Author: Author AIN

ಬೆಳಗಾವಿ : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆಯಾಗಿದ್ದು, ಇದರ ಬಗ್ಗೆ ಮೊದಲೇ ಗೊತ್ತಿತ್ತು ಎಂದು ಮತ್ತೊಬ್ಬ ರೆಬಲ್‌ ಶಾಸಕ ರಮೇಶ್‌ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್‌ ಉಚ್ಛಾಟನೆ ವಾಸನೆ ಮೊದಲೇ ಸಿಕ್ಕಿತ್ತು. ಆದರೆ ಪಕ್ಷದ ನಿರ್ಣಯ ಪ್ರಶ್ನೆ ಮಾಡುವಷ್ಟು ದೊಡ್ಡವನಲ್ಲ. ನಾಳೆ ಯತ್ನಾಳ್‌ ಜತೆ ಸಭೆ ಸೇರಿ ಮುಂದಿನ ನಿರ್ಧಾರ ಮಾಡುವುದಾಗಿ ಅಲ್ಲದೇ ಹೇಳಿದರು. https://ainkannada.com/protests-are-underway-following-the-expulsion-of-mla-yatnal-supporters-meet/ ಅಲ್ಲದೇ ಯತ್ನಾಳ್‌ ಉಚ್ಛಾಟನೆ ಪುನರ್‌ ಪರಿಶೀಲನೆ ಮಾಡಬೇಕು. ಹೈಕಮಾಂಡ್‌ ಹಾಗೂ ಶಿಸ್ತು ಸಮಿತಿಗೆ ಪತ್ರ ಬರೆಯುತ್ತೇವೆ. ಉಚ್ಛಾಟನೆ ಆದೇಶ ವಾಪಸ್‌ ಪಡೆಯುವಂತೆ ಆಗ್ರಹಿಸುತ್ತೇವೆ. ಯತ್ನಾಳ್‌ ಉಚ್ಛಾಟನೆ ಆದೇಶ ನಮ್ಮ ಮನಸ್ಸಿಗೆ ನೋವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

Read More

ಬೆಂಗಳೂರು: “ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸಂಬಂಧ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಈ ವಿಚಾರವಾಗಿ ಮಾಧ್ಯಮಗಳನ್ನು ಉದ್ದೇಶಿಸಿ ಶಿವಕುಮಾರ್ ಅವರು ಗುರುವಾರ ಮಾತನಾಡಿದರು. “ನಮ್ಮ ಸಂಸದರು ಕರ್ನಾಟಕ ರಾಜ್ಯದ ಸ್ವಾಭಿಮಾನ ಹಾಗೂ ಗೌರವ ಉಳಿಸಲು ಹೋರಾಟ ಮಾಡುತ್ತಿದ್ದಾರೆ. ಹತ್ತಾರು ವರ್ಷಗಳಿಂದ ರಾಯಚೂರಿನಲ್ಲಿ ಏಮ್ಸ್ ಆರಂಭಿಸಬೇಕು ಎಂದು ಪ್ರಸ್ತಾಪ ಮಾಡಲಾಗಿತ್ತು. ನಾನು ವೈದ್ಯಕೀಯ ಶಿಕ್ಷಣ ಸಚಿವನಾಗಿದ್ದಾಗಲೂ ಪ್ರಸ್ತಾವನೆ ಸಲ್ಲಿಸಲಾಗಿತ್ತು. ರಾಯಚೂರಿನಲ್ಲಿ ಜಾಗ ನೀಡುವುದು ಸೇರಿದಂತೆ ಎಲ್ಲ ರೀತಿಯ ಸಹಕಾರ ನೀಡಲು ರಾಜ್ಯ ಸರ್ಕಾರ ಮಾಡಿತ್ತು. ಆದರೆ ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುತ್ತಿಲ್ಲ” ಎಂದು ತಿಳಿಸಿದರು. https://ainkannada.com/according-to-vastu-sleep-in-this-direction-you-will-get-unexpected-luck-in-life/ “ಕೇಂದ್ರ ಸರ್ಕಾರ ಎಲ್ಲಾ ವಿಚಾರದಲ್ಲೂ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ತೋರುತ್ತಾ ಬಂದಿದೆ ಎಂಬುದಕ್ಕೆ ಇದೇ ಸಾಕ್ಷಿ. ಈ ಬಾರಿ ಬಜೆಟ್ ನಲ್ಲಿ ಏಮ್ಸ್ ಘೋಷಣೆ ಮಾಡುತ್ತಾರೆ ಎಂದು ಭಾವಿಸಿದ್ದೆವು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು, ನಮ್ಮ ರಾಜ್ಯಕ್ಕೆ ಏಮ್ಸ್ ನೀಡಲೇಬಾರದು…

Read More

ವಿಜಯಪುರ : ವಿಜಯಪುರ ನಗರ ಶಾಸಕ ಯತ್ನಾಳ್‌ ಉಚ್ಚಾಟನೆ ಬೆನ್ನಲ್ಲೆ ಒಂದು ಕಡೆ ವಿಜಯಪುರದಲ್ಲಿ ಬಿಜೆಪಿ ಪದಾಧಿಕಾರಿಗಳ ರಾಜೀನಾಮೆ ಪರ್ವ ನಡೆಯುತ್ತಿದ್ದರೆ, ಮತ್ತೊಂದು ಕಡೆ ಯತ್ನಾಳ್‌ ಬೆಂಬಲಿಗರು ಪ್ರತಿಭಟನೆಗೆ ಮುಂದಾಗದಿದ್ದಾರೆ. ವಿಜಯಪುರದಲ್ಲಿ ಪಂಚಮಸಾಲಿ ಮುಖಂಡರು, ಯತ್ನಾಳ್ ಬೆಂಬಲಿಗರು ಸಭೆ ನಡೆಸಿದ್ದು, ಪ್ರತಿಭಟನೆಗೆ ನಿರ್ದಾರಿಸಿದ್ದಾರೆ.  ನಗರದ ಫ.ಗು ಹಳಕಟ್ಟಿ ಸಭಾ ಭವನದಲ್ಲಿ ನಡೆದ ಸಭೆಯಲ್ಲಿ ಬೆಂಬಲಿಗರು, ಅಭಿಮಾನಿಗಳು ಹಾಗೂ ಪಾಲಿಕೆ ಅನರ್ಹ ಸದಸ್ಯರು, ಯತ್ನಾಳ್ ಬಣದ ಬಿಜೆಪಿ ಕಾರ್ಯರ್ತರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಯತ್ನಾಳ್‌ ಉಚ್ಚಾಟನೆ ನಡೆಸಿರುವ ಪಕ್ಷದ ನಾಯಕರ ವಿರುದ್ಧ ವಿಜಯಪುರದಲ್ಲಿ ಆಕ್ರೋಶ ವ್ಯಕ್ತಪವಾಗಿದ್ದು, ಯತ್ನಾಳ್‌ ಪರವಾಗಿ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದಾರೆ.

Read More

ಬಸ್‌, ಮೆಟ್ರೋ ಆಯ್ತು…ಈಗ ಹಾಲು ದುಬಾರಿ ಬೆಂಗಳೂರು: ರಾಜಧಾನಿ ಬೆಂಗಳೂರು ಮೆಟ್ರೋ ಪ್ರಯಾಣ ದರ ದುಬಾರಿಯಾದ ಬೆನ್ನಲ್ಲೇ ಕನ್ನಡಿಗರ ಹೆಮ್ಮೆಯ ನಂದಿನಿ ಹಾಲು ಕೂಡ ದುಬಾರಿಯಾಗ್ತಿದೆ. ರಾಜ್ಯದ ಜನತೆ ಯುಗಾದಿ ಹಬ್ಬದ ಸಂಭ್ರದಮಲ್ಲಿರುವಾಗಲೇ ನಂದಿನಿ ಹಾಲಿನ ದರವನ್ನು 4ರೂ. ಏರಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಪ್ರತಿ ಲೀಟರ್‌ ಹಾಲಿನ ದರವನ್ನು 4 ರೂ. ಹೆಚ್ಚಳ ಮಾಡಲಾಗಿದೆ. ಎಷ್ಟು ಹಾಲಿನ ದರ ಏರಿಕೆ ಮಾಡಬೇಕು ಎಂಬ ನಿರ್ಧಾರವನ್ನು ಕೆಎಂಎಫ್‌ ತೀರ್ಮಾನ ಮಾಡಲಿದೆ ಎಂದು ಸಂಪುಟ ಸಭೆ ಬಳಿಕ ಕಾನೂನು ಸಚಿವ ಹೆಚ್.ಕೆ ಪಾಟೀಲ್‌ ಹೇಳಿದ್ದಾರೆ. ಕಳೆದ ವಾರವಷ್ಟೇ ಕರ್ನಾಟಕ ಹಾಲು ಒಕ್ಕೂಟ(ಕೆಎಂಎಫ್‌ ) ಆಡಳಿತ ಮಂಡಳಿಯ ಪದಾಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ನಂದಿನಿ ಹಾಲಿನ ದರ ಏರಿಕೆ ಮಾಡಲು ಅನುಮತಿ ನೀಡುವಂತೆ ಮನವಿ ಮಾಡಿದ್ರು. ಆದರೆ, ಸಂಪುಟ ಸಭೆಯಲ್ಲಿ ನಿರ್ಧಾರ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆದರೆ, ಇದೀಗ ನಂದಿನ ಹಾಲಿನ…

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಮಧ್ಯೆ ದಿನಸಿ, ತರಕಾರಿ ಬೆಲೆ ಗಗನಕ್ಕೇರಿವೆ. ಇದರ ನಡುವೆ ಇದೀಗ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. https://ainkannada.com/according-to-vastu-sleep-in-this-direction-you-will-get-unexpected-luck-in-life/ ಹೌದು ಪ್ರತಿ ಲೀಟರ್‌ ನಂದಿನಿ ಹಾಲಿನ ದರ 4 ರೂ. ಹೆಚ್ಚಳ ಮಾಡಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ನಾಳೆಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. ಯಾವ ಹಾಲಿನ ದರ ಎಷ್ಟಾಗಬಹುದು? – ನೀಲಿ‌ ಪ್ಯಾಕೆಟ್ ಹಾಲು – 44 ರೂ ನಿಂದ 48 ರೂ – ಆರೆಂಜ್ ಪ್ಯಾಕೆಟ್ ಹಾಲು – 54 ರೂ‌. ನಿಂದ 58  ರೂ. – ಸಮೃದ್ಧಿ ಹಾಲಿನ‌ ಪ್ಯಾಕೆಟ್ 56 ರೂ. ನಿಂದ 60 ರೂ. – ಗ್ರೀನ್ ಸ್ಪೇಷಲ್ 54 ರೂ. ನಿಂದ 58 ರೂ. – ನಾರ್ಮಲ್ ಗ್ರೀನ್ 52 ರೂ. ನಿಂದ 56 ರೂ. 6-8 ರೂ. ಹಾಲಿನ ದರ ಹೆಚ್ಚಳಕ್ಕೆ ಒಕ್ಕೂಟಗಳು…

Read More

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಮತಕ್ಷೇತ್ರದ ಗಡಿಭಾಗದ ಕೊನೆಯ ಹಳ್ಳಿ ಹಂದಿಗುಂದ ಗ್ರಾಮವು ಚುನಾಯಿತ ಪ್ರತಿನಿಧಿಗಳೇ ಬೀಗ ಹಾಕಿದ ಘಟನೆ ನಡೆದಿದೆ. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮಹಾದೇವ ಕುಂಬಾರ ಸೇರಿದಂತೆ ರಾಯಬಾಗ ತಾಲೂಕಿನ  ತಾ.ಪಂ ಕಚೇರಿಯ ಅಧಿಕಾರಿಗಳು ರಸ್ತೆ, ಕುಡಿಯುವ ನೀರಿನ ಕಾಮಗಾರಿಗಳ ವಿಳಂಬ ಮಾಡುತ್ತಿರುವ  ಹಿನ್ನೆಲೆಯಲ್ಲಿ ಅಭಿವೃದ್ಧಿ ಅಧಿಕಾರಿಗೆ ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷ ಸೇರಿದಂತೆ ಸರ್ವ ಸದಸ್ಯರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. https://ainkannada.com/accident-on-ben-mai-express-highway-service-road-three-dead/ ಹಂದಿಗುಂದ ಗ್ರಾಮ ಪಂಚಾಯತಿ ಬಾಗಿಲಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.  ತಾಪಂ ಕಾರ್ಯನಿರ್ವಾಹಕ ಅಧಿಕಾರಿ (ಎಡಿ) , ಹಾಗೂ ಅಭಿಯಂತರ ಬರುವವರೆಗೂ ಬಾಗಿಲು ತೆಗೆಯುವುದಿಲ್ಲ ಎಂದು ಬಿಗಿಪಟ್ಟು ಹಿಡಿದಿದ್ದಾರೆ.

Read More

ಮುಂಬೈ ಇಂಡಿಯನ್ಸ್ (ಎಂಐ) ತಂಡದ ಅನುಭವಿ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಕ್ರಿಕೆಟ್ ಮೈದಾನದಿಂದ ಸ್ವಲ್ಪ ವಿರಾಮ ತೆಗೆದುಕೊಂಡು ತಮ್ಮ ತಂಡದ ಆಟಗಾರರೊಂದಿಗೆ ಪಿಕ್ನಿಕ್‌ಗೆ ಹೋದರು. ಐಪಿಎಲ್ 2025 ರಲ್ಲಿ ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧದ ನಿರ್ಣಾಯಕ ಪಂದ್ಯಕ್ಕೂ ಮುನ್ನ, ರೋಹಿತ್ ಜಾಮ್ನಗರದಲ್ಲಿ ದೋಣಿ ವಿಹಾರವನ್ನು ಆನಂದಿಸುತ್ತಿರುವುದು ಕಂಡುಬಂದಿತು. ಯುವ ಬ್ಯಾಟ್ಸ್‌ಮನ್ ತಿಲಕ್ ವರ್ಮಾ, ಸಹಾಯಕ ಸಿಬ್ಬಂದಿ ಸೇರಿದಂತೆ ಇತರ ತಂಡದ ಆಟಗಾರರೊಂದಿಗೆ ಮೈದಾನದ ಹೊರಗೆ ಕೆಲವು ವಿಶ್ರಾಂತಿ ಕ್ಷಣಗಳನ್ನು ಕಳೆದರು. ರೋಹಿತ್ ಶರ್ಮಾ ದೋಣಿ ವಿಹಾರದ ವಿಡಿಯೋವೊಂದು ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಋತುವಿನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ ಎಂಐ ತಂಡ ಸೋತಿತ್ತು. ಚೆಪಾಕ್ ಮೈದಾನದಲ್ಲಿ ನಡೆದ ಆ ಪಂದ್ಯದಲ್ಲಿ ಮುಂಬೈ ತಂಡದ ಬ್ಯಾಟಿಂಗ್ ವಿಭಾಗ ಸಂಪೂರ್ಣವಾಗಿ ವಿಫಲವಾಯಿತು. ಅದರಲ್ಲೂ ಎಡಗೈ ವೇಗಿ ಖಲೀಲ್ ಅಹ್ಮದ್ ಬೌಲಿಂಗ್‌ನಲ್ಲಿ ರೋಹಿತ್ ಶರ್ಮಾ ಔಟ್ ಆಗಿದ್ದು, ವೈಯಕ್ತಿಕವಾಗಿ ಅವರಿಗೆ ಸ್ಮರಣೀಯವಾಗಿತ್ತು. https://ainkannada.com/according-to-vastu-sleep-in-this-direction-you-will-get-unexpected-luck-in-life/ ಟೂರ್ನಿಯನ್ನು ಸೋಲಿನೊಂದಿಗೆ ಆರಂಭಿಸಿದರೂ,…

Read More

ರಾಮನಗರ : ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯ ಸರ್ವೀಸ್ ರಸ್ತೆಯಲ್ಲಿ ಅವಘಡ ಸಂಭವಿಸಿದೆ. ಕ್ಯಾಂಟರ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. https://ainkannada.com/car-hits-tree-office-bearer-who-resigned-in-support-of-yatnal-dies/ ಮೃತರನ್ನು ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದ ಶಿವಪ್ರಕಾಶ್, ಪುಟ್ಟಗೌರಮ್ಮ, ಶಿವರತ್ನ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹಾವೇರಿ : ಯಾರೇ ಆದರೂ ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ಧವಾಗಿರಬೇಕು ಎಂದು ಯತ್ನಾಳ್‌ ಉಚ್ಚಾಟನೆ ವಿಚಾರವಾಗಿ  ಮಾಜಿ ಸಚಿವ ಬಿ.ಸಿ.ಪಾಟೀಲ್‌ ಪ್ರತಿಕ್ರಿಯಿಸಿದ್ದಾರೆ. ಹಾವೇರಿ ‌ಜಿಲ್ಲೆ ಹಿರೇಕೆರೂರು ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಹಳ ದುರಷ್ಟಕರ, ಪಕ್ಷ ಈಗ ಒಳ್ಳೆಯ ನಿರ್ಧಾರ ಮಾಡಿದೆ. ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ದವಾಗಿರಬೇಕು. ಪಕ್ಷದ ಒಳಗೆ ಇದ್ದು ಪಕ್ಷ ವಿರೋಧಿ ಚಟುವಟಿಕೆ ಮಾಡಿದರೆ ಇನ್ನೇನು ಮಾಡಬೇಕು. ಎರಡು ಬಾರಿ ನೋಟೀಸ್ ನೀಡಿದ್ದರು. ಆದರೂ ತಿದ್ದಿಕೊಳ್ಳಲಿಲ್ಲ. ವ್ಯಕ್ತಿಗಿಂತ ಪಕ್ಷ ದೊಡ್ಡದು,  ನಾನು ಹೋದರು ಪಕ್ಷಕ್ಕೆ ಏನೋ ಆಗಲ್ಲ. ಪಕ್ಷ ದೊಡ್ಡದು, ಪಕ್ಷ ನಿಂತ‌ ನೀರಲ್ಲ ಹರಿಯುವ ನೀರು ಎಂದಿದ್ದಾರೆ. https://www.youtube.com/watch?v=zlT0a9NRoeQ ಇನ್ನೂ, ವಿಜಯೇಂದ್ರ ರಾಜ್ಯಾಧ್ಯಕ್ಷ ಮಾಡಿದ್ದು ಹೈಕಮಾಂಡ್‌, ಯಡಿಯೂರಪ್ಪ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದ್ದಾರೆ. ಹಿರಿಯರು ಅವರ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಿದ್ದು, ಮಾತು ಎತ್ತಿದ್ದರೆ ಅಪ್ಪ ,ಮಕ್ಕಳು ಅಂತಾರೆ, ಹೊಂದಾಣಿಕೆ ರಾಜಕಾರಣ ಅಂತಾರೆ ಎಂದು ಯತ್ನಾಳ ವಿರುದ್ದ ಕಿಡಿಕಾರಿದರು. ಮೃತ್ಯುಂಜಯ ಸ್ವಾಮೀಜಿ ಯತ್ನಾಳ ಪರ ಮಾತನಾಡಿದ ವಿಚಾರವಾಗಿ…

Read More

ವಿಜಯಪುರ: ಬಿಜೆಪಿಯಿಂದ ಯತ್ನಾಳ ಉಚ್ಛಾಟನೆ ಹಿನ್ನೆಲೆ ಯತ್ನಾಳ್‌ ಬೆಂಬಿಲಿಸಿದ್ದ ಪದಾಧಿಕಾರಿ ಇಂದು ಅಪಘಾತದಲ್ಲಿ ಸಾವನಪ್ಪಿದ್ದಾರೆ. ಬಿಜೆಪಿ  ನಗರ ಎಸ್ಟಿ ಮೋರ್ಚಾದ ಕಾರ್ಯದರ್ಶಿಯಾಗಿದ್ದ ಸಂತೋಷ ತಟಗಾರ ಯತ್ನಾಳ‌ ಬೆಂಬಲಿಸಿ ನಿನ್ನೆ ರಾಜೀನಾಮೆ ನೀಡಿದ್ದರು. ಆದರೆ ಇಂದು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸಂತೋಷ ತಟಗಾರ ಪ್ರಯಾಣಿಸುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಸಂತೋಷ್‌ ತಟಗಾರ ಕೊನೆಯುಸಿರೆಳೆದಿದ್ದಾರೆ. https://ainkannada.com/yatnas-expulsion-bjp-workers-resign-in-vijayapura/ ಯತ್ನಾಳ್‌ ಪರವಾಗಿ ನಿಂತಿದ್ದ ಸಂತೋಷ್‌ ತಟಗಾರ, ಯತ್ನಾಳರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರಬಹುದು ಜನರ‌ ಮನಸ್ಸಿನಿಂದ ಉಚ್ಛಾಟನೆ ಮಾಡಲಾಗಲ್ಲ, ವೇಟ್ ಆ್ಯಂಡ್ ಸೀ, ಬಿಜೆಪಿಗೆ ಭಾವಪೂರ್ವ ಶ್ರದ್ಧಾಂಜಲಿ ಎಂದು ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಮಾಡಿದ್ದರು.

Read More