ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಾಳೆ (ಮೇ.02) ಪ್ರಕಟಿಸಲಾಗುವುದು ಎಂದು ಸಚಿವ ಮಧುಬಂಗಾರಪ್ಪ ತಿಳಿಸಿದ್ದಾರೆ. ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆದಿದ್ದವು. ಈಗಾಗಲೇ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದೆ. ನಾಳೆ ಮಧ್ಯಾಹ್ನ 12.30ರ ನಂತರ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಗೊಳ್ಳಲಿದೆ. ನಾಳೆ ಬೆಳ್ಳಗ್ಗೆ 11.30ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಸಂಬಂಧ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ಮಾಡಲಿದ್ದಾರೆ. ರಾಜ್ಯದ 2818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದವು. ಪರೀಕ್ಷೆಗೆ 8 ಲಕ್ಷದ 96 ಸಾವಿರ ವಿದ್ಯಾರ್ಥಿಗಳು ನೊಂದಯಿಸಿಕೊಂಡಿದ್ದರು. ಇನ್ನೂ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಿ, ವೆಬ್ ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು. https://ainkannada.com/do-you-leave-the-dishes-unwashed-after-dinner-a-story-you-must-watch/ ಪರೀಕ್ಷಾ ದಿನದಂದು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಉಚಿತ ಸೇವೆ ಕೂಡ ಕಲ್ಪಿಸಲಾಗಿತ್ತು. ಇನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಕ್ಕಳ ಜೊತೆ ಮಾತನಾಡಿ, ಹೂ ಕೊಟ್ಟು ಆಲ್ ದಿ ಬೆಸ್ಟ್ ಹೇಳಿದ್ದರು.…
Author: Author AIN
ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಶ್ವಾನಪ್ರಿಯೆ ಅನ್ನೋದು ಸಿನಿಮಾಪ್ರೇಮಿಗಳಿಗೆ ಗೊತ್ತಿರುವ ವಿಚಾರವೇ. ಶ್ವಾನಗಳನ್ನು ತಮ್ಮ ಮಕ್ಕಳಂತೆ ಪ್ರೀತಿಸುವ ಮೋಹಕತಾರೆ ಈಗ ಶ್ವಾನದ ಸುತ್ತ ಸಾಗುವ ಜವಾರಿ ಭಾಷೆಯ ಪಪ್ಪಿ ಸಿನಿಮಾದ ಕಂಟೆಂಟ್ ಗೆ ಪದ್ಮಾವತಿ ಫಿದಾ ಆಗಿದ್ದಾರೆ. ರಮ್ಯಾ ಈ ಹಿಂದೆಯೇ ಪಪ್ಪಿ ಟ್ರೇಲರ್ ನೋಡಿ ಮೆಚ್ಚಿಕೊಂಡಿದ್ದರು. ಇಂದು ಈ ಸಿನಿಮಾ ಕಂಡಿದೆ. ಶ್ವಾನ ಸೇರಿದಂತೆ ಚಿತ್ರದಲ್ಲಿ ನಟಿಸಿರುವ ಮಕ್ಕಳ ನಟನೆಗೆ ಮನಸೋತಿರುವ ರಮ್ಯಾ ಅವರಿಗೆ ಸೈಕಲ್ ಗಿಫ್ಟ್ ಮಾಡಿದ್ದಾರೆ. ಪಪ್ಪಿ ಸಿನಿಮಾದಲ್ಲಿ ಬಾಲ ಕಲಾವಿದರಾದ ಜಗದೀಶ್ ಕೊಪ್ಪಳ, ಆದಿತ್ಯ ಸಿಂಧನೂರು ತಮ್ಮ ಪಾತ್ರಕ್ಕೆ ಅದ್ಭುತವಾಗಿ ಜೀವ ತುಂಬಿದ್ದಾರೆ. ಈ ಮಕ್ಕಳ ನಟನೆ ಇಷ್ಟಪಟ್ಟು ರಮ್ಯಾ ಅವರಿಗೆ ಸೈಕಲ್ ಉಡುಗೊರೆಯಾಗಿ ನೀಡಿದ್ದಾರೆ. ಅಪ್ಪಟ ಉತ್ತರ ಕರ್ನಾಟಕದ ಭಾಷೆ ಒಳಗೊಂಡ ಕೌಟುಂಬಿಕ ಚಿತ್ರವಾಗಿರುವ ಪಪ್ಪಿ ಇಂದು ಬಿಡುಗಡೆಯಾಗಿದೆ. ರಮ್ಯಾ ಕೂಡ ಶೀಘ್ರದಲ್ಲೇ ಸಿನಿಮಾ ನೋಡಲಿದ್ದಾರೆ. ಧ್ರುವ ಸರ್ಜಾ ಅರ್ಪಿಸಿರುವ ಈ ಸಿನಿಮಾಗೆ ಆಯುಷ್ ಮಲ್ಲಿ ಆಕ್ಷನ್ ಕಟ್ ಹೇಳಿದ್ದಾರೆ. ಜಗದೀಶ್ ಕೊಪ್ಪಳ, ಆದಿತ್ಯ ಸಿಂಧನೂರು…
ಬೆಂಗಳೂರು : ಪೌರಕಾರ್ಮಿಕರು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. https://ainkannada.com/do-you-leave-the-dishes-unwashed-after-dinner-a-story-you-must-watch/ ಇಂದು ಬಿಬಿಎಂಪಿ ವತಿಯಿಂದ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಿನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು ಮದ್ಯವರ್ತಿಗಳ ಹಾವಳಿಯಿಂದ ಪೌರಕಾರ್ಮಿಕರು ಮುಕ್ತ ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ, ಪೌರಕಾರ್ಮಿಕರನ್ನು ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದು, ನ್ಯಾಯಯುತವಾದ ಸಂಬಳ ಕೊಡದೇ ಇದ್ದುದ್ದನ್ನು ಗಮನಿಸಿದ್ದೆ. ಅದಕ್ಕಾಗಿ ಶೋಷಣೆಗೊಳಗಾದ ಪೌರಕಾರ್ಮಿಕರ ಸಹಾಯಕ್ಕಾಗಿ ಕನಿಷ್ಟ ವೇತನ ಕಾಯ್ದೆ ಪ್ರಕಾರ ದೊರೆಯಬೇಕಾದ ಕನಿಷ್ಟ ಸಂಬಳವನ್ನು ಕಡ್ಡಾಯವಾಗಿ ದೊರೆಯುವ ವ್ಯವಸ್ಥೆಯನ್ನು ಮಾಡಿದೆ. ಮೊದಲು 7000 ರೂ. ದೊರೆಯುತ್ತಿದ್ದ ಸಂಬಳವನ್ನು 17000 ಕ್ಕೆ ಹೆಚ್ಚಿಸಿ, ನೇರವಾಗಿ ಬ್ಯಾಂಕ್ ಖಾತೆಗೆ…
ಬೆಂಗಳೂರು: ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಅಹ್ವಾನಿಸಲಾಗಿದೆ. ಸಾಮಾನ್ಯ ವರ್ಗದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಈ ಯೋಜನೆಯಡಿಯಲ್ಲಿ ಅರ್ಜಿಯನ್ನು ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದು. ತೋಟಗಾರಿಕೆ ಬೆಳೆಗಾರರಿಗೆ ಹನಿ ನೀರಾವರಿ ಘಟಕ ಅಳವಡಿಕೆಗೆ ಸಹಾಯಧನ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಾದ, ಹಣ್ಣು, ತರಕಾರಿ, ಹೂವು, ಪ್ಲಾಂಟೇಶನ್ ಬೆಳೆಗಳು, ಔಷಧಿ, ಸುಗಂಧ ಸಸ್ಯಗಳು ಹಾಗೂ ಸಾಂಬಾರು ಪದಾರ್ಥ ಬೆಳೆಗಳಿಗೆ ರೈತರು ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲು ಸಹಾಯಧನವನ್ನು ನೀಡಲಾಗುತ್ತಿದೆ. https://ainkannada.com/do-you-leave-the-dishes-unwashed-after-dinner-a-story-you-must-watch/ ಕೃಷಿಗೆ ಪ್ರೋತ್ಸಾಹ, ನೀರಾವರಿಯನ್ನು ಗಮನದಲ್ಲಿರಿಸಿಕೊಂಡು ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಲ್ಲಾ ಭೂಮಿಗಳಿಗೂ ನೀರಾವರಿ ಸೌಲಭ್ಯ ಒದಗಿಸುವುದಕ್ಕಾಗಿ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಮಾನದಂಡವೇನು? : ಈ ಯೋಜನೆಯಡಿಯಲ್ಲಿ ಸಹಾಯಧನವನ್ನು ಪಡೆಯಲು ರೈತರು ಕೆಲವೊಂದು ಮಾನದಂಡಗಳನ್ನು ಹೊಂದಿರಬೇಕು. ತಮ್ಮದೇ ಹೆಸರಿನಲ್ಲಿ ರೈತರು ಜಮೀನನ್ನು ಹೊಂದಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜಾತಿಯ…
ಬೆಂಗಳೂರು: “ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಪೌರ ಕಾರ್ಮಿಕರನ್ನು ಖಾಯಂ ಮಾಡುವ ಮೂಲಕ ಅವರ ಬದುಕಿನಲ್ಲಿ ಬದಲಾವಣೆ ತಂದು, ಸಮಾಜದಲ್ಲಿ ಸಮಾನತೆ ತರುವ ಕೆಲಸ ಮಾಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಗುರುವಾರ ನಡೆದ ಪೌರ- ಕಾರ್ಮಿಕರ ದಿನಾಚರಣೆ ಹಾಗೂ 12,692 ಮಂದಿ ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಸಮಾಜ ಸುಭದ್ರವಾಗಿರಲು ನಾಲ್ಕು ಆಧಾರ ಸ್ತಂಭಗಳಿರಬೇಕು. ಅವುಗಳೆಂದರೆ ಕೃಷಿಕ, ಕಾರ್ಮಿಕ, ಸೈನಿಕ ಹಾಗೂ ಶಿಕ್ಷಕ. ಕಾರ್ಮಿಕರು ಈ ಸಮಾಜದ ಆಧಾರಸ್ತಂಭ. ನಮ್ಮ ಸರ್ಕಾರ ಪೌರಕಾರ್ಮಿಕರನ್ನು ದೇವರ ಮಕ್ಕಳು, ಸ್ವಚ್ಛತಾ ರಾಯಭಾರಿಗಳು ಎಂದು ಭಾವಿಸುತ್ತಿದೆ. ನೀವು ಸಮಾಜದ ಆರೋಗ್ಯ ಕಾಪಾಡುತ್ತಿರುವ ವೈದ್ಯರು, ನೀವು ಬೆಂಗಳೂರು ನಗರವನ್ನು ಸುಂದರವಾಗಿಟ್ಟು ಸೇವೆ ಮಾಡಿರುವುದಕ್ಕೆ ಈ ನಗರಕ್ಕೆ ವಿಶ್ವ ಮಟ್ಟದ ಹೆಸರು ಬಂದಿದೆ. ಇಡೀ ವಿಶ್ವಕ್ಕೆ ದೊಡ್ಡ ಸೇವೆ ಮಾಡುವ ಕಾರ್ಮಿಕರ ದಿನವಿಂದು” ಎಂದು ಶ್ಲಾಘಿಸಿದರು.…
ರಾಜಕೀಯಕ್ಕೆ ಸಿನಿಮಾ ತಾರೆಯರ ಎಂಟ್ರಿ ಹೊಸತೇನಲ್ಲ. ಅದರಲ್ಲಿಯೂ ತಮಿಳುನಾಡು ರಾಜಕೀಯ ರಣಕಣದಲ್ಲಿ ಛಾಪೂ ಮೂಡಿಸಿರುವವರೆಲ್ಲರೂ ಸಿನಿಮಾತಾರೆಯರೇ. ಸಿನಿಮಾ ಹಿನ್ನೆಲೆಯಿಂದ ಬಂದು ರಾಜಕೀಯ ಪ್ರವೇಶಿಸಿದ ಎಂಜಿಆರ್, ಕರುಣಾನಿಧಿ, ಜಯಲಲಿತಾ ಸಿಎಂ ಸಹ ಆಗಿದ್ದಾರೆ. ತಮ್ಮದೇ ಪಕ್ಷ ಕಟ್ಟಿ ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ಈಗ ದಳಪತಿ ವಿಜಯ್ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಕಟ್ಟಿ ರಾಜಕೀಯದಲ್ಲಿ ಚದುರಂಗದಲ್ಲಿ ದಾಳ ಉರುಳಿಸಲು ಸಜ್ಜಾಗುತ್ತಿದ್ದಾರೆ. ವಿಜಯ್ ರಾಜಕೀಯ ಎಂಟ್ರಿ ಬಗ್ಗೆ ಸಾಕಷ್ಟು ವಿರೋಧ ವ್ಯಕ್ತವಾಗಿವೆ. ಇದೀಗ ದಳಪತಿ ರಾಜಕೀಯ ಪ್ರವೇಶದ ಬಗ್ಗೆ ಗೆಳೆಯ, ಥಲಾ ಅಜಿತ್ ಮೊದಲ ಬಾರಿಗೆ ಮಾತನಾಡಿದ್ದಾರೆ. ಥಲಾ ಅಜಿತ್ ಹಾಗೂ ವಿಜಯ್ ಆತ್ಮೀಯ ಗೆಳೆಯರು. ಇಬ್ಬರು ಇಂಡಸ್ಟ್ರೀಯಲ್ಲಿ ಅವರದ್ದೇ ಆದ ಹೆಸರು, ಅಭಿಮಾನಿಗಳ ಬಳಗ ಸಂಪಾದಿಸಿದ್ದಾರೆ. ಮೊದಲ ಬಾರಿಗೆ ಅಜಿತ್ ವಿಜಯ್ ರಾಜಕೀಯ ಪ್ರವೇಶದ ಬಗ್ಗೆ ಮಾತನಾಡಿದ್ದಾರೆ. ಥಲಾ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳೋದೇ ಕಡಿಮೆ. ನಟನೆ ಬಿಟ್ರೆ ಬೈಕ್ ಕಾರು ರೇಸಿಂಗ್ ಹುಚ್ಚು. ಕುಟುಂಬ ಸಿನಿಮಾ ರೇಸಿಂಗ್ ಇಷ್ಟೇ…
ಇಂಡಿಯನ್ ಪ್ರೀಮಿಯರ್ ಲೀಗ್ನ 49ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.2 ಓವರ್ಗಳಲ್ಲಿ 190 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡ 19.4 ಓವರ್ಗಳಲ್ಲಿ 194 ರನ್ ಬಾರಿಸಿ 6 ವಿಕೆಟ್ಗಳ ಗೆಲುವು ದಾಖಲಿಸಿದೆ. ಇದರ ನಡುವೆ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಗೆ ದಂಡದ ಶಿಕ್ಷೆ ನೀಡಲಾಗಿದೆ. ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕನಿಗೆ ತಲಾ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. https://ainkannada.com/do-you-leave-the-dishes-unwashed-after-dinner-a-story-you-must-watch/ ಇಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಈ ಬಾರಿ ರಿಯಾನ್ ಪರಾಗ್ ಹಾಗೂ ಸಂಜು ಸ್ಯಾಮ್ಸನ್ ಮುನ್ನಡೆಸಿದ್ದಾರೆ. ಈ ವೇಳೆ ಇಬ್ಬರು ಕೂಡ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದಾರೆ. ಅದರಂತೆ ಒಟ್ಟು 5 ತಂಡಗಳ 6 ನಾಯಕರುಗಳು ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಇಂಡಿಯನ್ ಪ್ರೀಮಿಯರ್…
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಜಾತಿಗಳ ನಡುವೆ ವಿಷ ಬೀಜ ಬಿತ್ತಲು ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಗಳಿಗೆ ಜಾತಿ ಜನಗಣತಿ ಮಾಡುವ ಅಧಿಕಾರ ಇಲ್ಲ. ಇದು ಗೊತ್ತಿದ್ರೂ ಸಿದ್ದರಾಮಯ್ಯ ಸರ್ಕಾರ ಜಾತಿಗಳ ನಡುವೆ ವಿಷ ಬೀಜ ಬಿತ್ತಲು ಮುಂದಾಗಿದೆ. ಖರ್ಗೆಯವರೇ ಹೇಳಿದ್ದಾರೆ ಇದು ಔಟ್‌ಡೇಟೆಡ್ ವರದಿ ಅಂತಾ. ಈಗಲಾದರೂ ರಾಜ್ಯದ ಜಾತಿ ಜನಗಣತಿಗೆ ಇತಿಶ್ರಿ ಹಾಡಲಿ. ಸಿದ್ದರಾಮಯ್ಯ ಜಾತಿಗಳ ನಡುವೆ ಕಂದಕ ಸೃಷ್ಟಿಸಲು ಹೊರಟಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಳಿ ಕಾಂತರಾಜು ವರದಿಯ ಪ್ರತಿಯೇ ಇಲ್ಲ. https://ainkannada.com/do-you-leave-the-dishes-unwashed-after-dinner-a-story-you-must-watch/ ಜಯಪ್ರಕಾಶ್ ಹೆಗ್ಡೆ ಯಾವ ಆಧಾರದಲ್ಲಿ ವರದಿ ಕೊಟ್ರು ಹಾಗಾದ್ರೆ? ಸಿದ್ದರಾಮಯ್ಯ ವರದಿಯಲ್ಲಿ ಸದುದ್ದೇಶವಂತೂ ಇಲ್ಲ. ಈಗಲಾದರೂ ಸಿದ್ದರಾಮಯ್ಯಗೆ ಭಗವಂತ ಬುದ್ಧಿ ಕೊಡಲಿ, ಕೇಂದ್ರದ ಪರ ಸಿದ್ದರಾಮಯ್ಯ ನಿಲ್ಲಲಿ ಎಂದು ತಿಳಿಸಿದರು.
ZEE ಕನ್ನಡ ಹೊಸ ಬಗೆಯ ಕಾರ್ಯಕ್ರಮಗಳ ಮೂಲಕ ಕಿರುತೆರೆ ಲೋಕದಲ್ಲಿ ಹೆಸರು ಮಾಡಿದೆ. ಅದರ ಜೊತೆಗೆ ZEE5 ಒಟಿಟಿಯಲ್ಲಿ ಸದಾಭಿರುಚಿ ಸಿನಿಮಾಗಳನ್ನು ನೀಡುತ್ತಿದೆ. ಇದೇ ಮೊದಲ ಬಾರಿಗೆ ZEE ಕನ್ನಡದಲ್ಲೊಂದು ಹೊಸ ಪ್ರಯೋಗ ಮಾಡಿದ್ದು, ಅದಕ್ಕೆ ಭರಪೂರ ರೆಸ್ಪಾನ್ಸ್ ಸಿಗುತ್ತಿದೆ. ಕನ್ನಡದಲ್ಲಿ ಮೊದಲ ಬಾರಿಗೆ ಮಿನಿ ವೆಬ್ ಸರಣಿ ZEE5 ಪರಿಚಯಿಸಿದೆ. ಕನ್ನಡದ ಮೊದಲ ಮಿನಿ ವೆಬ್ ಸರಣಿ ಅಯ್ಯನ ಮನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಈ ಸರಣಿ ಭಾಷೆ ಅಡೆತಡೆಗಳನ್ನು ಮೀರಿ ದಾಖಲೆಯ ವೀಕ್ಷಣೆಯನ್ನು ಕಂಡಿದೆ. ಏಪ್ರಿಲ್ 25ರಂದು ಅಯ್ಯನ ಮನೆ ವೆಬ್ ಸರಣಿ ZEE5ನಲ್ಲಿ ಸ್ಟ್ರೀಮಿಂಗ್ ಆರಂಭಿಸಿತ್ತು. ಅಲ್ಲಿಂದ ಇಲ್ಲಿವರೆಗೆ 50 ಮಿಲಿಯನ್ ಸ್ಟ್ರೀಮಿಂಗ್ ಮಿನಿಟ್ ಕಾಣುವ ಮೂಲಕ ಹೊಸ ರೆಕಾರ್ಡ್ ಕ್ರಿಯೇಟ್ ಮಾಡಿದೆ. ಪ್ರಾದೇಶಿಕ ಭಾಷೆಯ ವೆಬ್ ಸರಣಿ ಈ ಮಟ್ಟದ ವೀಕ್ಷಣೆ ಕಂಡಿರುವುದು ಇಡೀ ತಂಡಕ್ಕೂ ಖುಷಿ ಕೊಟ್ಟಿದೆ. ಜಾಜಿ ಪಾತ್ರದಲ್ಲಿ ಅಮೋಘವಾಗಿ ನಟಿಸಿರುವ ನಟಿ ಖುಷಿ ರವಿ, “ಅಯ್ಯನ ಮನೆ ಭಾಗವಾಗಿರುವುದು ನಿಜಕ್ಕೂ ಅವಿಸ್ಮರಣೀಯ…
ಬೆಂಗಳೂರು: ಮಳೆಯ ಆರ್ಭಟ ಕಡಿಮೆಯಾಯಿತು ಎಂದು ನಿಟ್ಟುಸಿರು ಬಿಡುತ್ತಿದ್ದೀರಾ? ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ವರುಣನ ಅಬ್ಬರ ಮತ್ತೆ ಹೆಚ್ಚಾಗಲಿದೆ. ಇಂದಿನಿಂದ ನಾಲ್ಕು ದಿನ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದಿನಿಂದ ಮೇ 4ರವರೆಗೆ ಭಾರೀ ಮಳೆಯಾಗಲಿದ್ದು, ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. https://ainkannada.com/do-you-leave-the-dishes-unwashed-after-dinner-a-story-you-must-watch/ ಬೆಳಗಾವಿ, ರಾಯಚೂರು, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ, ಯಾದಗಿರಿ, ಬಾಗಲಕೋಟೆ, ವಿಜಯಪುರ, ಗದಗ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಇನ್ನೂ ಮೇ ತಿಂಗಳಲ್ಲಿ ಉಷ್ಣ ಹವೆ ಹೆಚ್ಚಾಗಿರಲಿದ್ದು, ರಾಜ್ಯದಲ್ಲಿ ಸಾಮಾನ್ಯಕ್ಕಿಂತ ಅಧಿಕವಾಗುವ ಸಾಧ್ಯತೆಯಿದೆ.…