STellar studio & event management ಸಂಸ್ಥೆ, PRK AUDIO ಸಂಸ್ಥೆಯ ಸಹಯೋಗದೊಂದಿಗೆ ಚೇತನ್ ಸೂರ್ಯ, ಅರ್ಜುನ್ ಹಾಗೂ ಪಾರಿತೋಷ್ ಅವರು ಆಯೋಜಿಸುತ್ತಿರುವ “CSBL” “ಸೆಲೆಬ್ರಿಟಿ ಶಟಲ್ ಬ್ಯಾಡ್ಮಿಂಟನ್ ಲೀಗ್ ಸೀಸನ್ 1” ಉದ್ಘಾಟನಾ ಹಾಗೂ ಲೋಗೊ ಲಾಂಚ್ ಸಮಾರಂಭ ನಗರದ ಖಾಸಗಿ ಹೋಟೆಲ್ ನಲ್ಲಿ ಅದ್ದೂರಿಯಾಗಿ ನೆರವೇರಿತು. ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಭಾರತದ ಖ್ಯಾತ ಶಟಲ್ ಬ್ಯಾಡ್ಮಿಂಟನ್ ಆಟಗಾರ ಶ್ರೀಕಾಂತ್ ಕಿಡಂಬಿ “CSBL” ಸೀಸನ್ 1 ಲೋಗೊ ಹಾಗೂ ಟ್ರೋಫಿ ಅನಾವರಣ ಮಾಡಿದರು. ಇದೇ ಸಂದರ್ಭದಲ್ಲಿ ಪುನೀತ್ ರಾಜಕುಮಾರ್ ಅವರ 50 ನೇ ಹುಟ್ಟುಹಬ್ಬವನ್ನು ಸಹ ಅದ್ದೂರಿಯಾಗಿ ಆಚರಿಸಲಾಯಿತು. ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು, ಶರವಣ(ಸಾಯಿ ಗೋಲ್ಡ್ ಪ್ಯಾಲೆಸ್), ನಟ ಅನಿರುದ್ಧ್ ಜತ್ಕರ್, ನಟಿ ರಾಗಿಣಿ ದ್ವಿವೇದಿ, ಸಾ.ರಾ.ಗೋವಿಂದು, ಪತ್ರಕರ್ತ ಸದಾಶಿವ ಶೆಣೈ ಮುಂತಾದವರು ಸಮಾರಂಭಕ್ಕೆ ಆಗಮಿಸಿ “CSBL” ಯಶಸ್ವಿಯಾಗಲೆಂದು ಹಾರೈಸಿದರು. ವರ್ಣರಂಜಿತ ವೇದಿಕೆಯಲ್ಲಿ ಪುನೀತ್ ರಾಜಕುಮಾರ್ ಚಿತ್ರದ ಹಾಡುಗಳಿಗೆ ಹೆಸರಾಂತ ನೃತ್ಯ ತಂಡದವರು ಹೆಜ್ಜೆ ಹಾಕಿದರು. “CSBL”…
Author: Author AIN
ಸೇವಾ ಮನೋಭಾವದ ಹಳ್ಳಿಯ ಯುವಕನೊಬ್ಬನ ಸುತ್ತ ನಡೆಯುವ ಕಥಾಹಂದರ ಒಳಗೊಂಡ ಚಿತ್ರ ‘ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ’. ಈಹಿಂದೆ ಯಶ್ ನಟನೆಯ ರಾಜಾಹುಲಿ ಚಿತ್ರಕ್ಕೆ ಅಸಿಸ್ಟೆಂಟ್ ಆಗಿ ಕೆಲಸ ಮಾಡಿದ್ದ ಹೊನ್ನರಾಜ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಇದೇ ಮೊದಲಬಾರಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಅಲ್ಲದೆ ಶ್ರೀ ಸತ್ಯಲಕ್ಷ್ಮಿ ಕ್ರಿಯೇಶನ್ಸ್ ಮೂಲಕ ಚಿತ್ರ ನಿರ್ಮಾಣ ಸಹ ಮಾಡಿದ್ದಾರೆ. ಹೊನ್ನರಾಜ್ ಅವರೇ ನಾಯಕನಾಗಿಯೂ ನಟಿಸಿರುವ ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ ಬಿಡುಗಡೆಗೆ ಸಿದ್ದವಾಗಿದ್ದು, ಹೊನ್ನರಾಜ್ ರ ಹುಟ್ಟುಹಬ್ಬದಂದು ಚಿತ್ರದ ಟೀಸರನ್ನು ಸಚಿವರಾದ ಹೆಚ್.ಕೆ.ಪಾಟೀಲ್ ಅವರು ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಸಚಿವರು ಹೊನ್ನರಾಜ್ ಸಿನಿಮಾ ಬಗ್ಗೆ ಸಾಕಷ್ಟು ಕನಸುಗಳನ್ಬು ಕಟ್ಟಿಕೊಂಡಿದ್ದಾರೆ. ಈ ಚಿತ್ರ ಮಾಡಲು ತುಂಬಾ ಕಷ್ಟಪಟ್ಟಿದ್ದಾರೆ. ಬೆವರು, ರಕ್ತ ಸುರಿಸಿದ್ದಾರೆ. ಈ ಚಿತ್ರದಿಂದ ಅವರಿಗೆ ಪ್ರಶಸ್ತಿ ಬರುವಂತಾಗಲಿ, ಎನ್ನುತ್ತಾ ಅವರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಾಯಕ ಹೊನ್ನರಾಜ್ ಮಾತನಾಡುತ್ತ ನಾನು ಪಾಟೀಲರ ಮನೆಯ ಮುಂದೆ ಆಡಿ ಬೆಳೆದ…
ಹುಬ್ಬಳ್ಳಿ : ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ಪಕ್ಷಕ್ಕೆ ಬಂದ್ರೆ ಕರೆದುಕೊಳ್ಳುತ್ತೇವೆ ಎಂದು ಶಾಸಕ ರಾಜು ಕಾಗೆ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಶಾಸಕ ರಾಜು ಕಾಗೆ ಪ್ರತಿಕ್ರಿಯೆ ನೀಡಿದರು. ಹೈಕಮಾಂಡ್ ಜೊತೆಗೆ ಚರ್ಚೆ ಮಾಡಿ ಕರೆದುಕೊಂಡು ಬನ್ನಿ ಅಂದ್ರೆ ಸ್ವಾಗತ ಮಾಡುತ್ತೀನಿ. ನಾನೇ ಬಸನಗೌಡ ಪಾಟೀಲ್ ಯತ್ನಾಳರನ್ನು ಕಾಂಗ್ರೆಸ್ ಗೆ ಕರೆದುಕೊಂಡು ಬರುತ್ತೇನೆ. ನನಗೆ ಜಾವಾಬ್ದಾರಿ ಕೊಟ್ಟರೆ ಕರೆದುಕೊಂಡು ಬರುತ್ತೇನೆ ಎಂದರು. https://ainkannada.com/swamijis-decision-to-support-yatnal-was-wrong-vijayananda-kashappanavar/ ಇನ್ನೂ ಬೆಲೆ ಏರಿಕೆಯಿಂದ ಅಷ್ಟೇನೂ ಹೊರೆ ಆಗೋದಿಲ್ಲಾ ನಮಗೂ ಇತಿ ಮಿತಿ ಇದೆ. ಹೊಸ ಬಸ್ ನಿಲ್ದಾಣ ನಿರ್ಮಾಣ, ಹೊಸ ಬಸ್ ಖರೀದಿ ಮಾಡುತ್ತಿದ್ದೇವೆ. ಸದ್ಯದ ವ್ಯವಸ್ಥೆ ಸರಿಪಡಿಸಬೇಕು. ನೋ ಪ್ರಾಪಿಟ್ , ನೋ ಲಾಸ್ ನಲ್ಲಿ ಸಂಸ್ಥೆ ನಡೆಯಬೇಕು. ಐದು ಗ್ಯಾರಂಟಿ ಜನರಿಗೆ ಉಪಯೋಗ ಆಗುತ್ತಿದೆ. ಅಂದು ನಮ್ಮ ಯೋಜನೆಗಳನ್ನ ಯಾರು ವಿರೋಧ ಮಾಡುತ್ತಿದ್ದರು ಅವರೇ ನಮ್ಮನ್ನ ಕಾಫಿ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಡೆತಡೆ ಸಹಜ ಆದರೆ ಸಿದ್ದರಾಮಯ್ಯ ಪಾರದರ್ಶಕವಾಗಿ ಸರ್ಕಾರ ನಡೆಸುತ್ತಿದ್ದಾರೆ
ಬೆಂಗಳೂರು: ಬಾರ್ ಒಳಗೆ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ಕೇಸ್ ಗೆ ಸಂಬಂಧಿಸಿದಂತೆ ಮಹಾಲಕ್ಷ್ಮಿ ಲೇಔಟ್ ಪೊಲೀಸರಿಂದ ಮೂವರನ್ನು ಬಂಧಿಸಲಾಗಿದೆ. ಗಿರೀಶ್, ಭರತ್, ಮೋಹನ್ ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳು ಮತ್ತು ಹಲ್ಲೆಗೊಳಗಾದವರು ಪರಿಚಿತರಾಗಿದ್ದು, ಹಲ್ಲೆಗೊಳಗಾದವರು ಆರೋಪಿ ಮೋಹನ್ ಗೆ ಕರೆ ಮಾಡಿ ಅವಾಜ್ ಹಾಕಿದ್ರು. https://ainkannada.com/according-to-vastu-sleep-in-this-direction-you-will-get-unexpected-luck-in-life/ ಹಿಂದೆ ದಾಖಲಾಗಿದ್ದ ದೂರು ಸಂಬಂಧ ಕರೆ ಮಾಡಿ ಅವಾಜ್ ಹಾಕಲಾಗಿದ್ದು, ಧೈರ್ಯ ಇದ್ರೆ ಮೀಟ್ ಆಗು ಅಂತ ಪ್ರಚೋದಿಸಿದ್ರು. ಇದ್ರಿಂದ ಕೋಪಗೊಂಡ ಮೋಹನ್ ಇನ್ನಿಬ್ಬರ ಜೊತೆ ಹೋಗಿ ಬಾರ್ ನಲ್ಲಿ ಕೂತಿದ್ದ ವಂಶಿ & ಪವನ್ ಮೇಲೆ ಹಲ್ಲೆ ಮಾಡಿದ್ರು. ಸದ್ಯ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು: ವರದಕ್ಷಿಣೆಗಾಗಿ ಪತಿಯೇ ಪತ್ನಿಯ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಚಿಕ್ಕಮಗಳೂರಿನ ಜಿಲ್ಲೆಯ ಎನ್‌ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಘಟನೆ ನಡೆದಿದೆ. ಮಮತಾ ಮೃತರಾಗಿದ್ದು, ಆಕೆಯನ್ನು 4 ವರ್ಷಗಳ ಹಿಂದೆ ಅವಿನಾಶ್ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. ಮದುವೆ ಸಮಯದಲ್ಲಿ 110 ಗ್ರಾಂ ಚಿನ್ನವನ್ನು ನೀಡಲಾಗಿತ್ತು. ಆದರೆ ಹಣಕ್ಕಾಗಿ ಮಮತಾಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದರು. ಇದರಿಂದಾಗಿ ಮಮತಾ ತವರು ಮನೆ ಸೇರಿದ್ದರು. ಆದರೆ ಎಲ್ಲರೂ ಸೇರಿ ರಾಜಿಪಂಚಾಯ್ತಿ ಮಾಡಿಸಿದ ಬಳಿಕ ಮತ್ತೆ ಗಂಡನ ಜೊತೆಗೆ ತೆರಳಿದ್ದರು. https://ainkannada.com/sbi-bank-robbery-case-five-accused-arrested/ ಆದರೆ ಜ.25ರಂದು ಮಮತಾಗೆ ಪಿಡ್ಸ್ ಬಂದಿದೆ ಎಂದು ಅವಿನಾಶ್ ಆಸ್ಪತ್ರೆಗೆ ದಾಖಲಿಸಿದ್ದ. ಎರಡು ತಿಂಗಳಿಂದ ಮಮತಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆಕೆ ಹುಷಾರಾಗುವ ಮುನ್ನವೇ ಗಂಡನ ಮನೆಯವರು ಮನೆಗೆ ಕರೆದುಕೊಂಡು ಬಂದಿದ್ದಾರೆ. ಮನೆಗೆ ಕರೆದುಕೊಂಡು ಬಂದ ಬಳಿಕ ಆಕೆ ಸಾವನ್ನಪ್ಪಿದ್ದಾಳೆ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ಸದ್ಯ ಮಮತಾ ಗಂಡ, ಅತ್ತೆ ಹಾಗೂ ಮಾವನ ವಿರುದ್ಧ ಮೃತ ಮಮತಾ ಮನೆಯವರು ದೂರು ನೀಡಿದ್ದು,…
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್. ಗರುಡಾಚಾರ್ ಅವರು ಶುಕ್ರವಾರ ನಿಧನರಾಗಿದ್ದಾರೆ. ಬೆಂಗಳೂರು ನಗರದಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಅನ್ನು ಸ್ಥಾಪಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಇವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು. ಬೆಂಗಳೂರಿನ ನಿವಾಸದಲ್ಲಿ ಬಿ.ಎನ್.ಗರುಡಾಚಾರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 90ರ ಹರೆಯದ ಗರುಡಾಚಾರ್ ಅವರು ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ದಕ್ಷತೆ ಮತ್ತು ಪ್ರಾಮಾಣಿಕತೆಯ ರೂಪವಾಗಿದ್ದರು. ಶನಿವಾರ ಸಂಜೆ 4 ಗಂಟೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಓದಿನ ನಂತರ ಸರ್ವೇಯರ್, ಅಬಕಾರಿ ಇನ್ಸ್ಪೆಕ್ಟರ್ ಕೆಲಸಕ್ಕೆ ಸೇರಿದರು. ಅಲ್ಲಿಂದ ನೇರವಾಗಿ ಐಪಿಎಸ್ ಮಾಡಿ, ತಿರುವನ್ವೇಲಿಯಲ್ಲಿ ಅಸಿಸ್ಟೆಂಟ್ ಪೊಲೀಸ್ ಕಮಿಷನರ್ ಹುದ್ದೆ ಅಲಂಕರಿಸಿದ ಗುರುಡಾಚಾರ್‌ಗೆ, ಬಿಂಡಿಗನವಿಲೆಯ ಬಡತನ, ಹಸಿವು, ಅವಮಾನ, ಹಿಂಜರಿಕೆ, ಮುಗ್ಧತೆ, ಪ್ರಾಮಾಣಿಕತೆ ಎಲ್ಲವೂ ಬೆನ್ನಿಗಿದ್ದವು. ಅವುಗಳ ಅಗಾಧ ಅನುಭವ ಅವರನ್ನು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರುವಲ್ಲಿ ಪ್ರಶಸ್ತಿ, ಪುರಸ್ಕಾರ, ಪ್ರಶಂಸೆ ಪಡೆಯುವಲ್ಲಿ ಉದ್ದಕ್ಕೂ ಸಹಕರಿಸಿದ್ದವು. ಪೊಲೀಸ್…
ಹುಬ್ಬಳ್ಳಿ; ರಾಜ್ಯದಲ್ಲಿ ಬಿಸಿಲು ಜಾಸ್ತಿಯಾಗಿದೆ. ಕುಡಿಯೋ ನೀರಿನ ನಿರ್ವಹಣೆ ಮಹತ್ವದ ಕೆಲಸ. ಆದ್ದರಿಂದ ಸಚಿವ ಸಂಪುಟದಲ್ಲಿ ಮಹತ್ವದ ಚರ್ಚೆಯಾಗಿದೆ. ರಾಜ್ಯದ ಜಲಾಶಯಗಳಿಂದ ನೀರಿನ ಬಿಡುಗಡೆ ಕುರಿತು ಚರ್ಚೆಯಾಗಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಿಯೋ ನೀರಿನ ನಿರ್ವಹಣೆ ಬಗ್ಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚನೆಯಾಗಲಿದ್ದು, ಒಂದು ವಾರದೊಳಗೆ ಚರ್ಚೆ ಮಾಡಿ ಸೂಕ್ತ ನಿರ್ದೇಶನ ನೀಡಲಿದ್ದಾರೆ ಎಂದರು. https://www.youtube.com/watch?v=dashV_C7m1M ಹಾಲಿನ ದರ ಕರೆಂಟ್ ದರ ಹೆಚ್ಚಳಕ್ಕೆ ಪಾಟೀಲ್ ಸಮರ್ಥನೆ ದೇಶದ ಯಾವುದೇ ರಾಜ್ಯ ನೋಡಿ, ನಮ್ಮ ರಾಜ್ಯದಲ್ಲಿ ಐದು ರೂಪಾಯಿ ಕಡಿಮೆ ಇದೆ. ರೈತರ ಬೇಡಿಕೆ ಗಮನಿಸಿ,ಎಷ್ಟು ಕಡಿಮೆ ಸಾಧ್ಯವೋ,ಅಷ್ಟು ಹೆಚ್ಚು ಮಾಡಿದ್ದೇವೆ. ಹೆಚ್ಚಳ ಮಾಡಿರೋ 4 ರೂಪಾಯಿ ರೈತರಿಗೆ ಹೋಗತ್ತೆ ಎಂದರು. ಮುಸ್ಲಿಂ ಮೀಸಲಾತಿ ವಿಚಾರ ಮುಸಲ್ಮಾನರಿಗೆ ಮೀಸಲಾತಿ ವಿಚಾರವಾಗಿ ಬಿಜೆಪಿಯವರು ಅಫಡವಿಟ್ ಕೊಟ್ಟಿದ್ದಾರೆ. ಬಿಜೆಪಿಯವರು ಇದನ್ನ ರಾಜಕೀಯ ವಿಷಯವಾಗಿ ಮಾಡ್ತೀದಾರೆ ಎಂದರು.
ಕೊಪ್ಪಳ : ಅಂಜನಾದ್ರಿ ಬೆಟ್ಟಕ್ಕೆ ತನ್ನದೇ ಐತಿಹ್ಯ ಇದ್ದು, ಪ್ರಸಿದ್ಧ ಧಾರ್ಮಿಕ ಪ್ರವಾಸಿ ತಾಣವಾಗಿದೆ. ಇದೀಗ ಐತಿಹಾಸಿಕ ಹಿನ್ನೆಲೆಯುಳ್ಳ ಆಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಿಸಲು ಸರ್ಕಾರ ಮುಂದಾಗಿದೆ. ಹೌದು, ಗಂಗಾವತಿ ತಾಲೂಕಿನ ಚಿಕ್ಕರಾಂಪೂರ ಗ್ರಾಮದ ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಹೀಗಾಗಿ ಕಳೆದ ಗುರುವಾರ ಶಾಸಕ ಗಾಲಿ ಜನಾರ್ದನ ರೆಡ್ಡಿಯವರ ನೇತೃತ್ವದಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬೆಟ್ಟದ ಹಿಂಬದಿಯಿಂದ ರೋಪ್ ವೇ ನಿರ್ಮಾಣಕ್ಕೆ ಸ್ಥಳ ಗುರುತು ಮಾಡಲಾಗಿದ್ದು, 450 ಮೀ. ಉದ್ದದ ರೋಪ್ ವೇ ನಿರ್ಮಾಣಕ್ಕೆ ನಿರ್ಧರಿಸಿದೆ. ಅದರಲ್ಲಿ ಒಂದು ಗಂಟೆಯಲ್ಲಿ 800 ಭಕ್ತಾಧಿಗಳನ್ನು ಅಂಜನಾದ್ರಿ ಬೆಟ್ಟದ ಮೇಲೆ ತಲುಪಿಸಬಹುದಾಗಿದೆ. https://www.youtube.com/watch?v=dashV_C7m1M ಇನ್ನೂ ಈ ಬಗ್ಗೆ ಮಾತನಾಡಿರುವ ಶಾಸಕ ಗಾಲಿ ಜನಾರ್ದನ ರೆಡ್ಡಿ, ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ವಿಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಜೊತೆ ಮಾತುಕತೆ ನಡೆಸಿ, ರೋಪ್ ವೇ ನಿರ್ಮಾಣ ಕ್ಕೆ…
ಬಾಗಲಕೋಟೆ: ಪಕ್ಷದಡಿಯಲ್ಲಿ ಗುರುತಿಸಿಕೊಂಡ ಯಾರೇ ಆಗಲಿ ಇತಿಮಿತಿ ಇರಬೇಕು ಎಂದು ಬಿಜೆಪಿಯಿಂದ ಯತ್ನಾಳ್ ಉಚ್ಚಾಟನೆ ಬಗ್ಗೆ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಪ್ರತಿಕ್ರಿಯಿಸಿದ್ದಾರೆ. ಕೂಡಲಸಂಗಮದಲ್ಲಿ ಮಾತನಾಡಿದ ಅವರು, ಯಾವುದಕ್ಕೆ ಆದರೂ ಇತಿ, ಮಿತಿ ಇರುತ್ತೆ. ಪಕ್ಷದಡಿಯಲ್ಲಿ ಗುರುತಿಸಿಕೊಂಡ ಯಾರೇ ಆಗಲಿ ಇತಿಮಿತಿ ಇರಬೇಕು. ಅಂತಹ ಇತಿ,ಮಿತಿ ದಾಟಿದಾಗ ಇಂತಹವು ನಡೆಯುತ್ತವೆ. ಇತಿಮಿತಿ ದಾಟಿದಾಗ ಪಕ್ಷ ಇಂತಹ ನಿರ್ಣಯ ಕೈಗೊಳ್ಳಬೇಕಾಗುತ್ತದೆ. ಪಕ್ಷ, ಪಕ್ಷದ ನಾಯಕರು, ಕುಟುಂಬದ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿದರು. ಪಕ್ಷದ ಬಗ್ಗೆ, ಧರ್ಮದ ಬಗ್ಗೆನೂ ಮಾತನಾಡೋದು ಬಿಡಲಿಲ್ಲ. ಬಿಜೆಪಿ ಪಕ್ಷದ ತೆಗೆದುಕೊಂಡ ನಿರ್ಣಯ ಸರಿಯಿದೆ ಎಂದರು. https://ainkannada.com/yatnal-expulsion-order-soon-returns-bjp-jayamritunjaya-sri-dead-line/ ಪಂಚಮಸಾಲಿ ಶಾಸಕರು ಬಿಜೆಪಿ ಬಿಟ್ಟು ಬರವಂತೆ ಪಂಚಮಸಾಲಿ ಜಯಮೃತ್ಯುಂಜಯ ಶ್ರೀ ಕರೆ ವಿಚಾರವಾಗಿ ಮಾತನಾಡಿದ ಅವರು, ಗುರುಗಳಾದಂತವರಿಗೆ ಸಲಹೆ ಕೊಡಬಾರದು ಅಂತ ನಾನು ಅಂದುಕೊಂಡಿದ್ದೇನೆ. ನಾನು ಸಮಾಜದಲ್ಲಿ ಜನಿಸಿದವನು. ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷನಾದವನು. ಇಂತಹ ಕರೆ, ನಿರ್ಧಾರ ತೆಗೆದುಕೊಳ್ಳುವುದು ಯಾರನ್ನ ಕೇಳಿ…
ಬಾಲಿವುಡ್ ಸ್ಟಾರ್ ಹೀರೋ ಸಲ್ಮಾನ್ ಖಾನ್ ಜೀವಕ್ಕೆ ಅಪಾಯವಿದೆ ಎಂದು ತಿಳಿದಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈಗಾಗಲೇ ಈ ನಾಯಕನನ್ನು ಕೊಲ್ಲುವುದಾಗಿ ಹಲವು ಬಾರಿ ಬೆದರಿಕೆ ಹಾಕಿದೆ. ಇದಲ್ಲದೆ, ಸಲ್ಮಾನ್ ಮನೆಯಲ್ಲಿ ಹಲವಾರು ಬಾರಿ ಗುಂಡಿನ ದಾಳಿಗಳು ನಡೆದಿವೆ ಎಂದು ವರದಿಯಾಗಿದೆ. ಇದರೊಂದಿಗೆ ಸಲ್ಮಾನ್ ಜೀವ ರಕ್ಷಿಸಲು ಪೊಲೀಸರು ಭಾರೀ ಭದ್ರತೆ ಒದಗಿಸುತ್ತಿದ್ದಾರೆ. ಮತ್ತೊಂದೆಡೆ, ಸಲ್ಮಾನ್ ಎಲ್ಲಿಗೆ ಹೋದರೂ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗುತ್ತಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಯಾವಾಗಲೂ ಸಲ್ಮಾನ್‌ಗೆ ಹಾನಿ ಮಾಡುತ್ತದೆ ಎಂದು ಅಭಿಮಾನಿಗಳು ಚಿಂತಿತರಾಗಿದ್ದಾರೆ. ಸಲ್ಮಾನ್ ಇತ್ತೀಚೆಗೆ ಸಿಕಂದರ್ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬಂದರು. https://ainkannada.com/according-to-vastu-sleep-in-this-direction-you-will-get-unexpected-luck-in-life/ ಎಆರ್ ಮುರುಗದಾಸ್ ನಿರ್ದೇಶನದ ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಸಲ್ಮಾನ್, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಪ್ರತಿಕ್ರಿಯಿಸಿದರು. “ನಾನು ದೇವರನ್ನು ತುಂಬಾ ನಂಬುತ್ತೇನೆ. ಎಲ್ಲವೂ ಅವನ ನಿಯಂತ್ರಣದಲ್ಲಿದೆ. ದೇವರು ನನಗೆ…