Author: Author AIN

ಐಕಾನ್ ಸ್ಟಾರ್ ಅಲ್ಲು ಅರ್ಜುನ್‌ ಸ್ಟಾರ್‌ ಡೈರೆಕ್ಟರ್‌ ಅಟ್ಲಿ ಜೊತೆ ದೊಡ್ಡ ಪ್ರಾಜೆಕ್ಟ್‌ ಗೆ ಕೈಹಾಕಿದ್ದಾರೆ. ಬರೋಬ್ಬರಿ 800 ಕೋಟಿ ಪ್ರಾಜೆಕ್ಟ್‌ ನಲ್ಲಿ ಸಿನಿಮಾ ತಯಾರಾಗುತ್ತಿದೆ ಎನ್ನಲಾಗುತ್ತಿದೆ. ಹಾಲಿವುಡ್‌ ರೇಂಜ್‌ ನಲ್ಲಿ ಮೂಡಿ ಬರುತ್ತಿರುವ ಸಿನಿಮಾಗಾಗಿ ಅಲ್ಲು ಅರ್ಜುನ್‌ ಹೊಸ ಅವತಾರ ತಾಳಿದ್ದಾರೆ. ಪುಷ್ಪ ಸರಣಿ ಸಿನಿಮಾಗಾಗಿ ಗಡ್ಡ ಬಿಟ್ಟು ರಗಡ್‌ ಆಗಿ ಕಾಣಿಸಿಕೊಳ್ಳುತ್ತಿದ್ದ ಬನ್ನಿ ಗಡ್ಡ ಟ್ರಿಮ್‌ ಮಾಡಿಸಿ, ಹೊಸ ಹೇರ್‌ ಸ್ಟೈಲ್‌ ನಲ್ಲಿ ಕ್ಯಾಮೆರಾಗೆ ಕಣ್ಣು ಹೊಡೆದಿದ್ದಾರೆ. ಇತ್ತೀಚೆಗೆ ತಮ್ಮ ಸೋದರಸಂಬಂಧಿಯ ಮದುವೆಗೆ ಪತ್ನಿ ಸ್ನೇಹಾ ರೆಡ್ಡಿ ಮತ್ತು ಅವರ ಮಗಳು ಅರ್ಹಾ ಜೊತೆ ಆಗಮಿಸಿದ್ದರು. ಅಲ್ಲು ಅರ್ಜುನ್ ಕಪ್ಪು ಪ್ಯಾಂಟ್ ಜೊತೆಗೆ ಸರಳವಾದ ಕಂದು ಬಣ್ಣದ ಕುರ್ತಾ ಧರಿಸಿ, ಸ್ಟೈಲೀಶ್‌ ಆಗಿ ಐಕಾನ್‌ ಸ್ಟಾರ್‌ ಕಾಣಿಸಿಕೊಂಡಿದ್ದಾರೆ. ‌ ಅಲ್ಲು ಅರ್ಜುನ್-ಅಟ್ಲಿ ಸಿನಿಮಾಗೆ AA22xA6 ಅಂತ ಟೈಟಲ್ ಇಡಲಾಗಿದ್ದು, ಅಲ್ಲು ಬರ್ತಡೇ ವಿಶೇಷವಾಗಿ  ಅನೌನ್ಸ್‌ಮೆಂಟ್ ಜೊತೆಗೆ ಸಿನಿಮಾಗೆ ಪೂರ್ವ ತಯಾರಿ ಕ್ಷಣಗಳನ್ನು ವಿಡಿಯೋ ರಿಲೀಸ್‌ ಮಾಡಿತ್ತು. ಅಟ್ಲಿ ಮತ್ತು…

Read More

ಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಿಂದ 27ಕ್ಕೂ ಹೆಚ್ಚು ಪ್ರವಾಸಿಗರು ಅಸುನೀಗಿದ್ದಾರೆ. ಈ ದಾಳಿ ಬೆನ್ನಲ್ಲೇ ಇಡೀ ಭಾರತೀಯರು ಪಾಕ್‌ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ದಾಳಿಯನ್ನು ಖಂಡಿಸಿ ಪಾಪಿಗಳ ಕೃತ್ಯದ ವಿರುದ್ಧ ತಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಸಾಮಾಜಿಕ ಮಾಧ್ಯಮಗಳಲ್ಲಿ ಭಾರತೀಯ ಸಿನಿಮಾಗಳಲ್ಲಿ ಪಾಕಿಸ್ತಾನಿ ಕಲಾವಿದರು ಕೆಲಸ ಮಾಡಬಾರದು ಎಂದು ಆಕ್ರೋಶ ಶುರುವಾಗಿದೆ. ಪ್ರಭಾಸ್‌ ಘೌಜಿ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಇಮಾನ್ವಿ ಇಸ್ಮಾಯಿಲ್‌ ಪಾಕಿಸ್ತಾನಿ ಮಿಲಿಟರಿ ವ್ಯಕ್ತಿಯ ಮಗಳು ಎಂಬ ಸುದ್ದಿ ಹರಿದಾಡುತ್ತಿದೆ. ಹೀಗಾಗಿ ಅವರನ್ನು ಚಿತ್ರದಿಂದ ತೆಗೆದುಹಾಕಬೇಕೆಂದು ಒತ್ತಾಯಿಸಿದರು. ಈ ಸುದ್ದಿ ವೈರಲ್ ಆಗುತ್ತಿದ್ದಂತೆ ಇಮಾನ್ವಿ, ನಾನು ಹೆಮ್ಮೆಯ ಭಾರತೀಯ-ಅಮೆರಿಕನ್ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ನಟಿ ಇಮಾನ್ವಿ, ‘ನನ್ನ ಬಗ್ಗೆ ಸುಳ್ಳು ಮಾಹಿತಿಗಳನ್ನು ಹರಿಬಿಡಲಾಗುತ್ತಿದೆ. ನನ್ನ ಕುಟುಂಬದ ಯಾರೂ ಸಹ ಎಂದಿಗೂ ಸಹ ಯಾವುದೇ ರೀತಿಯಲ್ಲಿಯೂ ಪಾಕಿಸ್ತಾನದ ಸೇನೆಯೊಟ್ಟಿಗೆ ಕೆಲಸ ಮಾಡಿಲ್ಲ. ನಾನು ಪಾಕಿಸ್ತಾನದವಳಲ್ಲ, ನಾನೊಬ್ಬ ಹೆಮ್ಮೆಯ ಭಾರತೀಯ…

Read More

ಅರ್ಧಕ್ಕಿಂತ ಹೆಚ್ಚು ಪಂದ್ಯಗಳು ಮುಗಿದಿವೆ. ಅನಿರೀಕ್ಷಿತವಾಗಿ, ಈ ಸಮಯದಲ್ಲಿ, ಐಪಿಎಲ್ 2025 ರಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪಗಳು ಕೋಲಾಹಲಕ್ಕೆ ಕಾರಣವಾಗಿವೆ. ಇತ್ತೀಚೆಗೆ ರಾಜಸ್ಥಾನ ರಾಯಲ್ಸ್ ವಿರುದ್ಧವೂ ಇದೇ ರೀತಿಯ ಆರೋಪಗಳನ್ನು ಮಾಡಲಾಗಿತ್ತು, ಮತ್ತು ಈಗ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದ ಸಮಯದಲ್ಲಿ ಈ ಗಂಭೀರ ಆರೋಪಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿವೆ. ಇದರ ಹಿಂದಿನ ನಿಜವಾದ ಕಾರಣವೇನು? ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಸನ್‌ರೈಸರ್ಸ್ ಮೊದಲು ಬ್ಯಾಟಿಂಗ್ ಮಾಡಿತು. ಈ ಹಂತದಲ್ಲಿ, https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಸನ್‌ರೈಸರ್ಸ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಅವರನ್ನು ಅಂಪೈರ್ ಔಟ್ ಎಂದು ಘೋಷಿಸುವ ಮೊದಲೇ ಪೆವಿಲಿಯನ್‌ಗೆ ಹೋದರು. ಚೆಂಡು ಲೆಗ್ ಸೈಡ್‌ಗೆ ಹೋದ ಕಾರಣ ಅಂಪೈರ್ ವಾಸ್ತವವಾಗಿ ಚೆಂಡನ್ನು ವೈಡ್ ಎಂದು ಘೋಷಿಸಿದರು. ಮುಂಬೈ ಇಂಡಿಯನ್ಸ್ ಆಟಗಾರರು ಕೂಡ ಮೇಲ್ಮನವಿ ಸಲ್ಲಿಸಲಿಲ್ಲ. ಆದರೆ ಇಶಾನ್ ಸ್ವತಃ ಪೆವಿಲಿಯನ್‌ಗೆ ಹಿಂತಿರುಗಿದರು. ನಂತರ ಅಂಪೈರ್ ಕೂಡ ಅವರನ್ನು ಔಟ್ ಎಂದು ಘೋಷಿಸಿದರು. ಆದರೆ…

Read More

ಪಾಟ್ನಾ: ಜಮ್ಮು ಕಾಶ್ಮೀರದ ಪಹಲ್ಗಾಮ್​​ನಲ್ಲಿ ನಡೆದ ಭಯೋತ್ಪಾದಕರ ಭೀಕರ ದಾಳಿ ವಿಡಿಯೋಗಳನ್ನು ಕಂಡು ಇಡೀ ದೇಶವೇ ಬೆಚ್ಚಿ ಬಿದ್ದಿದೆ. ನೀನು ಹಿಂದೂನಾ? ಅಲ್ಲ ಮುಸ್ಲಿಂನಾ ಅಂತ ಕೇಳಿ ತಲೆಗೆ ಗುಂಡು ಹಾರಿಸಿ ವಿಕೃತಿ ಮೆರೆದಿದ್ದಾರೆ. ಇನ್ನೂ ಈ ವಿಚಾರವಾಗಿ ಪ್ರಧಾನಿ ಮೋದಿ ಗುಡುಗಿದ್ದಾರೆ. ಬಿಹಾರದ ಮಧುಬನಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ ಯೋಜನೆ–ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಉಗ್ರರಿಗೆ ಎಚ್ಚರಿಕೆ ನೀಡಿದರು. ಪಹಲ್ಗಾಮ್ ದಾಳಿಯಲ್ಲಿ ಮೃತರಿಗೆ ಗೌರವ ಸಲ್ಲಿಸಲು 1 ನಿಮಿಷ ಮೌನ ಪ್ರಾರ್ಥನೆ ಮಾಡಿ ಮೋದಿ ಭಾಷಣ ಆರಂಭಿಸಿದರು. https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಇಂದು ಬಿಹಾರದ ನೆಲದಲ್ಲಿ ನಿಂತು ನಾನು ಇಡೀ ಜಗತ್ತಿಗೆ ಹೇಳುತ್ತೇನೆ. ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಗುರುತಿಸುತ್ತದೆ ಪತ್ತೆ ಹಚ್ಚುತ್ತದೆ ಮತ್ತು ಶಿಕ್ಷಿಸುತ್ತದೆ ಎಂದು ಹೇಳಿದರು. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದ್ದರಿಂದ ಇಡೀ ರಾಷ್ಟ್ರವು ದುಃಖಿತವಾಗಿದೆ.…

Read More

ಪಾಕಿಸ್ತಾನ್: ಜಮ್ಮು ಕಾಶ್ಮೀರದ ಪಹಲ್ಗಾಮ್​​ನಲ್ಲಿ ನಡೆದ ಭಯೋತ್ಪಾದಕರ ಭೀಕರ ದಾಳಿ ವಿಡಿಯೋಗಳನ್ನು ಕಂಡು ಇಡೀ ದೇಶವೇ ಬೆಚ್ಚಿ ಬಿದ್ದಿದೆ. ನೀನು ಹಿಂದೂನಾ? ಅಲ್ಲ ಮುಸ್ಲಿಂನಾ ಅಂತ ಕೇಳಿ ತಲೆಗೆ ಗುಂಡು ಹಾರಿಸಿ ವಿಕೃತಿ ಮೆರೆದಿದ್ದಾರೆ. ಅಷ್ಟೇ ಅಲ್ಲದೇ ಈ ದಾಳಿಯಲ್ಲಿ 26 ಮಂದಿ ಮೃತಪಟ್ಟ ಬೆನ್ನಲ್ಲೇ ರಾಜ್ಯ ಪ್ರವಾಸಿ ತಾಣಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ಇದರ ಬೆನ್ನಲ್ಲೇ ಭಾರತ, ಪಾಕಿಸ್ತಾನ ಸರ್ಕಾರದ ಎಕ್ಸ್‌ ಖಾತೆಯನ್ನು ಭಾರತದಲ್ಲಿ ಸ್ಥಗಿತಗೊಳಿಸಿದೆ. https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಬುಧವಾರ ನಡೆದ ಸಿಸಿಎಸ್ ಸಭೆಯಲ್ಲಿ ಉಗ್ರರ ದಾಳಿಗೆ ಪ್ರತಿಯಾಗಿ, ಸಿಂಧೂ ಜಲ ಒಪ್ಪಂದವನ್ನು ಅನಿರ್ದಿಷ್ಟಾವಧಿ ಸ್ಥಗಿತಗೊಳಿಸುವುದು ಸೇರಿದಂತೆ ಪಾಕಿಸ್ತಾನದ ವಿರುದ್ಧ ಭಾರತ ಹಲವಾರು ಕ್ರಮಗಳನ್ನು ಕೈಗೊಂಡಿತ್ತು. ಇದಾದ ಬಳಿಕ ಈಗ ಪಾಕ್‌ ಸರ್ಕಾರದ ಎಕ್ಸ್‌ ಖಾತೆಯನ್ನು ಭಾರತ ಸ್ಥಗಿತಗೊಳಿಸಿದೆ. ಪಾಕಿಸ್ತಾನಿ ಪ್ರಜೆಗಳಿಗೆ ಸಾರ್ಕ್ ವೀಸಾ ವಿನಾಯಿತಿ ಯೋಜನೆಯನ್ನು ಬುಧವಾರ ಭಾರತ ಸ್ಥಗಿತಗೊಳಿಸಿತ್ತು. ಇದರ ಅಡಿ ಪಾಕಿಸ್ತಾನಿ ನಾಗರಿಕರಿಗೆ ನೀಡಲಾದ ಯಾವುದೇ ಅಸ್ತಿತ್ವದಲ್ಲಿರುವ ವೀಸಾಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ. 48 ಗಂಟೆಗಳಲ್ಲಿ…

Read More

ಬೆಂಗಳೂರು: ಕೇಂದ್ರ ಕೈಗೊಂಡ ಕಠಿಣ ನಿರ್ಣಯಗಳು ಪಾಕಿಸ್ತಾನದ ದುಗುಡ ಹೆಚ್ಚಿಸಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.  ಉಗ್ರರ ಗುಂಡೇಟಿಗೆ ಬಲಿಯಾದ ಬೆಂಗಳೂರಿನ ಮತ್ತಿಕೆರೆಯ ಭರತ್ ಭೂಷಣ್ ಅವರ ಮೃತದೇಹದ ಅಂತಿಮ ದರ್ಶನ ಪಡೆದರು. ನಂತರ ಮಾತನಾಡಿದ ಅವರು, ಪಾಕಿಸ್ತಾನದ ಮೇಲೆ ನಮ್ಮವರು ದಾಳಿ ಮಾಡಬಹುದು. ದೇಶದ ಜನರ ಆಕ್ರೋಶ ಅರ್ಥ ಮಾಡಿಕೊಂಡು ಕೇಂದ್ರ ಕಠಿಣ ಕ್ರಮಕ್ಕೆ ಮುಂದಾಗುವುದಂತೂ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಎಂಥಾ ಕಠಿಣ ಕ್ರಮಕ್ಕೆ ಕೇಂದ್ರ ಮುಂದಾಗುತ್ತದೆ ಅಂದರೆ ಮತ್ತೊಮ್ಮೆ ಪಾಕಿಸ್ತಾನ ನಮ್ಮ ದೇಶದ ಮೇಲೆ ಉಗ್ರ ಚಟುವಟಿಕೆ ನಡೆಸಲು ಹೆದರಬೇಕು. ಬುಧವಾರ ಕೇಂದ್ರ ಕೈಗೊಂಡ ಕಠಿಣ ನಿರ್ಣಯಗಳು ಪಾಕಿಸ್ತಾನದ ದುಗುಡ ಹೆಚ್ಚಿಸಿದೆ. ಮುಂದೆಯೂ ಪಾಕಿಸ್ತಾನದ ಮೇಲೆ ದಾಳಿ ನಡೆಯುವ ವಿಶ್ವಾಸ ನನಗೆ ಇದೆ ಎಂದು ಹೇಳಿದರು. ಇಂದು ಸರ್ವಪಕ್ಷ ಸಭೆ ನಡೆಯಲಿದೆ. ಎಲ್ಲಾ ಪಕ್ಷಗಳೂ ಕಠಿಣ ನಡೆಗೆ ಒತ್ತಾಯಿಸುವ ಸಾಧ್ಯತೆ ಇದೆ. ಭಾರತವೂ ಪಾಕಿಸ್ತಾನದ ವಿಚಾರದಲ್ಲಿ ಕಠಿಣ ಹೆಜ್ಜೆ ಇಡಲಿದೆ. ಭಾರತ ಸರ್ಕಾರ…

Read More

ಖ್ಯಾತ ನಿರ್ಮಾಪಕ, ನಿರ್ದೇಶಕ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಸ್ಥಾಪಕ ನವರಸನ್ ನಿರ್ಮಾಣದ, ಕಿರಣ್ ಕುಮಾರ್ ನಿರ್ದೇಶನದ ಹಾಗೂ ಜನಪ್ರಿಯ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ಸೂತ್ರಧಾರಿ” ಚಿತ್ರ ಮೇ 9 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ‌ ಚಿತ್ರ ಬಿಡುಗಡೆಗೂ ಮುನ್ನ ನಿರ್ಮಾಪಕ ನವರಸನ್, ನಿರ್ದೇಶಕ ಕಿರಣ್ ಕುಮಾರ್, ನಾಯಕ ಚಂದನ್ ಶೆಟ್ಟಿ ಹಾಗೂ ನಾಯಕಿ ಅಪೂರ್ವ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಚಿತ್ರ ಯಶಸ್ವಿಯಾಗಲೆಂದು ಏಳುಬೆಟ್ಟದ ಒಡೆಯನ ಹತ್ತಿರ ಚಿತ್ರತಂಡದ ಸದಸ್ಯರು ಪ್ರಾರ್ಥನೆ ಮಾಡಿದ್ದಾರೆ. ಕಾಣಿಪಕ್ಕಂ ನ ಗಣೇಶ,‌ ತಿರುಚಾನೂರು ಪದ್ಮಾವತಿ ಅಮ್ಮನವರು ಹಾಗೂ ಗೋಲ್ಡನ್ ಟಂಪಲ್ ನ ಮಹಾಲಕ್ಷ್ಮಿ ದೇವಸ್ಥಾನಕ್ಕೂ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.

Read More

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್​​ನಲ್ಲಿ ನಡೆದ ಭಯೋತ್ಪಾದಕರ ಭೀಕರ ದಾಳಿ ವಿಡಿಯೋಗಳನ್ನು ಕಂಡು ಇಡೀ ದೇಶವೇ ಬೆಚ್ಚಿ ಬಿದ್ದಿದೆ. ನೀನು ಹಿಂದೂನಾ? ಅಲ್ಲ ಮುಸ್ಲಿಂನಾ ಅಂತ ಕೇಳಿ ತಲೆಗೆ ಗುಂಡು ಹಾರಿಸಿ ವಿಕೃತಿ ಮೆರೆದಿದ್ದಾರೆ. ಅಷ್ಟೇ ಅಲ್ಲದೇ ಈ ದಾಳಿಯಲ್ಲಿ 26 ಮಂದಿ ಮೃತಪಟ್ಟ ಬೆನ್ನಲ್ಲೇ ರಾಜ್ಯ ಪ್ರವಾಸಿ ತಾಣಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ಈ ದಾಳಿ ನಡೆಸಿದ  ಶಂಕಿತ ಉಗ್ರರ ರೇಖಾಚಿತ್ರಗಳನ್ನು ಜಮ್ಮು ಕಾಶ್ಮೀರ ಪೊಲೀಸರು ಹಂಚಿಕೊಂಡಿದ್ದು, ಅವರ ಬಗ್ಗೆ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಸಾರ್ವಜನಿಕರಿಗೆ ಮನವಿ ಮಾಡಿರುವ ಪೊಲೀಸರು, ಮಾಹಿತಿದಾರರ, ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಯಾವುದೇ ಸಂಬಂಧಿತ ಮಾಹಿತಿಯನ್ನು ಹೊಂದಿರುವ ನಾಗರಿಕರು ಅನಂತ್‌ನಾಗ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಅಥವಾ ಪೊಲೀಸ್ ನಿಯಂತ್ರಣ ಕೊಠಡಿ (PCR) ಅವರನ್ನು ನೇರವಾಗಿ ಈ ಕೆಳಗಿನ ಸಂಪರ್ಕ ಸಂಖ್ಯೆಗಳಲ್ಲಿ ಸಂಪರ್ಕಿಸಲು ಕೋರಲಾಗಿದೆ: ಎಸ್ಎಸ್ಪಿ ಅನಂತನಾಗ್ : 9596777666, ಪಿಸಿಆರ್ ಅನಂತನಾಗ್…

Read More

ದೊಡ್ಡಬಳ್ಳಾಪುರ: ಕಾಶ್ಮೀರ ಪ್ರವಾಸ ಕೈಗೊಂಡಿದ್ದ 90 ಮಂದಿ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.. ತಾಲೂಕಿನ ಸುತ್ತಾಮುತ್ತಲಿನ ತಿರುಮಗೊಂಡನಹಳ್ಳಿ ಹಾಡೋನಹಳ್ಳಿ, ವಡ್ಡರಹಳ್ಳಿ ಲಕ್ಷ್ಮೀದೇವಿಪುರ, ತಿಮ್ಮೋಜನಹಳ್ಳಿ, ತೂಬಗೆರೆ, ಹೀರೆಮುದ್ದೇನಹಳ್ಳಿ, ನೆಲಗುದಿಗೆ ಗ್ರಾಮಗಳಿಂದ 90 ಮಂದಿ 9 ದಿನಗಳ ಜಮ್ಮು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು. ಏ.19 ರಂದು 7 ವಿಮಾನಗಳಲ್ಲಿ ಟ್ರಾವೆಲ್ ಏಜೆನ್ಸಿ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡಿಕೊಂಡು ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೂಲಕ ದೆಹಲಿಗೆ ತೆರಳಿ ಅಲ್ಲಿಂದ ಅಮೃತಸರದಲ್ಲಿ ಎಲ್ಲರೂ ಒಟ್ಟಾಗಿ ಸೇರಿದ್ದರು. ಏ.17 ಕ್ಕೆ ಪ್ರವಾಸಿಗರು ಪ್ರವಾಸ ಕೈಗೊಳ್ಳ ಬೇಕಿತ್ತು.ಕಾರಣಾಂತರದಿಂದ ಎರಡು ದಿನಗಳ ಕಾಲ ಪ್ರವಾಸ ಮುಂದಕ್ಕೆ ಹೋದ ಕಾರಣ ಇವರು ಕಾಶ್ಮೀರಕ್ಕೆ ಹೋಗುವ ಬದಲು ಅಮೃತಸರದಲ್ಲಿ ಪ್ರೇಕ್ಷಣೀಯ ಸ್ಥಳಗಳನ್ನು ನೋಡಿಕೊಂಡು ಬಳಿಕ ಶ್ರೀನಗರಕ್ಕೆ ಪ್ರವಾಸ ತೆರಳಿದ್ದರು. ಇವರು ಉಳಿದುಕೊಳ್ಳಬೇಕಾದ ಹೋಟೆಲ್ ಉಗ್ರರ ದಾಳಿಗೆ ಒಳಗಾದ ಪಹಲ್ಗಾಮ್‌ನ ಬೈಸರನ್ ಸಮೀಪದಲ್ಲಿಯೇ ಎರಡು ದಿನಗಳ ಕಾಲ ಉಳಿದುಕೊಳ್ಳಲು ಕೊಠಡಿಗಳನ್ನು ಕಾಯ್ದಿರಿಸಿದ್ದರು. ಆದರೆ, ಆ ರಸ್ತೆಯಲ್ಲಿ ಬೆಟ್ಟ ಕುಸಿದು ಸಂಚಾರ ಸ್ಥಗಿತಗೊಂಡ ಕಾರಣ…

Read More

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಮುಖಾಮುಖಿ ಪಂದ್ಯ ನಡೆಯಲಿದೆ. ತವರಿನಲ್ಲಿ ನಡೆಯುತ್ತಿರುವ ನಾಲ್ಕನೇ ಪಂದ್ಯವನ್ನಾಡದರೂ ಗೆಲ್ಲುವ ಮೂಲಕ ಆರ್​ಸಿಬಿ ಪ್ಲೇಆಫ್‌ಗೆ ಇನ್ನಷ್ಟು ಸನಿಹವಾಗಲು ಮತ್ತು ತವರಿನಲ್ಲಿ ಸೋಲಿನ ಸರಣಿಯನ್ನು ಮುಂದುವರೆಸಲು ಯತ್ನಿಸಲಿದೆ. https://ainkannada.com/are-you-keeping-these-fruits-in-the-fridge-do-you-know-how-much-damage-this-can-do-to-your-body/ ಇನ್ನೂ ಸ್ಟೇಡಿಯಂ ಸುತ್ತಮುತ್ತ ಸಂಜೆ ವೇಳೆಗೆ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ವಾಹನ ಸವಾರರು ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣದ ಯೋಜನೆ ರೂಪಿಸಿವುದು ಒಳಿತು. ಸಂಚಾರ ನಿರ್ಬಂಧ, ಪಾರ್ಕಿಂಗ್ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರಿಂದ ಇತ್ತೀಚಿನ ಪ್ರಕಟಣೆ ಬಿಡುಗಡೆ ಆಗಿಲ್ಲ. ಆದಾಗ್ಯೂ, ಈ ಹಿಂದಿನ ಪಂದ್ಯಗಳ ವೇಳೆ ಜಾರಿಯಲ್ಲಿದ್ದ ಸಂಚಾರ ನಿರ್ಬಂಧ ಜಾರಿಯಲ್ಲಿರುವ ಸಾಧ್ಯತೆ ಇದೆ. ಎಲ್ಲೆಲ್ಲಿ ಟ್ರಾಫಿಕ್ ಜಾಮ್ ಆಗಬಹುದು? ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರ್ಬಾ ರಸ್ತೆ, ಅಂಬೇಡ್ಕರ್ ವೀಧಿ, ಟ್ರಿನಿಟಿ ಜಂಕ್ಷನ್, ಲ್ಯಾವೆಲ್ಲೆ ರಸ್ತೆ,…

Read More