Author: Author AIN

ಕಾರಿನ ಕಿಟಕಿಗಳ ಮೇಲೆ ಬಿರುಕುಗಳು ಉಂಟಾಗಲು ಹಲವು ಕಾರಣಗಳಿದ್ದರೂ, ಅವುಗಳನ್ನು ಗುರುತಿಸುವುದು ಮುಖ್ಯ. ನೀವು ಒಂದು ಸಣ್ಣ ಬಿರುಕನ್ನು ನಿರ್ಲಕ್ಷಿಸಿದರೆ, ಅದು ವಿಂಡ್‌ಶೀಲ್ಡ್‌ನಾದ್ಯಂತ ಜೇಡರ ಬಲೆಯಾಗಿ ಬದಲಾಗಬಹುದು ಮತ್ತು ಅದು ಸಂಪೂರ್ಣವಾಗಿ ಛಿದ್ರವಾಗಬಹುದು. ಆದ್ದರಿಂದ, ನಿಮ್ಮ ಕಾರಿನ ವಿಂಡ್‌ಶೀಲ್ಡ್‌ನಲ್ಲಿನ ಸಣ್ಣದೊಂದು ಬಿರುಕು ಕೂಡ ತಕ್ಷಣವೇ ಗುರುತಿಸಿ ದುರಸ್ತಿ ಮಾಡುವುದು ಮುಖ್ಯ. ಇಲ್ಲದಿದ್ದರೆ, ನೀವು ನಂತರ ದೊಡ್ಡ ನಷ್ಟವನ್ನು ಅನುಭವಿಸಬೇಕಾಗಬಹುದು. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ವಿಂಡ್ ಷೀಲ್ಡ್ ನಲ್ಲಿ ಸಣ್ಣ ಬಿರುಕುಗಳಾಗಿ ಪ್ರಾರಂಭವಾಗುವ ಬಿರುಕುಗಳು ತಾಪಮಾನ, ಕಂಪನ ಅಥವಾ ಚಾಲನಾ ಒತ್ತಡದಲ್ಲಿನ ಬದಲಾವಣೆಗಳಿಂದಾಗಿ ಬೇಗನೆ ದೊಡ್ಡ ಬಿರುಕುಗಳಾಗಿ ಬದಲಾಗಬಹುದು. ವಿಂಡ್ ಷೀಲ್ಡ್ ಬಿರುಕುಗಳನ್ನು ಸರಿಪಡಿಸಲು ಮಾರುಕಟ್ಟೆಯಲ್ಲಿ ಕಿಟ್‌ಗಳು ಲಭ್ಯವಿದೆ. ಆದರೆ ಅದಕ್ಕೂ ಮೊದಲು, ವಿಂಡ್‌ಶೀಲ್ಡ್ ರಕ್ಷಣೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಏನಾಗುತ್ತದೆ ಎಂದು ನೋಡೋಣ.. ಇದನ್ನು ಮೊದಲು ಮಾಡಬೇಕು.. ವಿಂಡ್ ಷೀಲ್ಡ್ ಬಿರುಕುಗಳನ್ನು ಸರಿಪಡಿಸಲು ಮಾರುಕಟ್ಟೆಯಲ್ಲಿ ಕಿಟ್‌ಗಳು ಲಭ್ಯವಿದೆ. ಆದರೆ ಆ ಕಿಟ್ ಅನ್ನು ಆರ್ಡರ್ ಮಾಡುವ ಮೊದಲು ಅಥವಾ ದುರಸ್ತಿಗಾಗಿ ಯಾವುದೇ…

Read More

ಹುಬ್ಬಳ್ಳಿ: ಬಿಜೆಪಿಯವರು ಹಳೆಯದನ್ನು ಹೊಸದಾಗಿ, ಹೊಸದನ್ನು ಹಳೆಯದನ್ನಾಗಿ ಮಾಡ್ತಾರೆ. ಕೊಲೆಯಾದ ಸುಹಾಸ್ ಶೆಟ್ಟಿ ಪರಿಹಾರದಲ್ಲಿ ಸರ್ಕಾರದಿಂದ ತಾರತಮ್ಯ ನಡೆದಿಲ್ಲ. ಬಿಜೆಪಿಯವರು ಎಲ್ಲವನ್ನೂ ಉಲ್ಟಾ ಪಲ್ಟಿ ಮಾಡ್ತಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಆರೋಪಿ ಮನೆಗೆ ಕಾಂಗ್ರೆಸ್ ನಾಯಕರು ಭೇಟಿ ಕೊಟ್ಟಿಲ್ಲ. ಪ್ರಕರಣ ದಾಖಲಾಗಿದೆ, ತನಿಖೆ ಮಾಡ್ತಿದ್ದಾರೆ. ಈಗಾಗಲೇ 6 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ಇಬ್ಬರನ್ನು ಬಂಧಿಸಬೇಕಿದೆ ಎಂದರು. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಡ್ತಿಲ್ಲ ಎಂಬ ಆರೋಪಕ್ಕೆ ಕಿಡಿಕಾರಿದ ಅವರು, ಫ್ರೀ ಹ್ಯಾಂಡ್ ಕೊಟ್ಟಿದ್ದರಿಂದಲೇ ಆರೋಪಿಗಳನ್ನು ತಕ್ಷಣ ಬಂಧಿಸುವಸಂತಾಗಿದೆ. ಹಿಂದೂ ಮುಸ್ಲಿಂ ಅಂತ ಯಾರನ್ನು ಟಾರ್ಗೆಟ್ ಮಾಡಲು ಬರಲ್ಲ. ಘಟನೆ ನಡೆದಿದೆ, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು. ಸುಹಾಸ್ ಶೆಟ್ಟಿ ಜೊತೆಗೆ ಇತರೆ ಕೆಲವರ ಕೊಲೆಗೆ ಬೆದರಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಯಾರಿಗೆ ಬೆದರಿಕೆ ಇದೆಯೋ ಅವರು ಪೊಲೀಸರಿಗೆ ದೂರು ನೀಡಬೇಕು ಎಂದ…

Read More

ಪ್ರತಿಯೊಬ್ಬ ಮನುಷ್ಯನಿಗೂ ಆರೋಗ್ಯವಾಗಿಇರಬೇಕು ಅಂದರೆ ದೇಹದಲ್ಲಿನ ರಕ್ತದ ಮೂರು ಕಣಗಳಾದ ಕೆಂಪು ರಕ್ತ ಕಣಗಳು ಬಿಳಿರಕ್ತ ಕಣ, ಮತ್ತು ಪ್ಲೇಟ್ಲೆಟ್‌ಗಳು ಸಾಕಷ್ಟು ಇರಲೇಬೇಕು..ಅದ್ರಲ್ಲೂ ಪ್ಲೇಟ್ಲೆಟ್ ನಮ್ಮ ರಕ್ತದ ಪ್ರಮುಖ ಅಂಶವಾಗಿದ್ದು, ದೇಹಕ್ಕೆ ಗಾಯಗಳು ಉಂಟಾದಾಗ ರಕ್ತ ಸ್ರಾವವನ್ನು ತಡೆಗಟ್ಟಿ ರಕ್ತ ಹೆಪ್ಪುಗಟ್ಟುವಂತೆ ಮಾಡುತ್ತದೆ. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ಕೆಲವೊಮ್ಮೆ ವೈರಲ್ ಜ್ವರಗಳು, ಅಸ್ಥಿಮಜ್ಜೆಯಲ್ಲಿ ರಕ್ತದ ಕಣಗಳ ಉತ್ಪಾದನೆ ಕುಂಠಿತ ಹೀಗೆ ಅನೇಕ ಕಾರಣಗಳಿಂದ ಪ್ಲೇಟ್ಲೆಟ್ಸ್ ಸಂಖ್ಯೆಯಲ್ಲಿ ಕೊರತೆ ಕಂಡು ಬರುತ್ತದೆ.ಕೆಂಪು ರಕ್ತ ಕಣಗಳನ್ನು ಹೆಚ್ಚಿಸಲು ಈ 10 ಆಹಾರವನ್ನು ಸೇವಿಸಿ. ಹಸಿರು ಸೊಪ್ಪು: ಪಾಲಕ್, ಕೇಲ್, ಸ್ವಿಸ್ ಚಾರ್ಡ್ ಮತ್ತು ಇತರ ಹಸಿರು ಸೊಪ್ಪಿನಲ್ಲಿ ಕಬ್ಬಿಣ ಮತ್ತು ಫೋಲೇಟ್ ಸಮೃದ್ಧವಾಗಿರುತ್ತದೆ. ಇದು ಕೆಂಪು ರಕ್ತ ಕಣಗಳ ಉತ್ಪಾದನೆಗೆ ಅವಶ್ಯಕವಾಗಿದೆ. ಮಾಂಸ: ಆರ್ಗನ್ ಮಾಂಸಗಳು ವಿಶೇಷವಾಗಿ ಯಕೃತ್ತು, ಕಬ್ಬಿಣ, ವಿಟಮಿನ್ ಬಿ 12 ಮತ್ತು ಕೆಂಪು ರಕ್ತ ಕಣಗಳ ರಚನೆಗೆ ಪ್ರಮುಖವಾದ ಇತರ ಪೋಷಕಾಂಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಬೀನ್ಸ್ ಮತ್ತು ಮಸೂರ: ದ್ವಿದಳ ಧಾನ್ಯಗಳು ಮತ್ತು…

Read More

ಬೆಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎಗೆ ಕೊಟ್ಟಿಲ್ಲ, ಅದರ ಅಗತ್ಯ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎಗೆ ವಹಿಸಲು ಬಿಜೆಪಿ ನಾಯಕರು ಹೇಳುತ್ತಿರುವುದು ಅವರ ಅಭಿಪ್ರಾಯ. ನಮ್ಮ ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ಮಾಡುತ್ತಿದೆ. ಎಂಟು ಜನರನ್ನು ಪ್ರಕರಣದಲ್ಲಿ ಬಂಧಿಸಲಾಗಿದೆ. ತನಿಖೆ ಚೆನ್ನಾಗಿ ನಡೆಯುತ್ತಿದೆ ಎಂಬುದು ನಮ್ಮ ಅಭಿಪ್ರಾಯ. ಹಾಗಾಗಿ ಈ ಪ್ರಕರಣ ಎನ್ಐಎಗೆ ಕೊಟ್ಟಿಲ್ಲ ಅದರ ಅಗತ್ಯ ಇಲ್ಲ ಎಂದರು. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದಿಂದ ಭೇಟಿ ನೀಡಿ ಯಾರೂ ಸಾಂತ್ವನ ಹೇಳದ ವಿಚಾರ ಬಗ್ಗೆ ಮಾತಾಡಿದ ಪರಮೇಶ್ವರ್, ಇದು ಒಂದು ಕೊಲೆ ಪ್ರಕರಣ. ಸುಹಾಸ್ ಶೆಟ್ಟಿ ಮೇಲೆ ಐದು ಕೇಸ್‌ಗಳು ಅವರ ಮೇಲಿವೆ. ಹಾಗಾಗಿ ನಾವು ಹಾಗೂ ಭೇಟಿ ಕೊಟ್ಟಿಲ್ಲ. ಆದರೆ ಸುಹಾಸ್ ಶೆಟ್ಟಿ ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದು ಪರಮೇಶ್ವರ್ ಭರವಸೆ ನೀಡಿದರು.

Read More

ಮನರಂಜನಾ ಜಗತ್ತು ಯಾವಾಗಲೂ ಗ್ಲಾಮರ್ ಮತ್ತು ಸಂಪತ್ತಿನೊಂದಿಗೆ ಸಂಬಂಧ ಹೊಂದಿದೆ. ಅದು ಬಾಲಿವುಡ್ ಆಗಿರಲಿ ಅಥವಾ ಹಾಲಿವುಡ್ ಆಗಿರಲಿ, ಚಿತ್ರರಂಗದಲ್ಲಿ ಯಶಸ್ವಿ ಚಿತ್ರದಿಂದ ತಾರೆಯರ ಅದೃಷ್ಟ ಹೊಳೆಯುತ್ತದೆ. ಒಂದು ಹಿಟ್ ಸಿನಿಮಾದ ನಂತರ ನಟ-ನಟಿಯರು ಕೋಟ್ಯಂತರ ರೂಪಾಯಿ ಸಂಪಾದಿಸುವುದಲ್ಲದೆ, ಐಷಾರಾಮಿ ಜೀವನಶೈಲಿಯನ್ನೂ ನಡೆಸುತ್ತಾರೆ. ಆದರೆ ಜಗತ್ತಿನ ಅತ್ಯಂತ ಶ್ರೀಮಂತ ನಟ ಯಾರು ಗೊತ್ತಾ? ಅಥವಾ ಈ ಪಟ್ಟಿಯಲ್ಲಿ ಶಾರುಖ್ ಖಾನ್ ಎಲ್ಲಿದ್ದಾರೆಂದು ನಿಮಗೆ ತಿಳಿದಿದೆಯೇ? https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ವಿಶ್ವದ ಅತ್ಯಂತ ಶ್ರೀಮಂತ ನಟ ಯಾರು? ಇತ್ತೀಚೆಗೆ, ವರ್ಲ್ಡ್ ಆಫ್ ಸ್ಟ್ಯಾಟಿಸ್ಟಿಕ್ಸ್ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ವಿಶ್ವದ ಶ್ರೀಮಂತ ನಟರ ಪಟ್ಟಿಯನ್ನು ಬಿಡುಗಡೆ ಮಾಡಿತು. ಈ ಪಟ್ಟಿಯಲ್ಲಿ ಸೇರಿಸಲಾದ ಕಲಾವಿದರ ಒಟ್ಟು ಸಂಪತ್ತಿನ ಅಂಕಿಅಂಶಗಳನ್ನು ಸಹ ಹಂಚಿಕೊಳ್ಳಲಾಗಿದೆ. ಈ ಪಟ್ಟಿಯಲ್ಲಿ ಜೆರ್ರಿ ಸೀನ್‌ಫೆಲ್ಡ್ ವಿಶ್ವದ ಅತ್ಯಂತ ಶ್ರೀಮಂತ ನಟ. ಈ ಅಮೇರಿಕನ್ ಹಾಸ್ಯನಟ ಮತ್ತು ಟಿವಿ ತಾರೆ ಸುಮಾರು 1 ಬಿಲಿಯನ್ ಡಾಲರ್ (ಸುಮಾರು 8,300 ಕೋಟಿ ರೂ.) ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಅವರು…

Read More

ಮಂಗಳೂರು: ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಕಾರಿ, ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಶನಿವಾರ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ತೆಕ್ಕಾರು ನಿವಾಸಿ ಇಬ್ರಾಹಿಂ.ಎಸ್.ಬಿ ದೂರು ದಾಖಲಿಸಿದ್ದಾರೆ. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ಧರ್ಮ, ಧರ್ಮಗಳ ನಡುವೆ ದ್ವೇಷ ಬಿತ್ತುವ ಭಾಷಣ ಮಾಡಿದ್ದಾರೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆಯಡಿ 196, 352(2) ಪ್ರಕರಣ ದಾಖಲಾಗಿದೆ.

Read More

ನಿಮ್ಮ ಮನೆ ಅಥವಾ ಕಚೇರಿಗೆ ಹೊಸ ವೈ-ಫೈ ಸಂಪರ್ಕ ಪಡೆಯುವ ಬಗ್ಗೆ ಯೋಚಿಸುತ್ತಿದ್ದರೆ, ನಿಮಗೊಂದು ಒಳ್ಳೆಯ ಸುದ್ದಿ ಇದೆ. ಭಾರತದ ಪ್ರಸಿದ್ಧ ಟೆಲಿಕಾಂ ಕಂಪನಿ ಭಾರ್ತಿ ಏರ್‌ಟೆಲ್ ತನ್ನ ಗ್ರಾಹಕರಿಗೆ ಉತ್ತಮ ಕೊಡುಗೆಯನ್ನು ನೀಡಿದೆ. ಈಗ ನೀವು ಏರ್‌ಟೆಲ್‌ನ ಹೊಸ ಎಕ್ಸ್‌ಸ್ಟ್ರೀಮ್ ಫೈಬರ್ ಬ್ರಾಡ್‌ಬ್ಯಾಂಡ್ ಸಂಪರ್ಕವನ್ನು ತೆಗೆದುಕೊಂಡರೆ ನೀವು ರೂ.ಗಳನ್ನು ಉಳಿಸಬಹುದು. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ನೀವು 700 ವರೆಗೆ ರಿಯಾಯಿತಿ ಪಡೆಯಬಹುದು. ಈ ಕೊಡುಗೆ ಏರ್‌ಟೆಲ್‌ನ ಕ್ರಿಕೆಟ್ ಪ್ರಚಾರ ಅಭಿಯಾನದ ಭಾಗವಾಗಿದೆ. ಐಪಿಎಲ್ 2025 ಕ್ರೇಜ್ ಹೆಚ್ಚಾದಂತೆ, ಏರ್‌ಟೆಲ್ ತನ್ನ ಪ್ರಿಪೇಯ್ಡ್, ಪೋಸ್ಟ್‌ಪೇಯ್ಡ್ ಮತ್ತು ಬ್ರಾಡ್‌ಬ್ಯಾಂಡ್ ಬಳಕೆದಾರರಿಗಾಗಿ ವಿಶೇಷ ಕೊಡುಗೆಗಳನ್ನು ಪ್ರಾರಂಭಿಸಿದೆ. ಈ ವಿಶೇಷ ಕೊಡುಗೆಯ ಬಗ್ಗೆ ತಿಳಿದುಕೊಳ್ಳೋಣ. ಏರ್‌ಟೆಲ್‌ನ ಹೊಸ ಆಫರ್ ಏನು? ಈ ರಿಯಾಯಿತಿ ಹೊಸ ಬ್ರಾಡ್‌ಬ್ಯಾಂಡ್ ಬಳಕೆದಾರರಿಗೆ ಮಾತ್ರ ಎಂದು ಏರ್‌ಟೆಲ್ ತಿಳಿಸಿದೆ. ನೀವು ಮೊದಲ ಬಾರಿಗೆ ಏರ್‌ಟೆಲ್ ಎಕ್ಸ್‌ಸ್ಟ್ರೀಮ್ ಫೈಬರ್ ಸಂಪರ್ಕವನ್ನು ತೆಗೆದುಕೊಂಡು ಆನ್‌ಲೈನ್‌ನಲ್ಲಿ ಬುಕ್ ಮಾಡಿದರೆ, ನೀವು ರೂ.ಗಳ ರಿಯಾಯಿತಿಯನ್ನು ಪಡೆಯಬಹುದು. ಅದರ ಮೇಲೆ 700…

Read More

ಹಾವೇರಿ: ನಾವು ಅಧಿಕಾರಕ್ಕೆ ಬರುವ ಮುಂಚಿತವಾಗಿ ಕೊಟ್ಟಂತಹ ಗ್ಯಾರಂಟಿ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ಮಾತನಾಡಿದ ಅವರು, ನಾವು ಅಧಿಕಾರಕ್ಕೆ ಬರುವ ಮುಂಚಿತವಾಗಿ ಕೊಟ್ಟಂತಹ ಗ್ಯಾರಂಟಿ ಭರವಸೆಗಳನ್ನು ಈಡೇರಿಸಿದ್ದೇವೆ. ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದ ನಿಮಗೆ ನಾವು ಆಸರೆಯಾಗಿ ನಿಂತು ಆಧಾರವಾಗಿದ್ದೇವೆ. ಕೇಂದ್ರ ಸರ್ಕಾರ ನಮ್ಮ ರಾಜ್ಯದಿಂದ ಹೋದ ತೆರಿಗೆಯಲ್ಲಿ ಕೇವಲ ಶೇ 13 ರಷ್ಟನ್ನು ಮಾತ್ರ ವಾಪಸ್ ಕೊಡುತ್ತಿದೆ. ಆದರೂ ನಾವು 4 ಲಕ್ಷ ಕೋಟಿಗೂ ಅಧಿಕವಾದ ಬಜೆಟ್ ಅನ್ನು ರಾಜ್ಯದ ಅಭಿವೃದ್ಧಿಗಾಗಿ ಮಂಡನೆ ಮಾಡಿದ್ದೇವೆ” ಎಂದರು. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ಗ್ಯಾರಂಟಿ ವಿರೋಧ ಮಾಡುತ್ತಿದ್ದ ಬಿಜೆಪಿಯವರು ನಂತರ ಮಹಾರಾಷ್ಟ್ರ, ಹರಿಯಾಣ, ಮಧ್ಯಪ್ರದೇಶ, ದೆಹಲಿ ಚುನಾವಣೆಯಲ್ಲಿ ಅವರೂ ಗ್ಯಾರಂಟಿಗಳನ್ನು ಘೋಷಣೆ ಮಾಡಿದರು. ದೇಶದ ಪ್ರಧಾನಿ ಕರ್ನಾಟಕ ಬರಿದಾಗಿ ಹೋಯಿತು ಎಂದರು‌. ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ಕೊಟ್ಟು ರಾಜ್ಯದಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಕೆಲಸ ಮಾಡಲಾಗುತ್ತಿದೆ. ಗ್ಯಾರಂಟಿಗಳಿಂದ…

Read More

ಹಾನಗಲ್: “ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ಭಾನುವಾರ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಮಾಜಿ ಸಿಎಂ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಯಿತು. 2013 ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್ ಸೆಟ್ ಗಳಿಗೆ ನೀಡುವ ತ್ರೀ‌ ಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು” ಎಂದು ಹೇಳಿದರು. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ “665.75 ಕೋಟಿ ಹಣವನ್ನು ನಿಮ್ಮ ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತಿದ್ದೇವೆ. 418 ಕೋಟಿ ವೆಚ್ಚದಲ್ಲಿ ಬಾಳಂಬೀಡು ಹಾಗೂ ಇತರೇ 72 ಗ್ರಾಮಗಳ 162…

Read More

ಕಲಬುರಗಿ: ಇತ್ತೀಚಿಗೆ ನಡೆದ ಸಿಇಟಿ ಪರೀಕ್ಷೆಗೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಶಿವಮೊಗ್ಗ, ಬೀದರ್ ಮತ್ತು ಧಾರವಾಡ ಪರೀಕ್ಷಾ ಕೇಂದ್ರಗಳಲ್ಲಿ ತೆಗೆಸಲಾಗಿತ್ತು. ಈ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು. ಜನಿವಾರ ಹಾಕಿದ್ದಾರೆಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನೀಡದೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಕಷ್ಟ ತಂದಿದ್ದಕ್ಕೆ ವಿರೋಧ ವ್ಯಕ್ತವಾಗಿತ್ತು. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ಇದೀಗ ನೀಟ್ ಪರೀಕ್ಷೆಯಲ್ಲೂ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದಾರೆ. ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್​ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್‌ ಅವರ ಜನಿವಾರವನ್ನು ಅಧಿಕಾರಿಗಳು ತೆಗೆಸಿ, ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಾರೆ. ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಶ್ರೀಪಾದ್ ಪಾಟೀಲ್​ ಅವರಿಗೆ ಜನಿವಾರ ತೆಗೆಯುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಸೂಚನೆಯಂತೆ ಶ್ರೀಪಾದ್ ಪಾಟೀಲ್‌ ಅವರು ಜನಿವಾರ ತೆಗೆದು ಪರೀಕ್ಷಾ ಕೇಂದ್ರಕ್ಕೆ ತೆರಳಿ, ಪರೀಕ್ಷೆ ಬರೆದಿದ್ದಾರೆ. ಈ ಘಟನೆಯನ್ನು ಖಂಡಿಸಿ ಪರೀಕ್ಷಾ ಕೇಂದ್ರದ ‌ಮುಂದೆ ಬ್ರಾಹ್ಮಣ ಸಮಾಜ ಪ್ರತಿಭಟನೆ ನಡೆಸಿತು.…

Read More