ಬೆಂಗಳೂರು: ರೀಲ್ಸ್ ಹುಚ್ಚಿಗೆ ಮಚ್ಚು ಹಿಡಿದು ಪೋಸ್ ಕೊಟ್ಟಿದ್ದ ಮಚ್ಚೇಶ್ವರರಿಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಜಾಮೀನು ರಜತ್ ಹಾಗೂ ವಿನಯ್ ಗೌಡಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಇದಕ್ಕೂ ಮುನ್ನ, ಕೋರ್ಟ್ ಇಬ್ಬರು ಆರೋಪಿಗಳಿಗೆ ಏಪ್ರಿಲ್ 9ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. 10ಸಾವಿರ ರೂ. ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಿ ಜಾಮೀನು ವಿಧಿಸಿದೆ. ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಿದ ವೇಳೆ ಪೊಲೀಸರ ಪರ ವಾದ ಮಾಡಿದ ವಕೀಲ ಚಂದ್ರೇಗೌಡ, ಆರೋಪಿಗಳು ಸಾಕ್ಷ್ಯನಾಶ ಮಾಡಿದ್ದು ಅವರಿಗೆ ಜಾಮೀನು ನೀಡಬಾರದು ಎಂದು ವಾದಿಸಿದರು. ಆದರೆ ಆರೋಪಿಗಳ ಪರ ವಾದ ಮಂಡಿಸಿದ ವಕೀಲ, ಸರ್ಚ್ ವಾರಂಟ್ ತೆಗೆದುಕೊಂಡು ಮನೆಯನ್ನೆಲ್ಲಾ ಸರ್ಚ್ ಮಾಡಿದ್ದಾರೆ. ಮುಂದೆ ಏನೇ ಇದ್ದರೂ ಸಹಕಾರ ನೀಡ್ತಾರೆ. ವಿನಯ್ ಗೆ ಭಾನುವಾರ ಚಿತ್ರೀಕರಣ ಸಹ ಇದೆ. ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆ. ಅವರು ಚಿತ್ರೀಕರಣದಲ್ಲಿ ಭಾಗಿ ಆಗಬೇಕಾದ ಅವಶ್ಯಕತೆ ಇದೆ. ಅವರಿಗೆ ಕಣ್ಣಿನ ಸಮಸ್ಯೆಯೂ ಇದೆ.…
Author: Author AIN
ನವದೆಹಲಿ: ಕೇತಮಾರನ ಹಳ್ಳಿ ಭೂ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರಿಗೆ ಹಿನ್ನಡೆಯಾಗಿದೆ. ಹೌದು ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗೆ ತಡೆ ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿ ಆದೇಶ ಹೊರಡಿಸಿದೆ. ಆರು ಎಕರೆ ಒತ್ತುವರಿ ಸಂಬಂಧ ಸ್ಥಳೀಯ ತಹಸೀಲ್ದಾರ್ ನೀಡಿರುವ ನೋಟಿಸ್ ಪ್ರಶ್ನಿಸಿ ಎಚ್.ಡಿ. ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯು ಸೋಮವಾರ ನ್ಯಾ.ಎನ್.ಎಸ್. ಸಂಜಯಗೌಡ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆ ನಡೆದಿತ್ತು. ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಉದಯ್ ಹೊಳ್ಳ, ಅಧಿಕಾರ ವ್ಯಾಪ್ತಿ ಇಲ್ಲದಿದ್ದರೂ ತಹಸೀಲ್ದಾರ್ ಅರ್ಜಿದಾರರಿಗೆ ನೋಟಿಸ್ ನೀಡಿದ್ದಾರೆ. https://ainkannada.com/according-to-vastu-sleep-in-this-direction-you-will-get-unexpected-luck-in-life/ 1985 ರಲ್ಲಿಯೇ ಕ್ರಯಪತ್ರವಾಗಿರುವ ಜಮೀನಿಗೆ ಈಗ ನೋಟಿಸ್ ನೀಡಲಾಗಿದೆ. ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ. ಹಾಗಾಗಿ, ತಹಸೀಲ್ದಾರ್ ನೋಟಿಸ್‌ಗೆ ತಡೆ ನೀಡಬೇಕು ಎಂದು ಕೋರಿದ್ದರು. ಹೀಗಾಗಿ ಹೈಕೋರ್ಟ್ , ಮಾರ್ಚ್ 27 ರವರೆಗೂ ಅರ್ಜಿದಾರರ ವಿರುದ್ಧ…
ರೀಲ್ಸ್ ಶೋಕಿಗೆ ಬಿದ್ದು ಜೈಲು ಕಂಬಿ ಹಿಂದೆ ಲಾಕ್ ಆಗಿರುವ ಮಚ್ಚೇಶ್ವರಿಗೆ ಸದ್ಯಕ್ಕಂತೂ ಬಿಡುಗಡೆ ಭಾಗ್ಯವಿಲ್ಲ. ಯುಗಾದಿ ಹಬ್ಬಕ್ಕೆ ಹೋಳಿಗೆ ತಿನ್ನಬೇಕಿದ್ದವರು ಜೈಲಲ್ಲಿ ಮುದ್ದೇ ಮುರಿಯುವ ಪರಿಸ್ಥಿತಿ ತಂದುಕೊಂಡಿದ್ದಾರೆ. ಮಚ್ಚು ಹಿಡಿದು ಕ್ಯಾಮೆರಾ ಫೋಸ್ ಕೊಟ್ಟವರಿಗೆ ಖಾಕಿ ಸರಿಯಾಗಿಯೇ ಡ್ರಿಲ್ ಮಾಡ್ತಿದೆ. https://www.youtube.com/watch?v=UvHKZTUr8Ic ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಜತ್ ಮತ್ತು ವಿನಯ್ ಗೌಡರನ್ನು 24ನೇ ಎಸಿಎಂಎಂ ಕೋರ್ಟ್ ಏಪ್ರಿಲ್ 9ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಮೂರು ದಿನಗಳ ಕಸ್ಟಡಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಬಸವೇಶ್ವರ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಕೋರ್ಟ್ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಯರು ಮಚ್ಚೇಶ್ವರಿಗೆ ಇನ್ನೂ 12 ದಿನ ಕಾಲ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದೆ. https://www.youtube.com/watch?v=KL2Axyw7VCs&ab_channel=AINKannada ಮುಚ್ಚು ಹಿಡಿದು ರೋಡ್ ನಲ್ಲಿಯೇ ರೀಲ್ಸ್ ಮಾಡಿದ್ದ ರಜತ್ ಹಾಗೂ ವಿನಯ್ ಗೌಡ ಇಬ್ಬರನ್ನು ಪೊಲೀಸ್ ಬಂಧಿಸಿ ತನಿಖೆಯನ್ನು ಚುರುಕುಗೊಳಿಸಿದೆ. ಇದೂವರೆಗೂ ಒರಿಜಿನಲ್ ಮಚ್ಚು ಸಿಗದೇ ಇರೋ ಕಾರಣ ಆರೋಪಿಗಳು ಮತ್ತಷ್ಟು ಫಜೀತಿ ಸಿಲುಕಿದ್ದಾರೆ.…
ನವದೆಹಲಿ: ಇದೊಂದು ಬೇಜವಾಬ್ದಾರಿ ರಾಜ್ಯ ವಿರೋಧಿ ಸರ್ಕಾರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ತಮ್ಮ ವೈಫಲ್ಯ ಮುಚ್ಚಿಕೊಂಡು ಸರ್ಕಾರ ಕೊಡಬೇಕಾದ ಪ್ರೋತ್ಸಾಹಧನವನ್ನು ಕೆಎಂಎಫ್‌ಗೆ 4 ರೂ. ಹಾಲಿನ ದರ ಹೆಚ್ಚಳ ಮಾಡಿ, ಜನರ ಮೇಲೆ ಭಾರ ಹೇರಿದೆ. ವರ್ಷದಲ್ಲಿ ಮೂರು ಬಾರಿ 9 ರೂ. ಹೆಚ್ಚಳ ಮಾಡಿದ್ದಾರೆ. ಇದೊಂದು ಬೇಜವಾಬ್ದಾರಿ ರಾಜ್ಯ ವಿರೋಧಿ ಸರ್ಕಾರವಾಗಿದೆ. ರಾಜ್ಯವನ್ನು ದಿವಾಳಿ ಮಾಡಿ ಆರ್ಥಿಕವಾಗಿ ಸದೃಢವಾಗಿರುವ ರಾಜ್ಯವನ್ನು ಆರ್ಥಿಕವಾಗಿ ಅತ್ಯಂತ ದುರ್ಬಲವಾಗಿರುವ ರಾಜ್ಯವನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. https://ainkannada.com/according-to-vastu-sleep-in-this-direction-you-will-get-unexpected-luck-in-life/ ಇಷ್ಟೆಲ್ಲಾ ಆದರೂ ರಾಜ್ಯ ಸರ್ಕಾರ ಭಂಡತನಕ್ಕೆ ಬಿದ್ದಿದೆ. ವಿದ್ಯುತ್ ದರ ಹೆಚ್ಚಳ ಮಾಡಿದೆ. ಡಿಜಿಟಲ್ ಮೀಟರ್ ಅಳವಡಿಕೆ ದೊಡ್ಡ ಹಗರಣವಾಗಿದೆ. ಪೆಟ್ರೋಲ್, ಡಿಸೇಲ್, ಮುದ್ರಾಕ ನೋಂದಣಿ ಶುಲ್ಕ ಎಲ್ಲವನನ್ನೂ ಹೆಚ್ಚಳ ಮಾಡಿದ್ದಾರೆ. ಅಬಕಾರಿ ತೆರಿಗೆ ದರವಂತೂ ಲೆಕ್ಕವಿಲ್ಲದಷ್ಟು ಹೆಚ್ಚಳ ಮಾಡಿದ್ದಾರೆ. ಕಳೆದ ವರ್ಷ ಸುಮಾರು 40 ಸಾವಿರ ಕೋಟಿ ರೂ. ಹೆಚ್ಚಿನ ತೆರಿಗೆ ಭಾರವನ್ನು ಜನರ ಮೇಲೆ ಹಾಕಿದ್ದಾರೆ.…
ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಭೀಕರ ವಿನಾಶದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿ ಸಂಭವಿಸಿದ ಭೂಕಂಪದ ನಂತರದ ಪರಿಸ್ಥಿತಿಯ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ಭಾರತ ಎಲ್ಲಾ ರೀತಿಯಲ್ಲೂ ನೆರವು ನೀಡಲು ಸಿದ್ಧವಾಗಿದೆ ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಿದರು. https://x.com/narendramodi/status/1905534514505678980?ref_src=twsrc%5Etfw%7Ctwcamp%5Etweetembed%7Ctwterm%5E1905534514505678980%7Ctwgr%5Ec4e034a9929f6eb049de6b95f675fbbc9161b299%7Ctwcon%5Es1_&ref_url=https%3A%2F%2Ftv9telugu.com%2Fnational%2Fthailand-myanmar-earthquake-pm-narendra-modi-expresses-grief-1499976.html ಈ ನಿಟ್ಟಿನಲ್ಲಿ, ಭಾರತೀಯ ಅಧಿಕಾರಿಗಳಿಗೆ ಸಿದ್ಧರಾಗಿರಲು ಸೂಚನೆ ನೀಡಲಾಗಿದೆ. ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ ಸರ್ಕಾರಗಳೊಂದಿಗೆ ಸಮಾಲೋಚನೆಗಳನ್ನು ಮುಂದುವರೆಸುವ ಕುರಿತು ವಿದೇಶಾಂಗ ಸಚಿವಾಲಯದೊಂದಿಗೆ ಚರ್ಚೆ ನಡೆಸಲಾಯಿತು. ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭೂಕಂಪದಿಂದ ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲಿ ಉಂಟಾದ ವಿನಾಶವು ಹೃದಯವಿದ್ರಾವಕವಾಗಿದೆ. ಮಾರ್ಚ್ 28 ರಂದು, ಮ್ಯಾನ್ಮಾರ್‌ನಲ್ಲಿ 7.7 ಮತ್ತು 6.4 ತೀವ್ರತೆಯ ಭೂಕಂಪಗಳು ಸಂಭವಿಸಿದವು. ಇದರ ಕೇಂದ್ರಬಿಂದುವು ರಾಜಧಾನಿ ನಗರದಿಂದ ಕೇವಲ 16 ಕಿಲೋಮೀಟರ್ ವಾಯುವ್ಯಕ್ಕೆ ಸಾಗಿಂಗ್ ಬಳಿ ಇದೆ. https://ainkannada.com/according-to-vastu-sleep-in-this-direction-you-will-get-unexpected-luck-in-life/ ಮ್ಯಾನ್ಮಾರ್ ಭೂಕಂಪದಲ್ಲಿ ನೂರಾರು ಕಟ್ಟಡಗಳು ಕುಸಿದವು. ಅವಶೇಷಗಳ ಅಡಿಯಲ್ಲಿ ಸಿಲುಕಿರುವ…
ಇಕ್ವಿನಾಕ್ಸ್ ಗ್ಲೋಬಲ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ಚೇತನ್ ಗೌಡ ಅವರು ನಿರ್ಮಿಸಿರುವ, ಶಂಕರ್ ರಾಮನ್ ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ “ವಾಮನ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನೆರವೇರಿತು. ರಾಜಸ್ಥಾನದಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ವಿಡಿಯೋ ಮೂಲಕ “ವಾಮನ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಪ್ರಸನ್ನ ಚಿತ್ರಮಂದಿರದಲ್ಲಿ ಸಹಸ್ರಾರು ದರ್ಶನ್ ಅವರ ಅಭಿಮಾನಿಗಳು ಈ ಅದ್ದೂರಿ ಸಮಾರಂಭಕ್ಕೆ ಸಾಕ್ಷಿಯಾದರು. ಧನ್ವೀರ್ ಅಭಿನಯದ ನಾಲ್ಕನೇ ಚಿತ್ರ “ವಾಮನ”. ಧನ್ವೀರ್ ಅವರ ಹಿಂದಿನ ಮೂರು ಚಿತ್ರಗಳೂ ವಿಭಿನ್ನವಾಗಿತ್ತು. ಅದರಲ್ಲೂ ” ಕೈವಾ” ನನ್ನಿಷ್ಟದ ಚಿತ್ರ. “ವಾಮನ” ಚಿತ್ರ ಕೂಡ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ. ಈ ಚಿತ್ರದ “ಮುದ್ದು ರಾಕ್ಷಸಿ” ಹಾಡು ನನಗೆ ಬಹಳ ಇಷ್ಟ. ಇಂದು ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರ ಏಪ್ರಿಲ್ 10ರಂದು ತೆರೆಗೆ ಬರುತ್ತಿದೆ. ದಯವಿಟ್ಟು ಎಲ್ಲರೂ ಚಿತ್ರಮಂದಿರಗಳಿಗೆ ಬಂದು…
ಯುವ ಸಂಸದ ತೇಜಸ್ವಿ ಸೂರ್ಯ ಮದುವೆ ಬಳಿಕ ಪತ್ನಿ ಶಿವಶ್ರೀ ಸ್ಕಂದ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದೆ. ಪ್ರಧಾನಿ ಭೇಟಿಯಾಗಿ ನವದಂಪತಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಇದೇ ವೇಳೆ ತೇಜಸ್ವಿ-ಶಿವಶ್ರೀ ಜೋಡಿಗೆ ಮೋದಿ ಅವರಿಗೆ ವಿಶೇಷ ಉಡುಗೊರೆ ಸಹ ಸಿಕ್ಕಿದೆ. ಮೋದಿ ಭೇಟಿಯಾದ ಸುಂದರ ಕ್ಷಣದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ತೇಜಸ್ವಿ ಸೂರ್ಯ ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ನಾವು ಪ್ರಧಾನಿ ಅವರಿಗೆ ಶ್ರೀಮಧ್ವಾಚಾರ್ಯರು ರಚಿಸಿದ ಸುಮಾರು 750 ವರ್ಷಗಳಷ್ಟು ಹಳೆಯದಾದ ಸರ್ವಮೂಲ ಗ್ರಂಥದ ಹಸ್ತಪ್ರತಿಯನ್ನು ಉಡುಗೊರೆಯಾಗಿ ನೀಡಲಾಗಿದೆ. ಇದನ್ನು ಶತಮಾನಗಳವರೆಗೆ ಹಸ್ತಪ್ರತಿಗಳನ್ನು ಸಂರಕ್ಷಿಸಲು ಸಹಾಯ ಮಾಡುವ ಅತ್ಯಾಧುನಿಕ ವೇಫರ್ಫಿಚೆ ತಂತ್ರಜ್ಞಾನವನ್ನು ಬಳಸಿಕೊಂಡು ಸಂರಕ್ಷಿಸಲಾಗಿದೆ. ವೇಫರ್ಫಿಚೆ ಒಂದು ಪೇಟೆಂಟ್ ಪಡೆದ ಅರೆವಾಹಕ ಉತ್ಪಾದನಾ ಆಧಾರಿತ ತಂತ್ರಜ್ಞಾನ ಎಂದು ಹೇಳಿದ್ದಾರೆ. ನಾವು ಪ್ರಧಾನಿಯವರಿಗೆ ಅರ್ಪಿಸಿದ ಈ ಪ್ರಾಚೀನ ಹಸ್ತಪ್ರತಿಯನ್ನು ನನ್ನ ಕ್ಷೇತ್ರದ ತಾರಾ ಪ್ರಕಾಶನ ಎಂಬ ಸರ್ಕಾರೇತರ ಸಂಸ್ಥೆಯು ಈ ಆಧುನಿಕ ರೂಪದಲ್ಲಿ ಸಂರಕ್ಷಿಸಿದೆ. ಅವರು ಪ್ರಾಚೀನ ಹಸ್ತಪ್ರತಿಗಳ ಸಂರಕ್ಷಣೆಯಲ್ಲಿ ತೊಡಗಿದ್ದಾರೆ. ಇದನ್ನು…
ಬೆಂಗಳೂರು: ಪತ್ನಿ ಕೊಂದು ಬಳಿಕ ಅವರ ಶವವನ್ನು ತುಂಡಾಗಿ ಕತ್ತರಿಸಿ ಸೂಟ್ ಕೇಸ್ ನಲ್ಲಿ ತುಂಬಿ ಎಸ್ಕೇಪ್ ಆಗಿದ್ದ ಆರೋಪಿ ಪತಿಯನ್ನು ಮಹಾರಾಷ್ಟ್ರದಲ್ಲಿ ಅರೆಸ್ಟ್ ಮಾಡಲಾಗಿದೆ. ಇನ್ನೂ ಈ ವಿಚಾರವಾಗಿ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಮಾತನಾಡಿದ್ದಾರೆ. ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯ ಮನೆಯಲ್ಲಿ ಪತ್ನಿಯನ್ನು (ಗೌರಿ ಅನಿಲ್ ಸಾಂಬೆಕರ್) ಕೊಲೆ ಮಾಡಿ, ಮೃತದೇಹವನ್ನು ತುಂಡರಿಸಿ ಸೂಟ್ ಕೇಸ್ನಲ್ಲಿ ತುಂಬಿದ ಬಳಿಕ ಆರೋಪಿ ರಾಕೇಶ್ ಮಹಾರಾಷ್ಟ್ರಕ್ಕೆ ತೆರಳಿದ್ದ. ಗುರುವಾರ ಆತ ಮುಂಬೈಗೆ ಹೋಗುತ್ತಿದ್ದಾಗ ಶಿರ್ವಾಲ್ ಪೊಲೀಸ್ ಠಾಣೆ ಸಮೀಪದಲ್ಲಿ ಅಸ್ವಸ್ಥನಾಗಿ ಬಿದ್ದಿದ್ದ. ನಂತರ ಸ್ಥಳಕ್ಕೆ ಧಾವಿಸಿದ್ದ ಅಲ್ಲಿನ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲು ಮಾಡಿಸಿದ್ದರು. ಸತಾರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. https://ainkannada.com/according-to-vastu-sleep-in-this-direction-you-will-get-unexpected-luck-in-life/ ತಡರಾತ್ರಿ ಪುಣೆಯ ಸಸೂನ್ ಆಸ್ಪತ್ರೆಗೆ ರವಾನಿಸಲಾಯಿತು. ಈಗ ಪುಣೆಯ ಸಸೂನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಕೆ ಮಾಡಲಾಗಿದೆ. ಸಸೂನ್ ಆಸ್ಪತ್ರೆಗೆ ಹುಳಿಮಾವು ಪೊಲೀಸರ ತಂಡ ಭೇಟಿ ನೀಡಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ತಿಳಿಸಿದ್ದಾರೆ.…
ಅಜ್ಞಾತವಾಸಿ ಏಪ್ರಿಲ್ 11ರಂದು ತೆರೆಗೆ ಬರ್ತಿರುವ ಬಹುನಿರೀಕ್ಷಿತ ಕನ್ನಡ ಸಿನಿಮಾ. ಗುಲ್ಟು ಸೂತ್ರಧಾರ ಜನಾರ್ಧನ್ ಚಿಕ್ಕಣ್ಣ ನಿರ್ದೇಶನದ ಈ ಚಿತ್ರ ಈಗಾಗಲೇ ನಾನಾ ಆಂಗಲ್ ನಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಟೀಸರ್, ಕಲರ್ ಫುಲ್ ಹಾಡುಗಳ ಮೂಲಕ ಚಿತ್ರತಂಡ ಸಿನಿಮಾಪ್ರೇಮಿಗಳಿಗೆ ಆಹ್ವಾನ ಕೊಟ್ಟಿದೆ. ಇದೀಗ ಅಜ್ಞಾತವಾಸಿ ಅಂಗಳದಿಂದ ಮತ್ತೊಂದು ಸೊಗಸಾದ ಗೀತೆ ಬಿಡುಗಡೆಯಾಗಿದೆ. ನೂರು ಕನಸು ಕಾಣಲು ಎಂಬ ಹಾಡು ಸರಿಗಮ ಕನ್ನಡ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ. ಹೆಜ್ಜೆ ಹಾಕಿದ್ದಾರೆ. ರಂಗಾಯಣ ರಘು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ಅಜ್ಞಾತವಾಸಿಯಲ್ಲಿ ಪಾವನಾ ಗೌಡ ಹಾಗೂ ಸಿದ್ದು ಮೂಲಿಮನಿ, ಶರತ್ ಲೋಹಿತಾಶ್ವ, ರವಿಶಂಕರ್ ಗೌಡ ಸೇರಿದಂತೆ ಹಲವರು ನಟಿಸಿದ್ದಾರೆ. ಜನಾರ್ಧನ್ ಚಿಕ್ಕಣ್ಣ ಗುರುಗಳಾದ ಕೃಷ್ಣರಾಜ್ ಅವರು ಅಜ್ಞಾತವಾಸಿ ಚಿತ್ರಕ್ಕೆ ಕಥೆ ಬರೆದ್ದಾರೆ. 1997ರಲ್ಲಿ ಮಲೆನಾಡಿನಲ್ಲಿ ನಡೆದ ಕೊಲೆಯೊಂದರ ಸುತ್ತ ಈ ಕಥೆ ಹೆಣೆಯಲಾಗಿದೆ. ಕನ್ನಡದಲ್ಲಿ ಈವರೆಗೂ ಬಂದಿರದ ಮರ್ಡರ್ ಮಿಸ್ಟರಿ ಕಥಾಹಂದರ ಚಿತ್ರದಲ್ಲಿದೆ. ಅದ್ವೈತ ಛಾಯಾಗ್ರಾಹಕರಾಗಿ ಹಾಗೂ ಚರಣ್ ರಾಜ್ ಸಂಗೀತ ನಿರ್ದೇಶಕರಾಗಿ, ಭರತ್…
ಕೊಡಗು ; ಕೊಡಗಿನಲ್ಲಿ ಭೀಕರ ಹತ್ಯೆ ನಡೆದಿದೆ. ಅನೈತಿಕ ಸಂಬಂಧ ಶಂಕೆಯಿಂದಾಗಿ ಕತ್ತಿಯಿಂದ ಕಡಿದು ನಾಲ್ವರನ್ನು ಹತ್ಯೆಗೈಯ್ಯಲಾಗಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬೇಗೂರು ಸಮೀಪದ ಕೊಳತೋಡು ಗ್ರಾಮದಲ್ಲಿ ನಡೆದಿದೆ. https://ainkannada.com/elderly-couple-victimized-by-cyber-fraudsters/ ಕಾಫಿ ತೋಟದಲ್ಲಿ ವಾಸವಿದ್ದ ಕುಟುಂಬವನ್ನು ಕೊಲೆ ಮಾಡಲಾಗಿದ್ದು, ಕರಿಯ(75), ಗೌರಿ(70), ನಾಗಿ(35), 6 ವರ್ಷದ ಕಾವೇರಿ ಹತ್ಯೆಗೀಡಾದವರು. ಆರೋಪಿ ಗಿರೀಶ್ (35) ನಿಂದ ಭೀಕರ ಕೃತ್ಯ ಎಸಗಿದ್ದು, ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.