Author: Author AIN

ಒಂದು ಸುಂದರವಾದ ಮನೆಯ ಅಂದವನ್ನು ಅದರ ಆವರಣದಲ್ಲಿ ಹಚ್ಚ ಹಸಿರಿನ ಉದ್ಯಾನವನವು ಹೆಚ್ಚಿಸುತ್ತದೆ. ಪ್ರತಿಯೊಬ್ಬರೂ ತಮ್ಮ ಮನೆಯ ಮುಂದೆ ವಿವಿಧ ರೀತಿಯ ಹೂವಿನ ಗಿಡಗಳನ್ನು ಹೊಂದಿರುವ ಉದ್ಯಾನವನ್ನು ಹೊಂದಲು ಬಯಸುತ್ತಾರೆ. ಆದಾಗ್ಯೂ, ಈ ಹೂಬಿಡುವ ಸಸ್ಯಗಳನ್ನು ಬೆಳೆಸುವುದು ಕೂಡ ಒಂದು ಕಲೆ. ವಿಶೇಷವಾಗಿ ಈ ಬೇಸಿಗೆಯಲ್ಲಿ ತೋಟದಲ್ಲಿ ಸಸ್ಯಗಳನ್ನು ನಿರ್ವಹಿಸುವುದು ಸವಾಲಿನ ಕೆಲಸ. ಗಿಡಗಳಿಗೆ ಒಂದು ದಿನ ನೀರು ಹಾಕದಿದ್ದರೆ ಅಥವಾ ಸರಿಯಾದ ಕಾಳಜಿ ವಹಿಸದಿದ್ದರೆ ಗಿಡ ಒಣಗಿ ಹೋಗುತ್ತದೆ. ಆದ್ದರಿಂದ, ಬೇಸಿಗೆಯಲ್ಲಿ ಹೂವಿನ ತೋಟಗಳನ್ನು ಸಾಕಷ್ಟು ಕಾಳಜಿಯಿಂದ ನೋಡಿಕೊಳ್ಳಬೇಕು. ಆ ಸಲಹೆಗಳು.. https://ainkannada.com/according-to-vastu-sleep-in-this-direction-you-will-get-unexpected-luck-in-life/ ಸಾಕಷ್ಟು ನೀರು ಹಾಕಿರಿ: ಈ ಬೇಸಿಗೆಯಲ್ಲಿ ಸೂರ್ಯನ ಕಿರಣಗಳು ಪ್ರಖರವಾಗಿರುತ್ತವೆ. ಈ ಅವಧಿಯಲ್ಲಿ ಸಸ್ಯಗಳು ಒಣಗಲು ಅಥವಾ ಸಾಯಲು ಮುಖ್ಯ ಕಾರಣವೆಂದರೆ ಅವುಗಳಿಗೆ ಸಾಕಷ್ಟು ನೀರು ಹಾಕದಿರುವುದು. ಆದ್ದರಿಂದ ಸಸ್ಯಗಳಿಗೆ ನಿಯಮಿತವಾಗಿ ನೀರು ಹಾಕಿ. ಸೂರ್ಯನ ಶಾಖವು ಮಣ್ಣಿನಲ್ಲಿರುವ ತೇವಾಂಶವನ್ನು ಆವಿಯಾಗಿಸುತ್ತಿದೆ. ಆದ್ದರಿಂದ, ಬೆಳಿಗ್ಗೆ ಸಸ್ಯಗಳಿಗೆ ನೀರುಣಿಸುವುದು ಬಹಳ ಮುಖ್ಯ. ಆದ್ದರಿಂದ, ದಿನಕ್ಕೆ ಎರಡು ಬಾರಿ…

Read More

ಹುಬ್ಬಳ್ಳಿ; ಬೃಹತ್ ಗಾತ್ರದ ಮರವೊಂದು ನೆಲಕ್ಕೆ ಬಿದ್ದಿರುವುದು ಮಾತ್ರವಲ್ಲದೇ ದುಡಿದು ತಿನ್ನುವ ಬಡ ಕುಟುಂಬಗಳ ಜೀವನಕ್ಕೆ ಆಧಾರವಾಗಿದ್ದ ವಾಹನಗಳ  ಮೇಲೆಯೇ ಬಿದ್ದಿರುವುದು ಬಡ ಕುಟುಂಬಗಳು ಕಣ್ಣಿರು ಹಾಕುವಂತಾಗಿದೆ. ರಸ್ತೆಯಲ್ಲಿ ಏಕಾಏಕಿ ಬೃಹತ್ ಗಾತ್ರದ ಮರ ಬಿದ್ದಿದ್ದು, ಬಡ ಕುಟುಂಬಕ್ಕೆ ಆಸರೆಯಾಗಿದ್ದ ವಾಹನಗಳು ಸಂಪೂರ್ಣ ಜಖಂಗೊಂಡಿವೆ. ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಮಂಜುನಾಥ ನಗರದ ಬಳಿಯಲ್ಲಿ ಬೃಹತ್ ಗಾತ್ರದ ಮರವೊಂದು ಏಕಾಏಕಿ ನೆಲಕ್ಕೆ ಬಿದ್ದಿರುವ ಪರಿಣಾಮ ಓಮಿನಿ ಕಾರ್ ಹಾಗೂ ಆಟೋ ರಿಕ್ಷಾ ಸಂಪೂರ್ಣ ಜಖಂಗೊಂಡಿರುವ ಘಟನೆ ನಡೆದಿದೆ. ಆಟೋ ಹಾಗೂ ಓಮಿನಿ ಓಡಿಸಿ ಜೀವನ ನಡೆಸುವ ಬಡ ಕುಟುಂಬಕ್ಕೆ ಈಗ ಬರಸಿಡಿಲು ಬಡೆದಂತಾಗಿದೆ. ಆಟೋ ಚಾಲಕ ರಸುಲ್ ಸಾಬ ನದಾಫ್, ಓಮಿನಿ ಚಾಲಕ ಸಿಖಂದರ್ ನದಾಫ್ ಎಂಬುವವರ ವಾಹನಗಳು ಸಂಪೂರ್ಣ ಹಾಳಾಗಿದ್ದು ಪರಿಹಾರಕ್ಕೆ ಅಳಲನ್ನು ತೋಡಿಕೊಂಡಿದ್ದಾರೆ. https://ainkannada.com/inhuman-act-in-dharwad-mentally-retarded-man-attacked-dies-after-being-stoned/ ಇನ್ನೂ ಮಳೆ ಗಾಳಿಗೆ ಮರ ಬಿದ್ದಿದೆಯೋ..? ಕಟ್ಟಡ ನಿರ್ಮಾಣ ಕಾಮಗಾರಿಯಿಂದ ಮರ ಬಿದ್ದಿದೆಯೋ ಎಂಬುವುದನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಪತ್ತೆ ಹಚ್ಚಿ ನೊಂದವರಿಗೆ ಪರಿಹಾರ…

Read More

ನಿರ್ಮಾಪಕ, ನಿರ್ದೇಶಕ, ನಟನಾಗಿ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಇವೆಂಟ್ ಗಳನ್ನು ಆಯೋಜಿಸುವ ಮೂಲಕ ಜನಪ್ರಿಯರಾಗಿರುವ ನವರಸನ್ “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್” ಆಯೋಜಿಸುವ ಮೂಲಕ ಕ್ರೀಡಾಲೋಕಕ್ಕೂ‌ ಪಾದಾರ್ಪಣೆ ಮಾಡಿರುವುದು ಎಲ್ಲರಿಗೂ ತಿಳಿದ ಸಂಗತಿ. ಕಳೆದ ಕೆಲವು ದಿನಗಳ ಹಿಂದೆ “CWKL” ಲೋಗೊ ಅನಾವರಣವನ್ನು ನವರಸನ್ ಅದ್ದೂರಿಯಾಗಿ ಬಿಡುಗಡೆ ಮಾಡಿದ್ದರು. ಪ್ರಸ್ತುತ ಹೆಸರಾಂತ ಗಾಯಕ, ನಾಯಕ ಹಾಗೂ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಅವರು “CWKL” ಗಾಗಿ “ಕಬ್ಬಡಿ ಕಬ್ಬಡಿ” ಎಂಬ ಚಂದದ ಥೀಮ್ ಸಾಂಗ್ ಬರೆದು ಸಂಗೀತ ಸಂಯೋಜಿಸಿದ್ದಾರೆ. ಇದೇ ಸಂದರ್ಭದಲ್ಲಿ “CWKL” ಪಂದ್ಯಗಳು ನಡೆಯುವ ದಿನಾಂಕಗಳನ್ನು ಸಹ ತಿಳಿಸಲಾಯಿತು. ವಿಧಾನ ಪರಿಷತ್ ಸದಸ್ಯರು ಹಾಗೂ‌ ಸಾಯಿಗೋಲ್ಡ್ ಸಂಸ್ಥೆಯ ಮಾಲೀಕರಾದ ಶರವಣ ಅವರು ಪಂದ್ಯಗಳು ನಡೆಯುವ ದಿನಾಂಕಗಳ ಬಗ್ಗೆ ತಿಳಿಸಿ, “CWKL” ಯಶಸ್ವಿಯಾಗಲೆಂದು ಶುಭ ಹಾರೈಸಿದರು. ಏಪ್ರಿಲ್ 5 ಹಾಗೂ 6  “CWKL”  ನ ಪಂದ್ಯಗಳು ನಡೆಯಲಿದೆ. ಥೀಮ್ ಸಾಂಗ್ ಅನ್ನು ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಬಿಡುಗಡೆ ಮಾಡಿದರು.…

Read More

ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಗ್ರಾಹಕರಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಎಸ್‌ಬಿಐ ತನ್ನ ಗ್ರಾಹಕರಿಗೆ ಉಳಿತಾಯ ಖಾತೆ, ಚಾಲ್ತಿ ಖಾತೆ, ಎಫ್‌ಡಿ ಖಾತೆ, ಆರ್‌ಡಿ ಖಾತೆಯಂತಹ ವಿವಿಧ ಬ್ಯಾಂಕಿಂಗ್ ಉತ್ಪನ್ನಗಳನ್ನು ನೀಡುತ್ತದೆ. https://ainkannada.com/according-to-vastu-sleep-in-this-direction-you-will-get-unexpected-luck-in-life/ ಎಸ್‌ಬಿಐ ನೀಡುವ ಈ ಯೋಜನೆಯಲ್ಲಿ ಗ್ರಾಹಕರು ಉತ್ತಮ ಲಾಭವನ್ನು ಪಡೆಯುತ್ತಿದ್ದಾರೆ. ಅಮೃತ್ ವೃಷ್ಟಿ ಯೋಜನೆಯಡಿಯಲ್ಲಿ SBI ತನ್ನ ಗ್ರಾಹಕರಿಗೆ FD ಮೇಲೆ ಹೆಚ್ಚಿನ ಬಡ್ಡಿದರವನ್ನು ನೀಡುತ್ತದೆ. SBI ಅಮೃತ್ ವೃಷ್ಟಿ FD ಎಂದರೇನು? SBI ಅಮೃತ್ ವೃಷ್ಟಿ ಯೋಜನೆಯು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಜುಲೈ 15, 2024 ರಿಂದ ಮಾರ್ಚ್ 31, 2025 ರವರೆಗೆ ಸೀಮಿತ ಅವಧಿಗೆ ನೀಡುವ ವಿಶೇಷ ಸ್ಥಿರ ಠೇವಣಿ ಯೋಜನೆಯಾಗಿದೆ. ‘ಅಮೃತ್ ವೃಷ್ಟಿ’ ಎಫ್‌ಡಿ ಯೋಜನೆಯು 444 ದಿನಗಳಲ್ಲಿ ಪಕ್ವವಾಗುತ್ತದೆ. ‘ಅಮೃತ್ ವೃಷ್ಟಿ’ ಎಫ್‌ಡಿ ಯೋಜನೆಯಡಿಯಲ್ಲಿ, ಎಸ್‌ಬಿಐ ತನ್ನ ಗ್ರಾಹಕರಿಗೆ ಸಾಮಾನ್ಯ ನಾಗರಿಕರಿಗೆ ಶೇಕಡಾ 7.25 ರಷ್ಟು ಮತ್ತು…

Read More

STellar studio & event management ಸಂಸ್ಥೆ, PRK AUDIO ಸಂಸ್ಥೆಯ ಸಹಯೋಗದೊಂದಿಗೆ ಚೇತನ್ ಸೂರ್ಯ, ಅರ್ಜುನ್ ಹಾಗೂ ಪಾರಿತೋಷ್ ಅವರು ಆಯೋಜಿಸುತ್ತಿರುವ “CSBL” “ಸೆಲೆಬ್ರಿಟಿ ಶಟಲ್ ಬ್ಯಾಡ್ಮಿಂಟನ್ ಲೀಗ್ ಸೀಸನ್ 1” ಉದ್ಘಾಟನಾ ಹಾಗೂ ಲೋಗೊ ಲಾಂಚ್ ಸಮಾರಂಭ ನಗರದ ಖಾಸಗಿ ಹೋಟೆಲ್ ನಲ್ಲಿ ಅದ್ದೂರಿಯಾಗಿ ನೆರವೇರಿತು. ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಭಾರತದ ಖ್ಯಾತ ಶಟಲ್ ಬ್ಯಾಡ್ಮಿಂಟನ್ ಆಟಗಾರ ಶ್ರೀಕಾಂತ್ ಕಿಡಂಬಿ “CSBL” ಸೀಸನ್ 1 ಲೋಗೊ ಹಾಗೂ ಟ್ರೋಫಿ ಅನಾವರಣ ಮಾಡಿದರು. ಇದೇ ಸಂದರ್ಭದಲ್ಲಿ ಪುನೀತ್ ರಾಜಕುಮಾರ್ ಅವರ 50 ನೇ ಹುಟ್ಟುಹಬ್ಬವನ್ನು ಸಹ ಅದ್ದೂರಿಯಾಗಿ ಆಚರಿಸಲಾಯಿತು. ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು, ಶರವಣ(ಸಾಯಿ ಗೋಲ್ಡ್ ಪ್ಯಾಲೆಸ್), ನಟ ಅನಿರುದ್ಧ್ ಜತ್ಕರ್, ನಟಿ ರಾಗಿಣಿ ದ್ವಿವೇದಿ, ಸಾ.ರಾ.ಗೋವಿಂದು, ಪತ್ರಕರ್ತ ಸದಾಶಿವ ಶೆಣೈ ಮುಂತಾದವರು ಸಮಾರಂಭಕ್ಕೆ ಆಗಮಿಸಿ “CSBL” ಯಶಸ್ವಿಯಾಗಲೆಂದು ಹಾರೈಸಿದರು. ವರ್ಣರಂಜಿತ ವೇದಿಕೆಯಲ್ಲಿ ಪುನೀತ್ ರಾಜಕುಮಾರ್ ಚಿತ್ರದ ಹಾಡುಗಳಿಗೆ ಹೆಸರಾಂತ ನೃತ್ಯ ತಂಡದವರು ಹೆಜ್ಜೆ ಹಾಕಿದರು. “CSBL”…

Read More

ಸೇವಾ ಮನೋಭಾವದ ಹಳ್ಳಿಯ ಯುವಕನೊಬ್ಬನ ಸುತ್ತ ನಡೆಯುವ ಕಥಾಹಂದರ ಒಳಗೊಂಡ ಚಿತ್ರ ‘ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ’. ಈಹಿಂದೆ ಯಶ್ ನಟನೆಯ ರಾಜಾಹುಲಿ ಚಿತ್ರಕ್ಕೆ ಅಸಿಸ್ಟೆಂಟ್ ಆಗಿ ಕೆಲಸ ಮಾಡಿದ್ದ ಹೊನ್ನರಾಜ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಇದೇ ಮೊದಲಬಾರಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಅಲ್ಲದೆ ಶ್ರೀ ಸತ್ಯಲಕ್ಷ್ಮಿ ಕ್ರಿಯೇಶನ್ಸ್ ಮೂಲಕ ಚಿತ್ರ ನಿರ್ಮಾಣ ಸಹ ಮಾಡಿದ್ದಾರೆ. ಹೊನ್ನರಾಜ್ ಅವರೇ ನಾಯಕನಾಗಿಯೂ ನಟಿಸಿರುವ ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ ಬಿಡುಗಡೆಗೆ ಸಿದ್ದವಾಗಿದ್ದು, ಹೊನ್ನರಾಜ್ ರ ಹುಟ್ಟುಹಬ್ಬದಂದು ಚಿತ್ರದ ಟೀಸರನ್ನು ಸಚಿವರಾದ ಹೆಚ್.ಕೆ.ಪಾಟೀಲ್ ಅವರು ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಸಚಿವರು ಹೊನ್ನರಾಜ್ ಸಿನಿಮಾ ಬಗ್ಗೆ ಸಾಕಷ್ಟು ಕನಸುಗಳನ್ಬು ಕಟ್ಟಿಕೊಂಡಿದ್ದಾರೆ. ಈ ಚಿತ್ರ ಮಾಡಲು ತುಂಬಾ ಕಷ್ಟಪಟ್ಟಿದ್ದಾರೆ. ಬೆವರು, ರಕ್ತ ಸುರಿಸಿದ್ದಾರೆ. ಈ ಚಿತ್ರದಿಂದ ಅವರಿಗೆ ಪ್ರಶಸ್ತಿ ಬರುವಂತಾಗಲಿ, ಎನ್ನುತ್ತಾ ಅವರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಾಯಕ ಹೊನ್ನರಾಜ್ ಮಾತನಾಡುತ್ತ ನಾನು ಪಾಟೀಲರ ಮನೆಯ ಮುಂದೆ ಆಡಿ ಬೆಳೆದ…

Read More

ಹುಬ್ಬಳ್ಳಿ : ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ಪಕ್ಷಕ್ಕೆ ಬಂದ್ರೆ ಕರೆದುಕೊಳ್ಳುತ್ತೇವೆ ಎಂದು ಶಾಸಕ ರಾಜು ಕಾಗೆ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಶಾಸಕ ರಾಜು‌ ಕಾಗೆ ಪ್ರತಿಕ್ರಿಯೆ ನೀಡಿದರು. ಹೈಕಮಾಂಡ್ ಜೊತೆಗೆ ಚರ್ಚೆ ಮಾಡಿ ಕರೆದುಕೊಂಡು ಬನ್ನಿ ಅಂದ್ರೆ ಸ್ವಾಗತ ಮಾಡುತ್ತೀನಿ. ನಾನೇ ಬಸನಗೌಡ ಪಾಟೀಲ್ ಯತ್ನಾಳರನ್ನು ಕಾಂಗ್ರೆಸ್ ಗೆ ಕರೆದುಕೊಂಡು ಬರುತ್ತೇನೆ. ನನಗೆ ಜಾವಾಬ್ದಾರಿ ಕೊಟ್ಟರೆ ಕರೆದುಕೊಂಡು ಬರುತ್ತೇನೆ ಎಂದರು. https://ainkannada.com/swamijis-decision-to-support-yatnal-was-wrong-vijayananda-kashappanavar/ ಇನ್ನೂ ಬೆಲೆ ಏರಿಕೆಯಿಂದ ಅಷ್ಟೇನೂ ಹೊರೆ ಆಗೋದಿಲ್ಲಾ ನಮಗೂ ಇತಿ ಮಿತಿ ಇದೆ. ಹೊಸ ಬಸ್ ನಿಲ್ದಾಣ ನಿರ್ಮಾಣ, ಹೊಸ ಬಸ್ ಖರೀದಿ ಮಾಡುತ್ತಿದ್ದೇವೆ. ಸದ್ಯದ ವ್ಯವಸ್ಥೆ ಸರಿಪಡಿಸಬೇಕು. ನೋ ಪ್ರಾಪಿಟ್ , ನೋ ಲಾಸ್ ನಲ್ಲಿ ಸಂಸ್ಥೆ ನಡೆಯಬೇಕು. ಐದು ಗ್ಯಾರಂಟಿ ಜನರಿಗೆ ಉಪಯೋಗ ಆಗುತ್ತಿದೆ. ಅಂದು ನಮ್ಮ ಯೋಜನೆಗಳನ್ನ ಯಾರು ವಿರೋಧ ಮಾಡುತ್ತಿದ್ದರು ಅವರೇ ನಮ್ಮನ್ನ ಕಾಫಿ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಡೆತಡೆ ಸಹಜ ಆದರೆ ಸಿದ್ದರಾಮಯ್ಯ ಪಾರದರ್ಶಕವಾಗಿ ಸರ್ಕಾರ ನಡೆಸುತ್ತಿದ್ದಾರೆ

Read More

ಬೆಂಗಳೂರು: ಬಾರ್ ಒಳಗೆ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ಕೇಸ್ ಗೆ ಸಂಬಂಧಿಸಿದಂತೆ  ಮಹಾಲಕ್ಷ್ಮಿ ಲೇಔಟ್ ಪೊಲೀಸರಿಂದ ಮೂವರನ್ನು ಬಂಧಿಸಲಾಗಿದೆ. ಗಿರೀಶ್, ಭರತ್, ಮೋಹನ್ ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳು ಮತ್ತು ಹಲ್ಲೆಗೊಳಗಾದವರು ಪರಿಚಿತರಾಗಿದ್ದು, ಹಲ್ಲೆಗೊಳಗಾದವರು ಆರೋಪಿ ಮೋಹನ್ ಗೆ ಕರೆ ಮಾಡಿ ಅವಾಜ್ ಹಾಕಿದ್ರು. https://ainkannada.com/according-to-vastu-sleep-in-this-direction-you-will-get-unexpected-luck-in-life/ ಹಿಂದೆ ದಾಖಲಾಗಿದ್ದ ದೂರು ಸಂಬಂಧ ಕರೆ ಮಾಡಿ ಅವಾಜ್ ಹಾಕಲಾಗಿದ್ದು, ಧೈರ್ಯ ಇದ್ರೆ ಮೀಟ್ ಆಗು ಅಂತ ಪ್ರಚೋದಿಸಿದ್ರು. ಇದ್ರಿಂದ ಕೋಪಗೊಂಡ ಮೋಹನ್ ಇನ್ನಿಬ್ಬರ ಜೊತೆ ಹೋಗಿ ಬಾರ್ ನಲ್ಲಿ ಕೂತಿದ್ದ ವಂಶಿ & ಪವನ್ ಮೇಲೆ ಹಲ್ಲೆ ಮಾಡಿದ್ರು. ಸದ್ಯ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

Read More

ಚಿಕ್ಕಮಗಳೂರು: ವರದಕ್ಷಿಣೆಗಾಗಿ ಪತಿಯೇ ಪತ್ನಿಯ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಚಿಕ್ಕಮಗಳೂರಿನ ಜಿಲ್ಲೆಯ ಎನ್‌ಆರ್‌ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಘಟನೆ ನಡೆದಿದೆ. ಮಮತಾ ಮೃತರಾಗಿದ್ದು, ಆಕೆಯನ್ನು 4 ವರ್ಷಗಳ ಹಿಂದೆ ಅವಿನಾಶ್ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. ಮದುವೆ ಸಮಯದಲ್ಲಿ 110 ಗ್ರಾಂ ಚಿನ್ನವನ್ನು ನೀಡಲಾಗಿತ್ತು. ಆದರೆ ಹಣಕ್ಕಾಗಿ ಮಮತಾಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದರು. ಇದರಿಂದಾಗಿ ಮಮತಾ ತವರು ಮನೆ ಸೇರಿದ್ದರು. ಆದರೆ ಎಲ್ಲರೂ ಸೇರಿ ರಾಜಿಪಂಚಾಯ್ತಿ ಮಾಡಿಸಿದ ಬಳಿಕ ಮತ್ತೆ ಗಂಡನ ಜೊತೆಗೆ ತೆರಳಿದ್ದರು. https://ainkannada.com/sbi-bank-robbery-case-five-accused-arrested/ ಆದರೆ ಜ.25ರಂದು ಮಮತಾಗೆ ಪಿಡ್ಸ್ ಬಂದಿದೆ ಎಂದು ಅವಿನಾಶ್ ಆಸ್ಪತ್ರೆಗೆ ದಾಖಲಿಸಿದ್ದ. ಎರಡು ತಿಂಗಳಿಂದ ಮಮತಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆಕೆ ಹುಷಾರಾಗುವ ಮುನ್ನವೇ ಗಂಡನ ಮನೆಯವರು ಮನೆಗೆ ಕರೆದುಕೊಂಡು ಬಂದಿದ್ದಾರೆ. ಮನೆಗೆ ಕರೆದುಕೊಂಡು ಬಂದ ಬಳಿಕ ಆಕೆ ಸಾವನ್ನಪ್ಪಿದ್ದಾಳೆ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ಸದ್ಯ ಮಮತಾ ಗಂಡ, ಅತ್ತೆ ಹಾಗೂ ಮಾವನ ವಿರುದ್ಧ ಮೃತ ಮಮತಾ ಮನೆಯವರು ದೂರು ನೀಡಿದ್ದು,…

Read More

ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್. ಗರುಡಾಚಾರ್ ಅವರು ಶುಕ್ರವಾರ ನಿಧನರಾಗಿದ್ದಾರೆ. ಬೆಂಗಳೂರು ನಗರದಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಅನ್ನು ಸ್ಥಾಪಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಇವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು. ಬೆಂಗಳೂರಿನ ನಿವಾಸದಲ್ಲಿ ಬಿ.ಎನ್.ಗರುಡಾಚಾರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 90ರ ಹರೆಯದ ಗರುಡಾಚಾರ್ ಅವರು ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ದಕ್ಷತೆ ಮತ್ತು ಪ್ರಾಮಾಣಿಕತೆಯ ರೂಪವಾಗಿದ್ದರು. ಶನಿವಾರ ಸಂಜೆ 4 ಗಂಟೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಓದಿನ ನಂತರ ಸರ್ವೇಯರ್, ಅಬಕಾರಿ ಇನ್ಸ್ಪೆಕ್ಟರ್ ಕೆಲಸಕ್ಕೆ ಸೇರಿದರು. ಅಲ್ಲಿಂದ ನೇರವಾಗಿ ಐಪಿಎಸ್ ಮಾಡಿ, ತಿರುವನ್ವೇಲಿಯಲ್ಲಿ ಅಸಿಸ್ಟೆಂಟ್ ಪೊಲೀಸ್ ಕಮಿಷನರ್ ಹುದ್ದೆ ಅಲಂಕರಿಸಿದ ಗುರುಡಾಚಾರ್‌ಗೆ, ಬಿಂಡಿಗನವಿಲೆಯ ಬಡತನ, ಹಸಿವು, ಅವಮಾನ, ಹಿಂಜರಿಕೆ, ಮುಗ್ಧತೆ, ಪ್ರಾಮಾಣಿಕತೆ ಎಲ್ಲವೂ ಬೆನ್ನಿಗಿದ್ದವು. ಅವುಗಳ ಅಗಾಧ ಅನುಭವ ಅವರನ್ನು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರುವಲ್ಲಿ ಪ್ರಶಸ್ತಿ, ಪುರಸ್ಕಾರ, ಪ್ರಶಂಸೆ ಪಡೆಯುವಲ್ಲಿ ಉದ್ದಕ್ಕೂ ಸಹಕರಿಸಿದ್ದವು. ಪೊಲೀಸ್…

Read More