ಲಕ್ನೋ ಹೋಮ್ಗ್ರೌಂಡ್ನಲ್ಲಿ ನಿನ್ನೆ ಡೆಲ್ಲಿಯ ಆರ್ಭಟ ಜೋರಾಗಿತ್ತು. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 8 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿತು. ಸೋಲಿನ ಬಳಿಕ ಮಾತನಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್, ಪಂದ್ಯವು ಹೀಗೆ ನಡೆಯುತ್ತದೆ, ಹೀಗೆ ಆಗುತ್ತದೆ ಎಂದು ಯಾರನ್ನೂ ದೂರನ್ನು ಸಾಧ್ಯವಿಲ್ಲ. ಏಕೆಂದರೆ ಎರಡನೇ ಇನಿಂಗ್ಸ್ನಲ್ಲಿ ಬ್ಯಾಟಿಂಗ್ ಸುಲಭವಾಗುತ್ತದೆ. ಹೀಗಾಗಿ ನಾವು ಸೋಲನುಭವಿಸಿದ್ದೇವೆ ಎಂದರು. ಲಕ್ನೋ ಪಂದ್ಯಗಳಲ್ಲಿ ಟಾಸ್ ದೊಡ್ಡ ಪಾತ್ರ ವಹಿಸುತ್ತಿದೆ. ಹೀಗಾಗಿ ಸೋಲಿಗೆ ನಾನು ನೆಪಗಳನ್ನು ಹುಡುಕುತ್ತಿಲ್ಲ. ಇದಾಗ್ಯೂ ನಾವು ಈ ಪಂದ್ಯದಲ್ಲಿ 20 ರನ್ಗಳನ್ನು ಕಡಿಮೆ ಕಲೆಹಾಕಿದ್ದೆವು. ಇದು ಸಹ ಒಂದು ಕಾರಣ ಎಂದು ರಿಷಭ್ ಪಂತ್ ಹೇಳಿದ್ದಾರೆ. https://ainkannada.com/fine-for-not-wearing-a-helmet-these-tips-are-mandatory-when-buying/ ಇನ್ನು ನೀವೇಕೆ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಪಂತ್, ನಾವು ಸಂದರ್ಭಗಳ ಲಾಭವನ್ನು ಪಡೆಯಲು ಬಯಸಿದ್ದೆವು. ಅದಕ್ಕಾಗಿ ನಾನು ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದರು. ಈ ಪಿಚ್ನ ಸಂಪೂರ್ಣ…
Author: Author AIN
ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ನರಮೇಧದ ವಿರುದ್ಧ ಇಡೀ ದೇಶ ಆಕ್ರೋಶ ವ್ಯಕ್ತಪಡಿಸುತ್ತಿದೆ. ಈ ಹೇಯ ಕೃತ್ಯದ ಬೆನ್ನಲ್ಲೆ ಪಾಕಿಸ್ತಾನಿ ನಟ ಫವಾದ್ ಖಾನ್ ಬಾಲಿವುಡ್ ನಟಿ ವಾಣಿ ಕಪೂರ್ ನಟನೆಯ ಅಬಿರ್ ಗುಲಾಲ್ ಸಿನಿಮಾವನ್ನು ಭಾರತದಲ್ಲಿ ನಿಷೇಧಿಸಬೇಕೆಂಬ ಬೇಡಿಕೆಗಳು ಹೆಚ್ಚುತ್ತಿವೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಆರತಿ ಎಸ್ ಬಾಗ್ಡಿ ನಿರ್ದೇಶನದ ಅಬಿರ್ ಗುಲಾಲ್ ಸಿನಿಮಾ ಚಿತ್ರ ಮೇ 9 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ನಡುವೆ ಪಹಲ್ಗಾಮ್ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯಿಂದ , 26 ಜನರು ಮೃತಪಟ್ಟಿದ್ದಾರೆ. ಹೀಗಾಗಿ “ಅಬೀರ್ ಗುಲಾಲ್” ಚಿತ್ರವನ್ನು ಭಾರತದ ಯಾವುದೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಅನುಮತಿಸಲಾಗುವುದಿಲ್ಲ” ಎಂದು ಎಕ್ಸ್‌ನಲ್ಲಿ ಚರ್ಚೆ ಶುರುವಾಗಿದೆ. ಮತ್ತೊಬ್ಬರು, “ಪಾಕಿಸ್ತಾನಿ ನಟರನ್ನು ಇಟ್ಟುಕೊಂಡು ಭಾರತದಲ್ಲಿ ಅಬೀರ್ ಗುಲಾಲ್ ನಂತಹ ಚಲನಚಿತ್ರಗಳನ್ನು ನಿರ್ಮಿಸಲು ನಾವು ಇನ್ನೂ ಅವಕಾಶ ನೀಡುತ್ತೇವೆಯೇ?” ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿಯ ‘ಮಿನಿ ಸ್ವಿಟ್ಜರ್ಲೆಂಡ್’ ಎಂದು ಕರೆಯಲ್ಪಡುವ ಪ್ರವಾಸಿ ತಾಣ ಬೈಸರನ್‌ನಲ್ಲಿ ನಿನ್ನೆ ಉಗ್ರರು ದಾಳಿ ಮಾಡಿದ್ದಾರೆ. ಈ ಕೃತ್ಯವನ್ನು ಇಡೀ ದೇಶವೇ ಖಂಡಿಸಿದ್ದು, ಉಗ್ರರ ದಾಳಿಯಲ್ಲಿ ಮತ್ತೋರ್ವ ಬೆಂಗಳೂರು ನಿವಾಸಿ ಸಾವನ್ನಪ್ಪಿದ್ದಾರೆ. ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದ ಬೆಂಗಳೂರು ನಿವಾಸಿ ಮಧುಸೂದನ್ ರಾವ್ ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಆಂಧ್ರದ ನೆಲ್ಲೂರು ಮೂಲದ ಮಧುಸೂಧನ್ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನೆಲೆಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. https://ainkannada.com/fine-for-not-wearing-a-helmet-these-tips-are-mandatory-when-buying/ ದೇಶ ಹಾಗೂ ವಿದೇಶಗಳಿಂದ ಬಂದ ಪ್ರವಾಸಿಗರು ಪಹಲ್ಗಾಮ್ ಪ್ರಕೃತಿಯನ್ನು ಆನಂದಿಸುತ್ತಿದ್ದ ವೇಳೆ, ಇದ್ದಕ್ಕಿದ್ದಂತೆ ಇಡೀ ಕಣಿವೆ ಗುಂಡಿನ ಶಬ್ದದಿಂದ ನಡುಗಿ ಹೋಗಿದೆ. ಜನರು ತಮ್ಮ ತಮ್ಮ ಜೀವಗಳನ್ನು ಉಳಿಸಿಕೊಳ್ಳಲು ಎದ್ದು ಬಿದ್ದು ಓಡಿದ್ದಾರೆ. ಭಯೋತ್ಪಾದಕರು ಜನರ ಹೆಸರುಗಳನ್ನು ಕೇಳಿ ಕೇಳಿ ಗುರುತಿನ ಚೀಟಿಗಳನ್ನು ಪರಿಶೀಲಿಸಿ ಕೊಂದಿದ್ದಾರೆ.
ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ನಬೈಸರನ್ ಕಣಿವೆಯಲ್ಲಿ ಉಗ್ರರು ಮಂಗಳವಾರ (ಏ.22) ಅಟ್ಟಹಾಸ ಮೆರೆದಿದ್ದಾರೆ. ಭಯೋತ್ಪಾದಕರು ಭಾರತಕ್ಕೆ ದೊಡ್ಡ ಆಘಾತ ನೀಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಒಳನುಸುಳಲು ಮುಂದಾಗುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಈ ಇಬ್ಬರು ಭಯೋತ್ಪಾದಕರು ಬಾರಾಮುಲ್ಲಾದ ಉರಿ ನಾಲಾದ ಸರ್ಜೀವನ್ ಪ್ರದೇಶದ ಮೂಲಕ ಒಳನುಸುಳಲು ಪ್ರಯತ್ನಿಸಿದರು ಎಂದು ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಅಕ್ರಮವಾಗಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕರನ್ನು ತಡೆದಿದ್ದು, https://ainkannada.com/fine-for-not-wearing-a-helmet-these-tips-are-mandatory-when-buying/ ಈ ವೇಳೆ ಗುಂಡಿನ ಚಕಮಕಿ ನಡೆಯಿತು. ಸತತ 1 ಗಂಟೆಯ ಕಾರ್ಯಾಚರಣೆ ನಂತರ ಇಬ್ಬರು ಭಯೋತ್ಪಾದಕರನ್ನು ಸದೆಬಡಿಯಲಾಯಿತು. ಈ ವೇಳೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೋಸ್ಟ್‌ನಲ್ಲಿ ತಿಳಿಸಿದೆ.
ನವದಹೆಲಿ: ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ದೇಶವನ್ನೇ ಬೆಚ್ಚಿ ಬೀಳಿಸಿದೆ. ಅಮಾಯಕ ಪ್ರವಾಸಿಗರ ಮೇಲೆ ನಡೆದ ಈ ನೀಚ ಕೃತ್ಯ ದೇಶವಾಸಿಗಳ ರಕ್ತ ಕುದಿಯುವಂತೆ ಮಾಡಿದೆ. ಇದೀಗ ಎನ್ಐಎ ಮತ್ತು ವಿಧಿವಿಜ್ಞಾನ ತಂತ್ರಜ್ಞರಿಂದ ಶಂಕಿತ ಮೂವರು ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಲಾಗಿದೆ. ಒಟ್ಟು ಐವರು ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದರು. https://ainkannada.com/fine-for-not-wearing-a-helmet-these-tips-are-mandatory-when-buying/ ಪ್ರವಾಸಿಗರು ಮತ್ತು ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿ ಆಧಾರದ ಮೇಲೆ ರೇಖಾಚಿತ್ರ ಸಿದ್ಧಪಡಿಸಲಾಗಿದೆ. ಈ ದಾಳಿಯಲ್ಲಿ ಒಟ್ಟು 26 ಪುರುಷ ಪ್ರವಾಸಿಗರು ಮೃತರಾಗಿದ್ದಾರೆ. ಉಗ್ರರ ದಾಳಿಯ ವಿಷಯ ತಿಳಿಯುತ್ತಿದ್ದಂತೆ ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ಹಿಂದಿರುಗಿದ್ದಾರೆ. ಭಾರತಕ್ಕೆ ಬರುತ್ತಿದ್ದಂತೆ ನವದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಪ್ರಧಾನಿ ಮೋದಿಯವರು ಸಚಿವರು ಮತ್ತು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಘಟನೆಯ ಕುರಿತ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಇಂದು ಸಂಜೆ ಪ್ರಧಾನಿಗಳ ನಿವಾಸದಲ್ಲಿ ಸಂಪುಟ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ.
ಭಾರತದಲ್ಲಿ ಚಿನ್ನದ ಬೆಲೆ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದೆ. ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಿರುವ ಚೀನಾ, ನಾವೀನ್ಯತೆಯ ವಿಷಯದಲ್ಲಿಯೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಆಭರಣ ಅಂಗಡಿಗಳು ಮತ್ತು ಇತರ ಸಾಲ ನೀಡುವ ಸಂಸ್ಥೆಗಳಲ್ಲಿ ಜನರು ಚಿನ್ನಕ್ಕೆ ಬದಲಾಗಿ ಹಣವನ್ನು ತೆಗೆದುಕೊಳ್ಳುವುದನ್ನು ನೀವು ಸಾಮಾನ್ಯವಾಗಿ ನೋಡುತ್ತೀರಿ. ಆದರೆ ನೀವು ಎಂದಾದರೂ ಚಿನ್ನದ ಎಟಿಎಂ ಬಗ್ಗೆ ಕೇಳಿದ್ದೀರಾ ಅಥವಾ ನೋಡಿದ್ದೀರಾ? ಚೀನಾದ ಅತಿದೊಡ್ಡ ನಗರವಾದ ಶಾಂಘೈನಲ್ಲಿರುವ ದೊಡ್ಡ ಶಾಪಿಂಗ್ ಮಾಲ್‌ನಲ್ಲಿ ಇದೇ ರೀತಿಯದ್ದು ಕಂಡುಬಂದಿದೆ. ಇದು ಶಾಂಘೈನಲ್ಲಿ ಮೊದಲ ಚಿನ್ನದ ಎಟಿಎಂ ಆಗಿದೆ. ಈ ಎಟಿಎಂ ಜನರ ಆಕರ್ಷಣೆಯ ಕೇಂದ್ರವಾಗಿದೆ. https://ainkannada.com/fine-for-not-wearing-a-helmet-these-tips-are-mandatory-when-buying/ 1,200°C ನಲ್ಲಿ ಚಿನ್ನ ಕರಗುವಿಕೆ: ಈ ಎಟಿಎಂ 1,200 ಡಿಗ್ರಿ ಸೆಲ್ಸಿಯಸ್‌ನಲ್ಲಿ ಚಿನ್ನವನ್ನು ಕರಗಿಸುತ್ತದೆ ಮತ್ತು ಚಿನ್ನದ ಶುದ್ಧತೆಯನ್ನು ಅದರ ನೇರ ಬೆಲೆಯೊಂದಿಗೆ ಪ್ರದರ್ಶಿಸುತ್ತದೆ. ಇದಾದ ನಂತರ, ದರಕ್ಕೆ ಅನುಗುಣವಾಗಿ ಎಟಿಎಂನಿಂದ ನಗದು ಹೊರಬರುತ್ತದೆ. ಇದರ ಮೂಲಕವೂ ನೀವು ಬ್ಯಾಂಕಿನಿಂದ ಹಣವನ್ನು ವರ್ಗಾಯಿಸಬಹುದು. ಈ ಎಟಿಎಂ ಗ್ರಾಹಕರಲ್ಲಿ ಬಹಳ ಜನಪ್ರಿಯವಾಗಿದೆ. ಈ ಎಟಿಎಂನಿಂದ…
ಸ್ಯಾಂಡಲ್‌ವುಡ್ ನಟಿ ಅರ್ಚನಾ ಕೊಟ್ಟಿಗೆ ಸ್ಟಾರ್ ಕ್ರಿಕೆಟರ್ ಶರತ್ ಬಿಆರ್ ಹೊಸ ಬಾಳಿಗೆ ಹೆಜ್ಜೆ ಇಟ್ಟಿದ್ದಾರೆ. ಎಂಟು ವರ್ಷದ ಪ್ರೀತಿಗೆ ಈ ಜೋಡಿ ಇಂದು ಮದುವೆ ಮುದ್ರೆ ಒತ್ತಿದೆ. ಕನಕಪುರ ರೋಡ್ ಖಾಸಗಿ ರೆಸಾರ್ಟ್ ವೊಂದರಲ್ಲಿ ಅರ್ಚನಾ-ಶರತ್ ಕಲ್ಯಾಣೋತ್ಸವ ನಡೆದಿದೆ. ನಿನ್ನೆ ರಾತ್ರಿ ನಡೆದ ಅದ್ಧೂರಿ ಆರತಕ್ಷತೆಯಲ್ಲಿ ಕನ್ನಡ ಚಿತ್ರರಂಗದ ತಾರೆಯರು ಹಾಗೂ ಕ್ರಿಕೆಟರ್ ಗಳು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ. ರಿಸೆಪ್ಷನ್‌ಗೆ ಸುದೀಪ್ ಪುತ್ರಿ ಸಾನ್ವಿ ಸುದೀಪ್, ನಟಿ ಹಿತಾ ದಂಪತಿ , ಸಾನ್ಯಾ ಅಯ್ಯರ್, ಸಪ್ತಮಿ ಗೌಡ, ಆಶಿಕಾ ರಂಗನಾಥ್, ಅಮೃತಾ ಅಯ್ಯಂಗರ್, ಯುವರಾಜ್ ಕುಮಾರ್ ಸೇರಿದಂತೆ ಅನೇಕ ನಟ, ನಟಿಯರು, ಭಾಗಿಯಾಗಿದ್ದಾರೆ. ಕ್ರಿಕೆಟರ್ ಗಳಾದ ದೇದವತ್ ಪಡಿಕಲ್, ಪ್ರಸಿದ್ಧ್ ಕೃಷ್ಣ ಸೇರಿದಂತೆ ಹಲವರು ಅರ್ಚನಾ ಶರತ್ ಆರತಕ್ಷತೆಯಲ್ಲಿ ಭಾಗಿಯಾಗಿ ನಟ ಜೋಡಿಗೆ ಶುಭ ಹಾರೈಸಿದ್ದಾರೆ. ಶರತ್ ಹಿನ್ನೆಲೆ! ಶರತ್ ಅವರು 2018ರಲ್ಲಿ ಕೋಲ್ಕತ್ತಾದಲ್ಲಿ ಜಾರ್ಖಂಡ್ ವಿರುದ್ಧ ಕರ್ನಾಟಕ ಪರ ಟ್ವೆಂಟಿ20 ಪಂದ್ಯಕ್ಕೆ ಶರತ್ ಪಾದಾರ್ಪಣೆ ಮಾಡಿದರು.…
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಭಾರತವನ್ನು ಮಾತ್ರವಲ್ಲದೆ ಇಡೀ ಜಗತ್ತನ್ನು ಬೆಚ್ಚಿಬೀಳಿಸಿದೆ. ಈ ದಾಳಿಯಲ್ಲಿ ಅನೇಕ ಪ್ರವಾಸಿಗರು ಸಾವನ್ನಪ್ಪಿದರು. ಅನೇಕ ಜನರು ಗಂಭೀರವಾಗಿ ಗಾಯಗೊಂಡರು. ಈ ಹಿನ್ನೆಲೆಯಲ್ಲಿ ಸಚಿವ ಅಮಿತ್ ಶಾ ಕಾಶ್ಮೀರ ತಲುಪಿದ್ದಾರೆ. ಅಲ್ಲದೆ, ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತು ಪ್ರಧಾನಿ ಮೋದಿ ನಡುವೆ ದೂರವಾಣಿ ಸಂಭಾಷಣೆ ನಡೆಯಿತು. ಟ್ರಂಪ್ ಈ ದಾಳಿಯನ್ನು ಖಂಡಿಸಿದರು. ಮೃತರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಲಾಗಿದೆ. ಈ ಸಮಯದಲ್ಲಿ ಪ್ರಧಾನಿ ಮೋದಿ ಮತ್ತು ಭಾರತದ ಜನರೊಂದಿಗೆ ನಿಲ್ಲುವುದಾಗಿ ಅಮೆರಿಕ ಅಧ್ಯಕ್ಷರು ಹೇಳಿದರು. ರಷ್ಯಾ ಅಧ್ಯಕ್ಷ ಪುಟಿನ್ ಕೂಡ ಭಾರತದ ಬೆಂಬಲಕ್ಕೆ ನಿಂತರು. https://ainkannada.com/fine-for-not-wearing-a-helmet-these-tips-are-mandatory-when-buying/ ಈ ಘಟನೆಗೆ ಕಾರಣರಾದವರನ್ನು ಶಿಕ್ಷಿಸಬೇಕು ಎಂದು ಪುಟಿನ್ ಹೇಳಿದರು. ಭಾರತ ಭೇಟಿಯಲ್ಲಿರುವ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಕೂಡ ಈ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಭಯೋತ್ಪಾದಕ ದಾಳಿಯನ್ನು ಹೇಡಿತನದ ಕೃತ್ಯ ಎಂದು ಕರೆದರು. ಮೃತರ ಕುಟುಂಬಗಳಿಗೆ ಸೋನಿಯಾ ಗಾಂಧಿ ಸಂತಾಪ ಸೂಚಿಸಿದ್ದಾರೆ.…
ಕಲಘಟಗಿ: ತಾಲೂಕಿನ ದುಮ್ಮವಾಡ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಸಾರಾಯಿ ಮಾರಾಟ ತಡೆಗಟ್ಟಲು ಆಗ್ರಹಿಸಿ ಗ್ರಾಮ ಪಂಚಾಯತ್ ಮತ್ತು ತಾಲೂಕು ಅಬಕಾರಿ ಇಲಾಖೆಗೆ ಜನಹೋರಾಟ ಸಮಿತಿಯಿಂದ ಮನವಿ ಸಲ್ಲಿಸಲಾಯಿತು. https://ainkannada.com/fine-for-not-wearing-a-helmet-these-tips-are-mandatory-when-buying/ ಈ ವೇಳೆ ಮಾತನಾಡಿದ ಸಮಿತಿ ಸದಸ್ಯರು, ಗ್ರಾಮದಲ್ಲಿ ಬೀದಿಗೊಂದು ಅಕ್ರಮ ಸಾರಾಯಿ ಅಂಗಡಿಗಳು ತೆರೆದುಕೊಂಡಿವೆ. ಮನೆಗಳಲ್ಲಿ, ಪೆಟ್ಟಿಗೆ ಅಂಗಡಿಗಳಲ್ಲಿ ಮತ್ತು ಕಿರಾಣಿ ಅಂಗಡಿ ಗಳಲ್ಲಿ ಸಾರಾಯಿ ಇಟ್ಟು ಮಾರುತ್ತಿರುವುದು ಕಂಡುಬಂದಿದೆ. ಅಬಕಾರಿ ಇಲಾಖೆ ಅದನ್ನು ತಡೆಗಟ್ಟದೇ ಇರುವುದು ಗ್ರಾಮಸ್ಥರಿಗೆ ಬೇಸರವುಂಟುಮಾಡಿದೆ ಎಂದರು. ತಾಲೂಕಿನದುಮ್ಮವಾಡಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಎಷ್ಟೋ ಕುಟುಂಬಗಳನ್ನು ಸಾರಾಯಿ ಬೀದಿಗೆ ತಳ್ಳಿದೆ. ಆಘಾತದ ಅಂಶವೆಂದರೆ ಊರಿನಲ್ಲೇ ಸುಲಭವಾಗಿ ಸಾರಾಯಿ ಸಿಗುತ್ತಿರುವುದರಿಂದ ಅಪ್ರಾಪ್ತ ಬಾಲಕರು ಕುಡಿತದ ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ. ಕುಡಿತ ಮತ್ತಿನಲ್ಲಿ ಮನೆಯಲ್ಲಿನ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಇದರಿಂದ ಸಂಸಾರಗಳಲ್ಲಿ ಬಿರುಕುಂಟಾಗಿ ಕುಟುಂಬಗಳು ನಾಶವಾಗಿವೆ. ಈ ಕೂಡಲೇ ಗ್ರಾಮದಲ್ಲಿನ ಅಕ್ರಮ ಸಾರಾಯಿ ಮಾರಾಟ ತಡೆಗಟ್ಟಬೇಕೆಂದು ಎಂದರು. ಈ ಸಂದರ್ಭದಲ್ಲಿ ಜನ ಹೋರಾಟ ಸಮಿತಿಯ ಸದಸ್ಯರಾದ ಮಧುಲತಾ ಗೌಡರ್, ದೇವಮ್ಮ ದೇವತ್ಕಲ್,…
ನವದೆಹಲಿ: ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್ ಹಲ್ಲುಗಾವಲು ಪ್ರದೇಶದಲ್ಲಿ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯುತ್ತಿದ್ದ ಪ್ರವಾಸಿಗರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 28 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ದಾಳಿಯ ಬಗ್ಗೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://ainkannada.com/fine-for-not-wearing-a-helmet-these-tips-are-mandatory-when-buying/ “ಘಟನೆ ಬಗ್ಗೆ ಗೃಹ ಮಂತ್ರಿ ಅಮಿತ್ ಶಾ ಅವರೊಂದಿಗೆ ಮಾತನಾಡಿದೆ. ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಾಗೂ ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ತಾರಿಕ್ ಕರ್ರಾ ಅವರಿಂದ ಮಾಹಿತಿ ಪಡೆದಿದ್ದೇನೆ. ಭಯಾನಕ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸದ್ಯದ ಪರಿಸ್ಥಿತಿ ಬಗ್ಗೆ ವಿಷಯ ತಿಳಿದಿದ್ದೇನೆ. ” ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಕುಟುಂಬಗಳಿಗೆ ನ್ಯಾಯ ಸಿಗಬೇಕು. ನಮ್ಮ ಸಂಪೂರ್ಣ ಬೆಂಬಲ ಅವರಿಗಿರಬೇಕು” ಎಂದು ಘಟನೆ ಕುರಿತಂತೆ ಇಂದು ಬೆಳಗ್ಗೆ 6:30 ರ ಸುಮಾರಿಗೆ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್‌ನಲ್ಲಿ ಅವರು ಪೋಸ್ಟ್ ಮಾಡಿದ್ದಾರೆ.