ಬಾಲಿವುಡ್ ನ ಖ್ಯಾತ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಮಿಥುನ್ ಚಕ್ರವರ್ತಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ವೈದ್ಯರು ನಟನ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. ನಟ ಮಿಥುನ್ ಚಕ್ರವರ್ತಿ ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿದ್ದರು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ. ಸದ್ಯ ನಟನಿಗೆ ಪ್ರಜ್ಞೆ ಬಂದಿದ್ದು ಇಡೀ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ. https://ainlivenews.com/mithun-chakraborty-hospitalised-in-kolkata-after-complaining-of-chest-pain/ ಮಿಥುನ್ ಅವರನ್ನು ಫೆ.10ರ ಬೆಳಿಗ್ಗೆ 9.40 ಕ್ಕೆ ಕೋಲ್ಕತ್ತಾದ ಅಪೋಲೋ ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲಿಸಲಾಯಿತು. ಮೆದುಳಿನ ಎಂಆರ್‌ಐ ಮತ್ತು ರೇಡಿಯಾಲಜಿ ಪರೀಕ್ಷೆ ಸೇರಿದಂತೆ ಇತರ ಪ್ರಮುಖ ಪರೀಕ್ಷೆಗಳನ್ನು ಸಹ ಮಾಡಲಾಯಿತು. ಅವರು ಮೆದುಳಿಗೆ ಇಸ್ಕೆಮಿಕ್ ಸೆರೆಬ್ರೊವಾಸ್ಕುಲರ್ ಸ್ಟ್ರೋಕ್ ಆಗಿದ್ದು ಅವರಿಗೆ ಲಘು ಆಹಾರ ನೀಡಲಾಗುತ್ತಿದೆ.
Author: Author AIN
ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ರಜನಿಕಾಂತ್ ನಟನೆಯ ಲಾಲ್ ಸಲಾಂ ಸಿನಿಮಾ ನಿನ್ನೆಯಷ್ಟೇ ತೆರೆಗೆ ಬಂದಿದೆ. ಚಿತ್ರದಲ್ಲಿ ರಜನಿಕಾಂತ್ ಮೊಯ್ದೀನ್ ಭಾಯ್ ಎಂಬ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ರಜನಿಕಾಂತ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು ಪಾತ್ರಕ್ಕೆ ಸಾಕಷ್ಟು ಪ್ರಮುಖ್ಯತೆ ನೀಡಲಾಗಿದೆ. ಆದರೆ ಅಂದುಕೊಂಡ ಮಟ್ಟಿಗೆ ಚಿತ್ರ ಓಪನಿಂಗ್ಸ್ ಪಡೆದುಕೊಂಡಿಲ್ಲ ಅನ್ನೋದು ರಜನಿ ಅಭಿಮಾನಿಗಳಿಗೆ ಬೇಸರ ಮೂಡಿಸಿದ್ರು ಚಿತ್ರ ಮೊದಲ ದಿನ ನಾಲ್ಕುವರೆ ಕೋಟಿ ಗಳಿಸಿದೆ ಎಂದು ಅಂದಾಜಿಸಲಾಗಿದೆ. ‘ಜೈಲರ್’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ತೆರೆಗೆ ಬರುತ್ತಿರುವ ರಜನಿಕಾಂತ್ ನಟನೆಯ ಲಾಲ್ ಸಲಾಂ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಸ್ಪೋರ್ಟ್ ಡ್ರಾಮಾ ಕಥಾಹಂದರ ಹೊಂದಿರುವ ಸಿನಿಮಾವನ್ನು ರಜನಿ ಪುತ್ರಿ ಐಶ್ವರ್ಯ ರಜನಿಕಾಂತ್ ನಿರ್ದೇಶಿಸಿದ್ದು ವಿಷ್ಣು ವಿಶಾಲ್, ವಿಕ್ರಾಂತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಲಾಲ್ ಸಲಾಂ ಚಿತ್ರವನ್ನು ಕಾಲಿವುಡ್‌ನ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್‌ನ ಸುಭಾಸ್ಕರನ್ ನಿರ್ಮಿಸಿದ್ದು, ತಮಿಳುನಾಡಿನಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡುವ ಹಕ್ಕನ್ನು ರೆಡ್ ಜೈಂಟ್ ಸಂಸ್ಥೆ…
ಬಿಗ್ ಬಾಸ್ ಸೀಸನ್ 10 ಮುಗಿದು ಸ್ಪರ್ಧಿಗಳು ಮನೆ ಸೇರಿದ್ದಾರೆ. ಆದರು ಬಿಗ್ ಬಾಸ್ ಸ್ಪರ್ಧಿಗಳ ಫ್ಯಾನ್ಸ್ ವಾರ್ ನಿಂತಿಲ್ಲ. ಇದರಿಂದಾಗಿ ಸಹಜವಾಗಿಯೇ ಕಾರ್ತಿಕ್ ಹಾಗೂ ತನಿಷಾಗೆ ಬೇಸರವಾಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಲೈವ್ ಗೆ ಬಂದಿದ್ದ ಈ ಜೋಡಿ ಆಕ್ರೋಶ ಹೊರ ಹಾಕಿದ್ದಾರೆ. ಕಾರ್ತಿಕ್ ಹಾಗೂ ತನಿಷಾ ಲೈವ್ ನಲ್ಲಿ ಇದ್ದಾಗ ಬೇರೆ ಕಂಟೆಸ್ಟೆಂಟ್ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಹಲವರು ಕಾರ್ತಿಕ್ ಮತ್ತು ತನಿಷಾಗೆ ಟಾಂಗ್ ಕೊಟ್ಟಿದ್ದಾರೆ. ಇದರಿಂದಾಗಿ ಬೇಸರಿಸಿಕೊಂಡ ಕಾರ್ತಿಕ್ ಮತ್ತು ತನಿಷಾ ಅಸಮಾಧಾನ ಹೊರ ಹಾಕಿದ್ದಾರೆ. ಬೇರೆ ಬೇರೆ ಕಂಟೆಸ್ಟೆಂಟ್ ಗಳ ಮಧ್ಯ ಪಿನ್ ಇಡುವವರನ್ನು ನಾನಂತೂ ಸುಮ್ಮನೆ ಬಿಡಲ್ಲ ಎಂದು ತನಿಷಾ ಹೇಳಿದಾಗ, ಪಿನ್ ಅಲ್ಲ, ಗನ್ ಇಟ್ಟು ಶೂಟ್ ಮಾಡ್ತೀನಿ ಅಂತ ಹೇಳು ಎಂದು ತನಿಷಾಗೆ ಕಾರ್ತಿಕ್ ಹೇಳಿದ್ದಾರೆ. ಈ ವೇಳೆ ನಿಜವಾಗಿಯೂ ನನಗೆ ಶೂಟ್ ಮಾಡೋಕೆ ಬರತ್ತೆ. ಹುಷಾರ್ ಅಂದಿದ್ದಾರೆ ತನಿಷಾ.
ಕಡಿಮೆ ಬಜೆಟ್ ನಲ್ಲಿ ಒಂದೊಳ್ಳೆ ಮೊಬೈಲ್ ಖರೀದಿ ಮಾಡ್ಬೇಕು ಅನ್ನೋರಿಗೆ ಲಾವಾ ಯುವ 3 ಬೆಸ್ಟ್ ಮೊಬೈಲ್ ಆಗಿದೆ. ಇದು 4GB RAM ಮತ್ತು 64GB ಸ್ಟೋರೇಜ್ ಒಳಗೊಂಡಿದ್ದು ಕೇವಲ 6,799 ರೂಗೆ ನಿಮ್ಮ ಕೈ ಸೇರಲಿದೆ. ಈ ಮೊಬೈಲ್ ನ ಹಿಂಭಾಗದಲ್ಲಿ 13 ಮೆಗಾಪಿಕ್ಸೆಲ್ ಟ್ರಿಪಲ್ AI ಕ್ಯಾಮೆರಾ ಇದ್ದು ಇಂದಿನಿಂದ ಅಮೆಜಾನ್, ಲಾವಾದ ರಿಟೇಲ್ ನೆಟ್‌ವರ್ಕ್ ಮತ್ತು ಲಾವಾ ಇ-ಸ್ಟೋರ್‌ನಲ್ಲಿ ಇಂದಿನಿಂದ ಲಭ್ಯವಿರಲಿದೆ. ಲಾವಾ ಯುವ 3 ಸ್ಮಾರ್ಟ್‌ಫೋನ್ 6.5 ಇಂಚಿನ HD + ಪಂಚ್ ಹೋಲ್ ಡಿಸ್ಪ್ಲೇಯನ್ನು ಹೊಂದಿದೆ. ಇದರ ರೆಸಲ್ಯೂಶನ್ 720 * 1600 ಪಿಕ್ಸೆಲ್ಗಳು ಮತ್ತು ರಿಫ್ರೆಶ್ ದರ 90Hz ಆಗಿದೆ. ಈ ಸ್ಮಾರ್ಟ್‌ಫೋನ್ 4GB RAM ಅನ್ನು ಹೊಂದಿದೆ, ಇದನ್ನು ವರ್ಚುವಲ್ RAM ಮೂಲಕ 4GB ವರೆಗೆ ಹೆಚ್ಚಿಸಬಹುದು. ಈ ಫೋನ್ನಲ್ಲಿ 64GB ಅಥವಾ 128GB ಸಂಗ್ರಹಣೆಯ ಆಯ್ಕೆ ಇದೆ. ಇದನ್ನು ಮೈಕ್ರೋ SD ಕಾರ್ಡ್ ಮೂಲಕ 512GB ವರೆಗೆ ವಿಸ್ತರಿಸಬಹುದು. ಯುವಾ…
‘ಬಿಗ್ ಬಾಸ್ ಕನ್ನಡ ಓಟಿಟಿ 1 ಸ್ಪರ್ಧಿ, ನಟಿ ಜಯಶ್ರೀ ಆರಾಧ್ಯ ಸದ್ಯ ದುಬೈ ಪ್ರವಾಸದಲ್ಲಿದ್ದ ಅಲ್ಲಿನ ಸುಂದರ ಸ್ಥಳಗಳಲ್ಲಿ ಎಂಜಾಯ್ ಮಾಡ್ತಿದ್ದಾರೆ. ದುಬೈನಲ್ಲಿರುವ ಜಯಶ್ರೀ ಅಲ್ಲಿನ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜಯಶ್ರೀ ಆರಾಧ್ಯ ಆಗಾಗ ಪ್ರವಾಸಕ್ಕೆ ತೆರಳುತ್ತಿರುತ್ತಾರೆ. ಕಳೆದ ವರ್ಷ ಅವರು ಜೈಜಗದೀಶ್ ಪುತ್ರಿ ವೈನಿಧಿ ಜೊತೆಗೆ ಜಯಶ್ರೀ ಆರಾಧ್ಯ ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದರು. ಕೆಲ ದಿನಗಳ ಹಿಂದೆ ಗೋವಾ ಪ್ರವಾಸ ಮಾಡಿದ್ದ ಜಯಶ್ರೀ ಇದೀಗ ದುಬೈ ಪ್ರವಾಸ ಎಂಜಾಯ್ ಮಾಡ್ತಿದ್ದಾರೆ. ಕನ್ನಡ ಸಿನಿಮಾ, ಧಾರಾವಾಹಿಗಳಲ್ಲಿ ಜಯಶ್ರೀ ಆರಾಧ್ಯ ನಟಿಸಿದ್ದಾರೆ. ಬಿಗ್ ಬಾಸ್ ಶೋನಿಂದ ಹೊರ ಬಂದ ಬಳಿಕ ಜಯಶ್ರೀ ಆರಾಧ್ಯ ಹೊಸ ಮನೆ ಖರೀದಿ ಮಾಡಿದ್ದರು. ಜಯಶ್ರೀ ತಮ್ಮದೇ ಆದ ಉದ್ಯಮವನ್ನು ಹೊಂದಿದ್ದಾರೆ. ‘ಬಿಗ್ ಬಾಸ್’ ಮನೆಯಲ್ಲಿ ಸಿಕ್ಕಾಪಟ್ಟೆ ಸ್ಟ್ರೇಟ್ ಫಾರ್ವರ್ಡ್ ಆಗಿದ್ದ ಜಯಶ್ರೀ ಆರಾಧ್ಯ ಅವರ ವೈಯಕ್ತಿಕ ಬದುಕಿನ ಏಳು-ಬೀಳುಗಳನ್ನು ಹಂಚಿಕೊಂಡಿದ್ದರು.
ಲಾಹೋರ್: ಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣಾ ಫಲಿತಾಂಶ ಪ್ರಕಟವಾಗಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ವಿವಿಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಸೇರಿರುವ ಪಾಕಿಸ್ಥಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ 12 ಪ್ರಕರಣಗಳಲ್ಲಿ ಜಾಮೀನು ಸಿಕ್ಕಿದೆ. ಮೇ 9ರ ಗಲಭೆಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿಗೆ ಜಾಮೀನು ಸಿಕ್ಕಿದೆ. ಕಳೆದ ವರ್ಷ ಮೇ ತಿಂಗಳಲ್ಲಿ ಸೇನಾ ನೆಲೆಗಳ ಮೇಲಿನ ದಾಳಿಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಮಾಜಿ ಪ್ರಧಾನಿ ಇಮ್ರಾನ್ ಖಾನ್ಮತ್ತು ಮಾಜಿ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿಗೆ ಶಿಕ್ಷೆ ವಿಧಿಸಿತ್ತು. ಇದೀಗ ಉಭಯ ನಾಯಕರಿಗೂ ಜಾಮೀನು ಮಂಜೂರಾಗಿದೆ. ಆರ್ಥಿಕವಾಗಿ, ರಾಜಕೀಯವಾಗಿ ಸಂಕಷ್ಟದಲ್ಲಿರುವ ಪಾಕಿಸ್ತಾನ ಸಂಸತ್ ಚುನಾವಣೆಯ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿತ್ತು. ಜೈಲು ಸೇರಿರುವ ಮಾಜಿ ಪ್ರಧಾನಿ ಇಮ್ರಾನ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳು ಅಚ್ಚರಿಯ ರೀತಿಯಲ್ಲಿ ಮುನ್ನಡೆ ಸಾಧಿಸಿದ್ದಾರೆ.…
ಲಾಹೋರ್: ಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣೆ ಮುಕ್ತಾಯವಾಗಿದೆ. ಗುರುವಾರ ಸಂಜೆ ಮತದಾನ ಮುಕ್ತಾಯವಾಗಿದ್ದು ಇದೀಗ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ ಶೆಹಬಾಜ್ ಷರೀಫ್ ಲಾಹೋರ್‌ನಲ್ಲಿ ರಾಷ್ಟ್ರೀಯ ಮತ್ತು ಪ್ರಾಂತೀಯ ಅಸೆಂಬ್ಲಿ ಸ್ಥಾನಗಳನ್ನು ಗೆದ್ದಿದ್ದಾರೆ ಎಂದು ಸುದ್ದಿ ಕೇಳಿ ಬಂದಿದೆ. ಉಗ್ರ ದಾಳಿಗಳು ಮತ್ತು ಚುನಾವಣಾ ದುಷ್ಕೃತ್ಯದ ಆರೋಪಗಳ ನಡುವೆ ಪಾಕಿಸ್ತಾನದಲ್ಲಿ ಗುರುವಾರ ಸಂಜೆ 5 ಗಂಟೆಗೆ ಸಂಸತ್ತಿನ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದೆ. 266 ಸದಸ್ಯರ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪಿಟಿಐ ನಿಷ್ಠಾವಂತರು ಇದುವರೆಗೆ ಸುಮಾರು 49 ಸ್ಥಾನಗಳನ್ನು ಗೆದ್ದಿದ್ದಾರೆ, ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಗೆ 42 ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಗೆ 34 ಸ್ಥಾನಗಳನ್ನು ಗೆದ್ದಿದ್ದಾರೆ. ಅದೇ ವೇಳೆ ಪಾಕಿಸ್ತಾನ ಚುನಾವಣಾ ಆಯೋಗದ ವೆಬ್‌ಸೈಟ್‌ನ ಪ್ರಕಾರ ಗಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬೆಂಬಲಿತರು ಆಗಿರುವ ಪಕ್ಷೇತರರು ಎಣಿಕೆಯಾದ 136 ಸ್ಥಾನಗಳಲ್ಲಿ 49 ಸ್ಥಾನಗಳಲ್ಲಿ ಗೆಲುವು ಸಂಭ್ರಮಿಸಿದ್ದಾರೆ. ಚುನಾವಣಾ ಆಯೋಗವು ಘೋಷಿಸಿದ 122 ಸ್ಥಾನಗಳ ಪೈಕಿ…
ವಾಷಿಂಗ್ಟನ್: ಅಮೆರಿಕದಲ್ಲಿ ಮತ್ತೋರ್ವ ಭಾರತೀಯ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಹೊಸ ವರ್ಷಾರಂಭದಲ್ಲೇ ಅಮೆರಿಕದಲ್ಲಿ ಒಟ್ಟು ಐವರು ಭಾರತೀಯನ್ನು ಕೊಲೆ ಮಾಡಲಾಗಿದೆ. ವಾಷಿಂಗ್ಟನ್‌ನ ರೆಸ್ಟೊರೆಂಟ್‌ನ ಹೊರಗೆ ನಡೆದ ಜಗಳದಲ್ಲಿ ಮಾರಣಾಂತಿಕ ಗಾಯಗೊಂಡಿದ್ದ ಭಾರತೀಯ- ಅಮೆರಿಕನ್ ಎಕ್ಸಿಕ್ಯೂಟಿವ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಮೂಲದ, ವರ್ಜೀನಿಯಾದ ನಿವಾಸಿ ವಿವೇಕ್ ತನೇಜಾ ಮೃತಪಟ್ಟ ವ್ಯಕ್ತಿ. ಫೆಬ್ರವರಿ 2ರಂದು ವಿವೇಕ್, ಅವರ ಇಬ್ಬರು ಸಹೋದರಿಯರು ಹಾಗೂ ಶಂಕಿತ ಆರೋಪಿ ಜಪಾನೀಸ್ ರೆಸ್ಟೋರೆಂಟ್‌ನಲ್ಲಿ ಇದ್ದರು. ಆರೋಪಿಯು ವಿವೇಕ್‌ನನ್ನು ನೆಲಕ್ಕೆ ಕೆಡವಿ ಅವರ ತಲೆಯನ್ನು ಪಾದಚಾರಿ ಮಾರ್ಗಕ್ಕೆ ಗುದ್ದಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ 41 ವರ್ಷದ ವಿವೇಕ್ ತನೇಜಾ ಬೆಳಗಿನ ಜಾವ 2 ಗಂಟೆ ಸುಮಾರಿಗೆ ರೆಸ್ಟೋರೆಂಟ್ ಬಿಟ್ಟಿದ್ದರು. ಹತ್ತಿರದ ಬೀದಿಯಲ್ಲಿ ಜಗಳ ಆರಂಭವಾಯಿತು. ದಾಳಿಯಲ್ಲಿ ವಿವೇಕ್ ಪ್ರಜ್ಞೆ ಕಳೆದುಕೊಂಡರು. ಪೊಲೀಸರು ಆಗಮಿಸಿ ಅವರನ್ನು ಆಸ್ಪತ್ರೆಗೆ ಸಾಗಿಸಿದರು. ಗಾಯಗೊಂಡಿದ್ದ ಅವರು ಬುಧವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ವರದಿ ತಿಳಿಸಿದೆ. ಸಿಸಿಟಿವಿಯಲ್ಲಿ ಕಾಣಿಸಿಕೊಂಡಿರುವ ಶಂಕಿತನಿಗಾಗಿ…
ಅಯೋಧ್ಯೆಯಲ್ಲಿ ಉದ್ಘಾಟನೆಯಾಗಿರುವ ಬಾಲ ರಾಮಮಂದಿರಕ್ಕೆ ಬಾಲಿವುಡ್ ನಟ ಇತ್ತೀಚೆಗೆ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ವೇಳೆ ಅಮಿತಾಬ್ ರಾಮನಿಗೆ ದುಬಾರಿ ಚಿನ್ನದ ಹಾರವನ್ನು ಅರ್ಪಿಸಿದ್ದಾರೆ. ಇತ್ತೀಚೆಗೆ ಅಮಿತಾಬ್ ಜ್ಯುವೆಲರಿ ಶಾಪ್ ಉದ್ಘಾಟನೆಗಾಗಿ ಅಯೋಧ್ಯೆಗೆ ತೆರಳಿದ್ದಾರೆ. ಜ್ಯೂವೆಲ್ಲರಿ ಉದ್ಘಾಟನೆಯ ಬಳಿಕ ಅಮಿತಾಬ್ ಬಾಲ ರಾಮನಿಗೆ ಸರವನ್ನು ನೀಡಿದ್ದಾರೆ. ದೇವಸ್ಥಾನಕ್ಕೆ ಬರುವಾಗ ಸಾಕಷ್ಟು ಭದ್ರತೆಗಳೊಂದಿಗೆ ಆಗಮಿಸಿದ ಅಮಿತಾಭ್ ಕುರ್ತಾ-ಪೈಜಾಮ ಧರಿಸಿ ಗಮನ ಸೆಳೆದಿದ್ದಾರೆ. ಕೇಸರಿ ಬಣ್ಣದ ಶಾಲನ್ನು ಕುತ್ತಿಗೆಗೆ ಹಾಕಿಕೊಂಡಿದ್ದರು. ಗುರುವಾರ ಮಧ್ಯಾಹ್ನದ ವೇಳೆಗೆ ರಾಮ ಮಂದಿರಕ್ಕೆ ಭೇಟಿ ನೀಡಿದರು ಅಮಿತಾಭ್. ಸುಮಾರು ಅರ್ಧಗಂಟೆ ಅವರು ಅಲ್ಲಿಯೇ ಇದ್ದರು. ಆ ಬಳಿಕ ಅಯೋಧ್ಯೆಯ ಅಧಿಕಾರಗಳ ಜೊತೆ ಮಧ್ಯಾಹ್ನದ ಭೋಜನ ಸವಿದಿದ್ದಾರೆ.
ಬಾಲಿವುಡ್ನ ಹಿರಿಯ ನಟ ಹಾಗೂ ಬಿಜೆಪಿ ನಾಯಕ ಮಿಥುಲ್ ಚಕ್ರವರ್ತಿ ತೀವ್ರ ಎದೆನೋವಿನಿಂದ ಬಳಲುತ್ತಿದ್ದು ಅವನ್ನು ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು (ಫೆ 10) ಮುಂಜಾನೆ ಮಿಥುನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಿಥುನ್ ಚಕ್ರವರ್ತಿ ಆರೋಗ್ಯದ ಕುರಿತು ಸೋಶೀಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದ್ದುಅಭಿಮಾನಿಗಳು ಕಂಗಾಲಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಿಥುನ್ ಚಕ್ರವರ್ತಿ ಮಗ ಮಹಾಕ್ಷಯ ತಂದೆ ಆರಾಮವಾಗಿದ್ದು ರೊಟೀನ್ ಚಕ್ ಅಪ್ ಆಗಿ ಆಸ್ಪತ್ರೆಗೆ ಬಂದಿರುವುದಾಗಿ ತಿಳಿಸಿದ್ದಾರೆ. 1976ರಲ್ಲಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಮಿಥುನ್ ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ, ಮೊದಲ ಚಿತ್ರದಲ್ಲೇ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದ್ದು ನಾಯಕನಾಗಿ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅವರು ಪೋಷಕ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಅವರು ಜಡ್ಜ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.