Author: Author AIN

ಬೆಂಗಳೂರು: ಬೆಂಗಳೂರಿನಲ್ಲಿ ಮೆಟ್ರೋ, ಸುರಂಗ ರಸ್ತೆ, ರಸ್ತೆ ಸಾರಿಗೆ ಮತ್ತಿತರ ಸಾರ್ವಜನಿಕ ಉಪಯೋಗಿ ಯೋಜನೆಗಳ ವಿಸ್ತರಣೆ ಸಂಬಂಧ ಉಪ‌ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಅಧಿಕಾರಿಗಳ ಜತೆ ವಿಧಾನಸೌಧದಲ್ಲಿ ಸಮಾಲೋಚನೆ ನಡೆಸಿದರು. https://ainkannada.com/eat-these-foods-to-increase-the-number-of-red-blood-cells-in-the-body/ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತಧಿಕಾರಿ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತರು ಮಹೇಶ್ವರ ರಾವ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ  ಜಯರಾಮ್, ಉಪ ಮುಖ್ಯಮಂತ್ರಿ ಕಾರ್ಯದರ್ಶಿ ರಾಜೇಂದ್ರ ಚೋಳನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Read More

ಕೋಲಾರ: ಬೈಕ್ ಗೆ ಪೊಲೀಸ್ ಬುಲೇರೋ ವಾಹನ ಡಿಕ್ಕಿಯಾಗಿ ಗಾಯಗೊ‌ಡಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೆಜಿಎಫ್ ತಾಲ್ಲೂಕಿನ ಬಡಮಾಕನಹಳ್ಳಿಯ ನಾರಾಯಣಸ್ವಾಮಿ ಸಾವನ್ನಪ್ಪಿದ ದುರ್ಧೈವಿಯಾಗಿದ್ದು, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಾಂತರಾಜ್ ಸರ್ಕಲ್‌ನಲ್ಲಿ ಕೋಲಾರ ಮಹಿಳಾ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸಿಪಿಐ ಶಂಕರಾಚಾರಿ ಇದ್ದ ವಾಹನ ಬೈಕ್ ಗೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. https://ainkannada.com/eat-these-foods-to-increase-the-number-of-red-blood-cells-in-the-body/ ಗಂಭೀರವಾಗಿ ಗಾಯಗೊಂಡಿದ್ದ ನಾರಾಯಣಸ್ವಾಮಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ: ಬಿಹಾರದ ಪಾಟ್ನಾದಲ್ಲಿ ನಡೆದ ಖೇಲೋ ಇಂಡಿಯಾ ಯುವ ಕ್ರೀಡಾಕೂಟ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬಿಹಾರದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅವರನ್ನು ಶ್ಲಾಘಿಸಿದರು. “ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಇಡೀ ದೇಶದ ಗಮನ ಸೆಳೆದಿದ್ದಾರೆ.” “ನೀವು ಹೆಚ್ಚು ಆಡಿದಷ್ಟೂ, ನೀವು ಹೆಚ್ಚು ಹೊಳೆಯುತ್ತೀರಿ” ಎಂದು ಮೋದಿ ಹೇಳಿದರು. https://ainkannada.com/eat-these-foods-to-increase-the-number-of-red-blood-cells-in-the-body/ ಐಪಿಎಲ್‌ನಲ್ಲಿ ಬಿಹಾರದ ವೈಭವ್ ಸೂರ್ಯವಂಶಿ ಅವರ ಪ್ರದರ್ಶನವು ಪಟ್ಟಣದಾದ್ಯಂತ ಚರ್ಚೆಗೆ ಗ್ರಾಸವಾಗಿದೆ ಎಂದು ತಿಳಿದಿದೆ. ವೈಭವ್ ಅತಿ ಚಿಕ್ಕ ವಯಸ್ಸಿನಲ್ಲಿಯೇ ಇಷ್ಟೊಂದು ದೊಡ್ಡ ದಾಖಲೆಯನ್ನು ಸೃಷ್ಟಿಸಿದ್ದು ತಿಳಿದಿದೆ. ಈ ಯಶಸ್ಸಿನ ಹಿಂದೆ ಸಾಕಷ್ಟು ಶ್ರಮವಿದೆ. ವಿವಿಧ ಹಂತಗಳಲ್ಲಿ ಕ್ರಿಕೆಟ್ ಆಡುವುದು ಸಹ ಅವರಿಗೆ ಸಹಾಯ ಮಾಡಿತು. ಇದರರ್ಥ ಒಬ್ಬರು ಹೆಚ್ಚು ಆಡಿದಷ್ಟೂ ಅವರು ಹೆಚ್ಚು ಯಶಸ್ಸನ್ನು ಸಾಧಿಸುತ್ತಾರೆ ಎಂದು ಮೋದಿ ಈ ಸಂದರ್ಭದಲ್ಲಿ ಹೇಳಿದರು. ವೈಭವ್ 35 ಎಸೆತಗಳಲ್ಲಿ ಶತಕ.. ಏಪ್ರಿಲ್ 28 ರಂದು,…

Read More

ಬೆಂಗಳೂರು: ಬೆಂಗಳೂರಿನಲ್ಲಿ ತೀವ್ರ ಗಾಯಗಳೊಂದಿಗೆ ವಕೀಲ ಜಗದೀಶ್ ಎನ್ನುವವರ ಮೃತದೇಹ ಪತ್ತೆಯಾಗಿತ್ತು. ಈ ಘಟನೆ ಸಂಬಂಧ ಗಲಾಟೆ ಏನಾದರೂ ಆಗಿತ್ತಾ? ಅಥವಾ ಉದ್ದೇಶಪೂರ್ವಕವಾಗಿ ಹತ್ಯೆಗೈಯ್ಯಲಾಗಿದೆಯಾ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಸಿಕ್ಕಿದೆ. ಹೌದು ವಕೀಲ ಜಗದೀಶ್ ಅವರ ದೇಹ ರಕ್ತಸಿಕ್ತವಾಗಿ ನೈಸ್ ರಸ್ತೆಯಲ್ಲಿ ಪತ್ತೆಯಾಗಿತ್ತು. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಘಟನೆ ಸಂಬಂಧ ಮೃತ ಜಗದೀಶ್ ಸೋದರ ಸಂಬಂಧಿಯೊಬ್ಬರು ಕೊಲೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. https://ainkannada.com/eat-these-foods-to-increase-the-number-of-red-blood-cells-in-the-body/ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಸಾವಿಗೆ ರಹಸ್ಯವನ್ನು ಬಯಲಿಗೆಳೆದಿದ್ದಾರೆ ಪ್ರಾಥಮಿಕ ತನಿಖೆ ಮಾಹಿತಿ ಪ್ರಕಾರ, ವಕೀಲ ಜಗದೀಶ್ ಸಾವಿಗೆ ರೋಡ್ ರೇಜ್ ಕಾರಣವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮೇಲ್ನೋಟಕ್ಕೆ ಜಗದೀಶ್ ಅವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ವಕೀಲ್ ಜಗದೀಶ್ ನೈಸ್ ರಸ್ತೆಯಲ್ಲಿ ತೆರಳುತ್ತಿದ್ದಾಗ ಅವರ ಕಾರಿಗೆ ಲಾರಿಯೊಂದು ಟಚ್ ಆಗಿದೆ.…

Read More

ಮಂಗಳೂರು: ಸುಹಾಸ್ ಶೆಟ್ಟಿ ಪ್ರಕರಣದಲ್ಲಿ ಪೊಲೀಸರು 8 ಆರೋಪಿಗಳ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೃತ್ಯದ ಮೊಬೈಲ್ ವಿಡಿಯೋ, CCTV ಫೂಟೇಜ್‌ಗಳನ್ನು ಸಂಗ್ರಹಿಸಿದ್ದು, ಪೊಲೀಸರು ಈವರೆಗೆ 50ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಿದ್ದಾರೆ. ಸುಹಾಸ್ ಶೆಟ್ಟಿ ಬಜಪೆಗೆ ಬರ್ತಾನೆ ಅನ್ನೋ ಮಾಹಿತಿ ಸಿಕ್ಕಿದ್ಹೇಗೆ? ಹಂತಕರಿಗೆ ಈ ಬಗ್ಗೆ ಬಜಪೆ ಸ್ಥಳೀಯರು ನೆರವು ನೀಡಿದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಇರ ಬೆನ್ನಲ್ಲೇ ಮತ್ತೊಂದು ಮಾಹಿತಿ ಹೊರಬಂದಿದೆ. ಚಿಕ್ಕಮಗಳೂರಿನ ಕಳಸದ ರೆಸಾರ್ಟ್ ಒಂದರಲ್ಲಿ ಏ.2 ರಂದು ಆರೋಪಿಗಳು ನೈಟ್‌ ಪಾರ್ಟಿ ಮಾಡಿದ್ದಾರೆ. ಹತ್ಯೆಗೆ ಸ್ಕೆಚ್ ರೂಪಿಸಲೆಂದೇ ಪಾರ್ಟಿ ಮಾಡಿರುವ ಅನುಮಾನ ವ್ಯಕ್ತವಾಗಿದೆ. https://ainkannada.com/eat-these-foods-to-increase-the-number-of-red-blood-cells-in-the-body/ ಕ್ಯಾಂಪ್ ಫೈರ್ ಹಾಕಿ ಸುಹಾಸ್‌ ಶೆಟ್ಟಿ ಹತ್ಯೆಯ ಆರೋಪಿಗಳಾದ ಮುಝಮ್ಮಿಲ್, ನಿಯಾಜ್ ಹಾಗೂ ಚಿಕ್ಕಮಗಳೂರು ಮೂಲದ ರಂಜಿತ್ ಪಾರ್ಟಿ ಮಾಡಿದ್ದಾರೆ. ಈ ಮೂವರ ಜೊತೆ ಇನ್ನೂ ಐದು ಜನ ಅಪರಿಚಿತರು ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಈ ಪಾರ್ಟಿಯಲ್ಲಿ ರಂಜಿತ್‌ನನ್ನು ಮುಝಮ್ಮಿಲ್‌ಗೆ ನಿಯಾಜ್‌ ಪರಿಚಯ ಮಾಡಿಕೊಟ್ಟಿದ್ದ. ಈ ಪಾರ್ಟಿಯಲ್ಲೇ ಸುಹಾಸ್ ಹತ್ಯೆ ಬಗ್ಗೆ ಮಾತುಕತೆ…

Read More

ನವದೆಹಲಿ: ಪಾಕ್ ಉಗ್ರರ ಪಹಲ್ಗಾಮ್‌ ದಾಳಿಯ ಬಳಿಕ ಭಾರತ, ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿದೆ. ಇದರ ನಡುವೆ ದೆಹಲಿಯ ಬಕ್ಕರ್ವಾಲಾ ಆನಂದ್ ಧಾಮ್ ಆಶ್ರಮದಲ್ಲಿ ಸನಾತನ ಸಂಸ್ಕೃತಿ ಜಾಗರಣ ಮಹೋತ್ಸವದಲ್ಲಿ ಭಾಗವಹಿಸಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾತನಾಡಿದ್ದಾರೆ. https://ainkannada.com/eat-these-foods-to-increase-the-number-of-red-blood-cells-in-the-body/ ಭಾರತದ ಮೇಲೆ ವಕ್ರದೃಷ್ಟಿ ಬೀರುವವರಿಗೆ ತಕ್ಕ ಉತ್ತರ ಕೊಡೋದು ನನ್ನ ಜವಾಬ್ದಾರಿ. ನೀವೆಲ್ಲರೂ ನಮ್ಮ ಪ್ರಧಾನಿಯನ್ನ ಚೆನ್ನಾಗಿ ತಿಳಿದಿದ್ದೀರಿ, ಅವರ ಕಾರ್ಯಶೈಲಿ, ದೃಢಸಂಕಲ್ಪದ ಬಗ್ಗೆಯೂ ನಿಮಗೆ ಚೆನ್ನಾಗಿ ತಿಳಿದಿದೆ. ಹಾಗಾಗಿ ನಿಮಗೆ ಭರವಸೆ ನೀಡುತ್ತೇನೆ, ಮೋದಿ ಅವಧಿಯಲ್ಲಿ ನೀವು ಬಯಸಿದ್ದೆಲ್ಲವೂ ನಡೆಯುತ್ತದೆ ಎಂದು ಹೇಳಿದರು. 2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ: ಮುಂದುವರಿದು ಮಾತನಾಡಿದ ರಕ್ಷಣಾ ಸಚಿವರು, 2047ರ ವೇಳೆಗೆ ಭಾರತವನ್ನ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯನ್ನು ಪ್ರಧಾನಿ ಮೋದಿ ಹೊಂದಿದ್ದಾರೆ. ಇದು ಸಾಮಾನ್ಯ ಗುರಿಯಲ್ಲ. ಆದ್ರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ ಹೆಚ್ಚಾಗಿದೆ ಎಂಬ ಸತ್ಯವನ್ನು ನೀವೆಲ್ಲರೂ ಒಪ್ಪಿಕೊಳ್ಳೋದ್ರಿಂದ ಈ ಗುರಿ ಸಾಧಿಸಬಹುದು. ಭಾರತದ ದುರ್ಬಲ…

Read More

ಇಂಡಿಯನ್ ಪ್ರೀಮಿಯರ್ ಲೀಗ್ 2025 ರ 52 ನೇ ಪಂದ್ಯವು ರಣರೋಚಕವಾಗಿತ್ತು. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೇವಲ 2 ರನ್‌ಗಳಿಂದ ಜಯಗಳಿಸಿತು. ಇದರೊಂದಿಗೆ, ಆರ್‌ಸಿಬಿ 16 ಅಂಕಗಳನ್ನು ಹೊಂದಿದ್ದು, ಪ್ಲೇಆಫ್‌ಗೆ ಅರ್ಹತೆ ಪಡೆಯುವ ಹಾದಿಯಲ್ಲಿದೆ. ಅತ್ತ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಈಗಗಲೇ ಟೂರ್ನಿಯಿಂದ ಹೊರಬಿದ್ದಾಗಿದೆ. https://ainkannada.com/eat-these-foods-to-increase-the-number-of-red-blood-cells-in-the-body/ ಇನ್ನೂ ಬೆಂಗಳೂರು ತಂಡದ ಗೆಲುವಿನಲ್ಲಿ ವೇಗಿ ಯಶ್ ದಯಾಳ್ ಪ್ರಮುಖ ಪಾತ್ರ ವಹಿಸಿದ್ದರು. ಕೊನೆಯ ಓವರ್‌ನಲ್ಲಿ CSK ಗೆಲುವಿಗೆ 15 ರನ್‌ಗಳು ಬೇಕಾಗಿದ್ದವು. ಅತ್ಯುತ್ತಮ ಫಿನಿಷರ್ ಎಂದೇ ಖ್ಯಾತಿ ಪಡೆದಿದ್ದ ಧೋನಿ ಸ್ಟ್ರೈಕ್‌ನಲ್ಲಿದ್ದರೆ, ಜಡೇಜಾ ನಾನ್-ಸ್ಟ್ರೈಕ್‌ನಲ್ಲಿದ್ದರು. ಆದರೆ, ಚೆನ್ನೈ ತಂಡಕ್ಕೆ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಅದಕ್ಕೆ ಕಾರಣ ಯಶ್ ದಯಾಳ್. ಕಳೆದ ಋತುವಿನಲ್ಲಿಯೂ ಯಶ್ ದಯಾಳ್ ಸಿಎಸ್‌ಕೆ ವಿರುದ್ಧ ಇದೇ ರೀತಿಯ ಪ್ರದರ್ಶನ ನೀಡಿದ್ದರು. ಕಳೆದ ಋತುವಿನ ಪಂದ್ಯದಲ್ಲಿ, ಧೋನಿ ಮತ್ತು ಜಡೇಜಾ ಕ್ರೀಸ್‌ನಲ್ಲಿದ್ದರೂ,…

Read More

ಜೀವನ ಶೈಲಿ ಬದಲಾವಣೆ ಮತ್ತು ಆಹಾರ ಪದ್ಧತಿಯಿಂದ ಅನೇಕ ಮಂದಿ ಮಧುಮೇಹದಿಂದ ಬಳಲುತ್ತಿದ್ದಾರೆ. ಹಾಗಾಗಿ ಶುಗರ್ ಕಂಟ್ರೋಲ್ ಮಾಡಲು ವೈದ್ಯರ ಸಲಹೆ ಮೇರೆಗೆ ಆಹಾರ ಕ್ರಮದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ. https://ainkannada.com/eat-these-foods-to-increase-the-number-of-red-blood-cells-in-the-body/ ಆದರೂ ನಾವು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಬಯಸಿದರೆ ನಮ್ಮ ಆಹಾರ ಮತ್ತು ಪಾನೀಯಗಳ ಗ್ಲೈಸೆಮಿಕ್ ಸೂಚ್ಯಂಕವು ಬಹಳ ಮುಖ್ಯವಾಗಿದೆ. ಅದರಲ್ಲೂ ನುಗ್ಗೆಕಾಯಿ ಬೇಯಿಸಿದ ನೀರು ಕುಡಿಯೋದು ತುಂಬಾ ಆರೋಗ್ಯಕರ. ನುಗ್ಗೆಕಾಯಿ ನೀರು ಕುಡಿಯುವುದರಿಂದಾಗುವ ಪ್ರಯೋಜನಗಳ ಬಗ್ಗೆ ನಾವಿಲ್ಲಿ ತಿಳಿದುಕೊಳ್ಳೋಣ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ನುಗ್ಗೆ ಕಾಯಿಗಳಲ್ಲಿ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಇದು ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಅವುಗಳ ಉರಿಯೂತ ನಿವಾರಕ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಆಸ್ತಮಾ, ಕೆಮ್ಮು, ಉಬ್ಬಸ ಮತ್ತು ಇತರ ಉಸಿರಾಟದ ಸಮಸ್ಯೆಗಳ ಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜನರು ತಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನುಗ್ಗೆಕಾಯಿಗಳನ್ನು ತೆಗೆದುಕೊಳ್ಳಬೇಕು. ನುಗ್ಗೆಕಾಯಿಯ ನೀರನ್ನು ಕುಡಿಯುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದು.…

Read More

ಆಧಾರ್ ಕಾರ್ಡ್ ಇಂದು ನಮ್ಮ ದೈನಂದಿನ ಜೀವನದ ಒಂದು ಭಾಗವಾಗಿದೆ. ನೀವು ಬ್ಯಾಂಕ್ ಖಾತೆ ತೆರೆಯಲು, ಸಿಮ್ ಕಾರ್ಡ್ ಪಡೆಯಲು ಅಥವಾ ಸರ್ಕಾರಿ ಯೋಜನೆಗಳನ್ನು ಪಡೆಯಲು ಬಯಸುತ್ತೀರಾ, ಎಲ್ಲೆಡೆ ಆಧಾರ್ ಕಾರ್ಡ್ ಅಗತ್ಯವಿದೆ. ಆದರೆ ಹೆಮ್ಮೆಯ ವಿಷಯವೆಂದರೆ ಭಾರತದ ಮೊದಲ ಆಧಾರ್ ಕಾರ್ಡ್ ಮಹಾರಾಷ್ಟ್ರದ ಮಹಿಳೆಯ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ.  ಭಾರತದ ಮೊದಲ ಆಧಾರ್ ಕಾರ್ಡ್ ಅನ್ನು ಸೆಪ್ಟೆಂಬರ್ 29, 2010 ರಂದು ನಂದೂರ್ಬಾರ್ ಜಿಲ್ಲೆಯ ತೆಂಬಾಲಿ ಎಂಬ ಸಣ್ಣ ಹಳ್ಳಿಯ ನಿವಾಸಿ ರಂಜನಾ ಸೋನಾವಾನೆ ಅವರಿಗೆ ನೀಡಲಾಯಿತು. ಈ ಐತಿಹಾಸಿಕ ಕ್ಷಣವು ಅವರಿಗೆ ಮಾತ್ರವಲ್ಲದೆ ಮಹಾರಾಷ್ಟ್ರಕ್ಕೂ ಹೆಮ್ಮೆಯ ವಿಷಯವಾಗಿದೆ. ಇಂದು, ಈ ಕಾರ್ಡ್ ಅನ್ನು ದೇಶಾದ್ಯಂತ ಲಕ್ಷಾಂತರ ಜನರು ಬಳಸುತ್ತಾರೆ. ಅದಕ್ಕಾಗಿಯೇ ಪ್ರತಿಯೊಬ್ಬ ನಾಗರಿಕನು ತಮ್ಮ ಆಧಾರ್ ಕಾರ್ಡ್ ಅನ್ನು ಕಾಲಕಾಲಕ್ಕೆ ನವೀಕರಿಸುವುದು ಅವಶ್ಯಕ. ಸೆಪ್ಟೆಂಬರ್ 29, 2010 ರಂದು ಆಧಾರ್ ಕಾರ್ಡ್ ಪಡೆದ ಮೊದಲ ವ್ಯಕ್ತಿ ರಂಜನಾ ಸೋನಾವಾನೆ. ಈ ದಿನಾಂಕದಂದು ಆಧಾರ್ ಕಾರ್ಡ್ ಪಡೆದ ಮೊದಲ ವ್ಯಕ್ತಿ ರಂಜನಾ…

Read More

ಬಾಗಲಕೋಟೆ: ನಾವು ಕ್ವಾಲಿಟಿ ಡ್ರಿಂಕ್ಸ್ ಕೊಡಬೇಕು ಅಂತಾ ಬೆಲೆ ಹೆಚ್ಚಳ ಮಾಡಿದ್ದೇವೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನೆರೆ ರಾಜ್ಯಗಳಿಗಿಂತ ನಮ್ಮಲ್ಲಿ ಬೆಲೆ ಇನ್ನೂ ಕಡಿಮೆ ಇದೆ. ಮಹಾರಾಷ್ಟ್ರ, ಆಂಧ್ರ, ತಮಿಳುನಾಡು ಸ್ಲ್ಯಾಬ್‌ಗಿಂತ ಕಡಿಮೆ ಇದೆ. ಪ್ರೀಮಿಯಮ್ ಬ್ರ್ಯಾಂಡ್ ಏರಿಕೆ ಮಾಡಿಲ್ಲ. ಯಾವುದೇ ಸರ್ಕಾರ ಬಂದರೂ ಇದು ನಿರಂತರವಾಗಿ ನಡೆಯುತ್ತದೆ ಎಂದರು. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ಬೆಲೆ ಏರಿಕೆಯಿಂದ ಕುಡುಕರ ಸಂಖ್ಯೆ ಕಡಿಮೆ ಆಗಲ್ವಾ? ಎಂಬ ಪ್ರಶ್ನೆಗೆ, ಕುಡುಕರ ಸಂಖ್ಯೆ ಕಡಿಮೆ ಆದ್ರೆ ಒಳ್ಳೆಯದಲ್ವಾ?. ನಾವು ಕ್ವಾಲಿಟಿ ಡ್ರಿಂಕ್ಸ್ ಕೊಡಬೇಕು ಅಂತಾ ಬೆಲೆ ಹೆಚ್ಚಳ ಮಾಡಿದ್ದೇವೆ ಎಂದು ತಿಳಿಸಿದರು. ಮದ್ಯಪ್ರಿಯರ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿ, ಈ ವಿಚಾರಕ್ಕೆ ಪ್ರತಿಭಟನೆ ಆಗೋದಿಲ್ಲ. ಕುಡಿಯುವವರ ಸಂಖ್ಯೆ ಕಡಿಮೆ ಆದ್ರೆ ಒಳ್ಳೆಯದಲ್ವಾ? ಎಲ್ಲ ಸರ್ಕಾರಗಳ ಅವಧಿಯಲ್ಲೂ ಮದ್ಯದ ಬೆಲೆ ಏರಿಕೆ ಮಾಡುತ್ತಲೇ ಬಂದಿದ್ದಾರೆ. ನಮ್ಮ ಸರ್ಕಾರದಲ್ಲೂ ಸ್ವಲ್ಪ ಬೆಲೆ ಏರಿಕೆ ಮಾಡಲಾಗಿದೆ ಎಂದರು.

Read More