ಬೆಂಗಳೂರು: ಗೋಬಿ ಆಯ್ತು, ಪಾನಿಪುರಿ ಆಯ್ತು, ಕಬಾಬ್ ಆಯ್ತು, ಕಾಟನ್ ಕ್ಯಾಂಡಿನೂ ಆಯ್ತು, ಬಟಾಣಿಯೂ ಆಯ್ತು. ಇದೀಗ ಪನ್ನೀರ್ ಮತ್ತು ಸಿಹಿ ತಿಂಡಿಗಳ ಸರದಿ. ಇತ್ತೀಚೆಗೆ ಇಡ್ಲಿ, ಬಟಾಣಿಗಳಲ್ಲಿ ಕಲಬೆರಕೆ ಪತ್ತೆಯಾದ ಬೆನ್ನಲ್ಲೇ, ಈಗ ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಪನ್ನೀರ್ ಮತ್ತು ಸಿಹಿ ತಿಂಡಿಗಳ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಕಣ್ಣು ನೆಟ್ಟಿದ್ದು, https://ainkannada.com/if-a-cat-of-this-color-comes-to-your-house-it-is-a-sign-of-good-luck/ ಪನ್ನೀರ್ ಸೇರಿ ಇತರೆ ಆಹಾರ ಉತ್ಪನ್ನಗಳ ಸ್ಯಾಂಪಲ್ ಪಡೆದು ಟೆಸ್ಟ್ಗೆ ಒಳಪಡಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಪನ್ನೀರ್ನಲ್ಲಿ ಬ್ಯಾಕ್ಟೀರಿಯಾ ಅಂಶಗಳು ಪತ್ತೆಯಾಗಿರುವುದು ದೃಢವಾಗಿದೆ. ಆ ಮೂಲಕ ಪನ್ನೀರ್ ಪ್ರಿಯರಿಗೆ ಆಹಾರ ಇಲಾಖೆ ಶಾಕ್ ನೀಡಿದೆ. ಉಳಿದ ಸ್ಯಾಂಪಲ್ಗಳ ವರದಿಗಾಗಿ ಆಹಾರ ಇಲಾಖೆ ಕಾಯುತ್ತಿದೆ. ಪನ್ನೀರ್ನಲ್ಲಿ ಅಸುರಕ್ಷಿತ ಅಂಶ ಪತ್ತೆ ಕಲಬೆರಕೆ ಹಿನ್ನೆಲೆ ಕಳೆದ ಹಲವು ದಿನಗಳ ಹಿಂದೆ ಬೆಂಗಳೂರು ಸೇರಿ ಹಲವೆಡೆ ಆಹಾರ ಇಲಾಖೆ ಪನ್ನೀರ್ ಸ್ಯಾಂಪಲ್ ಸಂಗ್ರಹಿಸಿತ್ತು. ಆಹಾರ ಗುಣಮಟ್ಟ ಇಲಾಖೆಯಿಂದ ಪನೀರ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಇದೀಗ ಲ್ಯಾಬ್ ರಿಪೋರ್ಟ್ ಆಹಾರ…
Author: Author AIN
ಬೆಂಗಳೂರು: ಸ್ವಾತಂತ್ರ್ಯ ಬಂದಾಗಿನಿಂದ ಸಂವಿಧಾನ ತಿದ್ದುಪಡಿ ಮಾಡಿರೋದು ಕಾಂಗ್ರೆಸ್ʼನವರು ಎಂದು ಡಿಎಸ್ ಎಸ್ಸಿ ಘಟಕದ ಅಧ್ಯಕ್ಷ, ಮಾಜಿ ಶಾಸಕ ಅನ್ನದಾನಿ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಡಿಕೆಶಿ ಡಿಸಿಎಂ ಆಗೋಕೆ ಸಂವಿಧಾನ ಕಾರಣ. ಬಾರಿ ಸ್ವಾತಂತ್ರ್ಯ ಬಂದಾಗಿನಿಂದ ಸಂವಿಧಾನ ತಿದ್ದುಪಡಿ ಮಾಡಿರೋದು ಕಾಂಗ್ರೆಸ್‌ನವರು. ನರೇಂದ್ರ ಮೋದಿ ಅವರು ಒಂದೇ ಒಂದು ಅರ್ಟಿಕಲ್ ತಿದ್ದಿಲ್ಲ. https://ainkannada.com/if-a-cat-of-this-color-comes-to-your-house-it-is-a-sign-of-good-luck/ ನೆಹರು, ಇಂದಿರಾಗಾಂಧಿ, ಮನಮೋಹನ್ ಸಿಂಗ್ ಸಂವಿಧಾನ ತಿದ್ದುಪಡಿ ಮಾಡಿದ್ದಾರೆ. ಪ್ರಿಯಾಂಕ್ ಖರ್ಗೆ ಅವರೇ ಏನ್ ಮಾಡ್ತಿದ್ದೀರಾ? ಡಿಕೆ ಶಿವಕುಮಾರ್ ಹೇಳಿಕೆ ಬಗ್ಗೆ ಮಾತಾಡಿ, ಮುಸ್ಲಿಮರಿಗೆ ಮೀಸಲಾತಿ ಕೊಡಲು ಸಂವಿಧಾನ ಬದಲಾವಣೆ ಮಾಡ್ತೀನಿ ಅಂತ ಹೇಳಿದ್ದಾರೆ. ಈ ಬಗ್ಗೆ ಮಾತಾಡಿ ಅಂತ ಪ್ರಿಯಾಂಕ್ ಖರ್ಗೆಗೆ ಆಗ್ರಹ ಮಾಡಿದ್ರು. ಡಿಕೆಶಿ ಹೇಳಿಕೆ ಖಂಡಿಸಿ ಜೆಡಿಎಸ್ SC ಘಟಕದಿಂದ ಪ್ರತಿಭಟನೆ ಮಾಡಲಾಗುತ್ತದೆ. ಶುಕ್ರವಾರ ರಾಜ್ಯಾದ್ಯಂತ ಹೋರಾಟ ಮಾಡ್ತೀವಿ. ಡಿಕೆ ಶಿವಕುಮಾರ್ ರಾಜೀನಾಮೆ ಕೊಡಬೇಕು. ಕೂಡಲೇ ತಮ್ಮ ಹೇಳಿಕೆ ವಾಪಸ್ ಪಡೆದು ರಾಜೀನಾಮೆ ಕೊಡಬೇಕು ಅಂತ ಆಗ್ರಹ ಮಾಡಿದ್ರು. ಅನಂತ್ ಕುಮಾರ್…
ಭಾರತೀಯ ಚಿತ್ರರಂಗದಲ್ಲಿ ಸದ್ಯ ನಂಬರ್ 1 ನಟಿಮಣಿ ಯಾರು ಅಂದರೆ ರಶ್ಮಿಕಾ ಮಂದಣ್ಣ ಅಂದರೆ ತಪ್ಪಾಗಲಿಕ್ಕಿಲ್ಲ. ಕನ್ನಡದ ಈ ಹುಡ್ಗಿ ಅದ್ಯಾವ ಕ್ಷಣ ಹೈದ್ರಾಬಾದ್ ಫ್ಲೈಟ್ ಏರಿ ಟಾಲಿವುಡ್ ಗೆ ಲ್ಯಾಂಡ್ ಆಗಿಬಿಟ್ಲರೋ ಅಲ್ಲಿಂದ ಆಕೆ ಮುಟ್ಟಿದೆಲ್ಲ ಚಿನ್ನವಾಗುತ್ತಿದೆ. ಸಾಲು ಸಾಲು ಹಿಟ್ ರಶ್ಮಿಕಾ ಅಕೌಂಟ್ ಸೇರಿಕೊಂಡಿವೆ. ನ್ಯಾಷನಲ್ ಕ್ರಶ್ ಎಂಬ ಬಿರುದಯ ಪಡೆದಿರುವ ಕೊಡಗಿನ ಕ್ವೀನ್ ಅತಿ ಕಡಿಮೆ ಅವಧಿಯಲ್ಲಿ ಇಂಡಿಯನ್ ಇಂಡಸ್ಟ್ರೀಯಲ್ಲಿ ನೇಮೂ ಫೇಮೂ ಎಲ್ಲವನ್ನೂ ಪಡೆದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸಿದ ಪುಷ್ಪ ಸರಣಿ ಸಿನಿಮಾ, ಅನಿಮಲ್, ಛಾವ ಚಿತ್ರಗಳು ಸೂಪರ್ ಹಿಟ್ ಕಂಡಿವೆ. . ಇನ್‌ಸ್ಟಾಗ್ರಾಮ್‌ನಲ್ಲಿ 45 ಮಿಲಿಯನ್‌ಗಿಂತಲೂ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ರಶ್ಮಿಕಾ ಸಂಪಾದನೆ ವಿಷಯದಲ್ಲಿಯೂ ಸುದ್ದಿಯಲ್ಲಿದ್ದಾರೆ. ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರ ನಿವ್ವಳ ಆದಾಯ 66 ಕೋಟಿ ರೂಪಾಯಿಯಾಗಿದೆ. ನಟನೆ ಜೊತೆಗೆ ಹಲವು ಬ್ರಾಂಡ್‌ಗಳಿಗೆ ಬ್ರ್ಯಾಂಡ್ ಅಂಬಾಸಿಡರ್ ಕೂಡ ಆಗಿದ್ದಾರೆ. ಮಾಡೆಲಿಂಗ್ ಹಾಗೂ ಜಾಹೀರಾತುಗಳನ್ನು ಮಾಡುತ್ತಾ ಬಂದಿದ್ದಾರೆ. ಪ್ರತಿ ಬ್ರ್ಯಾಂಡ್ ಪ್ರಮೋಷನ್…
ನ್ಯೂಜಿಲೆಂಡ್‌ನ ರಿವರ್ಟನ್ ಕರಾವಳಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆ 6.8 ರಷ್ಟಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಈ ಕುರಿತು USGS ಒಂದು ಹೇಳಿಕೆ ನೀಡಿದೆ. ನ್ಯೂಜಿಲೆಂಡ್‌ನ ರಿವರ್ಟನ್ ಕರಾವಳಿಯಲ್ಲಿ ಪ್ರಮುಖ ಭೂಕಂಪಗಳು ಸಂಭವಿಸಿವೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಜನರು ಜಾಗರೂಕರಾಗಿರುವಂತೆ ಸೂಚಿಸಿದ್ದಾರೆ. ನ್ಯೂಜಿಲೆಂಡ್‌ನ ರಿವರ್ಟನ್ ಕರಾವಳಿಯಲ್ಲಿ ಆರಂಭದಲ್ಲಿ 7 ತೀವ್ರತೆಯಲ್ಲಿ ದಾಖಲಾಗಿದ್ದ ಭೂಕಂಪವು ದಕ್ಷಿಣ ದ್ವೀಪದ ನೈಋತ್ಯಕ್ಕೆ 10 ಕಿಲೋಮೀಟರ್ (6.2 ಮೈಲುಗಳು) ಆಳದಲ್ಲಿ ಸಂಭವಿಸಿದೆ ಎಂದು ಯುಎಸ್‌ಜಿಎಸ್ ತಿಳಿಸಿದೆ. ಇಲ್ಲಿಯವರೆಗೆ, ಈ ಪ್ರದೇಶಕ್ಕೆ ಯಾವುದೇ ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ. ಜೀವಹಾನಿ ಮತ್ತು ಆಸ್ತಿಪಾಸ್ತಿ ಹಾನಿಯ ಬಗ್ಗೆ ಇನ್ನೂ ವಿವರಗಳು ತಿಳಿದುಬಂದಿಲ್ಲ. https://ainkannada.com/if-a-cat-of-this-color-comes-to-your-house-it-is-a-sign-of-good-luck/ ಆದಾಗ್ಯೂ, ಜೀವ ಮತ್ತು ಆಸ್ತಿಪಾಸ್ತಿ ನಷ್ಟದ ಸಾಧ್ಯತೆಗಳು ಕಡಿಮೆ ಎಂದು ಯುಎಸ್‌ಜಿಎಸ್ ಹೇಳಿದೆ. ಭಾರಿ ಭೂಕಂಪದ ನಂತರ ನ್ಯೂಜಿಲೆಂಡ್‌ನ ವಿಪತ್ತು ತುರ್ತು ನಿರ್ವಹಣಾ ಸಂಸ್ಥೆಗೆ ತಕ್ಷಣವೇ ಮಾಹಿತಿ ನೀಡಲಾಯಿತು. ಸುನಾಮಿಯ ಸಾಧ್ಯತೆ ಇದೆಯೇ? ಎಂದು ಅಂದಾಜಿಸಲಾಗಿದೆ. ಭೂಕಂಪ ಪೀಡಿತ ಪ್ರದೇಶಗಳಲ್ಲಿ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಹನಿಟ್ರ್ಯಾಪ್ ಪ್ರಕರಣ ಭಾರಿ ಸದ್ದು ಮಾಡುತ್ತಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಕಡೆಗೆ ವಿಪಕ್ಷಗಳು ಬೊಟ್ಟು ಮಾಡಿ ತೋರಿಸುತ್ತಿವೆ. ಮುಸ್ಲಿಮರಿಗಾಗಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದಿದ್ದರು ಎನ್ನಲಾದ ಡಿ.ಕೆ ಶಿವಕುಮಾರ್ ಹೇಳಿಕೆ ಕಾಂಗ್ರೆಸ್ ಹೈಕಮಾಂಡ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ಬೆಳವಣಿಗೆಗಳ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ನಾಳೆ ದೆಹಲಿಗೆ ತೆರಳಲು ಸಜ್ಜಾಗಿದ್ದಾರೆ. ಗುರುವಾರ ನಡೆಯುವ ಕ್ಯಾಬಿನೆಟ್ ಮೀಟಿಂಗ್ ಬಳಿಕ ಸಂಜೆ ದೆಹಲಿಗೆ ತೆರಳಲಿರುವ ಡಿಕೆ ಶಿವಕುಮಾರ್, ಶುಕ್ರವಾರ ಎಲ್ಲಾ ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಜೊತೆ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಡೆಸುವ ಸಭೆಯಲ್ಲಿ ಭಾಗಿಯಾಗಲಿರುವ ಡಿಸಿಎಂ ಡಿಕೆ ಶಿವಕುಮಾರ್, ಈ ಮಧ್ಯೆಯೇ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಹನಿಟ್ರ್ಯಾಪ್ ವಿಚಾರವಾಗಿ ಹೈಕಮಾಂಡ್ ಗೆ ಡಿ.ಕೆ ಶಿವಕುಮಾರ್ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ. ಯುಗಾದಿಹಬ್ಬ ಬಳಿಕ ಸಿಎಂ ದಿಲ್ಲಿಗೆ ಹನಿಟ್ರ್ಯಾಪ್ ಸಮರ ಜೋರು ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲು…
ನವದೆಹಲಿ: ಉದ್ಯೋಗದಲ್ಲಿರುವ ಮತ್ತು ತನ್ನ ಗಂಡನಂತೆಯೇ ಅದೇ ಹುದ್ದೆಯನ್ನು ಹೊಂದಿರುವ ಮತ್ತು ಸ್ವತಂತ್ರವಾಗಿ ತನ್ನನ್ನು ತಾನು ನೋಡಿಕೊಳ್ಳಬಹುದಾದ ಮಹಿಳೆಯೊಬ್ಬರು ತಮ್ಮ ಪರಿತ್ಯಕ್ತ ಪತಿಯಿಂದ ಜೀವನಾಂಶ ಕೋರಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿರುವ ಮಹಿಳೆಗೆ ಪರಿಹಾರ ನೀಡಲು ನಿರಾಕರಿಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು, ಅವರ ಪತಿಯಿಂದ ಜೀವನಾಂಶ ಕೋರಿತು. “ಮೊದಲ ಅರ್ಜಿದಾರರು ಮತ್ತು ಪ್ರತಿವಾದಿಗಳು (ಗಂಡ ಮತ್ತು ಹೆಂಡತಿ) ಇಬ್ಬರೂ ಒಂದೇ ಸಹಾಯಕ ಪ್ರಾಧ್ಯಾಪಕ ಹುದ್ದೆಯನ್ನು ಹೊಂದಿದ್ದಾರೆ. https://ainkannada.com/if-a-cat-of-this-color-comes-to-your-house-it-is-a-sign-of-good-luck/ ಭಾರತದ ಸಂವಿಧಾನದ 136 ನೇ ವಿಧಿಯ ಅಡಿಯಲ್ಲಿ ನಮ್ಮ ನ್ಯಾಯವ್ಯಾಪ್ತಿಯನ್ನು ಚಲಾಯಿಸುವಾಗ ಹಸ್ತಕ್ಷೇಪಕ್ಕಾಗಿ ಯಾವುದೇ ಪ್ರಕರಣವನ್ನು ಮಾಡಲಾಗಿಲ್ಲ. ಅದಕ್ಕೆ ಅನುಗುಣವಾಗಿ ವಿಶೇಷ ರಜೆ ಅರ್ಜಿಯನ್ನು ವಜಾಗೊಳಿಸಲಾಗಿದೆ” ಎಂದು ನ್ಯಾಯಾಲಯ ತನ್ನ ಸಂಕ್ಷಿಪ್ತ ಆದೇಶದಲ್ಲಿ ತಿಳಿಸಿದೆ. ಪತ್ನಿ ಜೀವನಾಂಶ ಕೋರಿ ಸಲ್ಲಿಸಿದ ಅರ್ಜಿಯನ್ನು ಪೀಠವು ವಿಚಾರಣೆ ನಡೆಸುತ್ತಿತ್ತು ಆದರೆ ಆಕೆಯ ಪರಿತ್ಯಕ್ತ ಪತಿ ಆಕೆಯ ಅರ್ಜಿಯನ್ನು ವಿರೋಧಿಸಿದರು, ಅವರು…
ರಾಮನಗರ: ಡಿಸಿಎಂ ಆಗಿ ಮುಂದುವರೆಯುವ ನೈತಿಕತೆ ಡಿಕೆಶಿಗೆ ಇಲ್ಲ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ದಲಿತರ ಹಣವನ್ನ ಸರ್ಕಾರ ತಿಂದು ಹಾಕುತ್ತಿದೆ. ದಲಿತರಿಗೆ ಸರ್ಕಾರ ಅನ್ಯಾಯ ಮಾಡುತ್ತಿದ್ದರೂ ಕಾಂಗ್ರೆಸ್ ದಲಿತ ಸಚಿವರು, ಶಾಸಕರು ಬಾಯಿ ಬಿಡುತ್ತಿಲ್ಲ. ಇಂತಹ ಗುಲಾಮಗಿರಿಯನ್ನ ನಾನು ಎಲ್ಲಿಯೂ ನೋಡಿಲ್ಲ. ದಲಿತರ ಹಣ, ದಲಿತರಿಗೆ ಮೀಸಲಾಗಿ ಇಡಬೇಕು. ಗ್ಯಾರಂಟಿಗಾಗಿ ದಲಿತರ ಹಣ ಬಳಸಿಕೊಳ್ಳಲಾಗಿದೆ. ಅಲ್ಲದೇ ಧರ್ಮಾಧಾರಿತ ಮೀಸಲಾತಿ ಸಂವಿಧಾನ ವಿರೋಧಿ. ಡಿಸಿಎಂ ಡಿಕೆಶಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಅಂದಿದ್ದಾರೆ. https://ainkannada.com/if-a-cat-of-this-color-comes-to-your-house-it-is-a-sign-of-good-luck/ ಸಂವಿಧಾನ ಬದಲಿಸಿ ಧರ್ಮಾಧಾರಿತ ಮೀಸಲಾತಿ ಕೊಡುತ್ತೇವೆ ಎನ್ನುತ್ತಾರೆ. ಅಂಬೇಡ್ಕರ್ ಬಗ್ಗೆ ಮಾತನಾಡುವ ಕಾಂಗ್ರೆಸ್ಸಿಗರು ಇದನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಡಿಸಿಎಂ ಆಗಿ ಮುಂದುವರೆಯುವ ನೈತಿಕತೆ ಡಿಕೆಶಿಗೆ ಇಲ್ಲ. ಸಿಎಂ ಸಿದ್ದರಾಮಯ್ಯ ಕೂಡಲೇ ಡಿಕೆಶಿಯನ್ನ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಡಿಸಿಎಂ ಡಿ.ಕೆ ಶಿವಕುಮಾರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಕೆಲ ಬಿಜೆಪಿ ನಾಯಕರಿದ್ದ ಸಭೆಗಳಲ್ಲಿ ಪಾಲ್ಗೊಂಡು ಭಾರಿ ಸದ್ದು ಮಾಡಿದ್ರು. ಇದೀಗ ಬೆಳಗಾವಿ ಸಾಹುಕಾರ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸರದಿ. ಹೌದು, ರಾಜ್ಯ ಕಾಂಗ್ರೆಸ್ ನಲ್ಲಿ ಪವರ್ ಶೇರಿಂಗ್ ಜಟಾಪಟಿ ತಾರಕಕ್ಕೇರಿದ ದಿನಗಳಲ್ಲೇ ಡಿಸಿಎಂ ಡಿಕೆ ಶಿವಕುಮಾರ್, ದೆಹಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಲ್ಲದೆ, ಕಳೆದ ಶಿವರಾತ್ರಿಯಂದು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ತಮಿಳುನಾಡಿನ ಕೊಯಮತ್ತೂರಿನಲ್ಲಿ ಅಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಮಿತ್ ಶಾ ಜತೆ ವೇದಿಕೆ ಹಂಚಿಕೊಂಡಿದ್ದರು. ಈ ಮೂಲಕ ಪವರ್ ಶೇರಿಂಗ್ ಬಗ್ಗೆ ಮಾತನಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಆಪ್ತರಿಗೆ ಶಾಕ್ ಕೊಟ್ಟಿದ್ದರು. ಈ ಬೆಳವಣಿಗೆಗಳ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸಚಿವ HD ಕುಮಾರಸ್ವಾಮಿ ಅವರನ್ನು ಸಂಸತ್ ಭವನದ ಕಚೇರಿಯಲ್ಲಿ ಭೇಟಿ ಮಾತುಕತೆ ನಡೆಸಿದ್ದಾರೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿರುವ ಸತೀಶ್ ಜಾರಕಿಹೊಳಿ…
ಉತ್ತರ ಪ್ರದೇಶ: 100 ಮುಸ್ಲಿಂ ಕುಟುಂಬಗಳ ನಡುವೆ 50 ಹಿಂದೂ ಕುಟುಂಬಗಳಿದ್ದರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಪಾಡ್‌ಕಾಸ್ಟ್ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, 100 ಮುಸ್ಲಿಂ ಕುಟುಂಬಗಳ ನಡುವೆ 50 ಹಿಂದೂ ಕುಟುಂಬಗಳಿದ್ದರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ. ಆದ್ರೆ 100 ಹಿಂದೂ ಕುಟುಂಬಳ ನಡುವೆ ಒಂದು ಮುಸ್ಲಿಂ ಕುಟುಂಬ ಭದ್ರವಾಗಿದೆ.ಹಿಂದೂ ಆಡಳಿತಗಾರರು ಇತರರ ಮೇಲೆ ಅಧಿಪತ್ಯ ಸ್ಥಾಪಿಸಿದ ಉದಾಹರಣೆ ವಿಶ್ವ ಇತಿಹಾಸದಲ್ಲಿ ಇಲ್ಲ. ಇದಕ್ಕೆ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರವೇ ಕಾರಣ, ಇದಕ್ಕೂ ಮುನ್ನ ಪಾಕಿಸ್ತಾನದಲ್ಲೂ ಈ ಉದಾಹರಣೆ ಇತ್ತು. ಅಫ್ಘಾನಿಸ್ತಾನದಲ್ಲೂ ಏನಾಯ್ತು ಅನ್ನೋದು ನಮಗೆ ಗೊತ್ತಿದೆ ಎಂದು ಹೇಳಿದರು. https://ainkannada.com/if-a-cat-of-this-color-comes-to-your-house-it-is-a-sign-of-good-luck/ 2017ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಒಂದೇ ಒಂದು ಕೊಮುಗಲಭೆ ನಡೆದಿಲ್ಲ ಎಂದ ಸಿಎಂ ಯೋಗಿ, ಉತ್ತರ ಪ್ರದೇಶದಲ್ಲಿ ಹಿಂದೂಗಳು ಸುರಕ್ಷಿತವಾಗಿದ್ದರೆ ಮುಸ್ಲಿಮರೂ ಸುರಕ್ಷಿತ. ನಾನು ಒಬ್ಬ ಸಾಮಾನ್ಯ ಪ್ರಜೆ, ಉತ್ತರ ಪ್ರದೇಶದ ಪ್ರಜೆ. ಎಲ್ಲರ ಸಂತೋಷಕ್ಕಾಗಿ ಹಾರೈಸುವ ʻಯೋಗಿʼ ನಾನು. ಎಲ್ಲರ ಬೆಂಬಲದಿಂದ ಅಭಿವೃದ್ಧಿ…
ಮಾತು ಆಡಿದರೆ ಹೋಯ್ತು ಮುತ್ತು ಒಡೆದರೆ ಹೋಯ್ತು ಹಿರಿಯರು ಹೇಳುವ ಈ ಗಾದೆ ಮಾತು ಕಿವಿಮೇಲೆ ಹಾಕಿಕೊಂಡು ಮಾತಾಡಿದ್ದರೆ ಇವತ್ತು ಬಿಗ್ ಬಾಸ್ ಮಾಜಿ ಸ್ಪರ್ಧಿ ರಕ್ಷಕ್ ಬುಲೆಟ್ ಗೆ ಸಂಕಷ್ಟ ಬರುತ್ತಿರಲಿಲ್ಲವೇನು. ಮೊದಲಿನಿಂದಲೂ ಈ ಹುಡ್ಗ ಆಡುವ ಮಾತುಗಳು ಟ್ರೋಲ್ ಆಗುತ್ತಲೇ ಇರುತ್ತವೆ. ಟ್ರೋಲ್ ಆದ್ರೆ ಸಮಸ್ಯೆ ಇಲ್ಲ ಹಲವರ ಭಾವನೆಗಳಿಗೆ ಧಕ್ಕೆ ತಂದರೆ ಸಂಕಷ್ಟವೇ. ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ರಕ್ಷಕ್ ಬುಲೆಟ್ ಅವಹೇಳನಕಾರಿಯಾಗಿ ಮಾತನಾಡಿದ್ದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ರಕ್ಷಕ್ ಬುಲೆಟ್ ವಿರುದ್ಧ ಇಂದು ಹಿಂದೂ ಕಾರ್ಯಕರ್ತ ಮಹೇಶ್ ಎಂಬುವವರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ದೂರು ಸಲ್ಲಿಸಿದ್ದಾರೆ. ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗಿದೆ. ರಕ್ಷಕ್ ಬುಲೆಟ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ರಕ್ಷಕ್ ಹೇಳಿದ್ದೇನು? ರಕ್ಷಕ್ ಹಾಗೂ ರಮೋಲಾ ಜೋಡಿಗೆ ‘ಬುಲ್ ಬುಲ್’ ಸಿನಿಮಾದ ದೃಶ್ಯವನ್ನ ರೀ-ಕ್ರಿಯೇಟ್ ಮಾಡಲು ಟಾಸ್ಕ್ ನೀಡಲಾಗಿತ್ತು. ‘ನಾವೂ ಮಂಡ್ಯದವರೆ ಕಂಡ್ರಿ. ನಿಮ್ಮನ್ನ ನೋಡ್ತಾ ಇದ್ದಂತೆ…