ಬೆಂಗಳೂರು: ಪತ್ನಿ ಕೊಂದು ಬಳಿಕ ಅವರ ಶವವನ್ನು ತುಂಡಾಗಿ ಕತ್ತರಿಸಿ ಸೂಟ್ ಕೇಸ್ ನಲ್ಲಿ ತುಂಬಿ ಎಸ್ಕೇಪ್ ಆಗಿದ್ದ ಆರೋಪಿ ಪತಿಯನ್ನು ಮಹಾರಾಷ್ಟ್ರದಲ್ಲಿ ಅರೆಸ್ಟ್ ಮಾಡಲಾಗಿದೆ. ಇನ್ನೂ ಈ ವಿಚಾರವಾಗಿ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಮಾತನಾಡಿದ್ದಾರೆ. ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯ ಮನೆಯಲ್ಲಿ ಪತ್ನಿಯನ್ನು (ಗೌರಿ ಅನಿಲ್ ಸಾಂಬೆಕರ್) ಕೊಲೆ ಮಾಡಿ, ಮೃತದೇಹವನ್ನು ತುಂಡರಿಸಿ ಸೂಟ್ ಕೇಸ್ನಲ್ಲಿ ತುಂಬಿದ ಬಳಿಕ ಆರೋಪಿ ರಾಕೇಶ್ ಮಹಾರಾಷ್ಟ್ರಕ್ಕೆ ತೆರಳಿದ್ದ. ಗುರುವಾರ ಆತ ಮುಂಬೈಗೆ ಹೋಗುತ್ತಿದ್ದಾಗ ಶಿರ್ವಾಲ್ ಪೊಲೀಸ್ ಠಾಣೆ ಸಮೀಪದಲ್ಲಿ ಅಸ್ವಸ್ಥನಾಗಿ ಬಿದ್ದಿದ್ದ. ನಂತರ ಸ್ಥಳಕ್ಕೆ ಧಾವಿಸಿದ್ದ ಅಲ್ಲಿನ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲು ಮಾಡಿಸಿದ್ದರು. ಸತಾರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. https://ainkannada.com/according-to-vastu-sleep-in-this-direction-you-will-get-unexpected-luck-in-life/ ತಡರಾತ್ರಿ ಪುಣೆಯ ಸಸೂನ್ ಆಸ್ಪತ್ರೆಗೆ ರವಾನಿಸಲಾಯಿತು. ಈಗ ಪುಣೆಯ ಸಸೂನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಕೆ ಮಾಡಲಾಗಿದೆ. ಸಸೂನ್ ಆಸ್ಪತ್ರೆಗೆ ಹುಳಿಮಾವು ಪೊಲೀಸರ ತಂಡ ಭೇಟಿ ನೀಡಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ತಿಳಿಸಿದ್ದಾರೆ.…
Author: Author AIN
ಅಜ್ಞಾತವಾಸಿ ಏಪ್ರಿಲ್ 11ರಂದು ತೆರೆಗೆ ಬರ್ತಿರುವ ಬಹುನಿರೀಕ್ಷಿತ ಕನ್ನಡ ಸಿನಿಮಾ. ಗುಲ್ಟು ಸೂತ್ರಧಾರ ಜನಾರ್ಧನ್ ಚಿಕ್ಕಣ್ಣ ನಿರ್ದೇಶನದ ಈ ಚಿತ್ರ ಈಗಾಗಲೇ ನಾನಾ ಆಂಗಲ್ ನಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಟೀಸರ್, ಕಲರ್ ಫುಲ್ ಹಾಡುಗಳ ಮೂಲಕ ಚಿತ್ರತಂಡ ಸಿನಿಮಾಪ್ರೇಮಿಗಳಿಗೆ ಆಹ್ವಾನ ಕೊಟ್ಟಿದೆ. ಇದೀಗ ಅಜ್ಞಾತವಾಸಿ ಅಂಗಳದಿಂದ ಮತ್ತೊಂದು ಸೊಗಸಾದ ಗೀತೆ ಬಿಡುಗಡೆಯಾಗಿದೆ. ನೂರು ಕನಸು ಕಾಣಲು ಎಂಬ ಹಾಡು ಸರಿಗಮ ಕನ್ನಡ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ. ಹೆಜ್ಜೆ ಹಾಕಿದ್ದಾರೆ. ರಂಗಾಯಣ ರಘು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ಅಜ್ಞಾತವಾಸಿಯಲ್ಲಿ ಪಾವನಾ ಗೌಡ ಹಾಗೂ ಸಿದ್ದು ಮೂಲಿಮನಿ, ಶರತ್ ಲೋಹಿತಾಶ್ವ, ರವಿಶಂಕರ್ ಗೌಡ ಸೇರಿದಂತೆ ಹಲವರು ನಟಿಸಿದ್ದಾರೆ. ಜನಾರ್ಧನ್ ಚಿಕ್ಕಣ್ಣ ಗುರುಗಳಾದ ಕೃಷ್ಣರಾಜ್ ಅವರು ಅಜ್ಞಾತವಾಸಿ ಚಿತ್ರಕ್ಕೆ ಕಥೆ ಬರೆದ್ದಾರೆ. 1997ರಲ್ಲಿ ಮಲೆನಾಡಿನಲ್ಲಿ ನಡೆದ ಕೊಲೆಯೊಂದರ ಸುತ್ತ ಈ ಕಥೆ ಹೆಣೆಯಲಾಗಿದೆ. ಕನ್ನಡದಲ್ಲಿ ಈವರೆಗೂ ಬಂದಿರದ ಮರ್ಡರ್ ಮಿಸ್ಟರಿ ಕಥಾಹಂದರ ಚಿತ್ರದಲ್ಲಿದೆ. ಅದ್ವೈತ ಛಾಯಾಗ್ರಾಹಕರಾಗಿ ಹಾಗೂ ಚರಣ್ ರಾಜ್ ಸಂಗೀತ ನಿರ್ದೇಶಕರಾಗಿ, ಭರತ್…
ಕೊಡಗು ; ಕೊಡಗಿನಲ್ಲಿ ಭೀಕರ ಹತ್ಯೆ ನಡೆದಿದೆ. ಅನೈತಿಕ ಸಂಬಂಧ ಶಂಕೆಯಿಂದಾಗಿ ಕತ್ತಿಯಿಂದ ಕಡಿದು ನಾಲ್ವರನ್ನು ಹತ್ಯೆಗೈಯ್ಯಲಾಗಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬೇಗೂರು ಸಮೀಪದ ಕೊಳತೋಡು ಗ್ರಾಮದಲ್ಲಿ ನಡೆದಿದೆ. https://ainkannada.com/elderly-couple-victimized-by-cyber-fraudsters/ ಕಾಫಿ ತೋಟದಲ್ಲಿ ವಾಸವಿದ್ದ ಕುಟುಂಬವನ್ನು ಕೊಲೆ ಮಾಡಲಾಗಿದ್ದು, ಕರಿಯ(75), ಗೌರಿ(70), ನಾಗಿ(35), 6 ವರ್ಷದ ಕಾವೇರಿ ಹತ್ಯೆಗೀಡಾದವರು. ಆರೋಪಿ ಗಿರೀಶ್ (35) ನಿಂದ ಭೀಕರ ಕೃತ್ಯ ಎಸಗಿದ್ದು, ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮೀ ದರ್ಶನ್ ಸೋಷಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟೀವ್ ಆಗಿದ್ದಾರೆ. ಸದಾ ಒಂದಲ್ಲ ಒಂದು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಜೊತೆ ಕನೆಕ್ಟ್ ಆಗುತ್ತಾರೆ. ಇದೀಗ ಫರ್ಪೆಕ್ಟ್ ಫ್ಯಾಮಿಲಿ ಪಿಕ್ಚರ್ ಶೇರ್ ಮಾಡಿದ್ದು, ಸೆಲೆಬ್ರಿಟಿಗಳು ಹ್ಯಾಪಿ ಪಿಕ್ಚರ್, ಈ ಕುಟುಂಬಕ್ಕೆ ಯಾರ ದೃಷ್ಟಿ ಬೀಳದಿರಲಿ ಎಂದು ಕಮೆಂಟ್ ಮಾಡುತ್ತಿದ್ದಾರೆ. ಅಂಬಾರಿ ಹೊರುವ ಅಭಿಮನ್ಯು ಆನೆ ಜೊತೆ ದರ್ಶನ್, ವಿಜಯಲಕ್ಷ್ಮೀ, ಮಗ ವಿನೀಶ್ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಡಿಬಾಸ್, ಅತ್ತಿಗೆ, ಮಗನನ್ನು ಒಟ್ಟಿಗೆ ನೋಡಿ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಪಾಲಾಗಿದ್ದ ದರ್ಶನ್ ರನ್ನು ಶತಪ್ರಯತ್ನ ಮಾಡಿ ವಿಜಯಲಕ್ಷ್ಮೀ ಹೊರತಂದಿದ್ದರು. ದರ್ಶನ್ ಸದ್ಯ ಬಹುನಿರೀಕ್ಷಿತ ಡೆವಿಲ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ರಾಜಸ್ತಾನದ ಉದಯಪುರದಲ್ಲಿ ಮೂರನೇ ಹಂತದ ಚಿತ್ರೀಕರಣ ನಡೆಯುತ್ತಿದೆ. ಮಾತಿನ ಭಾಗದ ಚಿತ್ರೀಕರಣ ನಡೆಯುತ್ತಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್, ರಚನ ರೈ, ಮಹೇಶ್ ಮಂಜ್ರೇಕರ್, ಅಚ್ಯುತಕುಮಾರ್ ಮುಂತಾದ ಕಲಾವಿದರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.
ಮಾರ್ಚ್ 31 ರಂದು ದೇಶದಲ್ಲಿ ಈದ್-ಉಲ್-ಫಿತರ್ ಹಬ್ಬವನ್ನು ಆಚರಿಸಲಾಗುವುದು. ಇಂತಹ ಪರಿಸ್ಥಿತಿಯಲ್ಲಿ, ದೇಶದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ರಜೆ ಇರುತ್ತದೆ. ಆದರೆ, ಆರ್‌ಬಿಐ ಬ್ಯಾಂಕ್ ನೌಕರರ ರಜೆಗಳನ್ನು ರದ್ದುಗೊಳಿಸಿದೆ. ಮಾರ್ಚ್ 31 2024-25ನೇ ಹಣಕಾಸು ವರ್ಷದ ಕೊನೆಯ ದಿನವಾಗಿದೆ. ಅದಕ್ಕಾಗಿಯೇ ಭಾರತೀಯ ರಿಸರ್ವ್ ಬ್ಯಾಂಕ್ (RBI) ಬ್ಯಾಂಕ್ ನೌಕರರ ರಜೆಗಳನ್ನು ರದ್ದುಗೊಳಿಸಿದೆ. ಹಣಕಾಸು ವರ್ಷದ ಕೊನೆಯ ದಿನದಂದು ಹಣಕಾಸು ವಹಿವಾಟು ಪ್ರಕ್ರಿಯೆಯನ್ನು ಸರಿಯಾಗಿ ನಿರ್ವಹಿಸಲು ಆರ್‌ಬಿಐ ಈ ಘೋಷಣೆ ಮಾಡಿದೆ. https://ainkannada.com/according-to-vastu-sleep-in-this-direction-you-will-get-unexpected-luck-in-life/ ಇದು ಹಣಕಾಸು ವರ್ಷದ ಕೊನೆಯ ದಿನ. ಹಣಕಾಸಿನ ವಹಿವಾಟುಗಳನ್ನು ಪೂರ್ಣಗೊಳಿಸಲು ಬ್ಯಾಂಕುಗಳನ್ನು ತೆರೆಯಲು ಆರ್‌ಬಿಐ ನಿರ್ಧರಿಸಿದೆ. ಆರಂಭದಲ್ಲಿ ಮಿಜೋರಾಂ ಮತ್ತು ಹಿಮಾಚಲ ಪ್ರದೇಶದಲ್ಲಿ ಮಾತ್ರ ಬ್ಯಾಂಕ್‌ಗಳನ್ನು ತೆರೆಯಲು ಆರ್‌ಬಿಐ ಯೋಜಿಸಿತ್ತು, ಆದರೆ ನಂತರ ದೇಶಾದ್ಯಂತ ಬ್ಯಾಂಕ್‌ಗಳನ್ನು ತೆರೆಯಲು ನಿರ್ಧರಿಸಿತು. ಎಲ್ಲಾ ಕೆಲಸಗಳು ಮುಗಿದಿಲ್ಲ: ಮಾರ್ಚ್ 31 ರಂದು ಈದ್ ಹಬ್ಬದಂದು ಬ್ಯಾಂಕುಗಳು ತೆರೆದಿರುತ್ತವೆ. ಆದರೆ ಆ ದಿನ ಬ್ಯಾಂಕುಗಳಲ್ಲಿ ಎಲ್ಲಾ ರೀತಿಯ ಕೆಲಸಗಳು ನಡೆಯುವುದಿಲ್ಲ. ಕೆಲವು ಸ್ಥಿರ ವ್ಯವಹಾರಗಳು…
ಬೆಂಗಳೂರು: ನಮ್ಮದೇ ಗಾಡಿ ಫುಲ್ ಇದೆ, ಜೆಡಿಎಸ್ 14 ಜನರನ್ನು ತೆಗೆದುಕೊಂಡು ನಾವೇನು ಮಾಡೋಣ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಓವರ್ ಲೋಡೆಡ್ ಇದ್ರೂ ನಮ್ಮದು ಕಾಂಗ್ರೆಸ್ ಪಕ್ಷವೇ. ಇಲ್ಲಿಯೇ ಅಧ್ಯಕ್ಷ ಆಗಬೇಕು ಇಲ್ಲಿಯೇ ಸಿಎಂ ಆಗಬೇಕು. ಸದ್ಯಕ್ಕೆ ವೈಟಿಂಗ್ ಲಿಸ್ಟ್ ನಲ್ಲಿ ಇದ್ದೇವೆ ಇಲ್ಲಿಯೇ ಕಾಯ್ತೇವೆ ಎಂದು ಹೇಳಿದ್ದಾರೆ. https://ainkannada.com/according-to-vastu-sleep-in-this-direction-you-will-get-unexpected-luck-in-life/ ನನ್ನದು ಆರ್.ಎಸ್.ಸಿ ಟಿಕೆಟ್. ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದು ಕಾಯುತ್ತೇನೆ. ಯಾರಾದ್ರೂ ಮೆಜೆಸ್ಟಿಕ್ ಜಾಂನಲ್ಲಿ ಸಿಕ್ಕಿಹಾಕಿಕೊಂಡು ಬರುವುದು ತಡವಾದರೆ ನಮಗೆ ಅವಕಾಶ ಸಿಗಬಹುದು. ಎಲ್ಲರೂ ಆರ್ ಎಸ್ ಸಿ ಟಿಕೆಟ್ ಇಟ್ಟುಕೊಂಡೇ ಕಾಯ್ತಿದ್ದಾರೆ ಎಂದು ಹೇಳಿದ್ದಾರೆ. ನಾವು ಇಲ್ಲೇ ಮಂತ್ರಿ,ಮುಖ್ಯಮಂತ್ರಿ ಆಗಬೇಕು, ನಾವೇನು ಫೋಟೋ ತೆಗೆಸಿಕೊಂಡು ಆಕಬೇಕಿಲ್ಲ, ಇಲ್ಲಿ ಶಿಂಧೆ, ಪವಾರ್ ಯಾರು ಇಲ್ಲ ಆ ಸಾಮರ್ಥ್ಯ ಯಾರಿಗೂ ಇಲ್ಲ ಎಂದರು.
ಗದಗ : ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಖಂಡಿಸಿ ಗದಗ ನಗರದ ಫೀಲ್ಟ್ ಮಾರ್ಷಲ್ ಕೆ ಎಂ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ ನಡೆಸಿ, ಮಾಜಿ ಸಿಎಂ ಬಿ ಎಸ್ ವೈ ಹಾಗೂ ವಿಜಯೇಂದ್ರ ಫೋಟೋಗಳಿಗೆ ಧಿಕ್ಕಾರ ಬರೆದು, ಅಡ್ಜಸ್ಟ್ಮೆಂಟ್ ರಾಜಕಾರಣ ಮಾಡುತ್ತಿರೋ ವಿಜಯೇಂದ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಚುನಾವಣೆಗಳಲ್ಲಿ ಹಿಂದುತ್ವದ ಪ್ರಚಾರಕ್ಕೆ ಯತ್ನಾಳ್ ಬೇಕು ಈಗ ಬೇಡವೇ ಅಂತಾ ಕಿಡಿ ಕಾರಿದ್ದು, ಕೂಡಲೇ ಉಚ್ಚಾಟನೆ ಹಿಂಪಡೆಯುವಂತೆ ಒತ್ತಾಯಿಸಿದರು. https://ainkannada.com/basanagowda-patil-yatnal-invited-to-our-party-mla-raju-kage/ ಅಲ್ಲದೇ ಪ್ರತಿಭಟನಾಕಾರರು, ಮಾಜಿ ಬಿಎಸ್ ವೈ ಭಾವಚಿತ್ರ ಸುಡಲು ಮುಂದಾಗಿದ್ದು, ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ವಿರುದ್ದ ಕೆಲ ಕಾಲ ವಾಗ್ವಾದ ನಡೆಯಿತು.
ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ಕೊಡಲು ಸಂವಿಧಾನ ಬದಲಾವಣೆ ಮಾಡ್ತೀವಿ ಎಂಬ ಡಿಕೆಶಿ ಹೇಳಿಕೆ ಖಂಡಿಸಿ ಜನತಾದಳ ಜಾತ್ಯತೀತ ಪಕ್ಷದ ಕರ್ನಾಟಕ ರಾಜ್ಯ ಹಾಗೂ ಬೆಂಗಳೂರು ನಗರದ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಉಗ್ರ ಪ್ರತಿಭಟನೆ ಹಮ್ಮಿಕೊಂಡಿದ್ದರು. ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದ್ದು, ಡಿಕೆಶಿ ಪೋಸ್ಟರ್ ಹಿಡಿದು, ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿ ದ್ದಾರೆ. ಈ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಟಿ ಎ ಶರವಣ, ಮಾಜಿ ಶಾಸಕರು ಹಾಗೂ ಪರಿಶಿಷ್ಟ ಜಾತಿ ವಿಭಾಗ, ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಅಧ್ಯಕ್ಷರು ಡಾ. ಕೆ. ಅನ್ನದಾನಿ ಅವರು ಸೇರಿದಂತೆ ಪಕ್ಷದ ಮುಖಂಡರು, ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು, ಮಾಜಿ ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಬೆಳಗಾವಿ : ಸೈಬರ್ ವಂಚಕರ ಕಿರುಕುಳಕ್ಕೆ ವೃದ್ಧ ದಂಪತಿ ಬಲಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಡಿಯಾಂಗೋ ನಜರತ್ (83) ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರೆ, ಇವರ ಪತ್ನಿ ಪ್ಲೇವಿಯಾನಾ ನಜರತ್ (79) ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://ainkannada.com/ugadi-background-mandya-police-department-puts-a-brake-on-gambling/ ಕೆಲ ದಿನಗಳ ಹಿಂದೆ ಈ ದಂಪತಿಗಳಿಗೆ ವಿಡಿಯೋ ಕರೆಯೊಂದು ಬಂದಿತ್ತು. ದೆಹಲಿ ಕ್ರೈಂ ಬ್ರ್ಯಾಂಚ್ನಿಂದ ಕರೆ ಮಾಡುತ್ತಿದ್ದೇವೆ, ನೀವು ಅಪರಾಧ ಕೃತ್ಯದಲ್ಲಿ ಶಾಮೀಲಾಗಿದ್ದೀರಿ ಎಂದು ಬೆದರಿಕೆ ಹಾಕಲಾಗಿತ್ತು. ಬಳಿಕ ಸೈಬರ್ ವಂಚಕರು ದಂಪತಿ ವಳಿ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಟ್ಟ ಬಳಿಕವೂ ಮತ್ತೆ ವಿಡಿಯೋ ಕಾಲ್ ಮಾಡಿ ಧಮ್ಕಿ ಹಾಕಿದ್ದರು. ಹಣ ಕೊಡದಿದ್ದರೆ ಅರೆಸ್ಟ್ ಮಾಡುವುದಾಗಿ ಹೆದರಿಸಿದ್ದರು. ಇದರಿಂದ ಮನನೊಂದ ದಂಪತಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ನಂದಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೇಸಿಗೆಯಲ್ಲಿ ಅನೇಕ ಜನರು ತಣ್ಣೀರು ಕುಡಿಯಲು ಇಷ್ಟಪಡುತ್ತಾರೆ. ಈ ಕಾರಣಕ್ಕಾಗಿ, ಅನೇಕ ಮನೆಗಳು ಬೇಸಿಗೆಯ ಆರಂಭದಲ್ಲಿ ತಣ್ಣೀರಿಗಾಗಿ ರೆಫ್ರಿಜರೇಟರ್‌ನಲ್ಲಿ ನೀರಿನ ಬಾಟಲಿಗಳನ್ನು ಇಡಲು ಪ್ರಾರಂಭಿಸುತ್ತವೆ. ಆದರೆ, ಫ್ರಿಡ್ಜ್‌ನಿಂದ ತಣ್ಣೀರು ಕುಡಿಯುವುದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಅಂತಹ ಪರಿಸ್ಥಿತಿಯಲ್ಲಿ, ನೀವು ಫ್ರಿಡ್ಜ್‌ನಲ್ಲಿರುವ ತಣ್ಣೀರಿನ ಬದಲು ಪಾತ್ರೆಯಿಂದ ತಣ್ಣೀರನ್ನು ಕುಡಿಯಬಹುದು. ಪಾತ್ರೆಯಲ್ಲಿರುವ ನೀರು ನೈಸರ್ಗಿಕವಾಗಿ ತಣ್ಣಗಾಗುತ್ತದೆ. ಇದು ಆರೋಗ್ಯಕ್ಕೆ ಒಳ್ಳೆಯದು. https://ainkannada.com/according-to-vastu-sleep-in-this-direction-you-will-get-unexpected-luck-in-life/ ಇಂದು ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಮಣ್ಣಿನ ಮಡಕೆಗಳು ಮತ್ತು ಮಣ್ಣಿನ ಬಾಟಲಿಗಳು ಲಭ್ಯವಿದೆ. ಇವುಗಳನ್ನು ಅನೇಕ ಜನರು ಬಳಸುತ್ತಿದ್ದಾರೆ. ಅವುಗಳು ತಮ್ಮಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯಲು ಇಷ್ಟಪಡುತ್ತವೆ. ಆದಾಗ್ಯೂ, ಮಣ್ಣಿನಿಂದ ಮಾಡಿದ ಮಡಕೆ ಅಥವಾ ಬಾಟಲಿಯನ್ನು ಬಳಸುವ ಮೊದಲು ಹೆಚ್ಚಿನ ಕಾಳಜಿ ವಹಿಸಬೇಕು. ನೆನಪಿನಲ್ಲಿಟ್ಟುಕೊಳ್ಳಬೇಕಾದ ಕೆಲವು ವಿಷಯಗಳು. ಇಲ್ಲದಿದ್ದರೆ, ಇವುಗಳಲ್ಲಿರುವ ನೀರು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಮಡಕೆಯನ್ನು ಹೇಗೆ ಸ್ವಚ್ಛಗೊಳಿಸುವುದು ಮಡಕೆಯನ್ನು ಬಳಸುವ ಮೊದಲು, ಅದನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ. ಜೇಡಿಮಣ್ಣಿನಿಂದ ಮಾಡಿದ ಮಡಕೆಗಳು ಬ್ಯಾಕ್ಟೀರಿಯಾ ಮತ್ತು ಕೊಳೆಯನ್ನು ಸಂಗ್ರಹಿಸುತ್ತವೆ.…