ಬೆಂಗಳೂರು: ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಕಿ ರೈ ಬಹುಕಾಲದ ಗನ್ ಮ್ಯಾನ್ ವಿಠ್ಠಲನ್ನ ನಿನ್ನೆ ರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಡದಿ ಠಾಣೆ ಪೊಲೀಸರು, ಮನ್ನಪ್ಪ ವಿಠ್ಠಲ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸ್ವಯಂ ದಾಳಿ ಮಾಡಿಸಿಕೊಂಡು ಇಕ್ಕಟ್ಟಿಗೆ ಸಿಲುಕಿದ್ನಾ ರಿಕ್ಕಿ ರೈ ಎಂಬ ಅನುಮಾನ ಪೊಲೀಸರಿಗೂ ಮೂಡಿದೆ. ರಿಕ್ಕಿ ರೈಗೆ ಮೂವರು ಗನ್ ಮ್ಯಾನ್ಗಳಿದ್ದು, ತನಿಖೆ ವೇಳೆ ಮೂವರು ವಿಭಿನ್ನ ಹೇಳಿಕೆ ನೀಡಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ. ಹೀಗಾಗಿ ರಿಕ್ಕಿ ರೈ ಗನ್ಮ್ಯಾನ್ಗಳ ಮೇಲೆ ಪೊಲೀಸರಿಗೆ ಅನುಮಾನ ಮೂಡಿದೆ ಎನ್ನಲಾಗಿದೆ. https://ainkannada.com/do-you-want-to-always-look-young-then-follow-these-tips/ ಅಷ್ಟೇ ಅಲ್ಲ ಪ್ರಕರಣವನ್ನು ಡೈವರ್ಟ್ ಮಾಡಲು, ಮತ್ತಪ್ಪ ರೈ 2ನೇ ಪತ್ನಿ ಅನುರಾಧ, ರಾಕೇಶ್ ಮಲ್ಲಿ ಸೇರಿದಂತೆ ನಾಲ್ವರ ವಿರುದ್ಧ ದೂರು ಕೊಟ್ಟರೇ ಎಂಬ ಶಂಕೆ ಪೊಲೀಸರಿಗೆ ಮೂಡಿದೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ, ರಿಕ್ಕಿ ರೈ ಮನೇಲಿಯಲ್ಲಿನ ಗನ್…
Author: Author AIN
ನವದೆಹಲಿ: ಪ್ರಜಾಪ್ರಭುತ್ವವು ಜನರಿಗೆ ಮತ್ತು ಚುನಾಯಿತ ಪ್ರತಿನಿಧಿಗಳ ರಕ್ಷಣೆಯ ಭಂಡಾರವಾಗಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ. ಸಾರ್ವಜನಿಕ ಪ್ರತಿನಿಧಿಗಳು ಚುನಾವಣೆಗಳ ಮೂಲಕ ಕೆಲವೊಮ್ಮೆ ತೀವ್ರವಾಗಿ ಹೊಣೆಗಾರರಾಗಿರುತ್ತಾರೆ. ತುರ್ತು ಪರಿಸ್ಥಿತಿಯನ್ನು ವಿಧಿಸಿದ್ದಕ್ಕೆ ಪ್ರಧಾನ ಮಂತ್ರಿಯನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತಿತ್ತು. ಪ್ರಜಾಪ್ರಭುತ್ವವು ಜನರಿಗೆ ಮತ್ತು ಚುನಾಯಿತ ಪ್ರತಿನಿಧಿಗಳ ರಕ್ಷಣೆಯ ಭಂಡಾರವಾಗಿದೆ ಎಂದು ಅಭಿಪ್ರಾಯಪಟ್ಟರು. https://ainkannada.com/do-you-want-to-always-look-young-then-follow-these-tips/ ಸಂಸತ್ತನ್ನು ಮೀರಿದ ಅಧಿಕಾರದ ಬಗ್ಗೆ ಸಂವಿಧಾನದಲ್ಲಿ ಯಾವುದೇ ಉಲ್ಲೇಖವಿಲ್ಲ. ಸಂಸತ್ತು ಸರ್ವೋಚ್ಚ. ಅದು ದೇಶದ ಪ್ರತಿಯೊಬ್ಬ ವ್ಯಕ್ತಿಯಂತೆ ಸರ್ವೋಚ್ಚವಾಗಿದೆ ಎಂದು ಹೇಳಿದರು. ಧನಕರ್ ಅವರು ಈ ರೀತಿಯಾಗಿ ಹೇಳುತ್ತಿರುವುದು ಎರಡನೇ ಬಾರಿ. ಈ ಹಿಂದೆ ಕೋರ್ಟ್‌ಗಳು ಸೂಪರ್ ಪಾರ್ಲಿಮೆಂಟ್ ಆಗಬಾರದು. ಈಗ ಕಾರ್ಯಾಂಗ ಮತ್ತು ಶಾಸಕಾಂಗದ ಜಾಗದಲ್ಲಿ ನ್ಯಾಯಾಂಗದ ಪ್ರವೇಶವಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
ಬೆಂಗಳೂರು: ಬೆಂಗಳೂರಿನಲ್ಲಿ ಡಿಆರ್‌ಡಿಓ ವಿಂಗ್ ಕಮಾಂಡರ್ ಮೇಲೆ ಹಲ್ಲೆ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಹೊಸ ತಿರುವು ಪಡೆದುಕೊಂಡಿದೆ. ಸಿಸಿಟಿವಿ ದೃಶ್ಯಾವಳಿಗಳು ವಿಂಗ್ ಕಮಾಂಡರ್ ಮೊದಲು ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿರುವುದನ್ನು ಬಹಿರಂಗಪಡಿಸಿವೆ, ಆರಂಭಿಕ ವರದಿಗಳಿಗೆ ವಿರುದ್ಧವಾಗಿದೆ. ಇದೀಗ ಟೆಕ್ಕಿ ವಿಕಾಸ್ ಕುಮಾರ್ ನೀಡಿದ ದೂರಿನ ಹಾಗೂ ಘಟನಾ ಸ್ಥಳದ ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ಧವೇ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ. ಆದರೆ, ಎಫ್ಐಆರ್ನಲ್ಲಿ ನೇರವಾಗಿ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಹೆಸರು ಉಲ್ಲೇಖಿಸದೇ ಇರುವುದಕ್ಕೆ ಸ್ಥಳೀಯರಿಂದ ಆಕ್ಷೇಪ ವ್ಯಕ್ತವಾಗಿದೆ. https://ainkannada.com/do-you-want-to-always-look-young-then-follow-these-tips/ ದೂರುದಾರರಾದ ವಿಕಾಸ ಕುಮಾರ್ ದಿನಾಂಕ 21 ರಂದು ಬೆಳಿಗ್ಗೆ, ಸುಮಾರು 6-20 ರ ಸಮಯದಲ್ಲಿ ತನ್ನ ಸ್ನೇಹಿತನ ಬೈಕ್ ವಾಪಸ್ಸು ನೀಡುವ ಸಂಬಂಧ ಅವರ ಮನೆಗೆ ಹೋಗುತ್ತಿದ್ದ ಸಮಯದಲ್ಲಿ ಮರೂನ್ ಕಲರ್ ಮಾರುತಿ ಸುಜುಕಿ ಎರ್ಟಿಗಾ ಕಾರ್ನಲ್ಲಿ ಬಂದ ವ್ಯಕ್ತಿ ದ್ವಿ ಚಕ್ರ ವಾಹನಕ್ಕೆ ಟಚ್ ಮಾಡಿದ್ದಾರೆ.…
ಅಲ್ಲು ಅರ್ಜುನ್, ಸಲ್ಮಾನ್ ಖಾನ್ ಹಾಗೂ´ ಶಾರುಖ್ ಖಾನ್..ಈ ಮೂವರು ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ಸ್. ಈ ಬಿಗೆಸ್ಟ್ ಸ್ಟಾರ್ಸ್ ತಮ್ಮ ಚಿತ್ರಗಳಿಗೆ ಕೋಟಿ ಕೋಟಿ ಸಂಭಾವನೆ ಪಡೆಯುತ್ತಾರೆ. ಆದ್ರೆ ಅವರೆಲ್ಲರೂ ಮೀರಿಸಿ ಅಧಿಕ ಮೊತ್ತವನ್ನು ಜೇಬಿಗಿಳಿಸಿಕೊಳ್ಳೋದು ಆ ಸ್ಟಾರ್ ಡೈರೆಕ್ಟರ್.ಭಾರತೀಯ ಚಿತ್ರರಂಗದಲ್ಲಿ ಸೋಲೇ ಕಾಣದ ನಿರ್ದೇಶಕ ಎನಿಸಿಕೊಂಡಿರುವ ರಾಜಮೌಳಿ ಸಂಭಾವನೆ ವಿಷಯವಾಗಿ ಈಗ ಸುದ್ದಿಯಲ್ಲಿದ್ದಾರೆ. ಬಾಲಿವುಡ್ ಸೂಪರ್ ಸ್ಟಾರ್ಸ್ ಗಳನ್ನೇ ಸಂಭಾವನೆ ವಿಚಾರದಲ್ಲಿ ಜಕ್ಕಣ್ಣ ಬೀಟ್ ಮಾಡಿದ್ದಾರೆ. ಒಂದು ಸಿನಿಮಾಗೆ ಮೌಳಿ ಬರೋಬ್ಬರಿ 200 ಕೋಟಿ ಹಣವನ್ನು ಜೇಬಿಗಿಳಿಸಿಕೊಳ್ಳುತ್ತಾರಂತೆ. ಸಿನಿಮಾದ ಶೇರ್, ಸಿನಿಮಾದ ರೈಟ್ಸ್ ಹೀಗೆ ಎಲ್ಲದರಲ್ಲಿಯೂ ಹಣ ಪಡೆಯುತ್ತಾರಂತೆ. ಶಾರುಖ್ ಖಾನ್, ಸಲ್ಮಾನ್ ಖಾನ್ ಒಂದು ಸಿನಿಮಾಗೆ 150ರಿಂದ 180 ಕೋಟಿ ಹಣ ಪಡೆಯುತ್ತಾರೆ. ಆದರೆ ರಾಜಮೌಳಿ 200 ಕೋಟಿ ಸಂಭಾವನೆ ಪಡೆಯುತ್ತಾರಂತೆ. ರಾಜಮೌಳಿ ಬಳಿಕ ಸಂದೀಪ್ ರೆಡ್ಡಿ ವಂಗಾ, ಪ್ರಶಾಂತ್ ನೀಲ್ ಅತಿ ಹೆಚ್ಚು ಸಂಭಾವನೆ ಪಡೆಯುವ ನಿರ್ದೇಶಕರ ಪಟ್ಟಿಯಲ್ಲಿದ್ದಾರೆ. ಸದ್ಯ ಮಹೇಶ್ ಬಾಬು ಜೊತೆ ರಾಜಮೌಳಿ…
ಬೆಂಗಳೂರು: ಬಿಡದಿ ಫಾರ್ಮ್ ಹೌಸ್ ಬಳಿ ಮೂವರು ದುಷ್ಕರ್ಮಿಗಳು ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿ ಎಸ್ಕೇಪ್ ಆಗಿದ್ದರು. ಪರಿಣಾಮ ರಿಕ್ಕಿ ರೈ ಅವರ ಮೂಗು ಹಾಗೂ ಬಲ ಬುಜಕ್ಕೆ ಗುಂಡು ತಗುಲಿತ್ತು. ಆ ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇದೀಗ ರಿಕ್ಕಿ ರೈ ಮೇಲೆ ನಡೆದಿರುವ ಶೂಟೌಟ್ ಪ್ರಕರಣದಲ್ಲಿ ಬಿಡದಿ ಪೊಲೀಸರ ತನಿಖೆ ಚುರುಕಾಗಿದೆ. ಇದರ ನಡುವೆ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾ ರೈ ವಿದೇಶಕ್ಕೆ ತೆರಳಿರುವುದು ಬೆಳಕಿಗೆ ಬಂದಿದೆ. ರಿಕ್ಕಿ ರೈ ಮೇಲಿನ ಶೂಟೌಟ್ ಪ್ರಕರಣ ಸಂಬಂಧ ಅವರ ಕಾರು ಚಾಲಕ ಬಸವರಾಜು ನೀಡಿದ ದೂರಿನ ಮೇರೆಗೆ ಬಿಡದಿ ಪೊಲೀಸ್ ಠಾಣೆಯಲ್ಲಿ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾ ರೈ ಮೇಲೂ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಅನುರಾಧಾ ರೈ ಸಿಮ್ ಕಾರ್ಡ್ ವಿಳಾಸ ಆಧರಿಸಿ ನೋಟಿಸ್ ನೀಡಲು ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿರುವ ಅವರ ಮನೆಗೆ ತೆರಳಿದ್ದರು. https://ainkannada.com/do-you-want-to-always-look-young-then-follow-these-tips/ ಆದರೆ, ಅನುರಾಧಾ ರೈ ಆ ಮನೆಯನ್ನು…
ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಮಗ ರಿಕ್ಕಿ ರೈ ಮೇಲೆ ನಡೆದಿರುವ ಶೂಟೌಟ್ ಪ್ರಕರಣದಲ್ಲಿ ಬಿಡದಿ ಪೊಲೀಸರ ತನಿಖೆ ಚುರುಕಾಗಿದೆ. ಇದರ ನಡುವೆ ರಿಕ್ಕಿ ರೈ ಮೇಲೆ ನಡೆದಿದ್ದ ಗುಂಡಿನ ದಾಳಿ ಕೇಸ್ ಫೇಕ್ ಎನ್ನುವ ಶಂಕೆ ವ್ಯಕ್ತವಾಗಿದೆ. ರಿಕ್ಕಿ ರೈಗೆ ಒಂದು ಕಾಲದಲ್ಲಿ ಗನ್ ಮ್ಯಾನ್ ಆಗಿದ್ದ ವಿಠ್ಠಲ ಎಂಬಾತ ಕಾರಿನ ಮೇಲೆ ಫೈರಿಂಗ್ ಮಾಡಿದ್ದಾನೆ. ಎಂಬ ಆರೋಪ ಕೇಳಿ ಬಂದಿದೆ. ಮಾಜಿ ಗನ್ ಮ್ಯಾನ್ ವಿಠ್ಠಲನನ್ನು ಬಿಡದಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. https://ainkannada.com/do-you-want-to-always-look-young-then-follow-these-tips/ ವಿಠ್ಠಲ ಬಹುಕಾಲದವರೆಗೆ ರಿಕ್ಕಿ ರೈನ ಗನ್ ಮ್ಯಾನ್ ಆಗಿದ್ದ. ಅನಾರೋಗ್ಯ ಹಿನ್ನೆಲೆ ರಿಕ್ಕಿ ಫಾರ್ಮ್ ಹೌಸ್ ನಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದಾನೆ. ಶೂಟೌಟ್ ರಾತ್ರಿ ವಿಠ್ಠಲ, ರಿಕ್ಕಿ ಜೊತೆಗೆ ಪರ್ಸನಲ್ ಆಗಿ ಮಾತನಾಡಿದ್ದಾನೆ ಎನ್ನಲಾಗಿದೆ. ರಿಕ್ಕಿ ಕಾರು ಹೊರಡುವ ಸ್ವಲ್ಪ ಸಮಯದ ಮುನ್ನ ವಿಠ್ಠಲ ಫಾರ್ಮ್ ಹೌಸ್‌ನಿಂದ ಹೊರಗೆ ಹೋಗಿದ್ದಾನೆ. ಶೂಟೌಟ್ ನಡೆದು ರಿಕ್ಕಿ ಆಸ್ಪತ್ರೆ ಸೇರಿದ ಬಳಿಕ ವಿಠ್ಠಲ ಫಾರ್ಮ್…
ಬೆಂಗಳೂರು: ಬೆಂಗಳೂರಿನ ಸಿವಿ ರಾಮನ್ ನಗರದ, ಗೋಪಾಲನ್ ಗ್ರ್ಯಾಂಡ್ ಮಾಲ್ ಬಳಿ ವಿಂಗ್ ಕಮಾಂಡರ್ ಬೋಸ್ ಮೇಲೆ ಹಲ್ಲೆ ನಡೆದಿದೆ ಎಂಬ ಸುದ್ದಿ ಭಾರೀ ಸದ್ದು ಮಾಡಿದೆ. ಇದೀಗ ವಿಂಗ್ ಕಮಾಂಡರ್ ಮೇಲೆ ಯುವಕ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಯುವಕ ವಿಕಾಸ್ ತಾಯಿ ಪ್ರಕರಣದಲ್ಲಿ ಮಗನದ್ದು ಯಾವುದೇ ತಪ್ಪು ಇಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೈಕಿನ ಸೈಲೆನ್ಸರ್‌ಗೆ ಕಾರು ಟಚ್ ಆಗಿದೆ. ಈ ವೇಳೆ ಹಿಂದಿಯಲ್ಲಿ ಬೈದಿದ್ದಾರೆ. ಹಿಂದಿಯಲ್ಲಿ ಹೇಳಿದ್ದು ಅರ್ಥ ಆಗಿಲ್ಲ ಎಂದು ಹೇಳಿದ್ದಕ್ಕೆ ಗಲಾಟೆ ಮಾಡಿದ್ದಾರೆ. ಮಹಿಳೆ ಬಳಿ ಕೇಳಬಾರದೆಂದು ಗಂಡನ ಬಳಿ ಕೇಳಿದ್ದಾನೆ. https://ainkannada.com/do-you-want-to-always-look-young-then-follow-these-tips/ ವಿಂಗ್ ಕಮಾಂಡರ್‌ನನ್ನು ಕೇಳಿದ್ದಕ್ಕೆ ಮಗನನ್ನು ತಳ್ಳಿದ್ದಾರೆ. ಕೈ ಕಚ್ಚಿ, ಮೈ ಪರಚಿದ್ದಾರೆ. ಬೈಕ್ ಅನ್ನು ಎತ್ತಿಹಾಕಿ ಕಾಲಿಂದ ಒದ್ದಿದ್ದಾರೆ. ನಮ್ಮ ಮೇಲೆ ಹಲ್ಲೆ ಮಾಡಿ ನಮ್ಮ ಮೇಲೆಯೇ ಗೂಬೆ ಕೂರಿಸಿದ್ದಾರೆ. ಇದು ಎಷ್ಟು ನ್ಯಾಯ ಎಂದು ಯುವಕನ ತಾಯಿ ಬೇಸರ ವ್ಯಕ್ತಪಡಿಸಿದ್ದಾರೆ. ಈ…
ಪ್ರಪಂಚದಾದ್ಯಂತದ ಗೂಗಲ್ ಕಂಪನಿಗಳಲ್ಲಿ ವಜಾಗೊಳಿಸುವಿಕೆ ಮುಂದುವರೆದಿದೆ. ಭಾರತವು ಪ್ರಸ್ತುತ ಮತ್ತೊಂದು ಸುತ್ತಿನ ವಜಾಗೊಳಿಸುವಿಕೆಗೆ ಸಿದ್ಧತೆ ನಡೆಸುತ್ತಿದೆ. ಈ ಬಾರಿ ಉದ್ಯೋಗ ಕಡಿತವು ಭಾರಿ ಪ್ರಮಾಣದಲ್ಲಿರಲಿದೆ ಎಂದು ವರದಿಯಾಗಿದೆ. ಈ ವಜಾಗೊಳಿಸುವಿಕೆಗಳು ಮುಖ್ಯವಾಗಿ ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿರುವ ಗೂಗಲ್ ಕಚೇರಿಗಳಲ್ಲಿ ನಡೆಯಲಿವೆ ಎಂದು ತೋರುತ್ತದೆ. ಆದಾಗ್ಯೂ, ಗೂಗಲ್ ಭಾರತದಲ್ಲಿ ತನ್ನ ವಜಾಗೊಳಿಸುವಿಕೆಯನ್ನು ಅಧಿಕೃತವಾಗಿ ದೃಢಪಡಿಸದಿದ್ದರೂ, ಬಿಸಿನೆಸ್ ಸ್ಟ್ಯಾಂಡರ್ಡ್ ವರದಿಯ ಪ್ರಕಾರ ಮುಂದಿನ ವಾರದ ಆರಂಭದಲ್ಲಿ ವಜಾಗೊಳಿಸುವ ಪ್ರಕ್ರಿಯೆಯು ಪ್ರಾರಂಭವಾಗಬಹುದು. ಗೂಗಲ್‌ನ ಪ್ಲಾಟ್‌ಫಾರ್ಮ್‌ಗಳು ಮತ್ತು ಸಾಧನಗಳ ವಿಭಾಗದ ಇತ್ತೀಚಿನ ಪುನರ್ರಚನೆಯ ನಂತರ ಇತ್ತೀಚಿನ ಸುದ್ದಿ ಬಂದಿದೆ. ಪರಿಣಾಮವಾಗಿ, ಪ್ರಪಂಚದಾದ್ಯಂತದ ಗೂಗಲ್ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ನೂರಾರು ಉದ್ಯೋಗಿಗಳನ್ನು ವಜಾಗೊಳಿಸಲಾಗುವುದು. ಆಂಡ್ರಾಯ್ಡ್, ಪಿಕ್ಸೆಲ್ ಮತ್ತು ಕ್ರೋಮ್ ಬ್ರೌಸರ್ ಅನ್ನು ನಿರ್ವಹಿಸುವ ತನ್ನ ಪ್ಲಾಟ್‌ಫಾರ್ಮ್‌ಗಳು ಮತ್ತು ಸಾಧನಗಳ ಘಟಕದಿಂದ ನೂರಾರು ಜನರನ್ನು ವಜಾಗೊಳಿಸಲು ಅದು ಸಿದ್ಧತೆ ನಡೆಸುತ್ತಿದೆ. https://ainkannada.com/do-you-want-to-always-look-young-then-follow-these-tips/ ಆದಾಗ್ಯೂ, ಭಾರತದಲ್ಲಿ ಈ ವಿಷಯದ ಬಗ್ಗೆ ಗೂಗಲ್ ಸ್ವಲ್ಪ ಹೆಚ್ಚು ಗಮನಹರಿಸುತ್ತಿದೆ ಎಂದು ವರದಿ ಬಹಿರಂಗಪಡಿಸಿದೆ. ಇದು…
ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್ಎಲ್) 2025 ರ ಸಂದರ್ಭದಲ್ಲಿ ಲಾಹೋರ್ ಖಲಂದರ್ಸ್ ತಂಡದ ನಾಯಕಿ ಶಾಹೀನ್ ಅಫ್ರಿದಿ ತಮ್ಮ ತಂಡದ ಪರವಾಗಿ ವಿಶೇಷ ಉಡುಗೊರೆಯನ್ನು ಪಡೆದರು. ಲೀಗ್‌ನಲ್ಲಿನ ಪಂದ್ಯಗಳ ನಂತರ ಕರಾಚಿ ಕಿಂಗ್ಸ್ ತಮ್ಮ ಆಟಗಾರರಿಗೆ ವಿಶೇಷ ಉಡುಗೊರೆಗಳೊಂದಿಗೆ ಎಲ್ಲರ ಗಮನ ಸೆಳೆಯುತ್ತಿದೆ ಎಂದು ತಿಳಿದಿದೆ. ಆದಾಗ್ಯೂ, ಲಾಹೋರ್ ಖಲಂದರ್ಸ್ ಒಂದು ಹೆಜ್ಜೆ ಮುಂದೆ ಹೋಗಿ ತಮ್ಮ ನಾಯಕಿ ಶಾಹೀನ್ ಅಫ್ರಿದಿಗೆ ಅದ್ಭುತ ಉಡುಗೊರೆಯನ್ನು ನೀಡಿದರು. ಎಡಗೈ ವೇಗಿಯು ಕಸ್ಟಮೈಸ್ ಮಾಡಿದ 24 ಕ್ಯಾರೆಟ್ ಚಿನ್ನದ ಲೇಪಿತ ಐಫೋನ್ 16 ಪ್ರೊ ಅನ್ನು ಪಡೆದರು. ಆದಾಗ್ಯೂ, ಇದು ಅನೇಕ ಜನರನ್ನು ಆಶ್ಚರ್ಯಗೊಳಿಸಿತು. https://ainkannada.com/do-you-want-to-always-look-young-then-follow-these-tips/ ಈ ವಿಡಿಯೋವನ್ನು ಲಾಹೋರ್ ಖಲಂದರ್ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಕೊನೆಯಲ್ಲಿ, ಸಹ ಆಟಗಾರನು ಈ ಬಹುಮಾನದೊಂದಿಗೆ ಮೈದಾನದಿಂದ ಹೊರನಡೆಯುವುದನ್ನು ಮತ್ತು “ಯೇ ಹೇ ಹೈ (ಇದು ಭಾರವಾಗಿದೆ)” ಎಂದು ಹೇಳುವುದನ್ನು ಕಾಣಬಹುದು. ಅಲ್ಲೇ ಇದ್ದ ಹ್ಯಾರಿಸ್ ರೌಫ್ ತಮ್ಮ ಅಸೂಯೆ ವ್ಯಕ್ತಪಡಿಸುತ್ತಾ “ಇಲ್ಲ ಸಹೋದರ,…
ಸೌದಿ ಅರೇಬಿಯಾ ಸಾಮ್ರಾಜ್ಯದ ರಾಜ ಮತ್ತು ಪ್ರಧಾನ ಮಂತ್ರಿ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೌದಿ ಅರೇಬಿಯಾಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಮತ್ತು ಸೌದಿ ಅರೇಬಿಯಾದ ಸ್ನೇಹವನ್ನು ಬಲಪಡಿಸುವ ಮತ್ತು ವ್ಯಾಪಾರ, ರಕ್ಷಣೆ, ಹೂಡಿಕೆ, ಇಂಧನ ಕ್ಷೇತ್ರಗಳಲ್ಲಿ ಸಂಬಂಧಗಳನ್ನು ಗಾಢವಾಗಿಸುವ ಗುರಿಯನ್ನು ಈ ಭೇಟಿ ಹೊಂದಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. 2023ರ ಸೆಪ್ಟೆಂಬರ್‌ನಲ್ಲಿ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಹಾಗೂ ಭಾರತ-ಸೌದಿ ಅರೇಬಿಯಾ ಕಾರ್ಯತಂತ್ರದ ಪಾಲುದಾರಿಕೆ ಮಂಡಳಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಲು ಸೌದಿ ಅರೇಬಿಯಾ ಪ್ರಧಾನಿ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರು ನವದೆಹಲಿಗೆ ಭೇಟಿ ನೀಡಿದ್ದರು. ಅದಾದ ಬಳಿಕ ಪ್ರಧಾನಿ ಮೋದಿ ಸೌದಿ ಅರೇಬಿಯಾಗೆ ಭೇಟಿ ನೀಡಲಿದ್ದಾರೆ. https://ainkannada.com/do-you-want-to-always-look-young-then-follow-these-tips/ ಸದ್ಯ ಈ ಭೇಟಿಯಲ್ಲಿ ಕಾರ್ಯತಂತ್ರದ ಪಾಲುದಾರಿಕೆ ಜೊತೆಗೆ ರಾಜಕೀಯ, ರಕ್ಷಣೆ, ಭದ್ರತೆ, ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಆರೋಗ್ಯ, ಶಿಕ್ಷಣ, ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳ ಕುರಿತು…