ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗೋಕುಲ್ ರಸ್ತೆಯ ಲೋಹಿಯಾ ನಗರದಲ್ಲಿರುವ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಗೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯ ವಿಧಾನ ಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಸಾಥ್ ನೀಡಿದರು. https://ainkannada.com/eat-these-foods-to-increase-the-number-of-red-blood-cells-in-the-body/ ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿನ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಕಾಮಗಾರಿ ಪ್ರಗತಿ ಪರಿಶೀಲನೆ ವೇಳೆ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದ ಸಚಿವರು ಹಾಗೂ ಶಾಸಕರು ಮಾಹಿತಿ ಪಡೆದುಕೊಂಡರು. ಇನ್ನೂ ಸ್ಮಾರ್ಟ್ ಸಿಟಿಯ ಟೈಮ್ ಬಾಂಡ್ ಮುಗಿದಿದ್ದರೂ ಕೂಡ ಕಾಮಗಾರಿ ಪ್ರಗತಿಯಲ್ಲಿರುವ ಬಗ್ಗೆ ಹಾಗೂ ಕ್ರೀಡೆಗೆ ಪೂರಕವಾದ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
Author: Author AIN
ಈ ಬಾರಿಯ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಶೈನ್ ಆಗುತ್ತಿದೆ. ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸುತ್ತಾ ಕಪ್ ಗೆಲ್ಲುವ ಉತ್ಸಾಹದಲ್ಲಿದೆ. ಆರ್‌ಸಿಬಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಫೇಮಸ್ ಆಗಿರುವವರು ಟಿಮ್ ಡೇವಿಡ್. ಆಸ್ಟ್ರೇಲಿಯಾದ ಟಿಮ್ ಡೇವಿಡ್ ಆರ್‌ಸಿಬಿಯ ಸ್ಫೋಟಕ ಬ್ಯಾಟರ್. ಕಿಂಗ್ ಕೊಹ್ಲಿ ಸ್ನೇಹಿತ ಕೂಡ. ಇವರು ಬ್ಯಾಟ್ ಹಿಡಿದು ಗ್ರೌಂಡ್ ಗೆ ಇಳಿದ್ರೆ ಸಾಕು ಸಿಕ್ಸ್ ಪೋರ್ ಗಳ ಅಬ್ಬರ..ಇಂತಹ ಅದ್ಭುತ ಬ್ಯಾಟರ್ ಕನ್ನಡದ ಸಾಹಸ ಸಿಂಗಹ ವಿಷ್ಣುವರ್ಧನ್ ಅವರ ಚಿತ್ರವೊಂದನ್ನು ವೀಕ್ಷಣೆ ಮಾಡಿರುವುದಾಗಿ ಹೇಳಿದ್ದಾರೆ. ಡ್ಯಾನೀಶ್ ಸೇಠ್ ನಡೆಸಿಕೊಡುವ ಆರ್ ಸಿಬಿ ಇನ್ ಸೈಡ್ ಶೋನಲ್ಲಿ ಟಿಮ್ ಡೇವಿಡ್ ಇತ್ತೀಚೆಗೆ ಭಾಗಿಯಾಗಿದ್ದರು. ಸಖತ್ ಫನ್ ಆಗಿ ಮೂಡಿ ಬರುವ ಈ ಶೋನಲ್ಲಿ ಟಿಮ್ ಡೆವಿಡ್ ತಾವು ಹುಟ್ಟಿದ್ದು ಸಿಂಗಾಪುರದಲ್ಲಿ ಎಂದು ಹೇಳಿದ್ದಾರೆ. ಆಗ ಡ್ಯಾನೀಶ್ ಸೇಠ್, ನಾನು ಸಿಂಗಾಪುರ್ ನೋಡಿದ್ದು ಸಿಂಗಾಪುರ್‌ನಲ್ಲಿ ರಾಜ ಕುಳ್ಳ ಚಿತ್ರದಲ್ಲಿ ಎಂದು ಜೋಕ್ ಮಾಡಿದ್ದಾರೆ.ಅಲ್ಲದೇ ನೀವು ಈ ಸಿನಿಮಾ ನೋಡಿದ್ದೀರಾ ಎಂದು ಕೇಳಿದ್ದಾರೆ.…
ಬೆಂಗಳೂರು: ಜಾತಿ ಗಣತಿ ವರದಿ ಬಂದ ನಂತರವೂ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಗೊಂದಲ ಮುಂದುವರೆದಿದೆ. ಹೀಗಾಗಿ ಕೊರಚ-ಕೊರಮ-ಆದಿ ದ್ರಾವಿಡ ಸೇರಿದಂತೆ 101 ಉಪ ಜಾತಿಗಳು ಪರಿಶಿಷ್ಟ ಜಾತಿ ವರ್ಗದಲ್ಲಿ ಸೇರಿವೆ. ಇವುಗಳಲ್ಲಿ ಉಪ ಜಾತಿಗಳ ವರ್ಗೀಕರಣ ಸಮರ್ಪಕವಾಗಿ ನಡೆಯದ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದವರ ಮರು ಸಮೀಕ್ಷೆ ಅಥವಾ ಸಮಗ್ರ ಸಮೀಕ್ಷೆ (ಎಂಪರಿಕಲ್ ಡಾಟಾ ಸಂಗ್ರಹ)ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರ ಜತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ,ಇವತ್ತಿನಿಂದ ಮೇ.17ವರೆಗೆ ಮೊದಲ ಹಂತದಲ್ಲಿ ಪರಿಶಿಷ್ಟ ಜಾತಿಗಳ ಮರು ಸಮೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು. ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನಾಗಮೋಹನ್ ದಾಸ್ ಅಧ್ಯಕ್ಷತೆಯ ಆಯೋಗ ವರದಿ ನೀಡಿದ್ದರೂ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಬಗ್ಗೆ ನಿಖರವಾದ ವರದಿ ಕೊಡಲು ಸಾಧ್ಯವಾಗಿಲ್ಲ. ಆರ್ಟಿಕಲ್ 341 ರ ಪ್ರಕಾರ ಪರಿಶಿಷ್ಟ ಜಾತಿಗಳಲ್ಲಿ ಎಡ- ಬಲ , ಭೋವಿ , ಲಮಾಣಿ, ಕೊರಮ , ಕೊರಚ…
ಕಲಬುರಗಿ: ಬೀದರ್, ಶಿವಮೊಗ್ಗದಲ್ಲಿ ಸಿಇಟಿ ಬರೆಯಲು ಜನಿವಾರ ತೆಗೆಸಿದ ಪ್ರಕರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೆ ಜನಿವಾರ ವಿವಾದ ಭುಗಿಲೆದ್ದಿದೆ. ನೀಟ್ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆದು ಬಾ ಅಂತ ಹೇಳಿದ್ದು ಮತ್ತೇ ಬ್ರಾಹ್ಮಣ ಸಮಾಜ ಕೆರಳಿಸುವಂತೆ ಮಾಡಿದೆ. ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಕಲಬುರಗಿಯ ಇಬ್ಬರು ಪರೀಕ್ಷಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ನೀಟ್ ಪರೀಕ್ಷೆಯಲ್ಲಿ ಪರೀಕ್ಷಾ ಸಿಬ್ಬಂದಿ ಶರಣಗೌಡ ಹಾಗೂ ಗಣೇಶ್, ಪರೀಕ್ಷಾರ್ಥಿ ಶ್ರೀಪಾದ್ ಪಾಟೀಲ್ ಧರಿಸಿದ್ದ ಜನಿವಾರ ತೆಗೆಸಿದ್ದರು. ಪರೀಕ್ಷಾ ಸಿಬ್ಬಂದಿ ಈ ನಡೆಗೆ ಆಕ್ರೋಶಗೊಂಡ ಬ್ರಾಹ್ಮಣ ಸಮಾಜ ಬೃಹತ್ ಪ್ರತಿಭಟನೆ ನಡೆಸಿತ್ತು. https://ainkannada.com/eat-these-foods-to-increase-the-number-of-red-blood-cells-in-the-body/ ಪರೀಕ್ಷಾ ಸಿಬ್ಬಂದಿ ಜನಿವಾರ ತೆಗೆಸಿ ನನ್ನ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಶ್ರೀಪಾದ್ ಪಾಟೀಲ್ ಸ್ಟೇಷನ್ ಬಜಾರ್ ಠಾಣೆಗೆ ದೂರು ನೀಡಿದ್ದಾರೆ. ವಿದ್ಯಾರ್ಥಿ ದೂರಿನ ಆಧಾರದಲ್ಲಿ ಪೊಲೀಸರು ಬಿಎನ್‌ಎಸ್ ಕಾಯ್ದೆ 298ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.”ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025″ ಕುರಿತಂತೆ ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸಮಿತಿ ವರದಿ ನೀಡಿದೆ. https://ainkannada.com/eat-these-foods-to-increase-the-number-of-red-blood-cells-in-the-body/ ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು ಸಂಗ್ರಹಿಸಲು ಸಮೀಕ್ಷೆ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ.2011ರ ಜನಗಣತಿ ಆಧಾರದಲ್ಲಿ ಸದಾಶಿವ ಆಯೋಗ ಪರಿಶಿಷ್ಟ ಜಾತಿ ಸಮುದಾಯಗಳ ಜನಸಂಖ್ಯೆಯನ್ನು ಗುರುತಿಸಿತ್ತು. 1-8-2024 ರಲ್ಲಿ ಸುಪ್ರೀಂಕೋರ್ಟ್ ಒಳ ಮೀಸಲಾತಿ ಪರವಾಗಿ ನೀಡಿರುವ ಆದೇಶದಂತೆ ನಾವು ಮುಂದುವರೆದೆವು. ಆದಿ ದ್ರಾವೀಡ,…
ಬೆಂಗಳೂರು: ಇಂದಿನಿಂದ ಮೇ 17ರವರೆಗೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಗಣತಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗ ರಚನೆ ಮಾಡಿದ್ದೀವಿ. ನಾಗಮೋಹನ್ ದಾಸ್ ಸಮಿತಿ ಇಂದಿನಿಂದ ಗಣತಿದಾರರು, ಮೇಲ್ವಿಚಾರಕರಿಗೆ ತರಬೇತಿ ನೀಡಲಿದ್ದು, ಅವರು ಮನೆ ಮನೆಗೆ ತೆರಳಲಿದ್ದಾರೆ. ಒಳಮೀಸಲಾತಿ ಸಮೀಕ್ಷೆ ಎರಡು ಹಂತಗಳಲ್ಲಿ ನಡೆಯಲಿದೆ. ಇಂದಿನಿಂದ ಮೇ 17ರವರೆಗೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಗಣತಿ ನಡೆಯಲಿದೆ ಎಂದು ತಿಳಿಸಿದರು. https://ainkannada.com/eat-these-foods-to-increase-the-number-of-red-blood-cells-in-the-body/ ಇನ್ನೂ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಬಗ್ಗೆ ನಿಖರವಾದ ವರದಿ ಕೊಡಲು ಈ ಆಯೋಗ ಮಾಡಿದ್ದು, ಆರ್ಟಿಕಲ್ 341 ರ ಪ್ರಕಾರ 101 ಜಾತಿಗಳಿವೆ, ಎಡ- ಬಲ , ಭೋವಿ , ಲಮಾಣಿ, ಕೊರಮ , ಕೊರಚ ಇತರೆ ಜಾತಿಗಳು ಬರುತ್ತವೆ. ಒಳ ಮೀಸಲಾತಿ ಕೊಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಆದಿ ದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರ ಎಂಬುದಾಗಿ…
ಸರ್ವ ರೋಗಕ್ಕೂ ಸಂಗೀವವೇ ಮದ್ದು ಅಂತಾರೇ. ಆದ್ರೀಗ ತಮ್ಮ ಸೊಗಸಾದ ಕಂಠದ ಮೂಲಕವೇ ಕರುನಾಡ ಮನಸ್ಸುಗಳನ್ನು ಗೆದ್ದಿದ್ದ ಸೋನು ನಿಗಮ್ ಎಂಬ ಗಾಯಕ ಮಾಡಿದ ಎಡವಟ್ಟಿಗೆ ಕನ್ನಡಿಗರು ಕೆರಳಿ ಕೆಂಡವಾಗಿದ್ದಾರೆ. ತಪ್ಪನ್ನು ಒಪ್ಪಿಕೊಳ್ಳದೇ, ಕಡೆ ಪಕ್ಷ ಕ್ಷಮೆಯೂ ಕೇಳದೇ ತಾನು ಮಾಡಿದ್ದೇ ಸರಿ ಎನ್ನುವಂತೆ ವರ್ತಿಸುತ್ತಿರುವ ಈ ಗಾಯಕನ ವಿರುದ್ಧ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಮಧ್ಯಾಹ್ನ 1 ಗಂಟೆಗೆ ಸಭೆ ಕರೆದಿದ್ದು, ಈ ಸಭೆಯಲ್ಲಿ ಸೋನು ನಿಗಮ್ ಮೇಲೆ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕೆಂದು ಚರ್ಚೆ ನಡೆಸಲಾಗುತ್ತಿದೆ. ಅದಕ್ಕಾಗಿ ಕನ್ನಡದ ಸಂಗೀತ ನಿರ್ದೇಶಕರಿಗೂ ಆಹ್ವಾನ ಕೊಡಲಾಗಿದೆ. ಕನ್ನಡ ಚಿತ್ರರಂಗದಿಂದ ಸೋನು ನಿಗಮ್ ಬ್ಯಾನ್ ಮಾಡಬೇಕು ಎಂಬ ಕೂಗು ಜೋರಾಗಿದ್ದು, ಈ ಬಗ್ಗೆ ಫಿಲ್ಮಂ ಚೇಂಬರ್ ಹಾಗೂ ಸಂಗೀತ ನಿರ್ದೇಶಕರು ಈ ವಿಷಯದಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಲಿದ್ದಾರೆ ಅನ್ನೋದನ್ನು ಕಾದುನೋಡಬೇಕಿದೆ. ಏನಿದು ವಿವಾದ? ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ…
ಬೆಂಗಳೂರು: ಆರ್ಥಿಕ ಸುರಕ್ಷತೆಯ ವಿಷಯದಲ್ಲೂ ಚಿನ್ನದ ಎತ್ತಿದ ಕೈ ಎನ್ನಬಹುದು. ಒಬ್ಬ ವ್ಯಕ್ತಿಯಿಂದ ಹಿಡಿದು ರಾಷ್ಟ್ರದ ಆರ್ಥಿಕ ಸದೃಢತೆಯಲ್ಲೂ ಚಿನ್ನ ಮಹತ್ವದ ಪಾತ್ರವಹಿಸಿದೆ. ಆರ್ಥಿಕವಾಗಿ ತಲೆದೋರುವ ಕಷ್ಟಕಾಲದ ಆಪದ್ಬಾಂಧವನಂತೆ ಚಿನ್ನ ಕಾರ್ಯ ನಿರ್ವಹಿಸುತ್ತದೆ. ಇನ್ನು, ಚಿನ್ನದ ಬೆಲೆ ಯಾವಾಗಲೂ ಒಂದೇ ತೆರನಾಗಿರುವುದಿಲ್ಲ. ಹಲವಾರು ಜಾಗತಿಕ ವಿದ್ಯಮಾನಗಳು ಹಾಗೂ ಸ್ಥಳೀಯ ಕಾರಣಗಳಿಂದಾಗಿ ನಿತ್ಯ ಅದರ ಬೆಲೆ ಪ್ರಭಾವಿಸಲ್ಪಡುತ್ತಲೇ ಇರುತ್ತದೆ. ಹಾಗಾಗಿ ನಿತ್ಯದ ಬೆಲೆಯ ಅಪ್ಡೇಟ್ ಸಾಕಷ್ಟು ಜನರಿಗೆ ಉಪಯುಕ್ತ ಎನ್ನಬಹುದು. https://ainkannada.com/eat-these-foods-to-increase-the-number-of-red-blood-cells-in-the-body/ ಚಿನ್ನದ ಬೆಲೆ ಗ್ರಾಮ್ಗೆ 16 ರೂನಿಂದ 22 ರೂವರೆಗೆ ಏರಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 20 ರೂ ಹೆಚ್ಚಳವಾಗಿದೆ. ವಾರಾಂತ್ಯದಲ್ಲಿ 8,755 ರೂ ಇದ್ದ ಇದರ ಬೆಲೆ ಸೋಮವಾರ 8,775 ರೂಗೆ ಏರಿದೆ. ದೆಹಲಿ ಇತ್ಯಾದಿ ಕೆಲವೆಡೆ ಬೆಲೆ 8,790 ರೂಗೆ ಏರಿದೆ. ವಿದೇಶ ಮಾರುಕಟ್ಟೆಗಳಲ್ಲಿ ಮಲೇಷ್ಯಾದಂತಹ ಕೆಲ ದೇಶಗಳಲ್ಲಿ ಚಿನ್ನದ ಬೆಲೆ ಕಡಿಮೆ ಆಗಿದೆ. ಹೆಚ್ಚಿನ ಕಡೆ ಯಥಾಸ್ಥಿತಿ ಇದೆ. ದುಬೈ, ಅಮೆರಿಕದಲ್ಲಿ ಬೆಲೆ ತುಸು…
ಹುಬ್ಬಳ್ಳಿ: ತಾಲೂಕಿನ ಇಂಗಳಹಳ್ಳಿ ಗ್ರಾಮದ ಗದುಗಿನ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಶ್ರೀ ಮೃತ್ಯುಂಜಯ ಪ್ರೌಢಶಾಲೆಯ ವಿದ್ಯಾರ್ಥಿಗಳು 2024-25 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದು ಶಾಲೆಗೆ ಕೀರ್ತಿ ತಂದಿದ್ದಾರೆ. ಅಶ್ವಿನಿ ಕಾಡದೇವರಮಠ 569 ಅಂಕ ಗಳಿಸಿ 91.04% ದೊಂದಿಗೆ ಶಾಲೆಗೆ ಪ್ರಥಮ ಸ್ಥಾನ, ಅಶ್ವಿನಿ ಬಾರ್ಕಿ 542 ಅಂಕ ಗಳಿಸಿ 86.72% ದೊಂದಿಗೆ ದ್ವಿತೀಯ ಸ್ಥಾನ ಹಾಗೂ ಹಾಜಿರಾ ಕಾಶೀಂಖಾನವರ 523 ಅಂಕ ಪಡೆಯೋ ಮೂಲಕ 83.68% ದೊಂದಿಗೆ ಶಾಲೆಗೆ ತೃತಿಯ ಸ್ಥಾನ ಪಡೆದುಕೊಂಡಿದ್ದಾಳೆ. https://ainkannada.com/eat-these-foods-to-increase-the-number-of-red-blood-cells-in-the-body/ ಉಳಿದಂತೆ ದಾವಲಸಾಬ ಕಾಲೇಖಾನವರ 519 ಅಂಕ ಪಡೆದು 83.04%, ಪೂಜಾ ಗಣಾಚಾರಿ 508 ಅಂಕ ಪಡೆದು 81.28%, ಈರವ್ವ ಮರೆಪ್ಪಗೌಡ್ರ 493 ಅಂಕ ಪಡೆದು 78.88%, ಸನಾ ನಾಯ್ಕರ್ 493 ಅಂಕ ಪಡೆದು 78.88%, ಶ್ವೇತಾ ಹವಳಪ್ಪನವರ 490 ಅಂಕ ಪಡೆದು 78.40%, ನೇತ್ರಾವತಿ ಮಡಿವಾಳರ 475 ಅಂಕ ಪಡೆದು 76%, ಮಕ್ತುಂಬಿ ಯಲಿಗಾರ 466 ಅಂಕ ಪಡೆದು…
ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ತಮ್ಮ ದೇಶದ ಸಿನಿಮಾ ಉಳಿವಿಗಾಗಿ ಹೊಸ ನೀತಿ ಜಾರಿಗೆ ತಂದಿದ್ದಾರೆ. ವಿದೇಶಿ ಸಿನಿಮಾಗಳ ಮೇಲೆ ಶೇಖಡ್ 100ರಷ್ಟು ಸುಂಕ ಘೋಷಿಸಿದ್ದಾರೆ. ಹಾಲಿವುಡ್ ಚಿತ್ರರಂಗವನ್ನು ರಕ್ಷಿಸಲು ಮತ್ತು ಸ್ಥಳೀಯ ಉದ್ಯೋಗ ಸೃಷ್ಟಿಗೆ ಉತ್ತೇಜ ನೀಡಲು ಅಮೆರಿಕಾದ ಹೊರಗಡೆ ತಯಾರಾಗುವ ಚಿತ್ರಗಳ ಮೇಲೆ ಶೇಖಡ 100ರಷ್ಟು ಸುಂಕ ವಿಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತಾದ ಪೋಸ್ಟ್ ಅನ್ನು ಡೊನಾಲ್ಡ್ ಟ್ರಂಪ್ ಅವರು ಸಾಮಾಜಿಕ ವೇದಿಕೆ ಟ್ರೂತ್‌ನಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಪೋಸ್ಟ್‌ನಲ್ಲಿ ಟ್ರಂಪ್, ‘ಅಮೆರಿಕದಲ್ಲಿ ಚಲನಚಿತ್ರೋದ್ಯಮವು ಬಹಳ ವೇಗವಾಗಿ ಸಾಯುತ್ತಿದೆ. ಇತರ ದೇಶಗಳು ನಮ್ಮ ಚಲನಚಿತ್ರ ನಿರ್ಮಾಪಕರು ಮತ್ತು ಸ್ಟುಡಿಯೋಗಳನ್ನು ಅಮೆರಿಕದಿಂದ ದೂರ ಸೆಳೆಯಲು ವಿವಿಧ ಪ್ರೋತ್ಸಾಹಕ ಯೋಜನೆಗಳನ್ನು ನೀಡುತ್ತಿವೆ. ಹಾಲಿವುಡ್ ಮತ್ತು ಅಮೆರಿಕದ ಇತರ ಹಲವು ಪ್ರದೇಶಗಳು ನಾಶವಾಗುತ್ತಿವೆ. ಇದು ಇತರ ದೇಶಗಳ ಯೋಜಿತ ಪ್ರಯತ್ನವಾಗಿದೆ ಮತ್ತು ಆದ್ದರಿಂದ ಇದು ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಾಗಿದೆ’ ಎಂದು ಬರೆದುಕೊಂಡಿದ್ದಾರೆ. ಟ್ರಂಪ್ ಈ ಘೋಷಣೆ ಸಿನಿಮಾ ಉದ್ಯಮದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ.…