ಭೂಮಿಯ ಮೇಲಿನ ಸ್ವರ್ಗವಾಗಿದ್ದ ಕಾಶ್ಮೀರ ಈಗ ನರಕವಾಗಿದೆ. ಜಮ್ಮು ಮತ್ತು ಕಾಶ್ಮೀರದ ಜನಪ್ರಿಯ ಪ್ರವಾಸಿ ತಾಣವಾದ ಪಹಲ್ಗಾಮ್‌ಗೆ ಹೋಗಿದ್ದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಮನಬಂದಂತೆ ಗುಂಡು ಹಾರಿಸಿದರು. ಈ ಘಟನೆಯಲ್ಲಿ 28 ಅಮಾಯಕರು ಪ್ರಾಣ ಕಳೆದುಕೊಂಡರು. ಈ ಭಯೋತ್ಪಾದಕ ದಾಳಿಯನ್ನು ಜಗತ್ತು ಬಲವಾಗಿ ಖಂಡಿಸುತ್ತಿದೆ. ಈ ಸಂದರ್ಭದಲ್ಲಿ, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ ಈ ಘೋರ ಭಯೋತ್ಪಾದನಾ ಕೃತ್ಯವನ್ನು ಖಂಡಿಸಿದರು ಮತ್ತು ಇದಕ್ಕೆ ಸ್ಥಳೀಯರು ಬೆಂಬಲ ನೀಡಿದ್ದಾರೆ ಎಂದು ಸಂವೇದನಾಶೀಲ ಆರೋಪಗಳನ್ನು ಮಾಡಿದರು. “ಈ ಭಯೋತ್ಪಾದಕರು ಹಿಂದೂಗಳ ಮೇಲೆ ಏಕೆ ದಾಳಿ ಮಾಡುತ್ತಿದ್ದಾರೆ? ಅವರು ಕಾಶ್ಮೀರಿ ಪಂಡಿತರು ಅಥವಾ ಭಾರತದಾದ್ಯಂತದ ಹಿಂದೂ ಪ್ರವಾಸಿಗರನ್ನು ಏಕೆ ಗುರಿಯಾಗಿಸಿಕೊಂಡಿದ್ದಾರೆ?” “ಸ್ಥಳೀಯ ಭಯೋತ್ಪಾದಕರ ಸಹಾಯವಿಲ್ಲದೆ ಇಂತಹ ದಾಳಿಗಳು ನಡೆಯಲು ಸಾಧ್ಯವಿಲ್ಲ” ಎಂದು ಕನೇರಿಯಾ ಟ್ವೀಟ್‌ನಲ್ಲಿ ಬರೆದಿದ್ದಾರೆ. https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಹಫೀಜ್ ಕೂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ. “ಈ ಭಯೋತ್ಪಾದಕ ದಾಳಿಯಿಂದ ನನ್ನ ಹೃದಯ ಮುರಿದುಹೋಗಿದೆ” ಎಂದು…
Author: Author AIN
ಜೀವನ ಅನ್ನೋದೇ ಹಾಗೇ..ಯಾವಾಗ ಯಾರಿಗೆ ಏನ್ ಆಗುತ್ತೇ ಅಂತಾ ಹೇಳೋದಿಕ್ಕೆ ಆಗಲ್ಲ. ಈಗಿನ ಕಾಲದ ಜೀವನ ಶೈಲಿ, ಆಹಾರ ಪದ್ಧತಿಯಿಂದ ಆರೋಗ್ಯಯುತರಾಗಿದ್ದವರಿಗೆ ಅದ್ಯಾವಾ ರೋಗ ವಕ್ಕರಿಸಿಕೊಳ್ಳೋತ್ತೋ ಹೇಳಲು ಆಗುವುದಿಲ್ಲ. ತುಂಬಾ ಫಿಟ್ ಅಂಡ್ ಫೈನ್ ಆಗಿದ್ದ ಚಿತ್ರರಂಗದ ಕಲಾವಿದರೊಬ್ಬರು ಧೀಡೀರ್ ಹಾಸಿಗೆ ಹಿಡಿದಿದ್ದಾರೆ. ಕಿರುತೆರೆ ಹಾಗೂ ಬೆಳ್ಳಿತೆರೆ ಎರಡಲ್ಲಿಯೂ ಗುರುತಿಸಿಕೊಂಡಿರುವ ಶ್ರೀಧರ್ ನಾಯ್ಕ್ ಹಾಸಿಗೆ ಹಿಡಿದಿದ್ದಾರೆ. ಅವರಿಗೆ ಯಾವ ಖಾಯಿಲೆಯಾಗಿದೆ ಅನ್ನೋದು ಗೊತ್ತಿಲ್ಲವಂತೆ. ಇನ್ಪೆಕ್ಷ್ ಆಗಿ ಆ ನಂತರ ಸಂಪೂರ್ಣ ಅನಾರೋಗ್ಯದಿಂದ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗಾಗಿ ಸಾಕಷ್ಟು ಖರ್ಚಾಗುತ್ತಿದ್ದು, ಹೀಗಾಗಿ ಸಹಾಯಬೇಕೆಂದು ಕೇಳಿಕೊಂಡಿದ್ದಾರೆ. ಅವರ ಜೊತೆ ನಟಿಸಿದ ಕಲಾವಿದರು ಅವರ ಬೆನ್ನಿಗೆ ನಿಂತು ಸಹಾಯ ಹಸ್ತ ಕೇಳಿಕೊಂಡಿದ್ದಾರೆ. ನಟಿ ಅಂಕಿತಾ ನಿಂಗಿ ಈ ಬಗ್ಗೆ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಶ್ರೀಧರ್ ನಾಯ್ಕ್ ಅವರನ್ನು ನೋಡಿಕೊಳ್ಳಲು ಯಾರು. ಅವರ ತಾಯಿ ಅವರನ್ನು ನೋಡಿಕೊಳ್ಳುತ್ತಿದ್ದಾರೆ. ಶ್ರೀಧರ್ ನಾಯ್ಕ್ ಅವರು ಕಿಚ್ಚ ಸುದೀಪ್ ನಟನೆಯ ಸೂಪರ್ ಹಿಟ್…
ಬೆಂಗಳೂರು: ‘ನೀವು ಹಿಂದೂಗಳೇ’ ಎಂದು ಪ್ರಶ್ನಿಸಿ ದಾಳಿ ಮಾಡಿರುವುದು ನಿಜಕ್ಕೂ ಅತ್ಯಂತ ಆತಂಕಕಾರಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಶ್ಮೀರ ಕಣಿವೆಯಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಖಂಡಿಸುತ್ತೇನೆ. ಪ್ರಾಣ ಕಳೆದುಕೊಂಡಿರುವ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬ ವರ್ಗದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಅಂತ ಭಗವಂತನಲ್ಲಿ ಪ್ರಾರ್ಥಿಸುವೆ ಎಂದು ತಿಳಿಸಿದರು. https://ainkannada.com/fine-for-not-wearing-a-helmet-these-tips-are-mandatory-when-buying/ ನಮ್ಮಲ್ಲಿ ಬಹಳ ಪರಿಣಾಮಕಾರಿಯಾದ, ಶಕ್ತಿಯುತವಾದ ಮಿಲಿಟರಿ ಇಂಟೆಲಿಜೆನ್ಸ್ ಇದೆ. ಅನೇಕ ಸಂದರ್ಭಗಳಲ್ಲಿ ಮಿಲಿಟರಿ ಇಂಟಲಿಜೆನ್ಸ್ ಒಳ್ಳೆಯ ಕೆಲಸ ಮಾಡಿದೆ. ಯಾಕೆ ಇಂಟಲಿಜೆನ್ಸ್ ಫೆಲ್ಯೂರ್ ಆಯ್ತು?. ಟೆರರಿಸ್ಟ್‌ಗಳು ಎಲ್ಲಿಂದ, ಹೇಗೆ ಬಂದ್ರು ಎಂಬುದು ಅತಿದೊಡ್ಡ ಪ್ರಶ್ನೆ ಎಂದರು. ಪುಲ್ವಾಮಾ ದಾಳಿ ನಂತರ ಇಲ್ಲಿಯವರೆಗೆ ಇಂತಹ ದುರ್ಘಟನೆಗಳು ನಡೆದಿರಲಿಲ್ಲ. ಹಿಂದೂಗಳನ್ನು ಗುರಿ ಮಾಡಿದ್ದಾರೆ. ದಾಳಿ ವೇಳೆ “ನೀನು ಹಿಂದೂ ಅದಕ್ಕಾಗಿ ಕೊಲ್ಲುತ್ತಿದ್ದೇವೆ” ಎಂದು ಭಯೋತ್ಪಾದಕರು ಹೇಳಿಕೊಂಡಿರುವುದು ನಿಜಕ್ಕೂ ಆತಂಕಕಾರಿ ವಿಚಾರ. ಇದು ಹೊಸದಲ್ಲ ಅನ್ನಿಸುತ್ತದೆ. ದಾಳಿ ಮಾಡುವಾಗ ಅನೇಕ ಸಂದರ್ಭದಲ್ಲಿ ಆ ಮಾತುಗಳನ್ನು ಹೇಳಿದ್ದಾರೆ. ಕೇಂದ್ರ…
ವಿಜಯಪುರ: ಜಮ್ಮು ಕಾಶ್ಮೀರದ ಪೆಹಲ್ಗಾಮದಲ್ಲಿ ನಿನ್ನೆ ನಡೆದ ಭಯೋತ್ಪಾದಕರ ದಾಳಿಗೆ ಕೂಡಲೇ ಪ್ರತೀಕಾರವನ್ನು ತೆಗೆದುಕೊಳ್ಳಬೇಕಾದರೆ ಕಾಶ್ಮೀರ ಕಣಿವೆಯಲ್ಲಿ ಅಡಿಗಿ ಕುಳಿತಿರುವ ಉಗ್ರಗಾಮಿಗಳನ್ನು ನಿರ್ದಾಕ್ಷಣಿವಾಗಿ ಗುಂಡಿಕ್ಕಿ ಕೊಲ್ಲಬೇಕು ಎಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು. ಜಮ್ಮು ಕಾಶ್ಮೀರದ ಪೆಹಲ್ಗಾಮದಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಭಯೋತ್ಪಾದಕರಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿ ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಬಸವಸೈನ್ಯ ಸಂಘಟನೆಯ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರವಾಸಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಭಯೋತ್ಪಾದ ಜಿಹಾದಿಗಳು ಅಮಾಯಕರನ್ನು ಹತ್ಯೆ ಮಾಡಿದ್ದಾರೆ. https://ainkannada.com/fine-for-not-wearing-a-helmet-these-tips-are-mandatory-when-buying/ ಈ ಜಿಹಾದಿ ಶಕ್ತಿಗಳ ಹೆಡೆಮುರಿಕಟ್ಟುವ ಕೆಲಸವನ್ನು ಕೇಂದ್ರ ಸರ್ಕಾರ ಕೂಡಲೇ ಮಾಡಬೇಕು ಭಯೋತ್ಪಾದಕರನ್ನು ಬೆನ್ನಟ್ಟಿ ಭಾರತೀಯ ಸೇನೆ ಗುಂಡಿಕ್ಕಿ ಕೊಲ್ಲಬೇಕು ಕಾಶ್ಮೀರವನ್ನು ಭಯೋತ್ಪಾದಕರಿಂದ ಮುಕ್ತಗೊಳಿಸಬೇಕು. ಈ ದಾಳಿ ಹಿಂದೆ ಇರುವ ಪಾಕಿಸ್ತಾನದ ಭಯೋತ್ಪಾದನಾ ತರಬೇತಿ ಕೇಂದ್ರಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಲು ಕೇಂದ್ರ ಸರ್ಕಾರ ಕೂಡಲೇ…
ನವದೆಹಲಿ: ಪಹಲ್ಗಾಮ್’ನ ರಾಕ್ಷಸೀ ಕೃತ್ಯಕ್ಕೆ ಕಾರಣರಾದವರಿಗೆ ತಕ್ಕ ಉತ್ತರ ಕೊಟ್ಟೇ ಕೊಡುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಸೇನಾ ಪಡೆಗಳ ಮುಖ್ಯಸ್ಥರ ಜೊತೆ ತುರ್ತು ಸಭೆ ನಡೆಸಿ ಮಾತನಾಡಿದ ಅವರು, ಭಾರತದ ಪ್ರತಿಯೊಬ್ಬ ನಾಗರಿಕನೂ ಈ ಹೇಡಿತನದ ಕೃತ್ಯದ ವಿರುದ್ಧ ಒಗ್ಗಟ್ಟಾಗಿದ್ದಾನೆ. https://ainkannada.com/fine-for-not-wearing-a-helmet-these-tips-are-mandatory-when-buying/ ಹಾಗಾಗಿ ಇಂತಹ ಕೃತ್ಯಗಳಿಗೆ ಕಾರಣರಾದವರಿಗೆ ಸೂಕ್ತ ಉತ್ತರ ಕೊಡುತ್ತೇವೆ. ತೆರೆಮರೆಯಲ್ಲಿದ್ದುಕೊಂಡು ಪಿತೂರಿ ನಡೆಸಿದವರನ್ನೂ ನಾವು ಬಿಡೋದಿಲ್ಲ. ಭಾರತ ಸರ್ಕಾರ ಉಗ್ರರನ್ನು ಸದೆಬಡಿಯಲು ಅಗ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದ್ದಾರೆ. ಭಾರತವು ಪ್ರಾಚೀನ ನಾಗರಿಕತೆ ಮತ್ತು ದೊಡ್ಡ ಜನಸಂಖ್ಯೆಯುಳ್ಳ ದೇಶವಾಗಿದೆ. ಇಂತಹ ಭಯೋತ್ಪಾದಕ ಚಟುವಟಿಕೆಗಳಿಂದ ನಮ್ಮನ್ನು ಬೆದರಿಸಲು ಸಾಧ್ಯವಿಲ್ಲ. ಇಂತಹ ಕೃತ್ಯಗಳಿಗೆ ಕಾರಣರಾದವರಿಗೆ ತಕ್ಕ ಉತ್ತರ ಕೊಟ್ಟೇ ಕೊಡುತ್ತೇವೆ ಎಂದು ಎಚ್ಚರಿಸಿದ್ದಾರೆ.
ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲಿ ಕರ್ನಾಟಕದ ಜನರೂ ಇದ್ದಾರೆ. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಪ್ರವಾಸಿಗರು. 2019 ರಲ್ಲಿ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತಿದೊಡ್ಡ ದಾಳಿ ಇದಾಗಿದೆ. ಕೊಲ್ಲಲ್ಪಟ್ಟವರಲ್ಲಿ ಇಬ್ಬರು ವಿದೇಶಿಯರು (ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ನೇಪಾಳದವರು) ಮತ್ತು ಇಬ್ಬರು ಸ್ಥಳೀಯ ನಿವಾಸಿಗಳು ಸೇರಿದ್ದಾರೆ. 26 ಜನರಲ್ಲಿ 22 ಜನರನ್ನು ಗುರುತಿಸಲಾಗಿದ್ದು, ಉಳಿದವರನ್ನು ಗುರುತಿಸಲಾಗುತ್ತಿದೆ. https://ainkannada.com/fine-for-not-wearing-a-helmet-these-tips-are-mandatory-when-buying/ ಇನ್ನೂ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಿನ್ನೆ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಜಮ್ಮು-ಕಾಶ್ಮೀರ ಸರ್ಕಾರ ಘೋಷಿಸಿದೆ. ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ, ಸಣ್ಣಪುಟ್ಟ ಗಾಯಾಳುಗಳಿಗೆ 1 ಲಕ್ಷ ರೂಪಾಯಿ ನೀಡುವುದಾಗಿ ತಿಳಿಸಿದೆ. ಉಗ್ರರ ದಾಳಿಯಿಂದ ಪ್ರಾಣ ಕಳೆದುಕೊಂಡ 26 ಮಂದಿಯ ಪಾರ್ಥಿವ ಶರೀರಗಳನ್ನು ಶ್ರೀನಗರದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ (ಜಿಎಂಸಿ) ಸ್ಥಳಾಂತರಿಸಲಾಗಿದೆ. ನಂತರ ಪೊಲೀಸ್ ನಿಯಂತ್ರಣ ಕೊಠಡಿಗೆ ಕೊಂಡೊಯ್ಯಲಾಯಿತು.…
ಮಂಡ್ಯ : ಸೆಸ್ಕ್ ವತಿಯಿಂದ ಮದ್ದೂರು ನಗರ ಉಪ ವಿಭಾಗದ ಕಾರ್ಯ ಮತ್ತು ಪಾಲನಾ ಘಟಕ – 2 ಶಾಖಾ ವ್ಯಾಪ್ತಿಯ ಎಫ್ -1 ಮದ್ದೂರು ಮತ್ತು ಎಫ್ – 10 ಮಠದದೊಡ್ಡಿ ಎನ್.ಜೆ.ವೈ ಫೀಡರ್ ವಿದ್ಯುತ್ ಮಾರ್ಗದ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ಮದ್ದೂರು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೊಮ್ಮುವ 11 ಕೆವಿ. ಎಫ್ -1 ಮದ್ದೂರು ಮಾರ್ಗದ ಕೊಲ್ಲಿ ಸರ್ಕಲ್, ಕೊಪ್ಪ ಸರ್ಕಲ್, ಶಿವಪುರ, ಹಳೇ ಎಂ.ಸಿ ರಸ್ತೆ, ವಿವಿ ನಗರ 9 ನೇ ಕ್ರಾಸ್ ಎಫ್ -10 ಮಠದದೊಡ್ಡಿ ಎನ್.ಜೆ.ವೈ ಫೀಡರ್ ನ ಗ್ರಾಮಗಳಾದ ಕ್ಯಾತಘಟ್ಟ, ಬೊಮ್ಮನದೊಡ್ಡಿ, ಮಠದದೊಡ್ಡಿ, ವೈದ್ಯನಾಥಪುರ, ನಗರಕೆರೆ, ಉಪ್ಪಿನಕೆರೆ, ಸೋಂಪುರ, ಉಪ್ಪಾರದೊಡ್ಡಿ, ಮಾಲಗಾರನಹಳ್ಳಿ ಹಾಗೂ ಅಜ್ಜಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ದಿನಾಂಕ 24-05-2025 ರ ಗುರುವಾರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರ ಸಹಕರಿಸಬೇಕೆಂದು ಸೆಸ್ಕ್ ಅಧಿಕಾರಿಗಳು ಮನವಿ ಮಾಡಿದ್ದಾರೆ. ವರದಿ : ಗಿರೀಶ್ ರಾಜ್ ಮಂಡ್ಯ
ಹುಬ್ಬಳ್ಳಿ: ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ಕಾಶ್ಮೀರದಲ್ಲಿ ಶಾಂತಿ ನೆಲೆಸಿತ್ತು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರುಭದ್ರತಾ ವ್ಯವಸ್ಥೆ ಸರಿಯಿದೆ ಎಂದು ಪ್ರವಾಸಿಗರೇ ಹೇಳಿದ್ದಾರೆ. ಆದರೂ ಈ ಘಟನೆ ನಡೆದಿದೆ. ಯಾವ ಸರ್ಕಾರ ಬಂದಾಗ ಕೂಡಾ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಇರಲಿಲ್ಲ. ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ಅಲ್ಲಿ ಶಾಂತಿ ನೆಲೆಸಿತ್ತು. ಉಗ್ರಗಾಮಿಗಳನ್ನು ನಾಶ ಮಾಡಬೇಕು. ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಯನ್ನು ನಾಶ ಮಾಡಬೇಕು ಎಂದು ಕಿಡಿಕಾರಿದ್ದಾರೆ. https://ainkannada.com/fine-for-not-wearing-a-helmet-these-tips-are-mandatory-when-buying/ ದೇಶದ ಜನತೆ ಕಾಶ್ಮೀರದಲ್ಲಿ ಶಾಂತಿ ನೆಲೆಸಬೇಕು ಅನ್ನೋ ಇಚ್ಛೆ ಹೊಂದಿದ್ದಾರೆ. ಮೃತ ಕುಟುಂಬದ ಜೊತೆಗೆ ದೇಶ, ಭಾರತ ಸರ್ಕಾರವಿದೆ. ಉಗ್ರಗಾಮಿಗಳ ಹತ್ಯೆಯಾಗುತ್ತದೆ. ಭಾರತ ದೇಶ ಜಗತ್ತಿನಲ್ಲಿ ಪ್ರಬಲವಾಗಿ ಬೆಳೆಯುತ್ತಿದೆ. ಅದನ್ನು ಸಹಿಸಲು ಪಾಕಿಸ್ತಾನಕ್ಕೆ ಆಗುತ್ತಿಲ್ಲ. ಪಾಕಿಸ್ತಾನ ಅವನತಿ ಆರಂಭವಾಗಿದೆ. ಹಿಂದೂಗಳನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡಿದ್ದಾರೆ. ಮೋದಿ ಅವರು ಬಲಾಢ್ಯ ರಾಷ್ಟ್ರ ಕಟ್ಟುತ್ತಿದ್ದಾರೆ. ಮೋದಿ ಅವರು ಆದಷ್ಟು ಬೇಗ ಇದಕ್ಕೆ ತಕ್ಕ ಉತ್ತರ ಕೊಡುತ್ತಾರೆ…
ಕನ್ನಡದ ನಟಿ ಅರ್ಚನಾ ಕೊಟ್ಟಿಗೆ ಹಾಗೂ ಕ್ರಿಕೆಟರ್ ಶರತ್ ಬಿಆರ್ ತಮ್ಮ ಎಂಟು ವರ್ಷದ ಪ್ರೀತಿಗೆ ಮದುವೆ ಮುದ್ರೆ ಒತ್ತಿದ್ದಾರೆ. ಇಂದು ಈ ಜೋಡಿ ಅದ್ಧೂರಿಯಾಗಿ ಖಾಸಗಿ ರೆಸಾರ್ಟ್ ನಲ್ಲಿ ಹೊಸ ಬಾಳಿಗೆ ಕಾಲಿಟ್ಟಿದೆ. ಅರ್ಚನಾ ಕೊಟ್ಟಿಗೆ ಹಾಗೂ ಶರತ್ ವಿವಾಹೋತ್ಸವಕ್ಕೆ ಸ್ಯಾಂಡಲ್ ವುಡ್ ಸ್ಟಾರ್ಸ್ ಹಾಗೂ ಕ್ರಿಕೆಟರ್ಸ್ ಭಾಗಿಯಾಗಿ ಶುಭ ಹಾರೈಸಿದ್ದಾರೆ. ನಿನ್ನೆ ನಡೆದ ಅದ್ಧೂರಿ ಆರತಕ್ಷತೆಯಲ್ಲಿ ಆರ್ ಬಿಸಿಯಲ್ಲಿ ಮಿಂಚುತ್ತಿರುವ ದೇವದತ್ ಪಡಿಕಲ್, ಗುಜರಾತ್ ಟೈಟನಲ್ಲಿ ಅಬ್ಬರಿಸುತ್ತಿರುವ ಪ್ರಸಿದ್ಧ್ ಕೃಷ್ಣ, ಕ್ರಿಕೆಟರ್ ಶುಭಮನ್ ಹೆಗ್ಡೆ, ವೈಶಾಕ್ ವಿಜಯ್ ಕುಮಾರ್, ಆರ್ ಸಮರ್ಥ್, ಎಸ್ ವಿ ಸಿದ್ದಾರ್ಥ್ ಸೇರಿದಂತೆ ಹಲವರು ಭಾಗಿಯಾಗಿ ನವ ಜೋಡಿಗೆ ಶುಭ ಹಾರೈಸಿದ್ದಾರೆ. 2018ರ ‘ಅರಣ್ಯಕಾಂಡ’ ಸಿನಿಮಾ ಅರ್ಚನಾ ಕೊಟ್ಟಿಗೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ‘ವಾಸು ನಾನ್ ಪಕ್ಕಾ ಕಮರ್ಷಿಯಲ್’, ‘ಡಿಯರ್ ಸತ್ಯ’, ‘ತ್ರಿಬಲ್ ರೈಡಿಂಗ್’ ರೀತಿಯ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. ಕ್ರಿಕೆಟರ್ ಶರತ್ 2024ರಲ್ಲಿ ಅವರು ಜಿಟಿ ಪರ ಆಡಿದರು. ಇದು ಅವರ ಮೊದಲ…
ಬೆಂಗಳೂರು: ಕೇಂದ್ರ ಸರ್ಕಾರ ಈ ಭಯೋತ್ಪಾದಕರನ್ನು ಸದೆಬಡಿಯಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ. ಈ ವಿಚಾರದಲ್ಲಿ ನಮ್ಮ ಪಕ್ಷ ಕೇಂದ್ರ ಸರ್ಕಾರದ ಪರ ನಿಲ್ಲುವುದಾಗಿ ತಿಳಿಸಿದೆ. ಕೇಂದ್ರ ಸರ್ಕಾರ ಈ ಭಯೋತ್ಪಾದಕರನ್ನು ಸದೆಬಡಿಯಬೇಕು. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರೂ ಇವುಗಳನ್ನು ಬುಡಸಮೇತ ಕಿತ್ತೊಗೆಯಬೇಕು. ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು ಎಂದು ಹೇಳಿದರು. https://ainkannada.com/fine-for-not-wearing-a-helmet-these-tips-are-mandatory-when-buying/ ಈ ಘಟನೆ ವಿದೇಶಾಂಗ ನೀತಿ, ಪ್ರವಾಸಿಗರು ಹಾಗೂ ದೇಶದ ಜನರ ಮೇಲೆ ಪ್ರಭಾವ ಬೀರುವುದರಿಂದ ಕೇಂದ್ರ ಸರ್ಕಾರ ಈ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯಬೇಕು. ನಾನು ಈಗಷ್ಟೇ ದಾಳಿಯಲ್ಲಿ ಮೃತರ ಕುಟುಂಬದವರ ಜೊತೆ ಚರ್ಚೆ ಮಾಡಿದೆ. ಶಿವಮೊಗ್ಗ ಜಿಲ್ಲಾ ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದು, ಮೃತರ ಕುಟುಂಬಸ್ಥರನ್ನು ಭೇಟಿ ಮಾಡುವಂತೆ…