಿತ್ತು.ಕಾರಣಾಂತರದಿಂದ ಎರಡು ದಿನಗಳ ಕಾಲ ಪ್ರವಾಸ ಮುಂದಕ್ಕೆ ಹೋದ ಕಾರಣ ಇವರು ಕಾಶ್ಮೀರಕ್ಕೆ ಹೋಗುವ ಬದಲು ಅಮೃತಸರದಲ್ಲಿ ಪ್ರೇಕ್ಷಣೀಯ ಸ್ಥಳಗಳನ್ನು ನೋಡಿಕೊಂಡು ಬಳಿಕ ಶ್ರೀನಗರಕ್ಕೆ ಪ್ರವಾಸ ತೆರಳಿದ್ದರು. ಇವರು ಉಳಿದುಕೊಳ್ಳಬೇಕಾದ ಹೋಟೆಲ್ ಉಗ್ರರ ದಾಳಿಗೆ ಒಳಗಾದ ಪಹಲ್ಗಾಮ್‌ನ ಬೈಸರನ್ ಸಮೀಪದಲ್ಲಿಯೇ ಎರಡು ದಿನಗಳ ಕಾಲ ಉಳಿದುಕೊಳ್ಳಲು ಕೊಠಡಿಗಳನ್ನು ಕಾಯ್ದಿರಿಸಿದ್ದರು. ಆದರೆ, ಆ ರಸ್ತೆಯಲ್ಲಿ ಬೆಟ್ಟ ಕುಸಿದು ಸಂಚಾರ ಸ್ಥಗಿತಗೊಂಡ ಕಾರಣ…
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಮುಖಾಮುಖಿ ಪಂದ್ಯ ನಡೆಯಲಿದೆ. ತವರಿನಲ್ಲಿ ನಡೆಯುತ್ತಿರುವ ನಾಲ್ಕನೇ ಪಂದ್ಯವನ್ನಾಡದರೂ ಗೆಲ್ಲುವ ಮೂಲಕ ಆರ್ಸಿಬಿ ಪ್ಲೇಆಫ್‌ಗೆ ಇನ್ನಷ್ಟು ಸನಿಹವಾಗಲು ಮತ್ತು ತವರಿನಲ್ಲಿ ಸೋಲಿನ ಸರಣಿಯನ್ನು ಮುಂದುವರೆಸಲು ಯತ್ನಿಸಲಿದೆ. https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಇನ್ನೂ ಸ್ಟೇಡಿಯಂ ಸುತ್ತಮುತ್ತ ಸಂಜೆ ವೇಳೆಗೆ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ವಾಹನ ಸವಾರರು ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣದ ಯೋಜನೆ ರೂಪಿಸಿವುದು ಒಳಿತು. ಸಂಚಾರ ನಿರ್ಬಂಧ, ಪಾರ್ಕಿಂಗ್ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರಿಂದ ಇತ್ತೀಚಿನ ಪ್ರಕಟಣೆ ಬಿಡುಗಡೆ ಆಗಿಲ್ಲ. ಆದಾಗ್ಯೂ, ಈ ಹಿಂದಿನ ಪಂದ್ಯಗಳ ವೇಳೆ ಜಾರಿಯಲ್ಲಿದ್ದ ಸಂಚಾರ ನಿರ್ಬಂಧ ಜಾರಿಯಲ್ಲಿರುವ ಸಾಧ್ಯತೆ ಇದೆ. ಎಲ್ಲೆಲ್ಲಿ ಟ್ರಾಫಿಕ್ ಜಾಮ್ ಆಗಬಹುದು? ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರ್ಬಾ ರಸ್ತೆ, ಅಂಬೇಡ್ಕರ್ ವೀಧಿ, ಟ್ರಿನಿಟಿ ಜಂಕ್ಷನ್, ಲ್ಯಾವೆಲ್ಲೆ ರಸ್ತೆ,…
ಬೆಂಗಳೂರು: ಪಹಲ್ಗಾಮ್ ದಾಳಿಯಲ್ಲಿ ಹತರಾಗಿರುವ ಕನ್ನಡಿಗರ ಮೃತದೇಹಗಳು ರಾಜಧಾನಿ ಬೆಂಗಳೂರಿಗೆ ತಲುಪಿವೆ. ಮಂಜುನಾಥ ಅವರ ಪಾರ್ಥೀವ ಶರೀರವನ್ನು ಶಿವಮೊಗ್ಗ, ಭರತ್ ಭೂಷಣ್ ಅವರ ಪಾರ್ಥೀವ ಶರೀರ ಬೆಂಗಳೂರಿನ ಮತ್ತಿಕೆರೆ ಹಾಗೂ ಮಧುಸೂದನ್ ಅವರ ಪಾರ್ಥೀವ ಶರೀರವನ್ನು ಚೆನ್ನೈ ಮೂಲಕ ನೆಲ್ಲೋರಿಗೆ ಕಳುಹಿಸಿ ಕೊಡಲಾಗುತ್ತಿದೆ. https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೇಂದ್ರ ಸಚಿವರಾದ ಶ್ರೀ ವಿ ಸೋಮಣ್ಣ ಅವರು ಮೃತರ ಕಳೆಬರಹಕ್ಕೆ ಭಾವಪೂರ್ಣ ನಮನಗಳನ್ನು ಸಲ್ಲಿಸಿದ್ದು, ಈ ದುರಂತದ ಸಮಯದಲ್ಲಿ ಇಡೀ ದೇಶ ಕುಟುಂಬದೊಂದಿಗೆ ನಿಲ್ಲಲಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು, ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡವು ಗೆಲುವಿನ ಲಯಕ್ಕೆ ಮರಳಿದೆ. ಸತತ ಐದು ಪಂದ್ಯಗಳನ್ನು ಗೆಲ್ಲುವ ಮೂಲಕ ತಂಡವು ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದೆ. ಬುಧವಾರ ನಡೆದ ಪಂದ್ಯದಲ್ಲಿ ಮುಂಬೈ ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 5ನೇ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪಡೆ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅಬ್ಬರಿಸಿತು. ಈ ಗೆಲುವಿನೊಂದಿಗೆ, ಜಸ್ಪ್ರೀತ್ ಬುಮ್ರಾ ಹೆಸರಿನಲ್ಲಿ ದೊಡ್ಡ ದಾಖಲೆಯೂ ನಿರ್ಮಾಣ ಆಗಿದೆ. https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಇನ್ನೂ ಈ ಗೆಲುವಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಈ ಜಯವು ನಿಜಕ್ಕೂ ಖುಷಿ ಕೊಟ್ಟಿದೆ. ತಂಡವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿರುವುದನ್ನು ನೋಡಿ ಸಂತೋಷವಾಯಿತು. ಎಲ್ಲಾ ಆಟಗಾರರು ಫಾರ್ಮ್‌ನಲ್ಲಿರುವಾಗ, ನಾವು ಪ್ರಾಬಲ್ಯ ಸಾಧಿಸುತ್ತೇವೆ. ಇದುವೇ ನಮ್ಮ ಗೆಲುವಿನ ಸೀಕ್ರೆಟ್ ಎಂದಿದ್ದಾರೆ. ಇನ್ನು ದೀಪಕ್ ಚಹರ್ ಮತ್ತು ಟ್ರೆಂಟ್ ಬೌಲ್ಟ್ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ, ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.…
ಹಲಸಿನ ಹಣ್ಣಿನ ಸೀಸನ್ ಆರಂಭವಾಗಿದೆ. ಈಗ ಪ್ರತಿಯೊಂದು ಬೀದಿಯಲ್ಲೂ ಹಲಸಿನ ಹಣ್ಣುಗಳನ್ನು ಮಾರಾಟ ಮಾಡುವ ಅಂಗಡಿಗಳು ಕಾಣಸಿಗುತ್ತವೆ. ಇದು ತನ್ನ ಸುವಾಸನೆ ಮತ್ತು ರುಚಿಯಿಂದ ಅನೇಕ ಜನರನ್ನು ಆಕರ್ಷಿಸುತ್ತದೆ. ಈ ಹಣ್ಣು ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆ. ಆದರೆ ಹಲಸಿನ ಹಣ್ಣು ತಿಂದ ನಂತರ ಕೆಲವು ಆಹಾರಗಳನ್ನು ಸೇವಿಸುವುದರಿಂದ ದೇಹಕ್ಕೆ ಹಾನಿಕಾರಕವಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಹಲಸಿನ ಹಣ್ಣಿನಲ್ಲಿ ಪ್ರೋಟೀನ್, ಉತ್ಕರ್ಷಣ ನಿರೋಧಕಗಳು, ರೈಬೋಫ್ಲಾವಿನ್, ಥಯಾಮಿನ್, ಮೆಗ್ನೀಸಿಯಮ್, ಪೊಟ್ಯಾಸಿಯಮ್, ತಾಮ್ರ, ಮ್ಯಾಂಗನೀಸ್, ಫೈಬರ್ ಮತ್ತು ವಿಟಮಿನ್ ಬಿ ಸೇರಿದಂತೆ ಹಲವು ಪೋಷಕಾಂಶಗಳಿವೆ. ಇವು ದೇಹಕ್ಕೆ ಶಕ್ತಿಯನ್ನು ನೀಡಿ ಆರೋಗ್ಯವನ್ನು ಬಲಪಡಿಸುತ್ತವೆ. https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಇದಲ್ಲದೆ, ಹಲಸಿನ ಹಣ್ಣು ತಿನ್ನುವುದರಿಂದ ದೇಹದ ಉಷ್ಣತೆ ಹೆಚ್ಚಾಗುವುದಿಲ್ಲ. ಇದು ಚರ್ಮಕ್ಕೂ ಒಳ್ಳೆಯದು. ಇದರಲ್ಲಿರುವ ಪೋಷಕಾಂಶಗಳು ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ. ಆದರೆ ಹಲಸಿನ ಹಣ್ಣಿನೊಂದಿಗೆ ಕೆಲವು ಆಹಾರಗಳನ್ನು ಸೇವಿಸುವುದು ಹಾನಿಕಾರಕ. ಹಲಸಿನ ಹಣ್ಣು ತಿಂದ ತಕ್ಷಣ ಹಾಲು ಕುಡಿಯುವುದು ಒಳ್ಳೆಯದಲ್ಲ. ಅಥವಾ ಹಾಲು ಕುಡಿದ ತಕ್ಷಣ ಹಲಸಿನ ಹಣ್ಣು…
ಕನ್ನಡ ಚಿತ್ರರಂಗದ ಭರವಸೆ ನಾಯಕ ಯುವರಾಜ್ ಕುಮಾರ್ ಹುಟ್ಟುಹಬ್ಬದ ಅಂಗವಾಗಿ ನಿನ್ನೆ ಬಿಡುಗಡೆಯಾಗಬೇಕಿದ್ದ ಯುವ ಟೀಸರ್ ಇಂದು ಅನಾವರಣ ಮಾಡಲಾಗಿದೆ. ಪಹಲ್ಗಾಮ ಉಗ್ರರ ದಾಳಿಯಲ್ಲಿ ತಮ್ಮ ಕುಟುಂಬದವರನ್ನು ಕಳೆದುಕೊಂಡವರಿಗೆ ಗೌರವ ಸೂಚಿಸುವ ಸಲುವಾಗಿ ಚಿತ್ರತಂಡ ಟೀಸರ್ ಬಿಡುಗಡೆ ಮುಂದೂಡಿತ್ತು. ಇಂದು ಅಣ್ಣಾವ್ರ ಜನ್ಮದಿನದ ಜೊತೆಗೆ ಯುವ ಬರ್ತಡೇ ಸ್ಪೆಷಲ್ ಆಗಿಯೇ ಟೀಸರ್ ರಿಲೀಸ್ ಆಗಿದೆ. 1 ನಿಮಿಷ 9 ಸೆಕೆಂಡ್ ಇರುವ ಯುವ ಟೀಸರ್ ಸೈಕ್ ಆಗಿದೆ. ಹೊಸ ಅವತಾರದಲ್ಲಿ ಯುವರಾಜ್ ಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಮಗು-ಮೃಗ ಅಂತಾ ಮಸ್ತ್ ಡೈಲಾಗ್ ಹೊಡೆಯುತ್ತಾ ಕೈಯಲ್ಲಿ ಪೊರಕೆ ಹಿಡಿದು ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೊಂದ್ ವಿಷ್ಯ ಇದು ಇಲ್ಲಿಗೆ ನಿಲ್ಲೋದಿಲ್ಲ ಅಂತಾ ದೊಡ್ಡದಾಗಿ ಏನೋ ಸೂಚನೆ ಕೊಟ್ಟಿದ್ದಾರೆ. ಯುವ ಆಕ್ಟಿಂಗ್, ರೋಹಿತ್ ಪದಕಿ ಟೇಕಿಂಗ್, ಚರಣ್ ರಾಜ್ ಮ್ಯೂಸಿಕ್ ಕಿಕ್ ಟೀಸರ್ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ. ಈಗಾಗಲೇ ಯುವ ಟೈಟಲ್ ಟ್ರ್ಯಾಕ್ ಚಿಂದಿ ಉಡಾಯಿಸಿದ್ದು, ಈಗ ಟೀಸರ್ ಸರದಿ ಅಂತಾ ಫ್ಯಾನ್ಸ್ ಖುಷಿಪಡುತ್ತಿದ್ದಾರೆ. ರೋಹಿತ್…
ಬೆಂಗಳೂರು, ಏಪ್ರಿಲ್ 24: ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್ ಭೂಷಣ್ ಅವರಿಗೆ ಕನ್ನಡ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಶ್ರದ್ಧಾಂಜಲಿಯನ್ನು ಅರ್ಪಿಸಿದ ಮುಖ್ಯಮಂತ್ರಿಗಳು, ಉತ್ತಮ ಶಿಕ್ಷಣ ಪಡೆದಿದ್ದ ತರುಣರಾಗಿದ್ದ ಭರತ್ ಭೂಷಣ್ ಅವರು ಉಗ್ರರ ದಾಳಿಗೆ ಬಲಿಯಾಗಿರುವುದು ದುರದೃಷ್ಟಕರ. ಉಗ್ರರ ದಾಳಿ ಅಮಾನವೀಯವಾದ ಕೃತ್ಯವಾಗಿ ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು. ಅಮಾಯಕ ಜನರನ್ನು ಕೊಲ್ಲುವುದು ಹ್ಯೇಯಕೃತ್ಯ ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ,ಜ ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ. ಅಮಾಯಕ ಜನರನ್ನು ಹಾಡುಹಗಲೇ,…
ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ ‘ISIS ಕಾಶ್ಮೀರ’ದಿಂದ ಕೊಲೆ ಬೆದರಿಕೆ ಕರೆಗಳು ಬಂದಿದ್ದು, ಕ್ರಿಕೆಟ್ ಮತ್ತು ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಇದು ಸಂಚಲನ ಮೂಡಿಸಿದೆ. ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 28 ನಾಗರಿಕರು ಸಾವನ್ನಪ್ಪಿದ ನಂತರ ಗಂಭೀರ್‌ಗೆ ಈ ಬೆದರಿಕೆ ಕರೆಗಳು ಬಂದಿವೆ ಎಂದು ವರದಿಯಾಗಿದೆ. “ನಾನು ನಿನ್ನನ್ನು ಕೊಲ್ಲುತ್ತೇನೆ” ಎಂಬ ಕಾಮೆಂಟ್‌ಗಳೊಂದಿಗೆ ಗಂಭೀರ್‌ಗೆ ಇಮೇಲ್ ಕಳುಹಿಸಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಮಂಗಳವಾರ ನಡೆದ ಭಯೋತ್ಪಾದಕ ದಾಳಿಯ ನಂತರ, ಗಂಭೀರ್ ಬುಧವಾರ ಬೆಳಿಗ್ಗೆ ದೆಹಲಿ ಪೊಲೀಸರಿಗೆ ಔಪಚಾರಿಕ ದೂರು ಸಲ್ಲಿಸಿ, https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ತಮ್ಮ ಕುಟುಂಬಕ್ಕೆ ಸಂಪೂರ್ಣ ಭದ್ರತೆ ನೀಡುವಂತೆ ಕೋರಿದ್ದರು. ಬಿಜೆಪಿಯ ಮಾಜಿ ಸಂಸದರಾಗಿರುವ ಗಂಭೀರ್, ಪ್ರಸ್ತುತ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಗಂಭೀರ್ ತೀವ್ರವಾಗಿ ಪ್ರತಿಕ್ರಿಯಿಸಿದ್ದು, ತಮ್ಮ ಸಾಮಾಜಿಕ ಮಾಧ್ಯಮ ಖಾತೆ ಎಕ್ಸ್ (ಟ್ವಿಟರ್) ನಲ್ಲಿ “ಮೃತರ…